< Dzieje 17 >
1 Idąc dalej, minęli miasta Amfipolis oraz Apolonię i dotarli do Tesaloniki, gdzie znajdowała się żydowska synagoga.
ಅವರು ಅಂಫಿಪೊಲಿ ಮತ್ತು ಅಪೊಲೋನ್ಯ ಮಾರ್ಗವಾಗಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.
2 Zgodnie ze swoim zwyczajem, Paweł chodził do niej przez kolejne trzy szabaty i przedstawiał zgromadzonym znaczenie Pisma.
ಪೌಲನು ತನ್ನ ವಾಡಿಕೆಯಂತೆ ಮೂರು ಸಬ್ಬತ್ ದಿನಗಳಂದು ಅವರ ಬಳಿ ಹೋಗಿ, ಅವರಲ್ಲಿ ಪವಿತ್ರ ವೇದಗಳ ಬಗ್ಗೆ ವಾದಿಸಿ,
3 Dowodził, że Mesjasz miał cierpieć i zmartwychwstać. Mówił: —Tym Mesjaszem jest Jezus, którego wam głoszę!
ಕ್ರಿಸ್ತ ಯೇಸು ಯಾತನೆಯನ್ನು ಅನುಭವಿಸಿ, ಸತ್ತವರೊಳಗಿಂದ ಜೀವಂತವಾಗಿ ಎದ್ದು ಬರಬೇಕಾಗಿತ್ತೆಂಬುದನ್ನು ವಿವರಿಸಿ, “ನಾನು ನಿಮಗೆ ಪ್ರಕಟಿಸುತ್ತಿರುವ ಯೇಸುವೇ ಆ ಕ್ರಿಸ್ತ,” ಎಂದು ಅವನು ಅವರ ಮುಂದೆ ಬಹಿರಂಗಪಡಿಸಿದನು.
4 Niektórzy słuchacze, w tym również wielu pogan, którzy mieli respekt dla Boga, i niemało wpływowych kobiet, dało się przekonać i przyłączyło się do Pawła i Sylasa.
ಅವರಲ್ಲಿ ಕೆಲವರು ದೇವಭಕ್ತಿಯುಳ್ಳ ಗ್ರೀಕರೂ ಪ್ರಮುಖರಾಗಿದ್ದ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಒಡಂಬಟ್ಟವರಾಗಿ ಪೌಲ, ಸೀಲರನ್ನು ಸೇರಿಕೊಂಡರು.
5 Ale żydowscy przywódcy, kierowani zazdrością, namówili kilku awanturników, aby wywołali zbiegowisko i wszczęli w mieście rozruchy. Otoczyli oni dom Jazona i szukali apostołów, chcąc ich postawić przed zgromadzeniem.
ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಬೀದಿಗಳಲ್ಲಿ ತಿರುಗಾಡುವ ಕೆಲವು ದುಷ್ಟವ್ಯಕ್ತಿಗಳನ್ನು ಕೂಡಿಸಿ ಪಟ್ಟಣದಲ್ಲಿ ಗಲಭೆ ಎಬ್ಬಿಸಿದರು. ಜನಸಮೂಹದ ಮುಂದೆ ಪೌಲ, ಸೀಲರನ್ನು ಎಳೆದು ತರುವಂತೆ ಅವರನ್ನು ಹುಡುಕುತ್ತಾ ಯಾಸೋನ ಎಂಬುವನ ಮನೆಯನ್ನು ಮುತ್ತಿದರು.
6 Ponieważ ich jednak nie znaleźli, zaciągnęli Jazona i kilku wierzących do władz miasta. —Ci ludzie sieją zamęt na całym świecie!—krzyczeli. —A teraz przyszli do naszego miasta
ಆದರೆ ಅಲ್ಲಿ ಅವರಿಲ್ಲದಿರುವುದನ್ನು ಕಂಡು ಅವರು ಯಾಸೋನನನ್ನೂ ಕೆಲವು ಸಹೋದರರನ್ನೂ ಎಳೆದುಕೊಂಡು ಬಂದು ಪಟ್ಟಣದ ಅಧಿಕಾರಿಗಳ ಮುಂದೆ ನಿಲ್ಲಿಸಿ, “ಲೋಕವನ್ನು ತಲೆಕೆಳಗೆ ಮಾಡಿರುವ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.
7 i Jazon przyjął ich do swojego domu. Oni przeciwstawiają się decyzjom cezara, bo uważają za króla jakiegoś Jezusa!
ಯಾಸೋನನು ಅವರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡಿದ್ದಾನೆ. ಅವರು ಯೇಸು ಎಂಬ ಬೇರೊಬ್ಬ ಅರಸನಿದ್ದಾನೆ ಎಂದು ಹೇಳುತ್ತಾ ಕೈಸರನ ವಿರುದ್ಧವಾಗಿ ನಡೆಯುತ್ತಾರೆ,” ಎಂದು ಗಟ್ಟಿಯಾಗಿ ಕೂಗಿದರು.
8 Oskarżenia te zaniepokoiły zarówno zebranych, jak i władze.
ಇದನ್ನು ಕೇಳಿದ ಜನರೂ ಪಟ್ಟಣದ ಅಧಿಕಾರಿಗಳೂ ಕಳವಳಗೊಂಡರು.
9 Ostatecznie jednak zwolnili ich, ale dopiero po otrzymaniu sporej kaucji od Jazona i pozostałych.
ಆಮೇಲೆ ಯಾಸೋನನಿಂದಲೂ ಮತ್ತಿತರರಿಂದಲೂ ಜಾಮೀನು ಪಡೆದು ಅವರನ್ನು ಬಿಡುಗಡೆ ಮಾಡಿದರು.
10 Nocą wierzący szybko wyprawili Pawła i Sylasa do Berei. Ci, jak zwykle, skierowali się do synagogi.
ರಾತ್ರಿಯಾದ ಕೂಡಲೇ, ಸಹೋದರರು ಪೌಲ, ಸೀಲರನ್ನು ಬೆರೋಯಕ್ಕೆ ಕಳುಹಿಸಿದರು. ಅಲ್ಲಿಗೆ ಅವರು ತಲುಪಿದಾಗ ಅಲ್ಲಿಯೂ ಯೆಹೂದ್ಯರ ಸಭಾಮಂದಿರಕ್ಕೆ ಹೋದರು.
11 Tamtejsi mieszkańcy byli bardziej otwarci niż Tesaloniczanie. Całym sercem przyjęli słowo Boże i codziennie sprawdzali w Piśmie, czy to, co słyszeli, jest prawdą.
ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.
12 Wielu z nich uwierzyło, w tym również spore grono wpływowych kobiet oraz mężczyzn, będących poganami.
ಆದ್ದರಿಂದ ಅವರಲ್ಲಿ ಅನೇಕರು ವಿಶ್ವಾಸ ಹೊಂದಿದರು. ಅನೇಕ ಗ್ರೀಕ್ ಪುರುಷರೂ ಪ್ರಮುಖ ಸ್ತ್ರೀಯರೂ ವಿಶ್ವಾಸವನ್ನಿಟ್ಟರು.
13 Gdy jednak żydowscy przywódcy z Tesaloniki dowiedzieli się, że Paweł przebywa teraz w Berei i naucza słowa Bożego, przyszli tam i wywołali kolejne rozruchy.
ಆದರೆ ಪೌಲನು ದೇವರ ವಾಕ್ಯವನ್ನು ಬೆರೋಯದಲ್ಲಿ ಬೋಧಿಸುತ್ತಿದ್ದಾನೆಂಬುದು ಥೆಸಲೋನಿಕದಲ್ಲಿದ್ದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು, ಜನಸಮೂಹವನ್ನು ಪ್ರಚೋದಿಸಿ ಗಲಭೆ ಎಬ್ಬಿಸಿದರು.
14 Wierzący natychmiast wysłali Pawła na wybrzeże. Sylas i Tymoteusz pozostali zaś na miejscu.
ಆದ್ದರಿಂದ ಸಹೋದರರು ಕೂಡಲೇ ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೆ ಬೆರೋಯದಲ್ಲಿಯೇ ಉಳಿದುಕೊಂಡರು.
15 Ci, którzy towarzyszyli Pawłowi, odprowadzili go aż do Aten, po czym wrócili z poleceniem dla Sylasa i Tymoteusza, aby oni również szybko dołączyli do Pawła.
ಪೌಲನನ್ನು ಬಿಟ್ಟು ಬರಲು ಹೋದವರು ಅವನ ಜೊತೆ ಅಥೇನೆ ಪಟ್ಟಣದವರೆಗೆ ಹೋದರು. ಸೀಲ ಮತ್ತು ತಿಮೊಥೆಯರು ಸಾಧ್ಯವಾದಷ್ಟು ಬೇಗನೇ ತನ್ನ ಬಳಿ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂತಿರುಗಿ ಹೋದರು.
16 Czekając na nich w Atenach, Paweł był oburzony, widząc miasto pełne bożków.
ಪೌಲನು ಅವರಿಗಾಗಿ ಕಾಯುತ್ತಾ ಅಥೇನೆಯಲ್ಲಿ ಇದ್ದಾಗ, ಆ ಪಟ್ಟಣವು ವಿಗ್ರಹಗಳಿಂದ ತುಂಬಿಕೊಂಡಿದ್ದನ್ನು ಕಂಡು, ಅವನ ಆತ್ಮವು ಅವನೊಳಗೆ ಕುದಿಯಿತು.
17 W synagodze spotykał się i rozmawiał z Żydami oraz poganami mającymi respekt dla Boga. Codziennie też dyskutował z różnymi ludźmi na rynku.
ಆದ್ದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ದೇವಭಕ್ತಿಯುಳ್ಳ ಗ್ರೀಕರೊಂದಿಗೂ ಅಲ್ಲದೆ ಬಹಿರಂಗ ಸಂತೆಪೇಟೆ ಸ್ಥಳದಲ್ಲಿ ದಿನದಿನವೂ ಬರುತ್ತಿದ್ದ ಜನರೊಂದಿಗೂ ಚರ್ಚೆ ಮಾಡುತ್ತಿದ್ದನು.
18 Byli wśród nich filozofowie ze szkoły epikurejskiej i stoickiej, którzy rozmawiali między sobą: —O czym ten gaduła chce nam powiedzieć? —Chyba głosi jakieś nowe bóstwa—mówili drudzy, Paweł mówił bowiem o Jezusie i zmartwychwstaniu.
ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು.
19 Zabrali więc go na Areopag i spytali: —Możesz nam wyjaśnić, jaką to nową religię głosisz?
ಆಗ ಅವರು ಪೌಲನನ್ನು ಕರೆದುಕೊಂಡು ಅರಿಯೊಪಾಗ ಎಂಬ ಸ್ಥಳಕ್ಕೆ ಬಂದು, “ನೀನು ಹೇಳುತ್ತಿರುವ ಈ ಹೊಸ ಉಪದೇಶ ಏನೆಂಬುದನ್ನು ನಾವು ತಿಳಿದುಕೊಳ್ಳಬಹುದೋ?
20 Wkładasz nam bowiem do głowy jakieś niesłychane historie.
ನೀನು ಕೆಲವು ವಿಚಿತ್ರವಾದ ವಿಚಾರಗಳನ್ನು ನಮಗೆ ಹೇಳುತ್ತಿರುವೆ. ಆದ್ದರಿಂದ ಅವುಗಳ ಅರ್ಥವನ್ನು ತಿಳಿಯಬಯಸುತ್ತೇವೆ,” ಎಂದರು.
21 A wszyscy Ateńczycy i przybysze poświęcają większość czasu na dyskusje i słuchanie nowych wieści.
ಅಲ್ಲಿ ನೆಲೆಸಿದ್ದ ಅಥೇನೆಯ ನಿವಾಸಿಗಳೂ ವಿದೇಶಿಯರೂ ಹೊಸ ಹೊಸ ವಿಷಯಗಳನ್ನು ಹೇಳುವುದಕ್ಕೂ ಕೇಳುವುದಕ್ಕೂ ಹೊರತು ಇತರ ವಿಷಯಗಳಲ್ಲಿ ಸಮಯ ಕಳೆಯುತ್ತಿರಲಿಲ್ಲ.
22 Paweł stanął więc pośrodku Areopagu i przemówił: —Ateńczycy! Zauważyłem, że jesteście bardzo religijni.
ಅರಿಯೊಪಾಗದ ಗುಂಪಿನ ಮುಂದೆ ನಿಂತು ಪೌಲನು ಹೀಗೆಂದನು: “ಅಥೇನೆಯ ಜನರೇ! ನೀವು ಪ್ರತಿಯೊಂದರಲ್ಲಿಯೂ ಹೇಗೆ ಬಹು ಧಾರ್ಮಿಕರಾಗಿದ್ದೀರಿ ಎಂಬುದನ್ನು ನಾನು ಕಂಡುಕೊಂಡಿದ್ದೇನೆ.
23 Spacerując po mieście i oglądając wasze ołtarze, natknąłem się nawet na ołtarz poświęcony „Nieznanemu Bogu”. Właśnie o tym Bogu, którego czcicie nie znając Go, chcę wam dziś opowiedzieć.
ನಾನು ಸುತ್ತಮುತ್ತಲೂ ತಿರುಗಾಡುತ್ತಾ, ನಿಮ್ಮ ಆರಾಧನಾ ವಿಗ್ರಹಗಳನ್ನು ಲಕ್ಷ್ಯವಿಟ್ಟು ಗಮನಿಸಿದಾಗ, ‘ತಿಳಿಯದ ದೇವರಿಗೆ’ ಎಂಬ ಬರಹವಿದ್ದ ಬಲಿಪೀಠವನ್ನು ನೋಡಿದೆನು. ಆದ್ದರಿಂದ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿರುವಿರೋ ಅದನ್ನೇ ನಾನು ನಿಮಗೆ ಪ್ರಕಟಿಸುತ್ತೇನೆ.
24 On stworzył cały świat i wszystko, co na nim istnieje. Jest Panem nieba i ziemi, więc nie mieszka w ziemskich świątyniach!
“ಜಗತ್ತನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಲೋಕಗಳ ಅಧಿಪತಿಯಾಗಿದ್ದಾರೆ. ಅವರು ಕೈಗಳಿಂದ ಕಟ್ಟಿದ ದೇವಾಲಯಗಳಲ್ಲಿ ವಾಸಿಸುವವರಲ್ಲ.
25 On nie potrzebuje żadnej pomocy od ludzi, bo to On sam daje nam życie, sprawia, że oddychamy, i obdarza nas wszystkim, czego potrzebujemy.
ದೇವರಿಗೆ ಏನಾದರೂ ಅವಶ್ಯಕತೆಯಿರುವಂತೆ ಮಾನವ ಹಸ್ತಗಳ ಸೇವೆಯು ಅಗತ್ಯವಿರುವುದಿಲ್ಲ. ದೇವರೇ ಎಲ್ಲರಿಗೂ ಜೀವವನ್ನೂ ಉಸಿರನ್ನೂ ಪ್ರತಿಯೊಂದನ್ನೂ ದಯಪಾಲಿಸಿರುವುದರಿಂದ,
26 To dzięki Niemu wszyscy ludzie na świecie wzięli początek od jednego człowieka. On też rozmieścił na całej ziemi narody, wyznaczając im czas i miejsce.
ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ.
27 Uczynił tak, aby ludzie szukali Go, choćby po omacku, i znajdowali—bo On jest blisko każdego z nas.
ದೇವರು ನಮ್ಮಲ್ಲಿ ಯಾರಿಂದಲೂ ದೂರವಾಗಿಲ್ಲವಾದರೂ ದೇವರನ್ನು ನಾವು ಅಪೇಕ್ಷಿಸುವಂತೆ ನಾವು ದೇವರನ್ನು ಹುಡುಕಿ ಕಂಡುಕೊಳ್ಳುವಂತೆ ಹೀಗೆ ಮಾಡಿದರು.
28 W Nim bowiem istniejemy, żyjemy i poruszamy się! Jak to ujął jeden z waszych poetów: „Jesteśmy z Jego rodu”.
ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ದೇವರಲ್ಲಿಯೇ.’ ನಿಮ್ಮ ಕವಿಗಳಲ್ಲಿ ಕೆಲವರು ಹೇಳಿರುವಂತೆ, ‘ನಾವು ನಿಜಕ್ಕೂ ದೇವರ ಮಕ್ಕಳೇ ಆಗಿದ್ದೇವೆ.’
29 A skoro jesteśmy z rodu Boga, nie powinniśmy sądzić, że jest On podobny do bożka ze złota, srebra lub kamienia, wykonanego według ludzkiego pomysłu.
“ನಾವು ದೇವರ ಮಕ್ಕಳಾಗಿರುವುದರಿಂದ, ಮಾನವ ಕಲ್ಪನೆ, ಕುಶಲತೆಯಿಂದ ರೂಪಿಸಿದ ಬೆಳ್ಳಿ, ಬಂಗಾರ, ಶಿಲೆಯ ಮೂರ್ತಿಯಂತೆ ದೇವರು ಇದ್ದಾರೆಂದು ನಾವು ಭಾವಿಸಬಾರದು.
30 Bóg dotychczas znosił ludzką niewiedzę, ale teraz wzywa wszystkich do opamiętania się,
ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ.
31 ponieważ wyznaczył już dzień, w którym sprawiedliwie osądzi cały świat. Uczyni to przez Człowieka, którego wybrał i uwiarygodnił przez wskrzeszenie Go z martwych.
ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.”
32 Gdy zebrani usłyszeli o zmartwychwstaniu umarłych, jedni zaczęli się z tego śmiać, a inni powiedzieli: —Wiesz, chyba jednak posłuchamy cię innym razem.
ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ, ಅವರಲ್ಲಿ ಕೆಲವರು ಪರಿಹಾಸ್ಯ ಮಾಡಿದರು. ಇತರರು, “ನಾವು ಇನ್ನೊಮ್ಮೆ ಈ ವಿಷಯದ ಮೇಲೆ ನೀನು ಮಾತನಾಡುವುದನ್ನು ಕೇಳುತ್ತೇವೆ,” ಎಂದರು.
33 Wtedy Paweł opuścił Areopag.
ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.
34 Lecz kilka osób uwierzyło i przyłączyło się do niego. Wśród nich byli: Dionizy, członek rady Areopagu, oraz kobieta imieniem Damaris.
ಆದರೆ ಕೆಲವರು ಪೌಲನನ್ನು ಅಂಟಿಕೊಂಡು ದೇವರಲ್ಲಿ ವಿಶ್ವಾಸವನ್ನಿಟ್ಟರು. ಅವರಲ್ಲಿ ಅರಿಯೊಪಾಗದ ದಿಯೊನುಸ್ಯನು ಮತ್ತು ದಾಮರಿ ಎಂಬ ಹೆಸರಿನ ಒಬ್ಬ ಮಹಿಳೆ ಹಾಗೂ ಇನ್ನಿತರರೂ ಇದ್ದರು.