< صفنیا 1 >

این است پیامی که خداوند در دوران سلطنت یوشیا (پسر آمون)، پادشاه یهودا، به صفنیا داد. (صفنیا پسر کوشی، کوشی پسر جدلیا، جدلیا پسر امریا، و امریا پسر حِزِقیای پادشاه بود.) 1
ಆಮೋನನ ಮಗನೂ, ಯೆಹೂದದ ಅರಸನಾದ ಯೋಷೀಯನ ಕಾಲದಲ್ಲಿ ಕೂಷಿಯನ ಮಗನೂ, ಗೆದಲ್ಯನ ಮೊಮ್ಮಗನೂ, ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ.
خداوند می‌فرماید: «همه چیز را از روی زمین محو و نابود خواهم کرد. 2
ಯೆಹೋವನು ಇಂತೆನ್ನುತ್ತಾನೆ, “ನಾನು ಭೂಮಂಡಲದಿಂದ ಸಮಸ್ತವನ್ನು ಅಳಿಸಿಬಿಡುವೆನು.
انسانها و حیوانات، پرندگان آسمان و ماهیان دریا را از بین خواهم برد. شریران را با همهٔ بتهایی که می‌پرستند ریشه‌کن خواهم کرد. 3
ಮನುಷ್ಯರನ್ನೂ, ಪಶುಗಳನ್ನೂ, ಮತ್ತು ಆಕಾಶದ ಪಕ್ಷಿಗಳನ್ನೂ, ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ, ಅವುಗಳಿಗೆ ಅಡ್ಡಬೀಳುವ ದುಷ್ಟರನ್ನೂ ಸಂಹರಿಸುವೆನು; ಭೂಮಿಯ ಮೇಲಿಂದ ದುಷ್ಟರ ಸಂತಾನವನ್ನೂ ಕಿತ್ತುಹಾಕುವೆನು” ಇದು ಯೆಹೋವನ ನುಡಿ.
«یهودا و اورشلیم را مجازات می‌کنم. آثار و بقایای پرستش بعل را از بین می‌برم به طوری که دیگر اسمی از کاهنان بت بعل باقی نماند. 4
“ನಾನು ಯೆಹೂದದ ಮೇಲೂ ಮತ್ತು ಯೆರೂಸಲೇಮಿನವರೆಲ್ಲರ ಮೇಲೂ ಕೈಯೆತ್ತಿ, ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ, ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮ ಮಾಡುವೆನು,
آنانی را که بر بامها، آفتاب و ماه و ستارگان را پرستش می‌کنند و نیز کسانی را که مرا می‌پرستند و به من سوگند وفاداری یاد می‌کنند ولی در همان حال بت مولک را نیز می‌پرستند، هلاک خواهم کرد. 5
ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ, ಯೆಹೋವನ ಭಕ್ತರೆಂದು ಪ್ರತಿಜ್ಞೆ ಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ,
آنانی را که از پیروی من برگشته‌اند و دیگر مرا نمی‌جویند و از من راهنمایی نمی‌خواهند از بین خواهم برد.» 6
ಯೆಹೋವನನ್ನು ಆಶ್ರಯಿಸದೆ, ಯೆಹೋವನ ದರ್ಶನವನ್ನು ಬಯಸದೇ, ಯೆಹೋವನ ಮಾರ್ಗ ಬಿಟ್ಟವರನ್ನೂ ಧ್ವಂಸ ಮಾಡುವೆನು.”
در حضور خداوند یهوه خاموش باشید، زیرا روز داوری او فرا رسیده است. خداوند قوم خود را برای کشته شدن آماده می‌سازد. او دشمنان آنها را دعوت کرده تا سرزمین یهودا را غارت کنند. 7
ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ.
خداوند می‌فرماید: «در آن روز داوری، رهبران و شاهزادگان یهودا و تمام کسانی را که از رسوم بت‌پرستان پیروی می‌کنند مجازات خواهم کرد. 8
“ಯೆಹೋವನ ಆ ಯಜ್ಞದಿನದಲ್ಲಿ ನಾನು ದೇಶಾಧಿಪತಿಗಳನ್ನೂ, ರಾಜವಂಶದವರನ್ನೂ, ವಿದೇಶ ವಸ್ತ್ರದಾರಿಗಳೆಲ್ಲರನ್ನೂ ದಂಡಿಸುವೆನು.
آری، آنانی را که در پرستش خود، روشهای کافران را به کار می‌برند و نیز کسانی را که کشتار و غارت می‌کنند تا معابد خدایان خود را پر سازند، مجازات خواهم کرد. 9
ಹೊಸ್ತಿಲನ್ನು ದಾಟಿ ಮೋಸ ಹಿಂಸೆಗಳಿಂದ ದೋಚಿದ್ದನ್ನು, ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.
در آن روز صدای ناله و فریاد از دروازه‌های اورشلیم به گوش خواهد رسید و صدای نعرهٔ دشمن از تپه‌ها شنیده خواهد شد. 10
೧೦ಅದೇ ದಿನದಲ್ಲಿ ಮೀನುಬಾಗಿಲಿನಿಂದ ಕೂಗಾಟ, ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿನಿಂದ ಭೀಕರ ಶಬ್ದವನ್ನು ಕೇಳುವಿರಿ, ಅಂತು ದೊಡ್ಡ ಗದ್ದಲವಾಗುವುದು” ಇದು ಯೆಹೋವನ ನುಡಿ.
«ای ساکنان محلۀ بازار اورشلیم، از غم و اندوه شیون کنید، زیرا تمام تاجران حریص شما نابود خواهند شد. 11
೧೧ಯೆರುಸಲೇಮ್ ಜಿಲ್ಲೆಯ ಮಾರುಕಟ್ಟೆಯಲ್ಲಿ ವಾಸಿಸುವವರೇ, ಕೂಗಿರಿ, ಏಕೆಂದರೆ ಎಲ್ಲಾ ವರ್ತಕರ ಜನರೆಲ್ಲಾ ಹಾಳಾದರು, ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.
«در آن روز، با چراغ در اورشلیم خواهم گشت و کسانی را که با خیال راحت گناه می‌ورزند و گمان می‌کنند که من کاری به کارشان ندارم، پیدا کرده مجازات خواهم نمود. 12
೧೨ಆ ಕಾಲದಲ್ಲಿ ನಾನು ದೀಪಗಳನ್ನು ಹಿಡಿದು, ಯೆರೂಸಲೇಮನ್ನೆಲ್ಲಾ ಹುಡುಕಿಬಿಡುವೆನು; ಯೆಹೋವನು ಮೇಲನ್ನಾಗಲಿ, ಕೇಡನ್ನಾಗಲಿ ಮಾಡನು ಎಂದು ಮನಸ್ಸಿನೊಳಗೆ ಅಂದುಕೊಳ್ಳುವವರಾಗಿ, ಮಡ್ಡಿಯಂತೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನು ದಂಡಿಸುವೆನು.
اموالشان را به دست دشمن خواهم داد و خانه‌هایشان را با خاک یکسان خواهم کرد. خانه‌ها خواهند ساخت، ولی نخواهند توانست در آنها ساکن شوند. تاکستانها غرس خواهند کرد، ولی هرگز شراب آنها را نخواهند نوشید.» 13
೧೩ಅವರ ಆಸ್ತಿಯು ಸೂರೆಯಾಗುವುದು, ಅವರ ಮನೆಗಳು ಹಾಳಾಗುವವು; ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಿಸರು, ದ್ರಾಕ್ಷಾತೋಟಗಳನ್ನು ಮಾಡಿಕೊಂಡರೂ ಅವುಗಳ ದ್ರಾಕ್ಷಾರಸವನ್ನು ಕುಡಿಯರು.
آن روز هولناک خداوند نزدیک است و به سرعت فرا می‌رسد. در آن روز حتی مردان قدرتمند به تلخی خواهند گریست. 14
೧೪ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!
آن روز، روزی است که غضب خداوند افروخته می‌شود. روز سختی و اضطراب است، روز خرابی و ویرانی، روز تاریکی و ظلمت، روز ابرها و سیاهی‌ها! 15
೧೫ಆ ದಿನದ ಸುದ್ದಿ ಕಹಿಯಾದುದು, ಅದು ರೌದ್ರದ ದಿನ, ಶ್ರಮಸಂಕಟಗಳ ದಿನ, ಹಾಳುಪಾಳುಮಾಡುವ ದಿನ, ಕತ್ತಲಿನ ಮೊಬ್ಬಿನ ದಿನ, ಕಾರ್ಮುಗಿಲ ಕಗ್ಗತ್ತಲ ದಿನ!
شیپور به صدا در می‌آید، جنگ شروع می‌شود، شهرهای حصاردار و برجهای بلند واژگون می‌گردند. 16
೧೬ಕೋಟೆಗಳನ್ನೂ, ದೊಡ್ಡ ಕೊತ್ತಲುಗಳನ್ನೂ ಹಿಡಿಯಲು, ಆರ್ಭಟಿಸಿ ಕೊಂಬೂದುವ ದಿನ.
خداوند می‌فرماید: «شما را مثل آدم کوری که به دنبال راه می‌گردد، درمانده خواهم نمود، چون نسبت به من گناه ورزیده‌اید. بنابراین، خون شما بر خاک ریخته خواهد شد و بدنهایتان همان جا روی زمین خواهد گندید.» 17
೧೭ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ಧೂಳಿನಂತೆ ಚೆಲ್ಲಿ ಹೋಗುವುದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವುದು!
در آن روزِ غضبِ خدا، طلا و نقرهٔ شما نخواهد توانست جان شما را از مرگ برهاند، زیرا تمام زمین از آتش غیرت او گداخته خواهد شد. او به سرعت زمین را از وجود ساکنان آن پاک خواهد ساخت. 18
೧೮ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!

< صفنیا 1 >