< داوران 3 >

خداوند برخی قبایل را در سرزمین کنعان واگذاشت تا نسل جدید اسرائیل را که هنوز طعم جنگ با کنعانی‌ها را نچشیده بودند، بیازماید. 1
ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದನ್ನೂ ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿಸುವುದಕ್ಕೂ,
خداوند به این وسیله می‌خواست به نسل جدید اسرائیل که در جنگیدن بی‌تجربه بودند، فرصتی بدهد تا جنگیدن را بیاموزند. 2
ಇಸ್ರಾಯೇಲ್‍ ಸಂತತಿಯವರಲ್ಲಿ ಯುದ್ಧ ವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವುದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಾರೆಂದರೆ,
این قبایل عبارت بودند از: فلسطینی‌هایی که هنوز در پنج شهر خود باقی مانده بودند، تمام کنعانی‌ها، صیدونی‌ها و حوی‌هایی که در کوهستان لبنان از کوه بعل حرمون تا گذرگاه حمات ساکن بودند. 3
ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಗಳಲ್ಲಿಯೂ ಬಾಳ್ ಹೆರ್ಮೊನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು ಇವರೇ.
این قبایل برای آزمایش نسل جدید اسرائیل در سرزمین کنعان باقی مانده بودند تا معلوم شود آیا اسرائیل دستورهایی را که خداوند به‌وسیلهٔ موسی به ایشان داده بود، اطاعت خواهند کرد یا نه. 4
ತಾನು ಮೋಶೆಯ ಮೂಲಕವಾಗಿ ಇವರ ಪೂರ್ವಿಕರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೈಕೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕೋಸ್ಕರ ಯೆಹೋವನು ಅವರನ್ನು ಉಳಿಸಿದ್ದನು.
پس اسرائیلی‌ها در میان کنعانی‌ها، حیتی‌ها، اموری‌ها، فرزی‌ها، حوی‌ها و یبوسی‌ها ساکن شدند. 5
ಇಸ್ರಾಯೇಲರು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ,
مردم اسرائیل به جای اینکه این قبایل را نابود کنند، با ایشان وصلت نمودند. مردان اسرائیلی با دختران آنها ازدواج کردند و دختران اسرائیلی به عقد مردان ایشان درآمدند و به این طریق بنی‌اسرائیل به بت‌پرستی کشیده شدند. 6
ಅವರ ಕನ್ಯೆಯರನ್ನು ತಾವು ತಂದು, ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು, ಅವರ ದೇವತೆಗಳನ್ನು ಸೇವಿಸಿದರು.
مردم اسرائیل خداوند، خدای خود را فراموش کرده، دست به کارهایی زدند که در نظر خداوند زشت بود و بتهای بعل و اشیره را عبادت کردند. 7
ಇಸ್ರಾಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ, ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟು ಆತನ ದೃಷ್ಟಿಯಲ್ಲಿ ದ್ರೋಹಿಗಳಾದರು.
آنگاه خشم خداوند بر بنی‌اسرائیل افروخته شد و ایشان را تسلیم کوشان رشعتایم، پادشاه بین‌النهرین نمود و آنها مدت هشت سال او را بندگی کردند. 8
ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.
اما چون برای کمک نزد خداوند فریاد برآوردند، خداوند عتنی‌ئیل پسر قناز را فرستاد تا ایشان را نجات دهد. (قناز برادر کوچک کالیب بود.) 9
ಇಸ್ರಾಯೇಲರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಅವರನ್ನು ಬಿಡಿಸುವುದಕ್ಕೋಸ್ಕರ ರಕ್ಷಕನನ್ನು ಎಬ್ಬಿಸಿದನು. ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನೇ ಆ ರಕ್ಷಕನು.
روح خداوند بر عتنی‌ئیل قرار گرفت و او اسرائیل را رهبری کرده، با کوشان رشعتایم پادشاه وارد جنگ شد و خداوند به او کمک نمود تا کوشان رشعتایم را به کلی شکست دهد. 10
೧೦ಯೆಹೋವನ ಆತ್ಮವು ಅವನ ಮೇಲೆ ಬಂದುದರಿಂದ ಅವನು ಇಸ್ರಾಯೇಲರ ನ್ಯಾಯಸ್ಥಾಪನೆಗೋಸ್ಕರ ಯುದ್ಧಕ್ಕೆ ಹೊರಟನು. ಯೆಹೋವನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಅವನ ಕೈಗೆ ಒಪ್ಪಿಸಿಕೊಟ್ಟದ್ದರಿಂದ ಅವನು ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.
مدت چهل سالی که عتنی‌ئیل رهبری اسرائیل را به عهده داشت، در سرزمین بنی‌اسرائیل صلح حکمفرما بود. 11
೧೧ದೇಶದಲ್ಲಿ ನಲ್ವತ್ತು ವರ್ಷಗಳ ಕಾಲ ಸಮಾಧಾನವಿತ್ತು. ತರುವಾಯ ಕೆನಜನ ಮಗನಾದ ಒತ್ನೀಯೇಲನು ಮರಣಹೊಂದಿದನು.
بعد از مرگ عتنی‌ئیل، مردم اسرائیل بار دیگر به راههای گناه‌آلود خود بازگشتند. بنابراین خداوند عجلون، پادشاه موآب را بر اسرائیل مسلط ساخت. 12
೧೨ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.
قوم عمون و عمالیق نیز با عجلون متحد شده، اسرائیل را شکست دادند و اریحا را که به «شهر نخلها» معروف بود به تصرف خود درآوردند. 13
೧೩ಇವನು ಅಮ್ಮೋನಿಯರನ್ನೂ, ಅಮಾಲೇಕ್ಯರನ್ನೂ ಕೂಡಿಸಿಕೊಂಡು ಹೊರಟು ಬಂದು ಇಸ್ರಾಯೇಲರನ್ನು ಸೋಲಿಸಿ ಖರ್ಜೂರನಗರವನ್ನು ಹಿಡಿದನು.
از آن به بعد، اسرائیلی‌ها مدت هجده سال عجلون پادشاه موآب را بندگی کردند. 14
೧೪ಇಸ್ರಾಯೇಲರು ಅವನಿಗೆ ಹದಿನೆಂಟು ವರ್ಷ ದಾಸರಾಗಿದ್ದರು.
اما وقتی بنی‌اسرائیل نزد خداوند فریاد برآوردند، خداوند ایهود، پسر جیرای بنیامینی را که مرد چپ دستی بود فرستاد تا آنها را برهاند. اسرائیلی‌ها ایهود را انتخاب کردند تا جزیه را به پایتخت موآب برده، به عجلون تحویل دهد. 15
೧೫ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.
ایهود پیش از رفتن، یک خنجر دو دم به طول نیم متر برای خود ساخت و آن را زیر لباسش بر ران راست خود بست. 16
೧೬ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ
او جزیه را به عجلون که مرد بسیار چاقی بود تحویل داده، همراه افراد خود راهی منزل شد. اما بیرون شهر نزدیک معدنهای سنگ در جلجال، افراد خود را روانه نمود و خود به تنهایی نزد عجلون پادشاه بازگشت و به او گفت: «من یک پیغام محرمانه برای تو دارم.» پادشاه خدمتگزاران خود را بیرون کرد تا پیغام محرمانهٔ او را بشنود. 17
೧೭ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ.
18
೧೮ಏಹೂದನು ಕಪ್ಪಕಾಣಿಕೆಯನ್ನು ಒಪ್ಪಿಸಿದ ಮೇಲೆ ಅದನ್ನು ಹೊತ್ತುಕೊಂಡು ಬಂದಿದ್ದ ಆಳುಗಳನ್ನು ಕಳುಹಿಸಿಬಿಟ್ಟು,
19
೧೯ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸತಕ್ಕದ್ದೊಂದು ರಹಸ್ಯವಿದೆ” ಅಂದನು. ಆಗ ಅರಸನು, “ನಿಶ್ಯಬ್ದ” ಅನ್ನಲು ಅವನ ಸೇವಕರೆಲ್ಲರೂ ಹೊರಗೆ ಹೋದರು.
پس ایهود با عجلون در قصر ییلاقی پادشاه تنها ماند. ایهود به عجلون نزدیک شده گفت: «پیغامی که من دارم از جانب خداست!» عجلون از جای خود برخاست تا آن را بشنود. 20
೨೦ಅರಸನು ತನ್ನ ತಂಪಾದ ಮೇಲಂತಸ್ತಿನ ಕೋಣೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಹೋಗಿ, “ನಿನಗೆ ಹೇಳಬೇಕಾದದ್ದೊಂದು ದೈವೋಕ್ತಿಯಿದೆ” ಅನ್ನಲು ಅವನು ತನ್ನ ಸಿಂಹಾಸನದಿಂದ ಎದ್ದನು.
ایهود با دست چپ خود خنجر را از زیر لباسش بیرون کشیده، آن را در شکم پادشاه فرو برد. 21
೨೧ಆಗ ಏಹೂದನು ಎಡಗೈ ಚಾಚಿ ಬಲಗಡೆಯ ಸೊಂಟಕ್ಕೆ ಕಟ್ಟಿದ್ದ ಕತ್ತಿಯನ್ನು ಹಿರಿದು ಅವನ ಹೊಟ್ಟೆಯಲ್ಲಿ ತಿವಿದನು.
تیغه با دستهٔ خنجر در شکم او فرو رفت و روده‌هایش بیرون ریخت. ایهود بدون آنکه خنجر را از شکم او بیرون بکشد درها را به روی او بست و از راه بالاخانه گریخت. 22
೨೨ಆ ಕತ್ತಿ ಹಿಡಿಯ ಸಮೇತ ಹೊಟ್ಟೆಯೊಳಗೆ ಹೊಕ್ಕಿತು. ಅವನು ಕತ್ತಿಯನ್ನು ಹೊರಗೆ ತೆಗೆಯದಿದ್ದುದರಿಂದ ಕೊಬ್ಬು ಕತ್ತಿಯನ್ನು ಸುತ್ತಿಕೊಂಡಿತು; ಕೊಬ್ಬು ಬೆನ್ನಿನಿಂದ ಹೊರಗೆ ಬಂದಿತು.
23
೨೩ಏಹೂದನು ಪಡಸಾಲೆಗೆ ಬಂದು, ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ ಬೀಗಹಾಕಿ ಹೊರಟು ಹೋದನು.
وقتی خدمتگزاران پادشاه برگشتند و درها را بسته دیدند، در انتظار ماندند چون فکر کردند که عجلون به دستشویی رفته است. 24
೨೪ತರುವಾಯ ಸೇವಕರು ಅಲ್ಲಿ ಬಂದು ಬಾಗಿಲಿಗೆ ಬೀಗಹಾಕಿರುವುದನ್ನು ಕಂಡು, ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು
اما وقتی انتظار آنها به طول انجامید و از او خبری نشد، نگران شده، کلیدی آوردند و در را باز کردند و دیدند که اربابشان به زمین افتاده و مرده است! 25
೨೫ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಕದಗಳು ತೆರೆಯಲ್ಪಡದೆ ಇರುವುದನ್ನು ನೋಡಿ ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆಯಲು, ಇಗೋ, ಅವರ ಒಡೆಯನು ಸತ್ತುಬಿದ್ದಿದ್ದನು.
در این موقع ایهود از معدنهای سنگ گذشته، به سعیرت گریخته بود. 26
೨೬ಅವರು ಅರಸನಿಗಾಗಿ ಕಾಯುತ್ತಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ಹೊಳೆದಾಟಿ ಸೆಯೀರಾ ಎಂಬಲ್ಲಿಗೆ ಬಂದು,
وقتی او به کوهستان افرایم رسید شیپور را به صدا درآورد و مردان اسرائیلی را دور خود جمع کرد و به آنها گفت: «همراه من بیایید، زیرا خداوند، دشمنانتان موآبی‌ها را به دست شما تسلیم کرده است!» پس مردان اسرائیلی به دنبال او از کوهستان پایین آمدند و گذرگاههای رود اردن نزدیک موآب را گرفتند و نگذاشتند هیچ‌کس از آنها بگذرد. 27
೨೭ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಕೊಂಬನ್ನು ಊದಿದನು. ಆಗ ಇಸ್ರಾಯೇಲರು ಅವನ ಬಳಿಗೆ ಬಂದು, ಗಟ್ಟಾ ಇಳಿದು ಅವನ ಸಂಗಡ ಹೊರಟರು.
28
೨೮ಅವನು ಅವರ ನಾಯಕನಾಗಿ, “ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ” ಎಂದು ಹೇಳಲು, ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ (ನದಿಯಲ್ಲಿ ಹಾದು ಹೋಗಬಹುದಾದ ಸ್ಥಳಗಳು) ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.
آنگاه بر موآبی‌ها تاخته، حدود ده هزار نفر از سربازان نیرومند آنها را کشتند و نگذاشتند حتی یکی از آنها جان به در برد. 29
೨೯ಅವರು ಆ ಕಾಲದಲ್ಲಿ ಪುಷ್ಟರೂ ಪರಾಕ್ರಮಿಗಳೂ ಆದ ಸುಮಾರು ಹತ್ತು ಸಾವಿರ ಮಂದಿ ಮೋವಾಬ್ಯರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದಂತೆ ಹತ್ಯೆಮಾಡಿದರು.
آن روز اسرائیلی‌ها، موآبی‌ها را شکست دادند و تا هشتاد سال صلح در سرزمین بنی‌اسرائیل برقرار گردید. 30
೩೦ಆ ದಿನದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು. ದೇಶದಲ್ಲಿ ಎಂಭತ್ತು ವರ್ಷ ಸಮಾಧಾನವಿತ್ತು.
بعد از ایهود، شمجر پسر عنات رهبر اسرائیل شد. او یک بار با چوب گاورانی ششصد نفر از فلسطینی‌ها را کشت و بدین وسیله اسرائیلی‌ها را از دست آنها نجات داد. 31
೩೧ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ತಿವಿಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಾಯೇಲರನ್ನು ರಕ್ಷಿಸಿದನು.

< داوران 3 >