< اول تواریخ 18 >

پس از چندی باز داوود به فلسطینی‌ها حمله کرده، آنها را شکست داد و شهر جت و روستاهای اطراف آن را از دست ایشان گرفت. داوود همچنین موآبی‌ها را شکست داد و آنها تابع داوود شده، به او باج و خراج می‌دادند. 1
ದಾವೀದನು ಫಿಲಿಷ್ಟಿಯರನ್ನು ಮುತ್ತಿಗೆಹಾಕಿ, ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಮತ್ತು ಅದರ ಗ್ರಾಮಗಳನ್ನೂ ತೆಗೆದುಕೊಂಡನು.
2
ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ದಾಸರಾಗಿ ಕಪ್ಪಕೊಡಬೇಕಾಯಿತು.
در ضمن، داوود نیروهای هددعزر، پادشاه صوبه را در نزدیکی حمات در هم شکست، زیرا هددعزر می‌کوشید نواحی کنار رود فرات را به چنگ آورد. 3
ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜರನನ್ನು ಹಮಾತಿನ ಬಳಿಯಲ್ಲಿ ಸೋಲಿಸಿದನು.
در این جنگ داوود هزار ارابه، هفت هزار سرباز سواره و بیست هزار سرباز پیاده را به اسیری گرفت. او صد اسب برای ارابه‌ها نگه داشت و رگ پای بقیهٔ اسبان را قطع کرد. 4
ದಾವೀದನು ಅವನ ಸಾವಿರ ರಥಗಳನ್ನೂ, ಏಳುಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು, ಉಳಿದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿ ಬಿಟ್ಟನು.
همچنین با بیست و دو هزار سرباز سوری که از دمشق برای کمک به هددعزر آمده بودند، جنگید و همهٔ آنها را کشت. 5
ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ, ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.
داوود در دمشق چندین قرارگاه مستقر ساخت و مردم سوریه تابع داوود شده، به او باج و خراج می‌پرداختند. به این ترتیب داوود هر جا می‌رفت، خداوند او را پیروزی می‌بخشید. 6
ಇದಲ್ಲದೆ ಅವನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನು ಇರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪ ಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ವಿಜಯ ದೊರಕಿತು.
داوود سپرهای طلای سرداران هددعزر را برداشت و به اورشلیم برد. 7
ದಾವೀದನು ಹದರೆಜರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.
در ضمن مقدار زیادی مفرغ از طبحت و کُن شهرهای هددعزر گرفته، آنها را نیز به اورشلیم برد. (بعدها سلیمان از این مفرغ برای ساختن لوازم خانهٔ خدا و حوض و ستونهای واقع در آن استفاده کرد.) 8
ಇದಲ್ಲದೆ ದಾವೀದನು ಹದರೆಜರನ ಟಿಭತ್ ಮತ್ತು ಕೂನ್ ಎಂಬ ಪಟ್ಟಣಗಳಿಂದ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು. ಸೊಲೊಮೋನನು ಆ ತಾಮ್ರದಿಂದ ಕಂಚಿನ ಕಡಲೆಂಬ ಪಾತ್ರೆಯನ್ನೂ, ಕಂಬಗಳನ್ನೂ ಮತ್ತು ಬೇರೆ ಸಾಮಾನುಗಳನ್ನು ಇದೇ ತಾಮ್ರದಿಂದ ಮಾಡಿಸಿದನು.
توعو، پادشاه حمات، وقتی شنید که داوود بر لشکر هددعزر پیروز شده است، 9
ದಾವೀದನು ಚೋಬದ ಅರಸನಾದ ಹದದೆಜರನ ಸೈನ್ಯವನ್ನೆಲ್ಲಾ ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.
پسرش هدورام را فرستاد تا سلام وی را به او برساند و این پیروزی را به او تبریک بگوید، چون هددعزر و توعو با هم دشمن بودند. هدورام هدایایی از طلا و نقره و مفرغ به داوود داد. 10
೧೦ತೋವಿಗೂ ಹದರೆಜನಿಗೂ ವಿರೋಧವಿತ್ತು. ದಾವೀದನು ಹದದೆಜರನ ವಿರುದ್ಧ ಹೋರಾಡಿ ಅವನನ್ನು ಸೋಲಿಸಿದ್ದರಿಂದ, ತೋವು ದಾವೀದನನ್ನು ವಂದಿಸುವುದಕ್ಕೂ, ಹಾರೈಸುವುದಕ್ಕೂ ತನ್ನ ಮಗನಾದ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ವಿಧವಿಧವಾದ ತಾಮ್ರ, ಬೆಳ್ಳಿ, ಬಂಗಾರಗಳ ಪಾತ್ರೆಗಳನ್ನು ತಂದನು.
داوود همهٔ این هدایا را با طلا و نقره‌ای که خود از ادومی‌ها، موآبی‌ها، عمونی‌ها، فلسطینی‌ها، عمالیقی‌ها به غنیمت گرفته بود وقف خداوند کرد. 11
೧೧ಅರಸನಾದ ದಾವೀದನು ಇವುಗಳನ್ನೂ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಮತ್ತು ಅಮಾಲೇಕ್ಯರು ಎಂಬೀ ಸುತ್ತಲಿನ ಜನಾಂಗಗಳಿಂದ ವಶಪಡಿಸಿಕೊಂಡ ಬೆಳ್ಳಿ ಬಂಗಾರವನ್ನು ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.
ابیشای (پسر صرویه) هجده هزار سرباز ادومی را در درهٔ نمک کشت. 12
೧೨ಇದಲ್ಲದೆ ಚೆರೂಯಳ ಮಗನಾದ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಸೈನಿಕರನ್ನು ಸೋಲಿಸಿದನು.
او در سراسر ادوم، قرارگاههایی مستقر کرد و ادومی‌ها تابع داوود شدند. داوود به هر طرف می‌رفت خداوند به او پیروزی می‌بخشید. 13
೧೩ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.
داوود با عدل و انصاف بر اسرائیل حکومت می‌کرد. 14
೧೪ದಾವೀದನು ಇಸ್ರಾಯೇಲರೆಲ್ಲರ ಅರಸನಾಗಿ ಎಲ್ಲಾ ಪ್ರಜೆಗಳಿಗೂ ಧರ್ಮತಪ್ಪದೆ ನೀತಿ ಮತ್ತು ನ್ಯಾಯದಿಂದ ಕಾರ್ಯ ನಿರ್ವಹಿಸುತ್ತಿದ್ದನು.
فرماندهٔ سپاه او یوآب (پسر صرویه) و وقایع‌نگار او یهوشافاط (پسر اخیلود) بود. 15
೧೫ಚೆರೂಯಳ ಮಗನಾದ ಯೋವಾಬನು ಅವನ ಸೇನಾಧಿಪತಿಯೂ, ಅಹೀಲೂದನ ಮಗನಾದ ಯೆಹೋಷಾಫಾಟನು ಮಂತ್ರಿಯೂ ಆಗಿದ್ದರು.
صادوق (پسر اخیطوب) و اخیملک (پسر اَبیّاتار) هر دو کاهن بودند و سرایا کاتب بود. 16
೧೬ಅಹೀಟೂಬನ ಮಗನಾದ ಚಾದೋಕನೂ ಮತ್ತು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು. ಶವ್ಷನು ಲೇಖಕನು.
بنایا (پسر یهویاداع) فرماندهٔ گارد سلطنتی داوود بود. پسران داوود مشاوران دربار بودند. 17
೧೭ಯೆಹೋಯಾದನ ಮಗನಾದ ಬೆನಾಯನು, ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಮುಖ್ಯಸ್ಥನಾದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.

< اول تواریخ 18 >