< اعداد 34 >
و خداوند موسی را خطاب کرده، گفت: | ۱ 1 |
ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
«بنیاسرائیل را امر فرموده، به ایشان بگو: چون شما به زمین کنعان داخل شوید، این است زمینی که به شما به ملکیت خواهد رسید، یعنی زمین کنعان با حدودش. | ۲ 2 |
“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ, ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಕಾನಾನ್ ದೇಶದೊಳಗೆ ಬರುವಾಗ, ನಿಮಗೆ ಸೊತ್ತಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.
آنگاه حد جنوبی شما از بیابان سین بر جانب ادوم خواهد بود، و سرحد جنوبی شما از آخر بحرالملح به طرف مشرق خواهد بود. | ۳ 3 |
“‘ನಿಮ್ಮ ದಕ್ಷಿಣ ಕಡೆಯು ಚಿನ್ ಮರುಭೂಮಿಯಿಂದ ಎದೋಮಿಗೆ ಅನುಸಾರವಾಗಿರಬೇಕು. ನಿಮ್ಮ ದಕ್ಷಿಣ ಮೇರೆಯು, ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.
و حد شما از جانب جنوب گردنه عقربیم دور خواهد زد و به سوی سین خواهدگذشت، و انتهای آن به طرف جنوب قادش برنیع خواهد بود، و نزد حصرادار بیرون رفته، تاعصمون خواهد گذشت. | ۴ 4 |
ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ, ಚಿನ್‌ಗೆ ಹಾದು, ಕಾದೇಶ್ ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು, ಅಲ್ಲಿಂದ ಹಚರದ್ದಾರಿಗೆ ಹೊರಟು, ಅಚ್ಮೋನಿಗೆ ಹಾದು ಹೋಗಬೇಕು.
و این حد از عصمون تاوادی مصر دور زده، انتهایش نزد دریا خواهدبود. | ۵ 5 |
ಅಚ್ಮೋನಿನಿಂದ ಈಜಿಪ್ಟಿನ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.
و اما حد غربی. دریای بزرگ حد شماخواهد بود. این است حد غربی شما. | ۶ 6 |
ಪಶ್ಚಿಮದಲ್ಲಿ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು. ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವುದು.
و حد شمالی شما این باشد، از دریای بزرگ برای خود جبل هور را نشان گیرید. | ۷ 7 |
ನಿಮ್ಮ ಉತ್ತರ ಮೇರೆ ಯಾವುದೆಂದರೆ ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದವರೆಗೂ,
و از جبل هور تا مدخل حمات را نشان گیرید. و انتهای این حد نزد صدد باشد. | ۸ 8 |
ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ನೀವು ಲೆಬೊ ಹಮಾತಿನ ಪ್ರದೇಶದವರೆಗೆ ಸಾಲು ಮಾಡಿರಿ. ಮೇರೆಯು ಚೆದಾದಿಗೆ ಹೊರಟು
و این حد نزد زفرون بیرون رود و انتهایش نزد حصر عینان باشد، این حدشمالی شما خواهد بود. | ۹ 9 |
ಜಿಫ್ರೋನಿಗೆ ಹೋಗಿ, ಹಚರ್ ಏನಾನಿನಲ್ಲಿ ಮುಗಿಯಲಿ. ಇದು ನಿಮ್ಮ ಉತ್ತರ ಮೇರೆ.
و برای حد مشرقی خود از حصر عینان تاشفام را نشان گیرید. | ۱۰ 10 |
ಪೂರ್ವದ ಮೇರೆಗೋಸ್ಕರ ಹಚರ್ ಏನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ.
و این حد از شفام تا ربله به طرف شرقی عین برود، پس این حد کشیده شده بهجانب دریای کنرت به طرف مشرق برسد. | ۱۱ 11 |
ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಾಕ್ಕೆ ಇಳಿದು, ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
واین حد تا به اردن برسد و انتهایش نزد بحرالملح باشد. این زمین برحسب حدودش به هر طرف زمین شما خواهد بود.» | ۱۲ 12 |
ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರವಾಗಿ ಇಳಿದು, ಉಪ್ಪಿನ ಸಮುದ್ರದಲ್ಲಿ ಮುಗಿಯುವುದು. “‘ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.’”
و موسی بنیاسرائیل را امر کرده، گفت: «این است زمینی که شما آن را به قرعه تقسیم خواهید کرد که خداوند امر فرموده است تا به نه سبط و نصف داده شود. | ۱۳ 13 |
ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿ, “ನೀವು ಚೀಟುಹಾಕಿ ಸ್ವಾಧೀನಪಡಿಸಿಕೊಳ್ಳಬೇಕಾದ ದೇಶವು ಒಂಬತ್ತುವರೆ ಗೋತ್ರಗಳಿಗೆ ಕೊಡಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ ದೇಶವು ಇದೇ.
زیرا که سبط بنی روبین برحسب خاندان آبای خود و سبط بنی جادبرحسب خاندان آبای خود، و نصف سبط منسی، نصیب خود را گرفتهاند. | ۱۴ 14 |
ಏಕೆಂದರೆ ರೂಬೇನ್ಯರ ಮಕ್ಕಳ ಗೋತ್ರವೂ, ಗಾದನ ಮಕ್ಕಳ ಗೋತ್ರವೂ, ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸೊತ್ತನ್ನು ಪಡೆದುಕೊಂಡಿದ್ದಾರೆ.
این دو سبط و نصف به آن طرف اردن در مقابل اریحا بهجانب مشرق به سوی طلوع آفتاب نصیب خود را گرفتهاند.» | ۱۵ 15 |
ಎರಡೂವರೆ ಗೋತ್ರಗಳು ತಮ್ಮ ಸೊತ್ತನ್ನು ಯೊರ್ದನಿನ ಈಚೆಯಲ್ಲಿ ಯೆರಿಕೋವಿಗೆ ಸೂರ್ಯನು ಉದಯಿಸುವ ಪೂರ್ವದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ,” ಎಂದನು.
و خداوند موسی را خطاب کرده، گفت: | ۱۶ 16 |
ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,
«این است نامهای کسانی که زمین را برای شماتقسیم خواهند نمود. العازار کاهن و یوشع بن نون. | ۱۷ 17 |
“ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಇವೇ. ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ
و یک سرور را از هر سبط برای تقسیم نمودن زمین بگیرید. | ۱۸ 18 |
ದೇಶದ ಸೊತ್ತನ್ನು ಹಂಚುವುದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತೆಗೆದುಕೊಳ್ಳಿರಿ.
و این است نامهای ایشان. ازسبط یهودا کالیب بن یفنه. | ۱۹ 19 |
“ಈ ಜನರ ಹೆಸರುಗಳು ಇವೇ. “ಯೆಹೂದನ ಕುಟುಂಬದಿಂದ ಯೆಫುನ್ನೆಯ ಮಗ ಕಾಲೇಬನೂ,
و از سبطبنی شمعون شموئیل بن عمیهود. | ۲۰ 20 |
ಸಿಮೆಯೋನನ ಮಕ್ಕಳ ಗೋತ್ರದಿಂದ ಅಮ್ಮೀಹೂದನ ಮಗ ಶಮುವೇಲನೂ,
و از سبطبنیامین الیداد بن کسلون. | ۲۱ 21 |
ಬೆನ್ಯಾಮೀನನ ಗೋತ್ರದಿಂದ ಕಿಸ್ಲೋನನ ಮಗ ಎಲೀದಾದ್,
و از سبط بنی دان رئیس بقی ابن یجلی. | ۲۲ 22 |
ದಾನನ ಮಕ್ಕಳ ಗೋತ್ರದ ಪ್ರಧಾನನು, ಯೊಗ್ಲೀಯ ಮಗ ಬುಕ್ಕೀ,
و از بنی یوسف از سبطبنی منسی رئیس حنیئیل بن ایفود. | ۲۳ 23 |
ಯೋಸೇಫನ ಮಕ್ಕಳಾದ ಮನಸ್ಸೆಯ ಗೋತ್ರದ ಪ್ರಧಾನನು ಏಫೋದನ ಮಗ ಹನ್ನೀಯೇಲನೂ,
و از سبطبنی افرایم رئیس قموئیل بن شفطان. | ۲۴ 24 |
ಎಫ್ರಾಯೀಮ್ ಮಕ್ಕಳ ಗೋತ್ರದ ಪ್ರಧಾನನು ಶಿಫ್ಟಾನನ ಮಗ ಕೆಮೂಯೇಲನೂ,
و از سبطبنی زبولون رئیس الیصافان بن فرناک. | ۲۵ 25 |
ಜೆಬುಲೂನನ ಮಕ್ಕಳ ಗೋತ್ರದ ಪ್ರಧಾನನು ಪರ್ನಾಕನ ಮಗ ಎಲೀಚಾಫಾನ್,
و از سبطبنی یساکار رئیس فلطیئیل بن عزان. | ۲۶ 26 |
ಇಸ್ಸಾಕಾರನ ಮಕ್ಕಳ ಗೋತ್ರದ ಪ್ರಧಾನನು ಅಜ್ಜಾನನ ಮಗ ಪಲ್ಟೀಯೇಲನೂ,
و از سبطبنی اشیر رئیس اخیهود بن شلومی. | ۲۷ 27 |
ಆಶೇರನ ಮಕ್ಕಳ ಗೋತ್ರದ ಪ್ರಧಾನನು ಶೆಲೋಮಿಯ ಮಗ ಅಹೀಹೂದನೂ,
و از سبطبنی نفتالی رئیس فدهئیل بن عمیهود.» | ۲۸ 28 |
ನಫ್ತಾಲಿಯ ಮಕ್ಕಳ ಗೋತ್ರದ ಪ್ರಧಾನನು ಅಮ್ಮೀಹೂದನ ಮಗ ಪೆದಹೇಲನೂ.”
اینانندکه خداوند مامور فرمود که ملک را در زمین کنعان برای بنیاسرائیل تقسیم نمایند. | ۲۹ 29 |
ಕಾನಾನ್ ದೇಶದಲ್ಲಿ ಇಸ್ರಾಯೇಲರಿಗೆ ಸೊತ್ತನ್ನು ಹಂಚುವುದಕ್ಕೆ ಯೆಹೋವ ದೇವರು ನೇಮಿಸಿದ ಮನುಷ್ಯರು ಇವರೇ.