< دوم پادشاهان 22 >

یوشیا هشت ساله بود که پادشاه یهودا شد و سی و یک سال در اورشلیم سلطنت نمود. (مادرش یِدیدَه، دختر عَدایه، از اهالی بُصقَت بود.) 1
ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆಯು ಅವನ ತಾಯಿ.
یوشیا مانند جدش داوود مطابق میل خداوند عمل می‌کرد و از دستورهای خدا اطاعت کامل می‌نمود. 2
ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
یوشیای پادشاه در هجدهمین سال سلطنت خود، شافان (پسر اصلیا و نوهٔ مشلام) کاتب را به خانهٔ خداوند فرستاد تا این پیغام را به حِلقیا، کاهن اعظم بدهد: «نقره‌ای را که مردم به خانهٔ خداوند می‌آورند و به کاهنان محافظ مدخل می‌دهند، جمع‌آوری کن 3
ಅರಸನಾದ ಯೋಷೀಯನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಚಲ್ಯನ ಮಗನೂ, ಮೆಷುಲ್ಲಾಮನ ಮೊಮ್ಮಗನೂ, ಯೆಹೋವನ ಆಲಯದ ಲೇಖಕನೂ ಆದ ಶಾಫಾನನನ್ನು ಕರೆದು ಅವನಿಗೆ,
4
“ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ, ಅವನಿಗೆ ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಬೇಕು,
و آن را به ناظران ساختمانی خانۀ خداوند تحویل بده تا با آن، نجارها و بناها و معمارها را به کار بگیرند و سنگها و چوبهای تراشیده را خریداری نمایند و خرابیهای خانهٔ خدا را تعمیر کنند.» 5
ಅದಲ್ಲದೆ ಆಲಯದ ಕೆಲಸಮಾಡಿಸುವ ಮುಖ್ಯಸ್ಥರಿಗೆ ಅದನ್ನು ಒಪ್ಪಿಸು ಎಂದು ಹೇಳಬೇಕು, ಮುಖ್ಯಸ್ಥರು ಅದನ್ನು ಯೆಹೋವನ ಆಲಯದ ದುರಸ್ತಿ ಕೆಲಸಕ್ಕೆ ಉಪಯೋಗಿಸಲಿ,
6
ಬಡಗಿ, ಶಿಲ್ಪಿ, ಮೇಸ್ತ್ರಿ ಮೊದಲಾದವರ ಸಂಬಳಕ್ಕಾಗಿಯೂ, ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಅದನ್ನು ಉಪಯೋಗಿಸಿಕೊಳ್ಳಲಿ,
(از ناظران ساختمانی خانهٔ خداوند صورتحساب نمی‌خواستند، چون مردانی امین و درستکار بودند.) 7
ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು” ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು.
یک روز حِلقیا، کاهن اعظم نزد شافان کاتب رفت و گفت: «در خانهٔ خداوند کتاب تورات را پیدا کرده‌ام.» سپس کتاب را به شافان نشان داد تا آن را بخواند. 8
ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ, ಅದನ್ನು ಅವನ ಕೈಯಲ್ಲಿ ಕೊಟ್ಟನು. ಶಾಫಾನನು ಅದನ್ನು ಓದಿದನು.
وقتی شافان گزارش کار ساختمان خانهٔ خداوند را به پادشاه می‌داد در مورد کتابی نیز که حِلقیا، کاهن اعظم در خانهٔ خداوند پیدا کرده بود با او صحبت کرد. سپس شافان آن را برای پادشاه خواند. 9
ಅನಂತರ ಲೇಖಕನಾದ ಶಾಫಾನನು ಹಿಂತಿರುಗಿ ಅರಸನ ಬಳಿಗೆ ಹೋಗಿ, “ನಿನ್ನ ಸೇವಕರು ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮುಖ್ಯಸ್ಥರಿಗೆ ಒಪ್ಪಿಸಿದರು.
10
೧೦ಇದಲ್ಲದೆ, ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು.
وقتی پادشاه کلمات تورات را شنید، از شدت ناراحتی لباس خود را پاره کرد 11
೧೧ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು.
و به حِلقیا کاهن اعظم، شافان کاتب، عسایا ملتزم پادشاه، اخیقام (پسر شافان) و عکبور (پسر میکایا) گفت: «بروید و از خداوند برای من، و برای قوم، و برای همۀ یهودا، دربارۀ کلماتِ این کتاب که پیدا شده است، مسئلت کنید. بدون شک خداوند از ما خشمگین است، چون اجداد ما مطابق دستورهای او که در این کتاب نوشته شده است رفتار نکرده‌اند.» 12
೧೨ಅರಸನು ಯಾಜಕನಾದ ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಸಹಾಯಕನಾದ ಅಸಾಯ ಎಂಬುವವರಿಗೆ,
13
೧೩“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.
پس حِلقیا، اخیقام، عکبور، شافان و عسایا نزد زنی به نام حُلده رفتند که نبیه بود و در محلهٔ دوم اورشلیم زندگی می‌کرد. (شوهر او شلوم، پسر تقوه و نوهٔ حرحس، خیاط دربار بود.) وقتی جریان امر را برای حلده تعریف کردند، 14
೧೪ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ, ಎಂಬುವವರು “ಹುಲ್ದ” ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ, ತಿಕ್ವನ ಮಗನೂ, ಯಾಜಕವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಪತಿ. ಈಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು.
حلده به ایشان گفت که نزد پادشاه بازگردند و این پیغام را از جانب خداوند، خدای اسرائیل به او بدهند. 15
೧೫ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ತಿಳಿಸಿರಿ.
«همان‌طور که در کتاب تورات فرموده‌ام و تو آن را خواندی، بر این شهر و مردمانش بلا خواهم فرستاد، 16
೧೬ಯೆಹೋವನು, ‘ಈ ದೇಶದ ಮೇಲೆಯೂ ಮತ್ತು ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಆಪತ್ತುಗಳನ್ನು ಬರಮಾಡುವನು.
زیرا مردم یهودا مرا ترک گفته، بت‌پرست شده‌اند و با کارهایشان خشم مرا برانگیخته‌اند. پس آتش خشم من که بر اورشلیم افروخته شده، خاموش نخواهد شد. 17
೧೭ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.
«اما من دعای تو را اجابت خواهم نمود و این بلا را پس از مرگ تو بر این سرزمین خواهم فرستاد. تو این بلا را نخواهی دید و در آرامش خواهی مرد، زیرا هنگامی که کتاب تورات را خواندی و از اخطار من در مورد مجازات این سرزمین و ساکنانش آگاه شدی، متأثر شده، لباس خود را پاره نمودی و در حضور من گریه کرده، فروتن شدی.» فرستادگان پادشاه این پیغام را به او رساندند. 18
೧೮ತಾನು ಕೇಳಿದ ವಾಕ್ಯಗಳ ವಿಷಯವಾಗಿ ಯೆಹೋವನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ತಿಳಿಸಬೇಕಾದ ಇಸ್ರಾಯೇಲರ ದೇವರಾದ ಯೆಹೋವನ ಮಾತೇನೆಂದರೆ,
19
೧೯‘ನಾನು ಈ ದೇಶವನ್ನೂ, ನಿವಾಸಿಗಳನ್ನೂ, ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುವುದನ್ನು ನೀನು ಕೇಳಿದಾಗ, ದುಃಖಪಟ್ಟು ಯೆಹೋವನಾದ ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು’
20
೨೦ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.

< دوم پادشاهان 22 >