< عزرا 8 >
و اینانند روسای آبای ایشان و این است نسب نامه آنانی که در سلطنت ارتحشستاپادشاه، با من از بابل برآمدند: | ۱ 1 |
ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಬಾಬಿಲೋನಿನಿಂದ ನನ್ನ ಸಂಗಡ ಹೊರಟು ಬಂದವರ ಕುಟುಂಬಗಳಲ್ಲಿ ಮುಖ್ಯಸ್ಥರು ಯಾರೆಂದರೆ:
از بنی فینحاس، جرشوم و از بنیایتامار، دانیال و از بنی داود، حطوش. | ۲ 2 |
ಫೀನೆಹಾಸನ ವಂಶಜರಲ್ಲಿ ಗೇರ್ಷೋಮನೂ, ಈತಾಮಾರನ ವಂಶಜರಲ್ಲಿ ದಾನಿಯೇಲನೂ; ದಾವೀದನ ವಂಶಜರಲ್ಲಿ ಹಟ್ಟೂಷನೂ.
و از بنی شکنیا از بنی فروش، زکریا و بااو صد و پنجاه نفر از ذکوران به نسب نامه شمرده شدند. | ۳ 3 |
ಇವನು ಶೆಕನ್ಯನ ವಂಶಜನು. ಪರೋಷಿನ ವಂಶಜರಲ್ಲಿ ಜೆಕರ್ಯನೂ, ಅವನ ಸಂಗಡ ವಂಶಜರಲ್ಲಿ 150 ಮಂದಿ ಗಂಡಸರು.
از بنی فحت، موآب الیهو عینای ابن زرحیا و با او دویست نفر از ذکور. | ۴ 4 |
ಪಹತ್ ಮೋವಾಬನ ವಂಶಜರಲ್ಲಿ ಜೆರಹ್ಯನ ಮಗನಾದ ಎಲಿಹೋಯೇನೈನೂ, ಅವನ ಸಂಗಡ 200 ಮಂದಿ ಗಂಡಸರು.
از بنی شکنیا، ابن یحزیئیل و با او سیصد نفر از ذکور. | ۵ 5 |
ಜತ್ತುವಿನ ವಂಶಜರಲ್ಲಿ ಯಹಜಿಯೇಲನ ಮಗನಾದ ಶೆಕನ್ಯನು ಮತ್ತು ಅವನ ಸಂಗಡ 300 ಮಂದಿ ಗಂಡಸರು.
ازبنی عادین، عابد بن یوناتان و با او پنجاه نفر ازذکور. | ۶ 6 |
ಅದೀನನ ವಂಶಜರಲ್ಲಿ ಯೋನಾತಾನನ ಮಗ ಏಬೆದನೂ, ಅವನ ಸಂಗಡ 50 ಮಂದಿ ಗಂಡಸರು.
از بنی عیلام، اشعیا ابن عتلیا و با او هفتادنفر از ذکور. | ۷ 7 |
ಏಲಾಮನ ವಂಶಜರಲ್ಲಿ ಅತಲ್ಯನ ಮಗ ಯೆಶಾಯನೂ, ಅವನ ಸಂಗಡ 70 ಮಂದಿ ಗಂಡಸರು.
از بنی شفطیا، زبدیا ابن میکائیل و بااو هشتاد نفر از ذکور. | ۸ 8 |
ಶೆಫಟ್ಯನ ವಂಶಜರಲ್ಲಿ ಮೀಕಾಯೇಲನ ಮಗ ಜೆಬದ್ಯನೂ, ಅವನ ಸಂಗಡ 80 ಮಂದಿ ಗಂಡಸರು.
از بنی یوآب، عوبدیا ابن یحئیل و با او دویست و هجده نفر از ذکور. | ۹ 9 |
ಯೋವಾಬನ ವಂಶಜರಲ್ಲಿ ಯೆಹೀಯೇಲನ ಮಗ ಓಬದ್ಯನೂ, ಅವನ ಸಂಗಡ 218 ಮಂದಿ ಗಂಡಸರು.
واز بنی شلومیت بن یوسفیا و با او صد وشصت نفراز ذکور. | ۱۰ 10 |
ಬಾನೀಯ ವಂಶಜರಲ್ಲಿ ಯೋಸಿಫ್ಯನ ಮಗ ಶೆಲೋಮೀತನು ಮತ್ತು ಅವನ ಸಂಗಡ 160 ಮಂದಿ ಗಂಡಸರು.
و از بنی بابای، زکریا ابن بابای و با او بیست و هشت نفر از ذکور. | ۱۱ 11 |
ಬೇಬೈನ ವಂಶಜರಲ್ಲಿ ಬೆಬಾಯಿಯ ಮಗ ಜೆಕರ್ಯನು; ಅವನ ಸಂಗಡ 28 ಮಂದಿ ಗಂಡಸರು.
و از بنی عزجد، یوحانان بن هقاطان و با او صد و ده نفر از ذکور. | ۱۲ 12 |
ಅಜ್ಗಾದನ ವಂಶಜರಲ್ಲಿ ಹಕ್ಕಾಟಾನನ ಮಗ ಯೋಹಾನಾನನೂ, ಅವನ ಸಂಗಡ 110 ಮಂದಿ ಗಂಡಸರು;
و موخران از بنی ادونیقام بودند و این است نامهای ایشان: الیفلط ویعیئیل و شمعیا و با ایشان شصت نفر از ذکور. | ۱۳ 13 |
ಅದೋನೀಕಾಮಿನ ವಂಶಜರಲ್ಲಿ ಕಡೇ ಪುತ್ರರಾದ ಎಲೀಫೆಲೆಟ್, ಯೆವಿಯೇಲನು, ಶೆಮಾಯನು ಎಂಬ ಹೆಸರುಳ್ಳವರೂ, ಅವರ ಸಂಗಡ 60 ಮಂದಿ ಗಂಡಸರು;
و از بنی بغوای، عوتای وزبود و با ایشان هفتاد نفر از ذکور. | ۱۴ 14 |
ಬಿಗ್ವೈ ವಂಶಜರಲ್ಲಿ ಜಕ್ಕೂರನ ಮಗನಾದ ಊತೈ ಮತ್ತು ಅವನ ಸಂಗಡ 70 ಮಂದಿ ಗಂಡಸರು.
پس ایشان را نزد نهری که به اهوا میرودجمع کردم و در آنجا سه روز اردو زدیم و چون قوم و کاهنان را بازدید کردم، از بنی لاوی کسی رادر آنجا نیافتم. | ۱۵ 15 |
ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು, ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ, ಯಾಜಕರನ್ನೂ ಶೋಧಿಸಿ ನೋಡುವಾಗ, ಲೇವಿಯರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.
پس نزد الیعزر و اریئیل وشمعیا و الناتان و یاریب و الناتان و ناتان و زکریا ومشلام که روسا بودند و نزد یویاریب و الناتان که علما بودند، فرستادم. | ۱۶ 16 |
ಆಗ ನಾನು ಎಲೀಯೆಜೆರನು, ಅರೀಯೇಲನು, ಶೆಮಾಯನು, ಎಲ್ನತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ, ಯೋಯಾರೀಬನು, ಎಲ್ನತಾನನು ಎಂಬ ಗ್ರಹಿಕೆಯುಳ್ಳವರನ್ನೂ ಕರೆಕಳುಹಿಸಿದೆನು.
و پیغامی برای عدوی رئیس، در مکان کاسفیا بهدست ایشان فرستادم وسخنانی که باید به عدو و برادرانش نتینیم که درمکان کاسقیا بودند بگویند، به ایشان القا کردم تاخادمان به جهت خانه خدای ما نزد ما بیاورند. | ۱۷ 17 |
ಕಾಸಿಫ್ಯದಲ್ಲಿರುವ ಅಧಿಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ, ಅವರು ನಮ್ಮ ದೇವರ ಆಲಯಕ್ಕೋಸ್ಕರ ಸೇವಕರನ್ನು ತರುವ ಹಾಗೆ ಅವರು ಕಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ, ಅವನ ಸಹೋದರರಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು.
و از دست نیکوی خدای ما که با ما میبود، شخصی دانشمند از پسران محلی ابن لاوی ابن اسرائیل برای ما آوردند، یعنی شربیا را با پسران وبرادرانش که هجده نفر بودند. | ۱۸ 18 |
ನಮ್ಮ ದೇವರ ಕೃಪಾಹಸ್ತವು ನಮ್ಮ ಮೇಲೆ ಇದ್ದುದರಿಂದ, ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗ ಮಹ್ಲೀಯ ಪುತ್ರರಲ್ಲಿ ಬುದ್ಧಿವಂತನಾದ ಶೇರೇಬ್ಯನೂ, ಅವನ ಪುತ್ರರೂ, ಸಹೋದರರೂ ಆದ ಹದಿನೆಂಟು ಮಂದಿಯನ್ನೂ,
و حشبیا را نیز وبا او از بنی مراری اشعیا را. و برادران او و پسران ایشان را که بیست نفر بودند. | ۱۹ 19 |
ಹಷಬ್ಯನೂ, ಅವನ ಸಂಗಡ ಮೆರಾರೀಯ ಪುತ್ರರಲ್ಲಿ ಯೆಶಾಯನೂ, ಅವನ ಸಹೋದರರೂ, ಅವರ ಪುತ್ರರೂ ಆದ ಇಪ್ಪತ್ತು ಮಂದಿಯನ್ನೂ,
و از نتینیم که داودو سروران، ایشان را برای خدمت لاویان تعیین نموده بودند. از نتینیم دویست و بیست نفر که جمیع به نام ثبت شده بودند. | ۲۰ 20 |
ದಾವೀದನೂ, ಪ್ರಧಾನರೂ, ಲೇವಿಯರನ್ನು ಸೇವಿಸುವುದಕ್ಕೆ ನೇಮಿಸಿದ ದೇವಾಲಯದ ಸೇವಕರಲ್ಲಿ ಇನ್ನೂರ ಇಪ್ಪತ್ತು ಮಂದಿ ಸೇವಕರನ್ನೂ, ನಮ್ಮ ಬಳಿಗೆ ಕರೆದುಕೊಂಡು ಬಂದರು. ಅವರೆಲ್ಲರ ಹೆಸರುಗಳು ದಾಖಲೆಯಾಗಿದ್ದವು.
پس من در آنجانزد نهر اهوا به روزه داشتن اعلان نمودم تاخویشتن را در حضور خدای خود متواضع نموده، راهی راست برای خود و عیال خویش وهمه اموال خود از او بطلبیم. | ۲۱ 21 |
ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಳ್ಳುವುದಕ್ಕೂ, ನಮಗೂ ನಮ್ಮ ಮಕ್ಕಳಿಗೂ, ನಮ್ಮ ಎಲ್ಲಾ ಸ್ಥಿತಿಗೂ ಅವರಿಂದ ಸರಿಯಾದ ಮಾರ್ಗವನ್ನು ಹುಡುಕುವುದಕ್ಕೂ, ನಾನು ಅಲ್ಲಿ ಅಹಾವ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಪ್ರಕಟಿಸಿದೆನು.
زیرا خجالت داشتم که سپاهیان و سواران از پادشاه بخواهیم تاما را از دشمنان در راه اعانت کنند، چونکه به پادشاه عرض کرده، گفته بودیم که دست خدای ما بر هرکه او را میطلبد، به نیکویی میباشد، اماقدرت و غضب او به ضد آنانی که او را ترک میکنند. | ۲۲ 22 |
“ನಮ್ಮ ದೇವರ ಕೃಪಾಹಸ್ತವು ಅವರನ್ನು ಹುಡುಕುವವರೆಲ್ಲರ ಮೇಲೆಯೂ ಇದೆ, ಆದರೆ ಅವರ ಕೋಪವು ಅವರನ್ನು ತ್ಯಜಿಸುವ ಎಲ್ಲರ ವಿರುದ್ಧವಾಗಿರುತ್ತದೆ,” ಎಂದು ನಾವು ಅರಸನಿಗೆ ಹೇಳಿದ್ದರಿಂದ, ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಸೈನ್ಯವನ್ನೂ ಅಶ್ವಬಲವನ್ನೂ ಅರಸನಿಂದ ಕೇಳಲು ನಾಚಿಕೆಪಟ್ಟೆವು.
پس روزه گرفته، خدای خود را برای این طلب نمودیم و ما را مستجاب فرمود. | ۲۳ 23 |
ಆದ್ದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ದೇವರು ನಮ್ಮ ವಿಜ್ಞಾಪನೆಯನ್ನು ಕೇಳಿದರು.
ودوازده نفر از روسای کهنه، یعنی شربیا و حشبیا وده نفر از برادران ایشان را با ایشان جدا کردم. | ۲۴ 24 |
ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೇರೇಬ್ಯ, ಹಷಬ್ಯ ಇವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ
ونقره و طلا و ظروف هدیه خدای ما را که پادشاه ومشیران و سرورانش و تمامی اسرائیلیانی که حضور داشتند داده بودند، به ایشان وزن نمودم. | ۲۵ 25 |
ಅರಸನೂ, ಅವನ ಸಲಹೆಗಾರರೂ, ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ, ಬಂಗಾರವನ್ನೂ, ಸಲಕರಣೆಗಳನ್ನೂ ಅವರಿಗೆ ತೂಕಮಾಡಿ ಕೊಟ್ಟೆನು.
پس ششصد و پنجاه وزنه نقره و صد وزنه ظروف نقره و صد وزنه طلا بهدست ایشان وزن نمودم. | ۲۶ 26 |
ಅವರ ಕೈಗೆ ಕೊಟ್ಟ ಸಲಕರಣೆಗಳ ತೂಕ 22 ಬೆಳ್ಳಿ ಮೆಟ್ರಿಕ್ ಟನ್; ಬೆಳ್ಳಿಯ ನೂರು ಸಾಮಗ್ರಿಗಳ ತೂಕ 3.4 ಮೆಟ್ರಿಕ್ ಟನ್; ಬಂಗಾರ 3.4 ಮೆಟ್ರಿಕ್ ಟನ್.
و بیست طاس طلا هزار درهم و دوظرف برنج صیقلی خالص که مثل طلا گرانبها بود. | ۲۷ 27 |
ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ 8.4 ಕಿಲೋಗ್ರಾಂ, ಇವುಗಳಲ್ಲದೆ ಶ್ರೇಷ್ಠವಾದ ಕಂಚಿನ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.
و به ایشان گفتم: «شما برای خداوند مقدس میباشید و ظروف نیز مقدس است و نقره و طلا به جهت یهوه خدای پدران شما هدیه تبرعی است. | ۲۸ 28 |
ನಾನು ಅವರಿಗೆ, “ನೀವು ಯೆಹೋವ ದೇವರಿಗೆ ಪ್ರತಿಷ್ಠಿತರಾಗಿದ್ದೀರಿ. ಈ ವಸ್ತುಗಳು ಹಾಗೆಯೇ ಪ್ರತಿಷ್ಠಿತವು. ಈ ಬೆಳ್ಳಿ ಬಂಗಾರವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರಿಗೆ ಸಮರ್ಪಿತವಾದ ಕಾಣಿಕೆ.
پس بیدار باشید و اینها را حفظ نمایید تا به حضور روسای کهنه و لاویان و سروران آبای اسرائیل در اورشلیم، به حجره های خانه خداوندبه وزن بسپارید.» | ۲۹ 29 |
ನೀವು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ, ಪ್ರಧಾನರ ಮುಂದೆಯೂ ಇಸ್ರಾಯೇಲ್ ಕುಟುಂಬಗಳ ಪ್ರಧಾನರ ಮುಂದೆಯೂ ತೂಕಮಾಡುವವರೆಗೆ ಜಾಗ್ರತೆಯಾಗಿ ಕಾಪಾಡಿರಿ,” ಎಂದೆನು.
آنگاه کاهنان و لاویان وزن طلا و نقره وظروف را گرفتند تا آنها را به خانه خدای ما به اورشلیم برسانند. | ۳۰ 30 |
ಹಾಗೆಯೇ ಯಾಜಕರೂ, ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ, ಬಂಗಾರವನ್ನೂ, ವಸ್ತುಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.
پس در روز دوازدهم ماه اول از نهر اهوا کوچ کرده، متوجه اورشلیم شدیم و دست خدای ما با ما بود و ما را از دست دشمنان و کمین نشینندگان سر راه خلاصی داد. | ۳۱ 31 |
ನಾವು ಯೆರೂಸಲೇಮಿಗೆ ಹೋದ ಮೊದಲನೆಯ ತಿಂಗಳ, ಹನ್ನೆರಡನೆಯ ದಿವಸದಲ್ಲಿ ಅಹಾವ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದುದರಿಂದ, ದೇವರು ಶತ್ರುವಿನ ಕೈಗೂ, ಮಾರ್ಗದಲ್ಲಿ ಹೊಂಚುಹಾಕುವವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟರು.
و چون به اورشلیم رسیدیم سه روز درآنجاتوقف نمودیم. | ۳۲ 32 |
ನಾವು ಯೆರೂಸಲೇಮಿಗೆ ಬಂದು, ಅಲ್ಲಿ ಮೂರು ದಿವಸ ವಿಶ್ರಮಿಸಿಕೊಂಡೆವು.
و در روز چهارم، نقره و طلا و ظروف را در خانه خدای ما بهدست مریموت بن اوریای کاهن وزن کردند و العازار بن فینحاس با اوبود و یوزاباد بن یشوع و نوعدیا ابن بنوی لاویان باایشان بودند. | ۳۳ 33 |
ತರುವಾಯ ನಾಲ್ಕನೆಯ ದಿವಸದಲ್ಲಿ ಆ ಬೆಳ್ಳಿಯೂ, ಬಂಗಾರವೂ, ಸಲಕರಣೆಗಳೂ ನಮ್ಮ ದೇವರ ಆಲಯದಲ್ಲಿ ಯಾಜಕರಾಗಿರುವ ಊರೀಯನ ಮಗ ಮೆರೇಮೋತನ ಕೈಯಿಂದ ತೂಕಮಾಡಿ ಕೊಟ್ಟೆವು. ಅವನ ಸಂಗಡ ಲೇವಿಯರಾದ ಫೀನೆಹಾಸನ ಮಗನಾಗಿರುವ ಎಲಿಯಾಜರನೂ, ಯೇಷೂವನ ಮಗ ಯೋಜಾಬಾದನೂ, ಬಿನ್ನೂಯ್ ಮಗ ನೋವದ್ಯನೂ ಇದ್ದರು.
همه را به شماره و به وزن (حساب کردند) و وزن همه در آن وقت نوشته شد. | ۳۴ 34 |
ಅದರದರ ಲೆಕ್ಕದ ಪ್ರಕಾರವೂ, ತೂಕದ ಪ್ರಕಾರವೂ ಎಲ್ಲವುಗಳ ತೂಕವು ತಕ್ಷಣವೇ ಲಿಖಿತವಾಯಿತು.
و اسیرانی که از اسیری برگشته بودند، قربانی های سوختنی برای خدای اسرائیل گذرانیدند، یعنی دوازده گاو و نود و شش قوچ وهفتاد و هفت بره و دوازده بز نر، به جهت قربانی گناه، برای تمامی اسرائیل که همه اینها قربانی سوختنی برای خداوند بود. | ۳۵ 35 |
ಸೆರೆಯಿಂದ ಮರಳಿ ಬಂದವರು ಇಸ್ರಾಯೇಲ್ ದೇವರಿಗೆ ದಹನಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲರಿಗೋಸ್ಕರ ಹನ್ನೆರಡು ಹೋರಿಗಳನ್ನೂ, ತೊಂಬತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ದೋಷಪರಿಹಾರಕ್ಕಾಗಿ ಹನ್ನೆರಡು ಹೋತಗಳನ್ನೂ ಅರ್ಪಿಸಿದರು. ಇವೆಲ್ಲಾ ಯೆಹೋವ ದೇವರಿಗೆ ದಹನಬಲಿಯಾಗಿತ್ತು.
و چون فرمانهای پادشاه را به امرای پادشاه و والیان ماورای نهردادند، ایشان قوم و خانه خدا را اعانت نمودند. | ۳۶ 36 |
ಅವರು ಅರಸನ ಆಜ್ಞೆಗಳನ್ನು ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ, ಯಜಮಾನರಿಗೂ ಒಪ್ಪಿಸಿದರು. ಆಗ ಅವರು ಜನರಿಗೂ, ದೇವರ ಆಲಯಕ್ಕೂ ಸಹಾಯ ಮಾಡಿದರು.