< مزامیر 75 >

برای رهبر سرایندگان: در مایۀ «نابود نکن». مزمور آساف. سرود. تو را سپاس می‌گویم ای خدا، تو را سپاس می‌گویم! تو به ما نزدیک هستی و ما کارهای شگفت‌انگیز تو را اعلام می‌کنیم. 1
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಕೀರ್ತನೆ; ಹಾಡು; ಆಸಾಫನದು. ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.
خداوند می‌فرماید: «وقتی زمان معین برسد، مردم را از روی عدل و انصاف داوری خواهم کرد. 2
ದೇವರು ನುಡಿದದ್ದು, “ನಿಯಮಿತ ಕಾಲವು ಬಂದಾಗ, ನಾನೇ ನೀತಿಯಿಂದ ತೀರ್ಪುಕೊಡುವೆನು.
وقتی زمین بلرزد و ساکنانش هراسان شوند، مَنَم که ارکان آن را محکم نگاه می‌دارم. 3
ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ, ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು. (ಸೆಲಾ)
«به متکبران و شروران می‌گویم که مغرور نباشند 4
ನಾನು ಹೆಮ್ಮೆಗಾರರಿಗೆ, “ಕೊಚ್ಚಿಕೊಳ್ಳಬೇಡಿರಿ” ಎಂದು; ದುಷ್ಟರಿಗೆ, “ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ;
و از بلندپروازی و لاف زدن دست بردارند.» 5
ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನಿಂದ ಮಾತನಾಡಬೇಡಿರಿ” ಎಂದು ಹೇಳುವೆನು.
زیرا سرافرازی انسان نه از غرب می‌آید نه از شرق و نه از هیچ جای دیگر، 6
ಏಕೆಂದರೆ ಉದ್ಧಾರವು ಪೂರ್ವದಿಂದಾಗಲಿ, ಪಶ್ಚಿಮದಿಂದಾಗಲಿ, ಅರಣ್ಯದಿಂದಾಗಲಿ ಬರುವುದಿಲ್ಲ.
بلکه خداست که داوری می‌کند؛ اوست که یکی را سرافراز و دیگری را سرافکنده می‌نماید. 7
ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.
خداوند جامی در دست دارد که از شراب تند و قوی غضب او پر است. او آن را به تمام شریران خواهد نوشانید و آنها آن را تا قطرۀ آخر سر خواهند کشید. 8
ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.
اما من از تعریف و تمجید خدای یعقوب باز نخواهم ایستاد، بلکه پیوسته در وصف او سرود خواهم خواند! 9
ನಾನಾದರೋ ಸದಾ ವರ್ಣಿಸುವವನಾಗಿ, ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.
او قدرت شریران را در هم خواهد شکست و عادلان را تقویت خواهد نمود. 10
೧೦ದುಷ್ಟರ ಕೊಂಬುಗಳನ್ನೆಲ್ಲಾ ಮುರಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳನ್ನು ಉನ್ನತಮಟ್ಟಕ್ಕೆ ಎತ್ತಲ್ಪಡುವವು.

< مزامیر 75 >