< اشعیا 3 >
خداوند، خدای لشکرهای آسمان، بهزودی رزق و روزی اورشلیم و یهودا را قطع خواهد کرد و بزرگان مملکت را از میان برخواهد داشت. قحطی نان و آب خواهد بود. | 1 |
೧ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು.
جنگاوران و سپاهیان، داوران و انبیا، فالگیران و ریشسفیدان، | 2 |
೨ಇದಲ್ಲದೆ ಶೂರ, ಯುದ್ಧಭಟರು, ನ್ಯಾಯಾಧಿಪತಿ, ಪ್ರವಾದಿ, ಶಕುನದವ, ಹಿರಿಯ,
سرداران و اشرافزادگان و حکیمان، صنعتگران ماهر و جادوگران زبردست، همگی از بین خواهند رفت. | 3 |
೩ಪಂಚಾಶತಾಧಿಪತಿ, ಘನವಂತನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರೆಲ್ಲರನ್ನು ತೊಲಗಿಸಿಬಿಡುವೆನು.
به جای آنان، کودکان مملکت را اداره خواهند کرد. | 4 |
೪ನಾನು, “ಬಾಲಕರನ್ನು ಪ್ರಭುಗಳನ್ನಾಗಿ ಆ ದೇಶಕ್ಕೆ ನೇಮಿಸುವೆನು, ಬಾಲಕರು ಅದನ್ನು ಆಳುವರು.
همه جا هرج و مرج خواهد بود و هر کس حق دیگری را پایمال خواهد نمود. همسایه با همسایه به نزاع خواهد پرداخت، جوانان احترام پیران را نگه نخواهند داشت و اشخاص پست علیه انسانهای شریف برخواهند خاست. | 5 |
೫ಪ್ರಜೆಗಳು ಪರಸ್ಪರ ವಿರೋಧಿಗಳಾಗಿ, ಒಬ್ಬರನೊಬ್ಬರು ಹಿಂಸಿಸುವರು, ಬಾಲಕರು ಹಿರಿಯರ ಮೇಲೆಯೂ, ನೀಚನು ಘನವಂತನ ಜೊತೆಯಲ್ಲಿ ಸೊಕ್ಕಿನಿಂದ ವರ್ತಿಸುವರು.
روزی خواهد رسید که افراد یک خاندان، یکی را از بین خود انتخاب کرده، خواهند گفت: «تو لباس اضافه داری، پس در این ویرانی رهبر ما باش.» | 6 |
೬ಆ ದಿನದಲ್ಲಿ ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು, ‘ನಿನಗೆ ನಿಲುವಂಗಿ ಇದೆ. ನೀನು ನಮಗೆ ಒಡೆಯನಾಗಬೇಕು. ಹಾಳಾದ ಈ ಪಟ್ಟಣವು ನಿನ್ನ ಕೈಕೆಳಗಿರಲಿ ತಂದೆಯ ಮನೆಯೊಳಗೆ ಅಣ್ಣನನ್ನು ಬಲವಂತ ಮಾಡಲು ಅಣ್ಣನು ದೇಶದ ನಿರರ್ಥಕ ವ್ರಣವೈದ್ಯನಾಗುವುದಕ್ಕೆ ನನಗೆ ಇಷ್ಟವಿಲ್ಲ’ ಎಂದು ನಿರಾಕರಿಸುವನು.
او جواب خواهد داد: «نه، هیچ کمکی از دست من برنمیآید! من نیز خوراک و پوشاک ندارم. مرا رهبر خود نکنید!» | 7 |
೭ಆ ದಿನದಲ್ಲಿ ಅವನು ಗಟ್ಟಿಯಾಗಿ ಕೂಗುತ್ತಾ, ‘ನಾನು ನಿಮ್ಮನ್ನು ಸ್ವಸ್ಥಪಡಿಸುವುದಿಲ್ಲ. ನನ್ನ ಮನೆಯಲ್ಲಿ ಅನ್ನವಾಗಲೀ, ವಸ್ತ್ರವಾಗಲೀ ಇಲ್ಲ: ಜನರನ್ನು ಆಳುವ ಒಡೆಯನನ್ನಾಗಿ ನನ್ನನ್ನು ಮಾಡಬೇಡಿರಿ’” ಎಂದು ಹೇಳುವನು.
آری، اورشلیم خراب خواهد شد و یهودا از بین خواهد رفت، زیرا مردم بر ضد خداوند سخن میگویند و عمل میکنند و به حضور پرجلال او اهانت مینمایند. | 8 |
೮ಏಕೆಂದರೆ ಯೆರೂಸಲೇಮ್ ಹಾಳಾಯಿತು. ಯೆಹೂದವು ಬಿದ್ದುಹೋಯಿತು. ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತದಲ್ಲವೇ?
چهرهٔ آنان راز درونشان را فاش میسازد و نشان میدهد که گناهکارند. آنان مانند مردم سدوم و عموره آشکارا گناه میکنند. وای بر آنان، زیرا با این کارهای زشت، خود را دچار مصیبت کردهاند. | 9 |
೯ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.
به عادلان بگویید: «سعادتمندی نصیب شما خواهد شد و از ثمرهٔ کارهای خود بهرهمند خواهید گردید.» | 10 |
೧೦ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.
ولی به شریران بگویید: «وای بر شما، زیرا مصیبت نصیب شما خواهد شد و به سزای اعمالتان خواهید رسید.» | 11 |
೧೧ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.
ای قوم من، رهبران شما کودکانند و حاکمانتان زنان. آنان شما را به گمراهی و نابودی میکشانند. | 12 |
೧೨ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ.
خداوند برخاسته تا قوم خود را محاکمه و داوری کند. | 13 |
೧೩ಯೆಹೋವನು ವಾದಿಸುವುದಕ್ಕೂ, ಜನರಿಗೆ ನ್ಯಾಯತೀರಿಸುವುದಕ್ಕೂ ಎದ್ದು ನಿಂತಿದ್ದಾನೆ.
او بزرگان و رهبران قوم را محاکمه خواهد کرد، زیرا آنان تاکستانهای فقیران را غارت کرده، انبارهای خود را پر ساختهاند. | 14 |
೧೪ಯೆಹೋವನು ತನ್ನ ಜನರ ಹಿರಿಯರನ್ನು, ಅಧಿಕಾರಿಗಳನ್ನೂ ನ್ಯಾಯವಿಚಾರಣೆಗೆ ತರುವನು. ಏಕೆಂದರೆ, “ನೀವು ದ್ರಾಕ್ಷಿಯ ತೋಟವನ್ನು ನುಂಗಿಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.
خداوند لشکرهای آسمان میفرماید: «شما را چه شده است که اینچنین بر قوم من ستم میکنید و آنان را به خاک و خون میکشید؟» | 15 |
೧೫ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?” ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.
خداوند زنان مغرور صهیون را نیز محاکمه خواهد کرد. آنان با عشوه راه میروند و النگوهای خود را به صدا در میآورند و با چشمان شهوتانگیز در میان جماعت پرسه میزنند. | 16 |
೧೬ಇದಲ್ಲದೆ ಯೆಹೋವನು ಹೀಗನ್ನುತ್ತಾನೆ, ಚೀಯೋನಿನ ಹೆಂಗಸರು ಅಹಂಕಾರವುಳ್ಳವರಾಗಿ, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ವಯ್ಯಾರವಾಗಿ ಹೆಜ್ಜೆ ಇಡುತ್ತಾ, ಕಾಲು ಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವುದರಿಂದ,
خداوند بلای گری بر این زنان خواهد فرستاد تا سرهایشان کچل و بیمو شوند. | 17 |
೧೭ಕರ್ತನಾದ ಯೆಹೋವನು ಚೀಯೋನಿನ ಪುತ್ರಿಯರ ನಡುನೆತ್ತಿಯನ್ನೂ ಹುಣ್ಣಿನಿಂದ ಬಾಧಿಸಿ, ಅವರ ಮಾನವನ್ನು ಬಯಲುಮಾಡುವನು.
در آن روز خداوند تمام زینتآلاتشان را از ایشان خواهد گرفت گوشوارهها، النگوها، روبندها، | 18 |
೧೮ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ,
೧೯ಜುಮುಕಿ, ಬಳೆ, ಶಿರವಸ್ತ್ರ,
کلاهها، زینت پاها، دعاهایی که بر کمر و بازو میبندند، عطردانها، | 20 |
೨೦ಮುಂಡಾಸು, ಕಾಲಗೆಜ್ಜೆ, ಡಾಬು, ಗಂಧದ ಭರಣಿ, ತೋಳಬಂಧಿ,
انگشترها و حلقههای زینتی بینی، | 21 |
೨೧ಮುದ್ರೆ ಉಂಗುರ, ಮೂಗುತಿ,
لباسهای نفیس و بلند، شالها، کیفها، | 22 |
೨೨ಹಬ್ಬದ ಉಡುಗೆ-ತೊಡುಗೆ, ಮೇಲಂಗಿ, ಶಾಲು, ಕೈಚೀಲ,
آئینهها، دستمالهای زیبای کتان، روسریها و چادرها. آری، خداوند از همهٔ اینها محرومشان خواهد کرد. | 23 |
೨೩ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ಹೊದಿಕೆ ಈ ಸೊಗಸಾದ ಭೂಷಣಗಳನ್ನೆಲ್ಲಾ ತೆಗೆದುಹಾಕುವನು.
به جای بوی خوش عطر، بوی گند تعفن خواهند داد. به جای کمربند، طناب به کمر خواهند بست. به جای لباسهای بلند و زیبا، لباس عزا خواهند پوشید. تمام موهای زیبایشان خواهد ریخت و زیباییشان به رسوایی تبدیل خواهد شد. | 24 |
೨೪ಆಗ ಸುಗಂಧದ ಬದಲಾಗಿ ದುರ್ವಾಸನೆ, ಡಾಬಿಗೆ ಬದಲಾಗಿ ಹಗ್ಗ, ಅಂದವಾದ ಜಡೆಯ ಬದಲಾಗಿ ಬೋಳುತಲೆ, ನಡುವಿನ ಶಲ್ಯಕ್ಕೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಕುರೂಪ, ಬೆತ್ತಲೆ ಉಂಟಾಗುವುದು.
شوهرانشان در میدان جنگ کشته خواهند شد | 25 |
೨೫ಚೀಯೋನ್ ನಗರಿಯೇ, ನಿನ್ನ ವೀರರು ಖಡ್ಗದಿಂದ ಬಿದ್ದುಹೋಗುವರು. ನಿನ್ನ ಶೌರ್ಯವು ಯುದ್ಧದಲ್ಲಿ ಅಡಗಿ ಹೋಗುವುದು.
و شهر متروک شده، در سوگ آنان خواهد نشست و ناله سر خواهد داد. | 26 |
೨೬ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.