< Men Pilipi 1 >

1 PAULUJ o Timoteuj ladun Iejuj Krijtuj on me jaraui kan karoj en Krijtuj Iejuj o pijop o jaunkoa kan nan Pilipi.
ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ,
2 Mak o popol jan ren Kot Jam atail o Kaun Iejuj Krijtuj en mi re omail!
ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಲಭಿಸಲಿ.
3 I kin danke ai Kot ni ai tamatamanda komail.
ನಾನು ನಿಮ್ಮನ್ನು ನೆನಪಿಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ, ನಾನು ನಿಮಗಾಗಿ ದೇವರನ್ನು ಪ್ರಾರ್ಥಿಸುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಪ್ರಾರ್ಥಿಸುವವನಾಗಿದ್ದೇನೆ.
4 I me i kin wiada ni ai kapakap kin komail anjau karoj, o i kin kapakap ni pereperen.
5 Pweki omail dadaurata ronamau jan ni tapi o kokodo lel met.
ನೀವು ಮೊದಲಿನಿಂದ ಇಂದಿನವರೆಗೂ ಸುವಾರ್ತಾಪ್ರಚಾರದಲ್ಲಿ ಸಹಕಾರಿಗಳಾಗಿದ್ದೀರೆಂದು ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ.
6 O i kamelele me I, me tapidar wiawia mau on eu re omail pil pan kanikiela lan lel ran en lejui Krutul.
ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.
7 Me pun i en kamelele mepukat duen komail karoj, pwe i kin kolekol komail nan monion i ni ai jalidi wet, waja i kin kaweweda o kadededa ronamau; a komail karoj kin ian ia kapwaiada mak wet.
ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.
8 Pwe Kot ai jaunkadede, duen i kin loleiteki komail pan kupur en Krijtuj Iejuj.
ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.
9 O me i pil kapakapaki pwe omail limpok en lapalapala kakairida ni lolekon o lamalam akan.
ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.
10 Pwe komail en kajauiada, da me mau jan karoj, pwe komail en melel o pun lao lel ran en Krijtuj.
೧೦ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,
11 O direki wan pun kan, me kin wiaui ren Iejuj Krijtuj men kalinanada o kapina Kot.
೧೧ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.
12 Ri ai kan, i men, komail en aja ir ai, me dialan kaindindar ronamau,
೧೨ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ.
13 Nan i ai jalidi kan pweki Krijtuj, me pwarapwaradar nan im en monjap o waja karoj.
೧೩ಹೇಗೆಂದರೆ ನನ್ನ ಸೆರೆವಾಸವು ಕ್ರಿಸ್ತನ ನಿಮಿತ್ತವೇ ಎಂದು ಅರಮನೆಯ ಕಾವಲುಗಾರರೆಲ್ಲರಿಗೂ ಹಾಗೂ ಉಳಿದವರೆಲ್ಲರಿಗೂ ತಿಳಿಯಲ್ಪಟ್ಟಿತು.
14 O ri atail toto pan kupur en Kaun, me ainar kidar ai jalidi kan, ap aima jan maj o, en padaki maj an en Kot ap jo majak.
೧೪ಇದಲ್ಲದೆ ಸಹೋದರರಲ್ಲಿ ಬಹಳ ಜನರು ನನ್ನ ಬಂಧನದಿಂದಲೇ ಕರ್ತನಲ್ಲಿ ಭರವಸವುಳ್ಳವರಾಗಿ ದೇವರ ವಾಕ್ಯವನ್ನು ನಿರ್ಭಯದಿಂದ ಹೇಳುವುದಕ್ಕೆ ಇನ್ನೂ ಹೆಚ್ಚು ಧೈರ್ಯಹೊಂದಿದ್ದಾರೆ.
15 A akai kin padaki duen Krijtuj akpeirin, o akamai, o akai jan nan ar inon mau.
೧೫ಕೆಲವರು ಹೊಟ್ಟೆಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಮನಸ್ಸಿನಿಂದ ಮತ್ತು ಬೇರೆ ಕೆಲವರು ಒಳ್ಳೆಯ ಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
16 A met akan ni limpok, pwe re aja, me nai jalidier, pwen kadede pan ronamau.
೧೬ಇವರಂತೂ ನಾನು ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳುವುದಕ್ಕಾಗಿ ಇಲ್ಲಿ ಹಾಕಲ್ಪಟ್ಟಿದ್ದೆನೆಂದು ತಿಳಿದು ಪ್ರೀತಿಯಿಂದ ಪ್ರಸಿದ್ಧಿಪಡಿಸುತ್ತಿದ್ದಾರೆ.
17 Irail kin padaki duen Krijtuj kapei lokaia o jo melel, re kiki on, me re pan kalaudela ai jalidi kan;
೧೭ಆ ಬೇರೆ ತರದವರಾದರೋ ನಾನು ಬೇಡಿಯಿಂದ ಬಂಧಿತನಾಗಿರುವಾಗಲೂ ನನಗೆ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ, ಪ್ರಾಮಾಣಿಕವಲ್ಲದ ಸ್ವಾರ್ಥ ಉದ್ದೇಶದಿಂದ ಕ್ರಿಸ್ತನನ್ನು ಪ್ರಸಿದ್ಧಿಪಡಿಸುತ್ತಾರೆ.
18 A pil menda? Pwe Krijtuj kin lolok jili ni jon karoj, ma ni akamai de ni melel, i me i peren kida, ei i pan pereperen.
೧೮ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು.
19 Pwe i aja, mepukat pan kare on ia maur joutuk ki omail kapakap o jauaj pan Nen en Iejuj Krijtuj.
೧೯ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.
20 Duen ai inon ion, o auiaui, o kaporoporeki, me i jota pan namenokala ni eu jon. A duen maj o, iduen anjau wet Krijtuj en kapinan laud ni war ai, ma ni ai pan memaurata de mela.
೨೦ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.
21 Pwe Krijtuj, i maur i, o mela ai pai.
೨೧ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ.
22 A ma i pan memaurata ni pali uduk, ai wiawia kan pan kadepa; ari i ap jaja, da me i en pilada.
೨೨ಶರೀರದಲ್ಲಿಯೇ ಬದುಕಬೇಕಾದ್ದಲ್ಲಿ ನನ್ನ ಕೆಲಸಮಾಡಿ ಫಲಹೊಂದಲು ನನಗೆ ಸಾಧ್ಯವಾಗುವುದು. ಹೀಗಿರಲಾಗಿ ನಾನು ಯಾವುದನ್ನಾರಿಸಿಕೊಳ್ಳಬೇಕೆನ್ನುವುದು ನನಗೆ ತಿಳಿಯದು.
23 Pwe i mauki ira karoj: I inon ion mela, pwen mila ren Krijtuj, pwe i eta me mau.
೨೩ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ, ಇಲ್ಲಿಂದ ಹೊರಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬುದೇ ನನ್ನ ಅಭಿಲಾಷೆ, ಅದು ಅತ್ಯುತ್ತಮವಾಗಿದೆ.
24 A ai mimieta ni pali uduk me mau jon pweki komail.
೨೪ಆದರೆ ನಾನಿನ್ನೂ ಶರೀರದಲ್ಲಿ ವಾಸಮಾಡಿಕೊಂಡಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ.
25 Ari, i ap aja, me i pan mimieta re omail karoj, pwen jauaja omail peren o pojon,
೨೫ಆದ್ದರಿಂದ ನಿಮಗೆ ಕ್ರಿಸ್ತನಂಬಿಕೆಯಲ್ಲಿ ಅಭಿವೃದ್ಧಿಯೂ ಆನಂದವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ.
26 Pwe omail kapin en lapalapala ren Krijtuj Iejuj ki ai pwaralan komail.
೨೬ಹೀಗೆ ನಾನು ತಿರುಗಿ ನಿಮ್ಮ ಬಳಿಗೆ ಬರುವುದರಿಂದ ನೀವು ಕ್ರಿಸ್ತ ಯೇಸುವಿನ ವಿಷಯವಾಗಿ ಉಲ್ಲಾಸಪಡುವುದಕ್ಕೆ ನನ್ನಿಂದ ಅಧಿಕ ಆಸ್ಪದವಿರುವುದು.
27 Ari, komail weweid duen me waron ronamau en Krijtuj, pwe ma i pwaralan komail, de ni ai doo, i en ron, me komail keleki nen ta ieu, o komail lamalam ta pot, i ian kelail dodok on ronamau ki pojon.
೨೭ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.
28 O komail ender waponki, me kin palian komail akan, pwe i kajanjale pan arail pan lokidokila, a omail pan maurela; a mepukat jan ren Kot.
೨೮ನೀವು ಹೀಗಿರುವುದು ವಿರೋಧಿಗಳ ನಾಶನಕ್ಕೂ, ನಿಮ್ಮ ರಕ್ಷಣೆಗೂ ಒಂದು ಗುರುತಾಗಿದೆ. ಅದು ದೇವರಿಂದಾದ ಮುನ್ಸೂಚನೆಯಾಗಿದೆ.
29 Pwe a muei on komail er pan kupur en Krijtuj, kaidin pojon eta, pwen pil kalokolokeki i,
೨೯ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.
30 Pwe komail kin wia pei ota, me komail kilaner re i, o me komail kin ron duen nai.
೩೦ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನ ಕುರಿತಾಗಿ ಕೇಳುವಂಥ ಅದೇ ಹೋರಾಟವು ನಿಮಗೂ ಉಂಟು.

< Men Pilipi 1 >