< مزامیر 25 >
مزمور داود ای خداوند بسوی تو جان خود رابرمی افرازم. ای خدای من بر تو توکل میدارم. | ۱ 1 |
೧ದಾವೀದನ ಕೀರ್ತನೆ. ಯೆಹೋವನೇ, ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.
پس مگذار که خجل بشوم و دشمنانم بر من فخر نمایند. | ۲ 2 |
೨ನನ್ನ ದೇವರೇ, ನಿನ್ನನ್ನೇ ನಂಬಿದ್ದೇನೆ, ನನ್ನನ್ನು ಅಪಮಾನಕ್ಕೆ ಗುರಿಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.
بلی هرکه انتظار تو میکشدخجل نخواهد شد. آنانی که بیسبب خیانت میکنند خجل خواهند گردید. | ۳ 3 |
೩ನಿಷ್ಕಾರಣ ದ್ರೋಹಿಗಳಿಗೆ ಅಪಮಾನವಾಗಬೇಕೇ ಹೊರತು, ನಿನ್ನನ್ನು ನಿರೀಕ್ಷಿಸಿದವರಿಗೆ ಎಂದಿಗೂ ಆಗಬಾರದು.
ای خداوندطریق های خود را به من بیاموز و راههای خویش را به من تعلیم ده. | ۴ 4 |
೪ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು.
مرا به راستی خود سالک گردان و مرا تعلیم ده زیرا تو خدای نجات من هستی. تمامی روز منتظر تو بودهام. | ۵ 5 |
೫ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡೆಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ.
ای خداونداحسانات و رحمت های خود را بیاد آور چونکه آنها از ازل بوده است. | ۶ 6 |
೬ಯೆಹೋವನೇ, ನೀನು ಆದಿಯಿಂದಲೂ ನನ್ನನ್ನು ಕರುಣಿಸುವವನಾಗಿ, ನನಗೆ ಮಾಡಿದ ಮಹೋಪಕಾರಗಳನ್ನು ನೆನಸಿಕೋ.
خطایای جوانی وعصیانم را بیاد میاور. ای خداوند به رحمت خودو بهخاطر نیکویی خویش مرا یاد کن. | ۷ 7 |
೭ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ಮತ್ತು ದ್ರೋಹಗಳನ್ನೂ ಮನಸ್ಸಿನಲ್ಲಿಡದೆ, ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಪುಮಾಡಿಕೋ.
خداوندنیکو و عادل است. پس به گناه کاران طریق راخواهد آموخت. | ۸ 8 |
೮ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.
مسکینان را به انصاف رهبری خواهد کرد و به مسکینان طریق خود را تعلیم خواهد داد. | ۹ 9 |
೯ಆತನು ದೀನರನ್ನು ತನ್ನ ವಿಧಿಗನುಗುಣವಾಗಿ ನಡೆಸುವನು; ಅವರಿಗೆ ತನ್ನ ಮಾರ್ಗವನ್ನು ತೋರಿಸುವನು.
همه راههای خداوند رحمت وحق است برای آنانی که عهد و شهادات او را نگاه میدارند. | ۱۰ 10 |
೧೦ಯೆಹೋವನ ನಿಬಂಧನೆ ಮತ್ತು ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ, ಆತನ ಎಲ್ಲಾ ಮಾರ್ಗಗಳು ಕೃಪೆಯೂ, ಸತ್ಯತೆಯುಳ್ಳವು.
ای خداوند بهخاطر اسم خود، گناه مرابیامرز زیرا که بزرگ است. | ۱۱ 11 |
೧೧ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.
کیست آن آدمی که از خداوند میترسد؟ او را بطریقی که اختیار کرده است خواهد آموخت. | ۱۲ 12 |
೧೨ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರುವರೋ ಅವರಿಗೆ ಉಚಿತವಾದ ಮಾರ್ಗವನ್ನು ಆತನು ಬೋಧಿಸುವನು.
جان او در نیکویی شب را بسر خواهد برد. و ذریت او وارث زمین خواهند شد. | ۱۳ 13 |
೧೩ಅವರು ಸುಖದಿಂದಲೇ ಇರುವರು; ಅವರ ಸಂತತಿಯವರು ದೇಶವನ್ನು ಅನುಭವಿಸುವರು.
سر خداوند با ترسندگان او است و عهد او تا ایشان را تعلیم دهد. | ۱۴ 14 |
೧೪ಯೆಹೋವನು ತನ್ನ ಸದ್ಭಕ್ತರಿಗೆ ಆಪ್ತಮಿತ್ರನಂತಿರುವನು; ಅವರಿಗೆ ತನ್ನ ಒಡಂಬಡಿಕೆಯ ಅನುಭವವನ್ನು ದಯಪಾಲಿಸುವನು.
چشمان من دائم بسوی خداوند است زیرا که او پایهای مرااز دام بیرون میآورد. | ۱۵ 15 |
೧೫ನನ್ನ ದೃಷ್ಟಿ ಯಾವಾಗಲೂ ಯೆಹೋವನಲ್ಲಿದೆ; ಆತನೇ ನನ್ನ ಕಾಲುಗಳನ್ನು ಬಲೆಯಿಂದ ಬಿಡಿಸುವವನು.
بر من ملتفت شده، رحمت بفرما زیرا که منفرد و مسکین هستم. | ۱۶ 16 |
೧೬ನಾನು ಒಬ್ಬೊಂಟಿಗನೂ, ಬಾಧೆಪಡುವವನೂ ಆಗಿದ್ದೇನೆ; ನೀನು ಕಟಾಕ್ಷವಿಟ್ಟು ನನ್ನನ್ನು ಕರುಣಿಸು.
تنگیهای دل من زیاد شده است. مرا ازمشقت های من بیرون آور. | ۱۷ 17 |
೧೭ನನ್ನ ಮನೋವ್ಯಥೆಗಳನ್ನು ನಿವಾರಿಸು; ಸಂಕಟಗಳಿಂದ ನನ್ನನ್ನು ಬಿಡಿಸು.
بر مسکنت و رنج من نظر افکن و جمیع خطایایم را بیامرز. | ۱۸ 18 |
೧೮ನಾನು ಕುಗ್ಗಿರುವುದನ್ನೂ, ಕಷ್ಟಪಡುವುದನ್ನೂ ನೋಡಿ, ನನ್ನ ಎಲ್ಲಾ ಪಾಪಗಳನ್ನು ಪರಿಹರಿಸು.
بردشمنانم نظر کن زیرا که بسیارند و به کینه تلخ به من کینه میورزند. | ۱۹ 19 |
೧೯ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ.
جانم را حفظ کن و مرارهایی ده تا خجل نشوم زیرا بر تو توکل دارم. | ۲۰ 20 |
೨೦ನನ್ನ ಪ್ರಾಣವನ್ನು ಕಾಪಾಡಿ ಉಳಿಸು; ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ, ನನಗೆ ಆಶಾಭಂಗವಾಗಬಾರದು.
کمال و راستی حافظ من باشند زیرا که منتظرتو هستم. | ۲۱ 21 |
೨೧ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ.
ای خدا اسرائیل را خلاصی ده، ازجمیع مشقتهای وی. | ۲۲ 22 |
೨೨ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು.