< مزامیر 110 >

مزمور داود یهوه به خداوند من گفت: «به‌دست راست من بنشین تا دشمنانت را پای انداز تو سازم.» ۱ 1
ದಾವೀದನ ಕೀರ್ತನೆ. ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”
خداوند عصای قوت تو را ازصهیون خواهد فرستاد. در میان دشمنان خودحکمرانی کن. ۲ 2
ನಿಮ್ಮ ಬಲವಾದ ರಾಜದಂಡವನ್ನು ಯೆಹೋವ ದೇವರು ಚೀಯೋನಿನ ಹೊರಗೂ ವಿಸ್ತರಿಸುವರು. “ನಿಮ್ಮ ಶತ್ರುಗಳ ಮಧ್ಯದಲ್ಲಿ ದೊರೆತನ ಮಾಡಿರಿ,” ಎಂದು ಅವರು ನಿಮಗೆ ಹೇಳುವರು.
قوم تو در روز قوت تو، هدایای تبرعی می‌باشند. در زینتهای قدوسیت، شبنم جوانی تو از رحم صحرگاه برای توست. ۳ 3
ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.
خداوند قسم خورده است و پشیمان نخواهدشد که «تو کاهن هستی تا ابدالاباد، به رتبه ملکیصدق.» ۴ 4
“ನೀವು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಯಾಜಕರಾಗಿದ್ದೀರಿ,” ಎಂದು ಯೆಹೋವ ದೇವರು ಆಣೆಯಿಟ್ಟು ಹೇಳಿದ್ದಾರೆ. ಅವರು ತಮ್ಮ ಮನಸ್ಸನ್ನು ಬದಲಾಯಿಸರು.
خداوند که به‌دست راست توست؛ در روز غضب خود پادشاهان را شکست خواهد داد. ۵ 5
ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿದ್ದಾರೆ; ಅವರು ತಮ್ಮ ತೀರ್ಪಿನ ದಿನದಲ್ಲಿ ಅರಸರನ್ನು ದಂಡಿಸುವರು.
در میان امتها داوری خواهد کرد. از لاشها پر خواهد ساخت و سر آنها را درزمین وسیع خواهد کوبید. ۶ 6
ದೇವರು ಜನಾಂಗಗಳನ್ನು ನ್ಯಾಯತೀರಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳನ್ನು ದಂಡಿಸಿ ಅವರಿಗೆ ಮರಣದಂಡನೆ ವಿಧಿಸುವರು.
از نهر سر راه خواهد نوشید. بنابراین سر خود را بر‌خواهدافراشت. ۷ 7
ಕರ್ತ ಆಗಿರುವವರು ದಾರಿಯುದ್ದಕ್ಕೂ ಹಳ್ಳದಿಂದ ನೀರು ಕುಡಿಯುತ್ತಾ, ಜಯದ ಮಾರ್ಗದಲ್ಲಿ ತಲೆಯೆತ್ತಿ ನಡೆದುಹೋಗುವರು.

< مزامیر 110 >