< خروج 31 >
سپس خداوند به موسی فرمود: | 1 |
೧ಯೆಹೋವನು ಮೋಶೆಗೆ ಹೀಗೆಂದನು,
«من بِصَلئیل را که پسر اوری و نوهٔ حور از قبیلهٔ یهودا است انتخاب کردهام | 2 |
೨“ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ, ಊರಿಯನ ಮಗನೂ ಆಗಿರುವ ಬೆಚಲೇಲನೆಂಬುವನನ್ನು ಹೆಸರು ಹಿಡಿದು ಕರೆದಿದ್ದೇನೆ.
و او را از روح خود پر ساختهام و به او حکمت، فهم، دانش و تجربه در همه زمینهها بخشیدهام. | 3 |
೩ಕಲಾತ್ಮಕವಾದ ವಿನ್ಯಾಸಗಳನ್ನು ಮಾಡುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,
او در ساختن ظروف طلا و نقره و مفرغ، | 4 |
೪ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸಗಳನ್ನು ಮಾಡುವುದಕ್ಕೂ,
همچنین در کار خراطی و جواهر سازی و هر صنعتی استاد است. | 5 |
೫ಅವನಿಗೆ ದೇವರಾತ್ಮವನ್ನು ದಯಪಾಲಿಸಿ, ಅದಕ್ಕೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪ ಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.
«در ضمن اهولیاب، پسر اخیسامک از قبیلهٔ دان را نیز انتخاب کردهام تا دستیار او باشد. علاوه بر این به تمام صنعتگرانی که با او کار میکنند، مهارت مخصوصی بخشیدهام تا بتوانند همهٔ آن چیزهایی را که به تو دستور دادهام بسازند | 6 |
೬ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.
خیمهٔ ملاقات، صندوق عهد با تخت رحمت که بر آن است، تمام ابزار و وسایل خیمهٔ عبادت، | 7 |
೭ದೇವದರ್ಶನದ ಗುಡಾರ, ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷ ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,
میز و ظروف آن، چراغدان طلای خالص و لوازم آن، مذبح بخور، | 8 |
೮ಮೇಜು ಅದರ ಉಪಕರಣಗಳು, ಚೊಕ್ಕ ಬಂಗಾರದ ದೀಪಸ್ತಂಭ ಅದರ ಉಪಕರಣಗಳು,
مذبح قربانی سوختنی با لوازم آن، حوض و پایهاش، | 9 |
೯ಧೂಪವೇದಿ, ಯಜ್ಞವೇದಿ ಅದರ ಉಪಕರಣಗಳು, ನೀರಿನ ತೊಟ್ಟಿ ಅದರ ಪೀಠ,
لباسهای مخصوص هارون کاهن و پسرانش برای خدمت در مقام کاهنی، | 10 |
೧೦ಅಲಂಕಾರವಾದ ದೀಕ್ಷಾವಸ್ತ್ರಗಳು ಅಂದರೆ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಪವಿತ್ರ ಯಾಜಕವಸ್ತ್ರಗಳು,
روغن مسح و بخور معطر برای قدس. همهٔ اینها را باید درست مطابق آنچه به تو دستور دادهام بسازند.» | 11 |
೧೧ಅಭಿಷೇಕತೈಲ ಮತ್ತು ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.”
سپس خداوند به موسی فرمود | 12 |
೧೨ಯೆಹೋವನು ಮತ್ತೆ ಮೋಶೆಗೆ ಹೀಗೆಂದನು,
«به بنیاسرائیل بگو:”روز شَبّات را که برای شما تعیین کردهام نگاه دارید، زیرا این روز نشانی بین من و شما و تمام نسلهای شما خواهد بود تا بدانید من که خداوند هستم، شما را برای خود جدا ساختهام. | 13 |
೧೩“ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ: ನಾನು ನೇಮಿಸಿದ ಪವಿತ್ರ ಸಬ್ಬತ್ ದಿನಗಳನ್ನು ನೀವು ತಪ್ಪದೇ ಆಚರಿಸಬೇಕು. ನಿಮ್ಮನ್ನು ಶುದ್ಧಿಪಡಿಸುವ ಯೆಹೋವನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರ ಮಧ್ಯ ಇರುವ ಗುರುತು.
پس روز شَبّات را نگاه دارید، چون برای شما روز مقدّسی است. هر که احترام آن را بجا نیاورد، باید کشته شود؛ هر که در آن روز کار کند باید از میان قوم خود منقطع شود. | 14 |
೧೪ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.
در هفته فقط شش روز کار کنید و روز هفتم که روز مقدّس خداوند است استراحت نمایید. هر کسی در این روز کار کند کشته خواهد شد. | 15 |
೧೫ಆರು ದಿನಗಳು ಕೆಲಸ ಮಾಡಬೇಕು. ಏಳನೆಯ ದಿನ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿದೆ. ಅದು ಯೆಹೋವನಿಗೆ ಪರಿಶುದ್ಧವಾದ ದಿನ. ಇಂಥ ಸಬ್ಬತ್ ದಿನದಲ್ಲಿ ಕೆಲಸವೇನಾದರೂ ಮಾಡುವವನಿಗೆ ಮರಣಶಿಕ್ಷೆಯಾಗಬೇಕು.
این قانون، عهدی جاودانی است و رعایت آن برای بنیاسرائیل نسل اندر نسل واجب است. | 16 |
೧೬ಆದುದರಿಂದ ಇಸ್ರಾಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆಯು ಅವರಿಗೂ, ಅವರ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.
این نشانهٔ همیشگی آن عهدی است که من با بنیاسرائیل بستهام، چون من در شش روز آسمان و زمین را آفریدم و در روز هفتم استراحت کردم.“» | 17 |
೧೭ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?”
وقتی خدا در کوه سینا گفتگوی خود را با موسی به پایان رسانید، آن دو لوح سنگی را که با انگشت خود ده فرمان را روی آنها نوشته بود، به موسی داد. | 18 |
೧೮ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ.