< مزامیر 4 >

برای سالار مغنیان برذوات اوتار. مزمور داود ای خدای عدالت من، چون بخوانم مرا مستجاب فرما. در تنگی مرا وسعت دادی. بر من کرم فرموده، دعای مرا بشنو. ۱ 1
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ತಂತಿವಾದ್ಯದೊಡನೆ ಹಾಡತಕ್ಕದ್ದು. ದಾವೀದನ ಕೀರ್ತನೆ. ನನ್ನ ನೀತಿಯಾಗಿರುವ ದೇವರೇ, ನಾನು ಕರೆಯುವಾಗ ನನಗೆ ಸದುತ್ತರವನ್ನು ಕೊಡಿರಿ. ನನ್ನ ಸಂಕಟದಿಂದ ನನಗೆ ನೆಮ್ಮದಿಯನ್ನು ನೀಡಿರಿ; ನನ್ನನ್ನು ಕರುಣಿಸಿ, ನನ್ನ ಪ್ರಾರ್ಥನೆಯನ್ನು ಕೇಳಿರಿ.
‌ای فرزندان انسان تا به کی جلال من عار خواهد بود، و بطالت را دوست داشته، دروغ را خواهید طلبید؟ سلاه ۲ 2
ಓ ಮಾನವ, ನೀನು ಎಲ್ಲಿಯತನಕ ನನ್ನ ಮಹಿಮೆಯನ್ನು ಅವಮಾನಕ್ಕೆ ಗುರಿಪಡಿಸುವಿ? ನೀನು ಎಲ್ಲಿಯತನಕ ವ್ಯರ್ಥವಾದದ್ದನ್ನು ಪ್ರೀತಿಸಿ, ಸುಳ್ಳನ್ನು ಹುಡುಕುವಿ?
اما بدانید که خداوند مرد صالح را برای خودانتخاب کرده است، و چون او را بخوانم خداوندخواهد شنید. ۳ 3
ಯೆಹೋವ ದೇವರು ತಮ್ಮ ನಂಬಿಗಸ್ತರನ್ನು ತಮಗಾಗಿ ಪ್ರತ್ಯೇಕಿಸಿದ್ದಾರೆ ಎಂದು ತಿಳಿದುಕೊಳ್ಳಿರಿ; ನಾನು ಬೇಡಿಕೊಳ್ಳಲು ಯೆಹೋವ ದೇವರು ನನಗೆ ಉತ್ತರ ನೀಡುವರು.
خشم گیرید و گناه مورزید. در دلها بربسترهای خود تفکر کنید و خاموش باشید. سلاه ۴ 4
ನಡುಗಿರಿ, ಪಾಪಮಾಡಬೇಡಿರಿ; ನೀವು ನಿಮ್ಮ ಹಾಸಿಗೆಯ ಮೇಲೆ ಇರುವಾಗ, ನಿಮ್ಮ ಹೃದಯಗಳಲ್ಲಿ ಧ್ಯಾನಮಾಡಿ ಮೌನವಾಗಿರಿ.
قربانی های عدالت را بگذرانید و بر خداوندتوکل نمایید. ۵ 5
ನೀತಿಯ ಬಲಿಗಳನ್ನು ಅರ್ಪಿಸಿರಿ ಯೆಹೋವ ದೇವರಲ್ಲಿ ನಿಮ್ಮ ಭರವಸೆಯನ್ನು ಇಡಿರಿ.
بسیاری می‌گویند: «کیست که به ما احسان نماید؟» ای خداوند نور چهره خویش را بر مابرافراز. ۶ 6
ಯೆಹೋವ ದೇವರೇ, “ನಮಗೆ ಒಳ್ಳೆಯದನ್ನು ಮಾಡುವವರು ಯಾರು?” ಎಂದು ಕೇಳುವವರು ಅನೇಕರಿದ್ದಾರೆ. ನಿಮ್ಮ ಮುಖಪ್ರಕಾಶವು ನಮ್ಮ ಮೇಲೆ ಬೆಳಗಲಿ.
شادمانی در دل من پدید آورده‌ای، بیشتر از وقتی که غله و شیره ایشان افزون گردید. ۷ 7
ಧಾನ್ಯವೂ ಹೊಸ ದ್ರಾಕ್ಷಾರಸವೂ ಸುಗ್ಗಿಕಾಲದಲ್ಲಿ ಸಮೃದ್ಧಿಯಾದಾಗ ಇರುವುದಕ್ಕಿಂತಲೂ ಅಧಿಕವಾದ ಆನಂದವನ್ನು ನೀವು ನನ್ನ ಹೃದಯದಲ್ಲಿ ಇಟ್ಟಿದ್ದೀರಿ.
بسلامتی می‌خسبم و به خواب هم می‌روم زیراکه تو فقط‌ای خداوند مرا در اطمینان ساکن می‌سازی. ۸ 8
ಸಮಾಧಾನವಾಗಿ ಮಲಗಿ ನಿದ್ರೆ ಮಾಡುವೆನು, ಏಕೆಂದರೆ ಯೆಹೋವ ದೇವರೇ, ನೀವೊಬ್ಬರೇ ನನ್ನನ್ನು ಸುರಕ್ಷಿತವಾಗಿ ವಾಸಿಸುವಂತೆ ಮಾಡುತ್ತೀರಿ.

< مزامیر 4 >