< غزل غزلها 2 >

من نرگس شارون و سوسن وادیها هستم. ۱ 1
ಶಾರೋನಿನ ಗುಲಾಬಿ ಹೂವೂ, ತಗ್ಗಿನ ತಾವರೆಯೂ ನಾನೇ.
چنانکه سوسن در میان خارها همچنان محبوبه من در میان دختران است. ۲ 2
ಮುಳ್ಳುಪೊದರಿನ ನಡುವೆ ತಾವರೆಯಂತೆ ನನ್ನ ಪ್ರಿಯಳು ಕನ್ಯಾಮಣಿಗಳಲ್ಲಿ ಶ್ರೇಷ್ಠಳು.
چنانکه سیب در میان درختان جنگل همچنان محبوب من در میان پسران است. درسایه وی به شادمانی نشستم و میوه‌اش برای کامم شیرین بود. ۳ 3
ಅಡವಿಯ ಮರಗಳಲ್ಲಿ ಸೇಬಿನ ಮರದಂತೆ ಯುವಜನರಲ್ಲಿ ನನ್ನ ಪ್ರಿಯನಿದ್ದಾನೆ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತುಕೊಂಡೆನು. ಅವನ ಫಲವು ನನ್ನ ರುಚಿಗೆ ಮಧುರವಾಗಿತ್ತು.
مرا به میخانه آورد و علم وی بالای سر من محبت بود. ۴ 4
ಅವನು ಔತಣದ ಮನೆಗೆ ನನ್ನನ್ನು ಕರೆದುಕೊಂಡು ಬಂದನು. ನನ್ನ ಮೇಲೆ ಇರುವ ಅವನ ಧ್ವಜವು ಪ್ರೀತಿಯೇ.
مرا به قرصهای کشمش تقویت دهید و مرا به سیبها تازه سازید، زیرا که من از عشق بیمار هستم. ۵ 5
ದ್ರಾಕ್ಷೆಯಿಂದ ನನ್ನನ್ನು ಬಲಪಡಿಸು. ಸೇಬು ಹಣ್ಣುಗಳಿಂದ ನನ್ನನ್ನು ಚೇತನಗೊಳಿಸು. ಏಕೆಂದರೆ ನಾನು ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ.
دست چپش در زیر سر من است و دست راستش مرا در آغوش می‌کشد. ۶ 6
ಅವನ ಎಡಗೈ ನನ್ನ ತಲೆದಿಂಬಾಗಿರಲಿ. ಅವನ ಬಲಗೈ ನನ್ನನ್ನು ಅಪ್ಪಿಕೊಳ್ಳಲಿ.
‌ای دختران اورشلیم، شما را به غزالها وآهوهای صحرا قسم می‌دهم که محبوب مرا تاخودش نخواهد بیدار نکنید و برنینگیزانید. ۷ 7
ಯೆರೂಸಲೇಮಿನ ಪುತ್ರಿಯರೇ, ಮೆಚ್ಚುವ ಕಾಲಕ್ಕೆ ಮುಂಚೆ ನೀವು ಪ್ರೀತಿಯನ್ನು ಎಬ್ಬಿಸಬೇಡಿರಿ. ಎಚ್ಚರಿಸಲೂ ಬೇಡಿರಿ ಎಂದು ಅಡವಿಯ ಹುಲ್ಲೆ ಹರಿಣಿಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
آواز محبوب من است، اینک بر کوهها جستان وبر تلها خیزان می‌آید. ۸ 8
ನನ್ನ ಪ್ರಿಯನ ಸ್ವರವು! ಇಗೋ! ಅವನು ಪರ್ವತಗಳ ಮೇಲೆ ಹಾರುತ್ತಾ, ಗುಡ್ಡಗಳ ಮೇಲೆ ಜಿಗಿಯುತ್ತಾ ಬರುತ್ತಿದ್ದಾನೆ.
محبوب من مانند غزال یابچه آهو است. اینک او در عقب دیوار ما ایستاده، از پنجره‌ها می‌نگرد و از شبکه‌ها خویشتن رانمایان می‌سازد. ۹ 9
ನನ್ನ ಪ್ರಿಯನು ಜಿಂಕೆಯ ಹಾಗೆ ಇದ್ದಾನೆ. ದುಪ್ಪಿಯ ಮರಿಯ ಹಾಗೆಯೂ ಇದ್ದಾನೆ. ಇಗೋ! ಅವನು ನಮ್ಮ ಗೋಡೆಯ ಹಿಂದೆ ನಿಂತಿದ್ದಾನೆ. ಜಾಲಾಂತರಗಳಲ್ಲಿ ತನ್ನನ್ನು ತೋರಿಸಿ, ಕಿಟಿಕಿಗಳಿಂದ ನೋಡುತ್ತಿದ್ದಾನೆ.
محبوب من مرا خطاب کرده، گفت: «ای محبوبه من و‌ای زیبایی من برخیز و بیا. ۱۰ 10
ನನ್ನ ಪ್ರಿಯನು ನನ್ನೊಡನೆ ಮಾತನಾಡಿ ಹೀಗೆಂದನು: “ನನ್ನ ಪ್ರಿಯಳೇ ಎದ್ದು ಬಾ, ನನ್ನ ಸುಂದರಿಯೇ, ಹೊರಟು ಬಾ.
زیرا اینک زمستان گذشته و باران تمام شده ورفته است. ۱۱ 11
ಇಗೋ! ಚಳಿಗಾಲ ಕಳೆಯಿತು, ಮಳೆ ನಿಂತುಹೋಯಿತು.
گلها بر زمین ظاهر شده و زمان الحان رسیده و آواز فاخته در ولایت ما شنیده می‌شود. ۱۲ 12
ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತಿವೆ. ಪಕ್ಷಿಗಳು ಹಾಡುವ ಕಾಲ ಬಂತು. ಪಾರಿವಾಳಗಳ ಸ್ವರ ನಮ್ಮ ಊರಲ್ಲಿ ಕೇಳಿಸುತ್ತಿದೆ.
درخت انجیر میوه خود را می‌رساندو موها گل آورده، رایحه خوش می‌دهد. ای محبوبه من و‌ای زیبایی من، برخیز و بیا.» ۱۳ 13
ಅಂಜೂರದ ಕಾಯಿಗಳು ಹಣ್ಣಾಗಿವೆ. ದ್ರಾಕ್ಷಿಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ. ಎದ್ದು ಬಾ, ನನ್ನ ಪ್ರಿಯಳೇ, ನನ್ನ ಸುಂದರಿಯೇ, ನನ್ನೊಂದಿಗೆ ಬಾ.”
‌ای کبوتر من که در شکافهای صخره و درستر سنگهای خارا هستی، چهره خود را به من بنما و آوازت را به من بشنوان زیرا که آواز تو لذیذو چهره ات خوشنما است. ۱۴ 14
ಬಂಡೆಯ ಬಿರುಕುಗಳಲ್ಲಿಯೂ ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ ಬಾ. ನಿನ್ನ ಮುಖವನ್ನು ನನಗೆ ತೋರಿಸು. ನಿನ್ನ ಸ್ವರವನ್ನು ನನಗೆ ಕೇಳಿಸು. ನಿನ್ನ ಸ್ವರವು ಇಂಪಾಗಿದೆ. ನಿನ್ನ ಮುಖವು ಸುಂದರವಾಗಿಯೂ ಇದೆ.
شغالها، شغالهای کوچک را که تاکستانها را خراب می‌کنند برای مابگیرید، زیرا که تاکستانهای ما گل آورده است. ۱۵ 15
ದ್ರಾಕ್ಷಿತೋಟಗಳನ್ನು ಹಾಳುಮಾಡುವ ನರಿಗಳನ್ನೂ ನರಿಮರಿಗಳನ್ನೂ ಹಿಡಿಯಿರಿ. ನಮ್ಮ ದ್ರಾಕ್ಷಿತೋಟಗಳಲ್ಲಿ ಹೂಗಳು ಅರಳಿವೆ.
محبوبم از آن من است و من از آن وی هستم. در میان سوسنها می‌چراند. ۱۶ 16
ನನ್ನ ಪ್ರಿಯನು ನನ್ನವನೇ, ನಾನು ಅವನವಳೇ. ಅವನು ನೆಲದಾವರೆಗಳ ನಡುವೆ ಮಂದೆಯನ್ನು ಮೇಯಿಸುತ್ತಾನೆ.
‌ای محبوب من، برگرد و تا نسیم روز بوزد و سایه‌ها بگریزد، (مانند) غزال یا بچه آهو بر کوههای باتر باش. ۱۷ 17
ನನ್ನ ಪ್ರಿಯನೇ, ಹೊತ್ತು ಮೂಡುವ ಮುಂಚೆ ಕತ್ತಲು ಕವಿಯುವ ಮೊದಲು ಹೊರಟು ಬಾ. ಒರಟಾದ ಪರ್ವತಗಳ ಮೇಲಿರುವ ಜಿಂಕೆಯಂತಿರು. ಹೌದು, ಪ್ರಾಯದ ದುಪ್ಪಿಯಂತೆಯೂ ಇರು.

< غزل غزلها 2 >