< یوشع 8 >
خداوند به یوشع فرمود: «ترس و واهمه را از خود دور کن! برخیز و تمام سربازان را همراه خود بردار و به عای روانه شو. من پادشاه آنجا را به دست تو تسلیم میکنم. مردم و شهر و زمین عای از آن تو خواهند شد. | 1 |
೧ಅನಂತರ ಯೆಹೋವನು ಯೆಹೋಶುವನಿಗೆ “ಅಂಜಬೇಡ, ಕಳವಳಗೊಳ್ಳಬೇಡ; ಎದ್ದು ಭಟರೆಲ್ಲರನ್ನೂ ಕರೆದುಕೊಂಡು ಆಯಿ ಪಟ್ಟಣಕ್ಕೆ ಹೋಗು. ನೋಡು, ಆಯಿ ಎಂಬ ಊರಿನ ಅರಸ, ಪ್ರಜೆ, ನಗರ, ಸೀಮೆ ಇವುಗಳನ್ನೆಲ್ಲಾ ನಿನಗೆ ಕೊಟ್ಟಿದ್ದೇನೆ.
با ایشان همانطور رفتار کن که با پادشاه اریحا و مردم آنجا رفتار نمودی. اما این بار چارپایان و غنایم شهر را میتوانید میان خود قسمت کنید. در ضمن برای حمله به دشمن در پشت آن شهر، یک کمینگاه بساز.» | 2 |
೨ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು.
پس یوشع و تمام لشکر او آمادهٔ حمله به عای شدند. یوشع سی هزار تن از افراد دلیر خود را انتخاب کرد تا آنها را شبانه به عای بفرستد. | 3 |
೩ಅಂತೆಯೇ ಯೆಹೋಶುವನು ಎದ್ದು ಭಟರೆಲ್ಲರ ಸಹಿತವಾಗಿ ಆಯಿಗೆ ಹೋಗುವುದಕ್ಕೋಸ್ಕರ ಸಿದ್ಧನಾಗಿ ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿ ಅವರಿಗೆ
او به آنها این دستور را داد: «در پشت شهر در کمین بنشینید، ولی از شهر زیاد دور نشوید و برای حمله آماده باشید. | 4 |
೪“ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ಪಟ್ಟಣಕ್ಕೆ ಬಹುದೂರವಾಗಿರಬೇಡಿರಿ; ಎಲ್ಲರೂ ಸಿದ್ಧವಾಗಿರಿ.
نقشهٔ ما چنین است: من و افرادم به شهر نزدیک خواهیم شد. مردان شهر مانند دفعهٔ پیش به مقابلهٔ ما برخواهند خاست. در این هنگام ما عقبنشینی میکنیم. | 5 |
೫ನಾನೂ ಮತ್ತು ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸಮೀಪಕ್ಕೆ ಹೋಗುವೆವು. ಅವರು ಮೊದಲಿನಂತೆ ನಮ್ಮೊಡನೆ ಯುದ್ಧಕ್ಕೆ ಬಂದ ಕೂಡಲೆ ನಾವು ಓಡಿ ಹೋಗುವೆವು.
آنها به گمان اینکه مانند دفعهٔ پیش در حال فرار هستیم به تعقیب ما خواهند پرداخت و بدین ترتیب از شهر دور خواهند شد. | 6 |
೬ಇವರು ಮೊದಲಿನಂತೆ ನಮಗೆ ಹೆದರಿ ಓಡಿಹೋಗುತ್ತಿದ್ದಾರೆಂದು ತಿಳಿದು ಅವರು ನಮ್ಮನ್ನು ಹಿಂದಟ್ಟುವರು; ನಾವು ಓಡುತ್ತಲೇ ಇರುವೆವು.
بعد، شما از کمینگاه بیرون بیایید و به داخل شهر حمله کنید، زیرا خداوند آن را به دست شما تسلیم کرده است. | 7 |
೭ನಾವೂ ಅವರೂ ಪಟ್ಟಣದಿಂದ ದೂರವಾದ ಕೂಡಲೇ ನೀವು ಹೊಂಚಿ ಕುಳಿತ್ತಿದ್ದ ಸ್ಥಳದಿಂದ ಎದ್ದು ಪಟ್ಟಣದೊಳಗೆ ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮ ಕೈಗೆ ಒಪ್ಪಿಸುವನು.
چنانکه خداوند فرموده است، شهر را بسوزانید. این یک دستور است.» | 8 |
೮ನೀವು ಪಟ್ಟಣವನ್ನು ಹಿಡಿದ ಕೂಡಲೆ ಅದಕ್ಕೆ ಬೆಂಕಿ ಹೊತ್ತಿಸಿರಿ. ಯೆಹೋವನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ” ಎಂದು ಹೇಳಿ ಅವರನ್ನು ರಾತ್ರಿಯಲ್ಲಿಯೇ ಕಳುಹಿಸಿದನು.
پس آنها همان شب روانه شده، در کمینگاه بین بیتئیل و طرف غربی عای پنهان شدند. اما یوشع و بقیهٔ لشکر در اردوگاه ماندند. | 9 |
೯ಅವರು ಹೊಂಚುಹಾಕುವುದಕ್ಕೆ ಹೊರಟುಹೋಗಿ ಬೇತೇಲಿಗೂ ಆಯಿಗೂ ನಡುವೆ ಆಯಿ ಎಂಬ ಊರಿನ ಪಶ್ಚಿಮದಲ್ಲಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯನ್ನು ಜನರ ಮಧ್ಯದಲ್ಲಿ ಕಳೆದನು.
روز بعد، صبح زود یوشع سربازان خود را صفآرایی نمود و خود با بزرگان اسرائیل در پیشاپیش لشکر به سوی عای حرکت کرد. | 10 |
೧೦ಅವನು ಬೆಳಿಗ್ಗೆ ಎದ್ದು ಇಸ್ರಾಯೇಲ್ಯರ ಹಿರಿಯರ ಸಂಗಡ ಸೈನ್ಯವನ್ನು ಕೂಡಿಸಿ ಅವರ ಮುಂದಾಗಿ ಆಯಿಗೆ ಹೊರಟನು.
آنها در سمت شمالی شهر در کنار درهای که بین آنها و شهر قرار داشت توقف کردند. یوشع پنج هزار نفر دیگر را هم فرستاد تا به سی هزار نفری که در کمینگاه بودند ملحق شوند. خود او با بقیهٔ نفرات، آن شب در همان دره ماند. | 11 |
೧೧ಅವನ ಸಂಗಡ ಇದ್ದ ಭಟರೆಲ್ಲರೂ ಗಟ್ಟಾಹತ್ತಿ ಪಟ್ಟಣದ ಸಮೀಪಕ್ಕೆ ಬಂದು ಅದರ ಉತ್ತರದಿಕ್ಕಿನಲ್ಲಿ ಇಳಿದುಕೊಂಡರು. ಅವರಿಗೂ ಆಯಿಗೂ ನಡುವೆ ಒಂದು ತಗ್ಗು ಇತ್ತು.
೧೨ಯೆಹೋಶುವನು ಹೆಚ್ಚುಕಡಿಮೆ ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ಇರುವ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕೋಸ್ಕರ ಇರಿಸಿದನು.
೧೩ಪಟ್ಟಣದ ಉತ್ತರದಲ್ಲಿದ್ದ ಎಲ್ಲಾ ಸೈನ್ಯವನ್ನೂ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುತ್ತಿದ್ದ ಸೈನ್ಯವನ್ನೂ ಕ್ರಮಪಡಿಸಿಕೊಂಡು ಯೆಹೋಶುವನು ಆ ರಾತ್ರಿಯಲ್ಲಿ ಕಣಿವೆಗೆ ಹೋದನು.
پادشاه عای با دیدن لشکر اسرائیل در آن سوی دره، با لشکر خود برای مقابله با آنها به دشت اردن رفت، غافل از اینکه عدهٔ زیادی از اسرائیلیها در پشت شهر در کمین نشستهاند. | 14 |
೧೪ಆಯಿ ಎಂಬ ಊರಿನ ಅರಸನು ಬೆಳಿಗ್ಗೆ ಇದನ್ನು ತಿಳಿದು ತ್ವರೆಯಾಗಿ ಜನರೆಲ್ಲರ ಸಹಿತವಾಗಿ ಇಸ್ರಾಯೇಲ್ಯರ ವಿರುದ್ಧ ಯುದ್ಧ ಮಾಡುವುದಕ್ಕೆ ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ಕಣಿವೆಯ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಪಟ್ಟಣದ ಹಿಂಭಾಗದಲ್ಲಿ ಹೊಂಚಿನೋಡುತ್ತಿರುವುದು ಅವನಿಗೆ ಗೊತ್ತಿರಲಿಲ್ಲ.
یوشع و لشکر اسرائیل برای اینکه وانمود کنند که از دشمن شکست خوردهاند، در بیابان پا به فرار گذاشتند. | 15 |
೧೫ಯೆಹೋಶುವನೂ ಅವನ ಸಂಗಡ ಇದ್ದ ಇಸ್ರಾಯೇಲ್ಯರೆಲ್ಲರೂ ತಾವು ಸೋತವರೋ ಎಂಬಂತೆ ಅರಣ್ಯಮಾರ್ಗವಾಗಿ ಓಡತೊಡಗಿದರು.
به تمام مردان عای دستور داده شد به تعقیب آنها بپردازند. آنها برای تعقیب یوشع از شهر خارج شدند، | 16 |
೧೬ಆಯಿ ಎಂಬ ಪಟ್ಟಣದವರು ಊರಿನಲ್ಲಿದ್ದ ತಮ್ಮ ಎಲ್ಲಾ ಜನರನ್ನೂ ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ಪಟ್ಟಣವನ್ನು ದೂರವಾಗಿ ಓಡತೊಡಗಿದರು.
به طوری که در عای و بیتئیل یک سرباز هم باقی نماند و دروازهها نیز به روی اسرائیلیها باز بود! | 17 |
೧೭ಆಯಿ ಎಂಬ ಊರಿನಲ್ಲಿಯೂ ಬೇತೇಲಿನಲ್ಲಿಯೂ ಒಬ್ಬ ಗಂಡಸಾದರೂ ಉಳಿಯಲಿಲ್ಲ. ಊರಬಾಗಿಲುಗಳನ್ನು ತೆರೆದು ಬಿಟ್ಟು ಎಲ್ಲರೂ ಇಸ್ರಾಯೇಲ್ಯರನ್ನು ಹಿಂದಟ್ಟುವುದಕ್ಕೋಸ್ಕರ ಹೊರಟರು.
آنگاه خداوند به یوشع فرمود: «نیزهٔ خود را به سوی عای دراز کن، زیرا آن را به تو دادهام.» یوشع چنین کرد. | 18 |
೧೮ಯೆಹೋವನು ಯೆಹೋಶುವನಿಗೆ “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಊರಿನ ಕಡೆಗೆ ಚಾಚು; ಆ ಪಟ್ಟಣವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ” ಎನ್ನಲು ಅವನು ಅದನ್ನು ಚಾಚಿದನು.
سربازانی که در کمینگاه منتظر بودند وقتی این علامت را که یوشع داده بود دیدند، از کمینگاه بیرون آمده، به شهر هجوم بردند و آن را به آتش کشیدند. | 19 |
೧೯ಅವನು ಈಟಿಯನ್ನು ಚಾಚಿದ ಕೂಡಲೆ ಹೊಂಚಿನೋಡುತ್ತಿದ್ದವರು ತಾವಿದ್ದ ಸ್ಥಳದಿಂದ ಎದ್ದು ಓಡಿಬಂದು ಪಟ್ಟಣದೊಳಕ್ಕೆ ನುಗ್ಗಿ ಕೂಡಲೆ ಅದಕ್ಕೆ ಬೆಂಕಿ ಹಚ್ಚಿದರು.
سربازان عای وقتی به پشت سر نگاه کردند و دیدند دود غلیظی آسمان شهرشان را فرا گرفته است دست و پایشان چنان سست شد که قدرت فرار کردن هم از آنها سلب گردید. یوشع و همراهانش چون دود را بر فراز شهر دیدند فهمیدند سربازانی که در کمینگاه بودند به شهر حملهور شدهاند، پس خودشان هم بازگشتند و به کشتار تعقیبکنندگان خود پرداختند. | 20 |
೨೦ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶದೆತ್ತರಕ್ಕೆ ಏರಿಹೋಗುವುದನ್ನು ಕಂಡು ಯಾವ ಮಾರ್ಗದಿಂದಲೂ ತಪ್ಪಿಸಿಕೊಳ್ಳಲಾರದೆ ಇದ್ದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು.
೨೧ಯೆಹೋಶುವನೂ ಇಸ್ರಾಯೇಲ್ಯರೂ ಪಟ್ಟಣವು ಹೊಂಚಿ ನೋಡುತ್ತಿದ್ದವರಿಗೆ ಸ್ವಾಧೀನವಾದದ್ದನ್ನೂ, ಹೊಗೆಯು ಆಕಾಶಕ್ಕೆ ಏರಿಹೋಗುತ್ತಿದ್ದದ್ದನ್ನೂ ಕಂಡು ಹಿಂದಿರುಗಿ ಬಂದು ಆಯಿ ಊರಿನ ಜನರನ್ನು ಸಂಹರಿಸಿದರು.
از طرف دیگر، سربازان اسرائیلی که در داخل شهر بودند بیرون آمده، به دشمن حمله کردند. به این ترتیب سربازان عای از دو طرف به دام سپاه اسرائیل افتادند و همه کشته شدند. | 22 |
೨೨ಪಟ್ಟಣದೊಳಗೆ ನುಗ್ಗಿದವರೂ ಒಟ್ಟಿಗೆ ಸೇರಿದ್ದರಿಂದ ಆಯಿ ಎಂಬ ಊರಿನವರು ಆ ಕಡೆಯಿಂದಲೂ ಈ ಕಡೆಯಿಂದಲೂ ಇದ್ದ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿಬಿದ್ದರು. ಅವರು ಎಲ್ಲರನ್ನೂ ಕೊಂದು ಹಾಕಿದರು. ಒಬ್ಬನಾದರೂ ಉಳಿಯಲಿಲ್ಲ, ಯಾವನೂ ತಪ್ಪಿಸಿಕೊಳ್ಳಲಿಲ್ಲ.
تنها کسی که زنده ماند پادشاه عای بود که او را هم اسیر کرده، نزد یوشع آوردند. | 23 |
೨೩ಆಯಿ ಎಂಬ ಪಟ್ಟಣದ ಅರಸನನ್ನು ಮಾತ್ರ ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ಕರೆದುಕೊಂಡು ಬಂದರು.
لشکر اسرائیل پس از اینکه افراد دشمن را در خارج از شهر کشتند، به عای وارد شدند تا بقیهٔ اهالی شهر را نیز از دم شمشیر بگذرانند. | 24 |
೨೪ಇಸ್ರಾಯೇಲ್ಯರು ತಮ್ಮನ್ನು ಅರಣ್ಯದವರೆಗೂ ಹಿಂದಟ್ಟಿ ಬಂದ ಆಯಿ ಎಂಬ ಊರಿನವರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.
در آن روز، تمام جمعیت شهر که تعدادشان بالغ بر دوازده هزار نفر بود، هلاک شدند، | 25 |
೨೫ಆ ದಿನ ಆಯಿ ಎಂಬ ಊರಿನಲ್ಲಿ ಸತ್ತ ಗಂಡಸರ ಮತ್ತು ಹೆಂಗಸರ ಸಂಖ್ಯೆ ಹನ್ನೆರಡು ಸಾವಿರ ಮಂದಿ.
زیرا یوشع نیزهٔ خود را که به سوی عای دراز نموده بود، به همان حالت نگاه داشت تا موقعی که همهٔ مردم آن شهر کشته شدند. | 26 |
೨೬ಪಟ್ಟಣದವರೆಲ್ಲರೂ ಹತರಾಗುವವರೆಗೆ ಯೆಹೋಶುವನು ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.
فقط اموال و چارپایان شهر باقی ماندند که قوم اسرائیل آنها را برای خود به غنیمت گرفتند. (خداوند به یوشع فرموده بود که آنها میتوانند غنایم را برای خود نگه دارند.) | 27 |
೨೭ಯೆಹೋವನು ಯೆಹೋಶುವನಿಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಆ ಪಟ್ಟಣದೊಳಗಿಂದ ಪಶು ಪ್ರಾಣಿ ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು.
یوشع شهر عای را سوزانیده، به صورت خرابهای درآورد که تا به امروز به همان حال باقیست. | 28 |
೨೮ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟು ಅದು ಎಂದಿಗೂ ತಿರುಗಿ ಕಟ್ಟಲು ಸಾಧ್ಯವಾಗದಂತೆ ಹಾಳುದಿಬ್ಬವನ್ನಾಗಿ ಮಾಡಿದನು. ಅದು ಇಂದಿನ ವರೆಗೂ ಹಾಗೆಯೇ ಉಳಿದಿದೆ.
یوشع، پادشاه عای را به دار آویخت. هنگام غروب به دستور یوشع جسد او را پایین آورده، جلوی دروازۀ شهر انداختند و تودهای بزرگ از سنگ روی جسد او انباشتند که تا به امروز نیز باقیست. | 29 |
೨೯ಆಯಿ ಊರಿನ ಅರಸನನ್ನು ಸಾಯಂಕಾಲದವರೆಗೂ ಮರಕ್ಕೆ ನೇತು ಹಾಕಿಸಿ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಹಾಕಿಸಿದನು. ಅದು ಇಂದಿನ ವರೆಗೂ ಹಾಗೆಯೇ ಇದೆ.
سپس یوشع برای خداوند، خدای اسرائیل مذبحی بر کوه عیبال بنا کرد. | 30 |
೩೦ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು. ಉಳಿಯು ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು
چنانکه موسی، خدمتگزار خداوند، در تورات به قوم اسرائیل دستور داده بود، برای ساختن این مذبح از سنگهای نتراشیده استفاده کردند. سپس کاهنان، قربانیهای سلامتی بر آن به خداوند تقدیم کردند. | 31 |
೩೧ಜನರು ಅದರ ಮೇಲೆ ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು.
آنگاه یوشع در حضور جماعت اسرائیل، ده فرمان موسی را روی سنگهای مذبح نوشت. | 32 |
೩೨ಯೆಹೋಶುವನು ಅಲ್ಲಿದ್ದ ಕಲ್ಲುಗಳ ಮೇಲೆ ಜನರೆಲ್ಲರ ಸಮಕ್ಷಮದಲ್ಲಿ ಮೋಶೆಯ ಧರ್ಮಶಾಸ್ತ್ರದ ಒಂದು ಪ್ರತಿಯನ್ನು ಬರೆದನು.
پس از آن، تمام قوم اسرائیل با بزرگان، رهبران، داوران و حتی افراد غریبی که در میان ایشان بودند، به دو دسته تقسیم شدند. یک دسته در دامنهٔ کوه جَرِزیم ایستادند و دستهٔ دیگر در دامنهٔ کوه عیبال. در وسط این دو دسته، لاویان کاهن، در حالی که صندوق عهد را بر دوش داشتند، ایستادند تا قوم اسرائیل را برکت دهند. (همهٔ این رسوم مطابق دستوری که موسی قبلاً داده بود، انجام شد.) | 33 |
೩೩ಎಲ್ಲಾ ಇಸ್ರಾಯೇಲ್ಯರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಪರದೇಶದವರೂ ಹಾಗೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ, ಏಬಾಲ್ ಬೆಟ್ಟದ ಕಡೆ ಅರ್ಧ ಜನರೂ, ಹೀಗೆ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವುದಕ್ಕೋಸ್ಕರ ನಿಂತರು.
آنگاه یوشع تمام قوانین نوشته شده در تورات را که شامل برکتها و لعنتها بود، برای مردم اسرائیل خواند. | 34 |
೩೪ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಅಶೀರ್ವಾದದ ವಾಕ್ಯಗಳನ್ನು ಹಾಗೂ ಶಾಪವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು.
خلاصه، تمام دستورهای موسی بدون کم و کاست در حضور تمام مردان، زنان، جوانان، کودکان اسرائیل و غریبانی که با آنها بودند، خوانده شد. | 35 |
೩೫ಮೋಶೆಯು ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಹೆಂಗಸರಿಗೂ, ಚಿಕ್ಕವರಿಗೂ, ಪರದೇಶದವರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಅದನ್ನು ಓದಿದನು.