< ارمیا 22 >
خداوند فرمود که به قصر پادشاه یهودا بروم و به او که بر تخت پادشاهی داوود نشسته و به تمام درباریان و به اهالی اورشلیم، بگویم که خداوند چنین میفرماید: «عدل و انصاف را بجا آورید و داد مظلومان را از ظالمان بستانید؛ به غریبان، یتیمان و بیوهزنان ظلم نکنید و خون بیگناهان را نریزید. | 1 |
೧ಯೆಹೋವನು ನನಗೆ ಹೀಗೆ ಅಪ್ಪಣೆಕೊಟ್ಟನು, “ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು,
೨ದಾವೀದನ ಸಿಂಹಾಸನರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಮತ್ತು ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ.
೩ಯೆಹೋವನು, ನೀತಿ, ನ್ಯಾಯಗಳನ್ನು ಆಚರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ವಿದೇಶಿ, ಅನಾಥ, ವಿಧವೆ ಇವರಿಗೆ ಯಾವ ಅನ್ಯಾಯವನ್ನೂ ಮತ್ತು ಹಿಂಸೆಯನ್ನೂ ಮಾಡಬೇಡಿರಿ; ನಿರ್ದೋಷಿಯ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿರಿ” ಎಂದು ಹೇಳುತ್ತಾನೆ.
اگر آنچه میگویم انجام دهید، اجازه خواهم داد که همواره پادشاهانی از نسل داوود بر تخت سلطنت تکیه بزنند و با درباریان و همهٔ قوم در سعادت و آسایش، روزگار بگذرانند. | 4 |
೪“ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ, ಪ್ರಜೆಗಳೊಡನೆಯೂ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.
ولی اگر این حکم را اطاعت نکنید، به ذات خود قسم که این قصر به ویرانه تبدیل خواهد شد.» | 5 |
೫ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವುದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ ಇದು ಯೆಹೋವನ ನುಡಿ” ಎಂಬುದೇ.
زیرا خداوند دربارۀ قصر پادشاه یهودا چنین میفرماید: «اگرچه تو در نظرم مثل سرزمین حاصلخیز جلعاد و مانند کوههای سرسبز لبنان زیبا میباشی، اما تو را ویران و متروک خواهم ساخت تا کسی در تو زندگی نکند؛ | 6 |
೬ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, “ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.
افرادی ویرانگر را همراه با تبرهایشان خواهم فرستاد تا تمام ستونها و تیرهای چوبی تو را که از بهترین سروهای آزاد تهیه شدهاند، قطع کنند و در آتش بسوزانند. | 7 |
೭ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನ್ನ ವಿರುದ್ಧವಾಗಿ ಸಿದ್ಧಪಡಿಸುವೆನು; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.
آنگاه مردم سرزمینهای دیگر وقتی از کنار خرابههای این شهر عبور کنند، از یکدیگر خواهند پرسید:”چرا خداوند با این شهر بزرگ چنین کرد؟“ | 8 |
೮ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ, ‘ಯೆಹೋವನು ಈ ಮಹಾ ಪಟ್ಟಣಕ್ಕೆ ಏಕೆ ಹೀಗೆ ಮಾಡಿದನು?’ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ,
در پاسخ خواهند شنید:”چون اهالی اینجا خداوند، خدای خود را فراموش کردند و عهد و پیمانی را که او با ایشان بسته بود، شکستند و بتپرست شدند.“» | 9 |
೯‘ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ, ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು’ ಎಂದು ಅಂದುಕೊಳ್ಳುವರು.”
ای اهالی یهودا، برای یوشیای پادشاه که در جنگ کشته شده، گریه نکنید، بلکه برای پسرش یهوآحاز ماتم بگیرید که به اسیری برده خواهد شد؛ چون او در سرزمینی بیگانه خواهد مرد و دیگر وطنش را نخواهد دید. | 10 |
೧೦ಸತ್ತವನಿಗಾಗಿ ಅಳಬೇಡಿರಿ, ಗೋಳಾಡಬೇಡಿರಿ; ಸೆರೆಯಾದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ; ಅವನು ಇನ್ನು ಹಿಂದಿರುಗನು, ಜನ್ಮಭೂಮಿಯನ್ನು ನೋಡನು.
زیرا خداوند دربارۀ یهوآحاز، پسر یوشیا پادشاه یهودا، که به جای پدرش پادشاه شد و به اسارت رفت، چنین میفرماید: «او دیگر به اینجا برنخواهد گشت. | 11 |
೧೧ಯೆಹೂದದ ಅರಸನಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವುದೇನೆಂದರೆ, “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು.
او در سرزمینی دوردست خواهد مرد و دیگر هرگز وطنش را نخواهد دید.» | 12 |
೧೨ಅವನನ್ನು ಎಲ್ಲಿಗೆ ಸೆರೆಯೊಯ್ದರೋ ಅಲ್ಲೇ ಸಾಯುವನು, ಈ ದೇಶವನ್ನು ಇನ್ನು ಕಾಣನು” ಎಂಬುದೇ.
خداوند میفرماید: «وای بر تو ای یهویاقیم پادشاه، که قصر باشکوهت را با بهرهکشی از مردم میسازی؛ از در و دیوار قصرت ظلم و بیعدالتی میبارد، چون مزد کارگران را نمیپردازی. | 13 |
೧೩ತನ್ನ ಅರಮನೆಯನ್ನು ದುರ್ನೀತಿಯಿಂದಲೂ, ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ,
میگویی:”قصر باشکوهی میسازم که اتاقهای بزرگ و پنجرههای زیادی داشته باشد؛ سقف آن را با چوب سرو آزاد میپوشانم و بر آن رنگ قرمز میزنم.“ | 14 |
೧೪ಆಹಾ, “ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು” ಎಂದು ಹೇಳಿ, ಅಗಲಗಲವಾದ ಕಿಟಕಿಗಳನ್ನಿಡಿಸಿ, ಒಳಗೆ ಗೋಡೆಗೆಲ್ಲಾ ದೇವದಾರಿನ ಹಲಗೆಗಳನ್ನು ಹೊದಿಸಿ, ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ!
آیا فکر میکنی با ساختن کاخهای پرشکوه، سلطنتت پایدار میماند؟ چرا سلطنت پدرت یوشیا آنقدر دوام یافت؟ چون او عادل و با انصاف بود. به همین علّت هم در همهٔ کارهایش کامیاب میشد. | 15 |
೧೫ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.
او از فقیران و نیازمندان دستگیری میکرد، بنابراین همیشه موفق بود. این است معنی شناخت من! | 16 |
೧೬ದೀನದರಿದ್ರರ ವ್ಯಾಜ್ಯವನ್ನು ತೀರಿಸುತ್ತಿದ್ದನು; ಆಗ ಸುಖವಾಗಿತ್ತು. ನನ್ನನ್ನು ಅರಿಯುವುದೆಂದರೆ ಇದೇ ಎಂಬುದು ಯೆಹೋವನ ನುಡಿ.
ولی تو فقط به دنبال ارضای حرص و آز خود هستی؛ خون بیگناهان را میریزی و بر قوم خود با ظلم و ستم حکومت میکنی. | 17 |
೧೭ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.
«بنابراین ای یهویاقیم پادشاه، پسر یوشیا، پس از مرگت هیچکس حتی خانوادهات برایت ماتم نخواهند کرد؛ قومت نیز به مرگ تو اهمیتی نخواهند داد؛ | 18 |
೧೮ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. “ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.
جنازهٔ تو را از اورشلیم کشانکشان بیرون برده، مانند لاشهٔ الاغ به گوشهای خواهند افکند!» | 19 |
೧೯ಇವನನ್ನು ಯೆರೂಸಲೇಮಿನ ಬಾಗಿಲುಗಳ ಹೊರಗೆ ಕತ್ತೆಯಂತೆ ಎಳೆದು ಬಿಸಾಡಿ ಮಣ್ಣುಪಾಲು ಮಾಡುವರು” ಎನ್ನುತ್ತಾನೆ.
ای مردم اورشلیم به لبنان بروید و در آنجا گریه کنید؛ در باشان فریاد برآورید؛ بر کوههای موآب ناله سر دهید، چون همهٔ متحدان شما نابود شدهاند و هیچکس برای کمک به شما باقی نمانده است. | 20 |
೨೦ಚೀಯೋನ್ ಯುವತಿಯೇ, ಲೆಬನೋನ್ ಪರ್ವತವನ್ನು ಹತ್ತಿ ಕೂಗಿಕೋ! ಬಾಷಾನಿನಲ್ಲಿ ಮೊರೆಯಿಡು, ಅಬಾರೀಮಿನಲ್ಲಿ ಅರಚಿಕೋ! ನಿನ್ನೊಂದಿಗೆ ವ್ಯಭಿಚಾರ ಮಾಡಿದವರೆಲ್ಲಾ ಹಾಳಾಗಿ ಹೋದರಲ್ಲಾ.
زمانی که در سعادت و خوشبختی به سر میبردید، خدا با شما سخن گفت، ولی گوش فرا ندادید؛ شما هرگز نخواستید او را اطاعت نمایید؛ عادت شما همیشه همین بوده است! | 21 |
೨೧ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ.
حال وزش باد خشم خدا تمام رهبرانتان را نابود خواهد ساخت؛ همپیمانانتان نیز به اسارت خواهند رفت؛ و سرانجام به سبب شرارتهایتان، شرمسار و سرافکنده خواهید گشت. | 22 |
೨೨ನಿನ್ನನ್ನು ಅಟ್ಟಿಕೊಂಡು ಹೋಗುವ ಕುರುಬರನ್ನು ಗಾಳಿಯು ಅಟ್ಟಿಬಿಡುವುದು. ನಿನ್ನೊಂದಿಗೆ ವ್ಯಭಿಚಾರ ಮಾಡಿದವರು ಸೆರೆಹೋಗುವರು; ಆಗ ನಿನ್ನ ಸಕಲ ದುಷ್ಕೃತ್ಯಗಳ ನಿಮಿತ್ತ ನೀನು ಆಶಾಭಂಗಪಟ್ಟು ಅವಮಾನಕ್ಕೀಡಾಗುವುದು ಖಂಡಿತ.
ای کسانی که در کاخهای مزین به چوب سرو لبنان زندگی میکنید، بهزودی دردی جانکاه همچون درد زایمان، شما را فرا خواهد گرفت؛ آنگاه همه برای شما دلسوزی خواهند کرد. | 23 |
೨೩ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು!
خداوند به یهویاکین، پسر یهویاقیم، پادشاه یهودا چنین میفرماید: «تو حتی اگر انگشتر خاتم بر دست راستم بودی، تو را از انگشتم بیرون میآوردم و به دست کسانی میدادم که به خونت تشنهاند و تو از ایشان وحشت داری، یعنی به دست نِبوکَدنِصَّر، پادشاه بابِل و سپاهیان او! | 24 |
೨೪ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು!
೨೫ನಿನ್ನ ಪ್ರಾಣವನ್ನು ಹುಡುಕಿ ನಿನ್ನಲ್ಲಿ ಭಯವನ್ನು ಹುಟ್ಟಿಸುವವರ ಕೈಗೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು.
تو و مادرت را به سرزمینی بیگانه خواهم افکند تا در همان جا بمیرید. | 26 |
೨೬ನಿನ್ನನ್ನೂ ಮತ್ತು ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂಮಿಯಲ್ಲದ ಅನ್ಯದೇಶಕ್ಕೆ ಎಸೆದುಬಿಡುವೆನು; ಅಲ್ಲೇ ಸಾಯುವಿರಿ.
شما هرگز به این سرزمین که آرزوی دیدنش را خواهید داشت، باز نخواهید گشت.» | 27 |
೨೭ಹಿಂದಿರುಗಬೇಕೆಂದು ಹಂಬಲಿಸುವ ದೇಶಕ್ಕೆ ಅವರು ಹಿಂದಿರುಗುವುದೇ ಇಲ್ಲ” ಎಂಬುದೇ.
خداوندا، آیا این مرد یعنی یهویاکین، مانند ظرف شکستهای شده که کسی به آن نیازی ندارد؟ آیا به همین دلیل است که خود و فرزندانش به سرزمینی بیگانه به اسارت میروند؟ | 28 |
೨೮ಕೊನ್ಯನೆಂಬ ಈ ಮನುಷ್ಯನು ಬಿಸಾಡಿದ ಒಡಕು ಕುಡಿಕೆಯೋ? ಯಾರಿಗೂ ಇಷ್ಟವಿಲ್ಲದ ಮಣ್ಣಿನ ಮಡಿಕೆಯೋ? ಎಂಬಂತೆ, ಅವನೂ ಅವನ ಸಂತತಿಯವರೂ ಏಕೆ ಬಿಸಾಡಲ್ಪಟ್ಟಿದ್ದಾರೆ? ನೋಡದ ದೇಶಕ್ಕೆ ಏಕೆ ಎಸೆಯಲ್ಪಟ್ಟಿದ್ದಾರೆ?
ای زمین، ای زمین، ای زمین! کلام خداوند را بشنو. | 29 |
೨೯ದೇಶವೇ, ದೇಶವೇ, ದೇಶವೇ ಯೆಹೋವನ ಮಾತನ್ನು ಕೇಳು!
خداوند میفرماید: «نام این مرد (یعنی یهویاکین) را جزو افراد بیاولاد بنویس، جزو کسانی که هرگز کامیاب نخواهند شد؛ چون هیچیک از فرزندان او بر تخت سلطنت داوود تکیه نخواهد زد و بر یهودا فرمانروایی نخواهد کرد!» | 30 |
೩೦ಯೆಹೋವನು, “ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾರೂ ದಾವೀದನ ಸಿಂಹಾಸನದಲ್ಲಿ ಕುಳಿತು ಯೆಹೂದವನ್ನು ಆಳಿ ಬಾಳನು” ಎಂದು ಹೇಳುತ್ತಾನೆ.