< Dzieje 6 >
1 Wraz z szybkim wzrostem liczby uczniów podnosiły się głosy niezadowolenia. Ci, którzy mówili po grecku, narzekali, że wierzący, którzy mówili po hebrajsku, pomijają ich wdowy przy codziennym podziale żywności dla potrzebujących.
ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು.
2 Wtedy Dwunastu zwołało wszystkich uczniów i rzekło: —Nie byłoby to właściwe, gdybyśmy zaniedbali głoszenie słowa Bożego, a zajęli się rozdzielaniem żywności.
ಆದ್ದರಿಂದ ಆ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಸೇರಿಸಿ, “ನಾವು ದೇವರ ವಾಕ್ಯ ಬೋಧಿಸುವ ಸೇವೆಯನ್ನು ಕಡೆಗಣಿಸಿ, ಆಹಾರ ವಿತರಣೆಗಾಗಿ ಸಮಯ ಕಳೆಯುತ್ತಿರುವುದು ಸರಿಯಲ್ಲ.
3 Rozejrzyjcie się więc, drodzy przyjaciele, i wybierzcie spośród siebie siedmiu zaufanych, mądrych i napełnionych Duchem Świętym mężczyzn. Im zlecimy to zajęcie.
ಸಹೋದರರೇ, ನಿಮ್ಮಲ್ಲಿ ಪವಿತ್ರಾತ್ಮಭರಿತರೂ ಜ್ಞಾನವಂತರೂ ಎಂದು ಸಾಕ್ಷಿ ಹೊಂದಿರುವ ಏಳು ಜನರನ್ನು ಆಯ್ಕೆ ಮಾಡಿರಿ. ನಾವು ಅವರನ್ನು ಈ ಕಾರ್ಯಕ್ಕಾಗಿ ನೇಮಿಸುವೆವು.
4 My zaś całkowicie poświęcimy się modlitwie i głoszeniu słowa Bożego.
ನಾವಾದರೋ ಪ್ರಾರ್ಥನೆ ಮಾಡುವುದರಲ್ಲಿಯೂ ದೇವರ ವಾಕ್ಯ ಬೋಧಿಸುವುದರಲ್ಲಿಯೂ ನಿರತರಾಗಿರುವೆವು,” ಎಂದು ಹೇಳಿದರು.
5 Wszystkim spodobała się ta propozycja. Wybrali więc Szczepana—człowieka o wyjątkowej wierze i pełnego Ducha Świętego, Filipa, Prochora, Nikanora, Tymona, Parmenasa i Mikołaja z Antiochii, który wcześniej był poganinem nawróconym na judaizm.
ಈ ಮಾತು ಇಡೀ ಸಮೂಹಕ್ಕೆ ಮೆಚ್ಚುಗೆಯಾಯಿತು. ಅವರು ಪೂರ್ಣನಂಬಿಕೆಯುಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೆಫನನ್ನು ಆರಿಸಿಕೊಂಡರು; ಅಲ್ಲದೆ ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮಾರ್ಗ ಅನುಸರಿಸುತ್ತಿದ್ದ ಅಂತಿಯೋಕ್ಯದ ನಿಕೊಲಾಯನನ್ನು ಆಯ್ಕೆಮಾಡಿದರು.
6 Przedstawiono ich apostołom, ci zaś modlili się za nich i posłali ich do tej służby, kładąc na nich ręce.
ಇವರನ್ನು ಅಪೊಸ್ತಲರ ಮುಂದೆ ತಂದು ನಿಲ್ಲಿಸಿದರು. ಅವರು ಪ್ರಾರ್ಥನೆಮಾಡಿ ಅವರ ಮೇಲೆ ತಮ್ಮ ಹಸ್ತಗಳನ್ನಿಟ್ಟು ನೇಮಿಸಿದರು.
7 Tymczasem wpływ słowa Bożego był coraz większy i liczba uczniów w Jerozolimie szybko wzrastała i nawet wielu kapłanów przyjmowało wiarę w Jezusa.
ದೇವರ ವಾಕ್ಯವು ಅಭಿವೃದ್ಧಿಯಾಗುತ್ತಾ ಬಂತು. ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು. ಯಾಜಕರಲ್ಲಿಯೂ ಅನೇಕ ಜನರು ನಂಬಿಕೆಗೆ ವಿಧೇಯರಾದರು.
8 Szczepan, jeden z Siedmiu, człowiek obdarzony przez Boga szczególną łaską i mocą, dokonywał na oczach ludzi wielkich cudów.
ದೇವರ ಕೃಪೆಯಿಂದಲೂ ಶಕ್ತಿಯಿಂದಲೂ ತುಂಬಿದ್ದ ಸ್ತೆಫನನಿಂದ ಜನರಲ್ಲಿ ಮಹಾ ಅದ್ಭುತಗಳೂ ಸೂಚಕಕಾರ್ಯಗಳೂ ನಡೆದವು.
9 Ale niektórzy członkowie Synagogi Wyzwolonych—byłych niewolników, pochodzących z Cyreny, Aleksandrii, Cylicji oraz Azji—chcieli go skompromitować w dyskusji.
ಆದರೆ, “ಬಿಡುಗಡೆ ಹೊಂದಿದವರು” ಎಂಬ ಯೆಹೂದ್ಯ ಸಭಾಮಂದಿರಕ್ಕೆ ಸೇರಿದವರಿಂದ ವಿರೋಧ ಉಂಟಾಯಿತು. ಅವರು ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಮತ್ತು ಏಷ್ಯಾ ಪ್ರಾಂತಗಳಿಂದ ಬಂದ ಯೆಹೂದ್ಯರಾಗಿದ್ದರು. ಅವರು ಸ್ತೆಫನನೊಂದಿಗೆ ತರ್ಕಿಸುವುದಕ್ಕೆ ಪ್ರಾರಂಭಿಸಿದರು.
10 Nie byli jednak w stanie dorównać jego mądrości i Duchowi, pod wpływem którego Szczepan przemawiał.
ಆದರೆ ಅವನು ಜ್ಞಾನದಿಂದಲೂ ಪವಿತ್ರಾತ್ಮ ದೇವರಿಂದಲೂ ಮಾತನಾಡಿದ್ದರಿಂದ ಅವರಿಗೆ ಅವನನ್ನು ಎದುರಿಸಲು ಸಾಧ್ಯವಾಗಲಿಲ್ಲ.
11 Podstawili więc fałszywych świadków, którzy zeznali: —Słyszeliśmy, jak ten człowiek przeklinał Mojżesza i Boga.
ಆಗ ಅವರು, “ಇವನು ಮೋಶೆಗೂ ದೇವರಿಗೂ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುವುದನ್ನು ನಾವು ಕೇಳಿದ್ದೇವೆ,” ಎಂದು ಕೆಲವರಿಗೆ ಲಂಚಕೊಟ್ಟು ಹೇಳುವಂತೆ ರಹಸ್ಯವಾಗಿ ಮನವೊಲಿಸಿದರು.
12 W ten sposób zbuntowali przeciwko Szczepanowi cały tłum ludzi oraz starszych i przywódców religijnych. Następnie aresztowali go i postawili przed Wysoką Radą.
ಹೀಗೆ ಅವರು ಜನರನ್ನೂ ಹಿರಿಯರನ್ನೂ ನಿಯಮ ಬೋಧಕರನ್ನೂ ಪ್ರಚೋದಿಸಿ ಸ್ತೆಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ತಂದು ನಿಲ್ಲಿಸಿದರು.
13 Wtedy świadkowie ponownie fałszywie zeznali: —Ten człowiek nie przestaje wypowiadać się przeciwko świątyni i Prawu Mojżesza.
ಸುಳ್ಳುಸಾಕ್ಷಿಗಳನ್ನು ಹಾಜರುಪಡಿಸಿ, “ಈ ಮನುಷ್ಯನು ಈ ಪವಿತ್ರಸ್ಥಳಕ್ಕೂ ಮೋಶೆಯ ನಿಯಮಕ್ಕೂ ವಿರೋಧವಾಗಿ ಮಾತನಾಡುತ್ತಲೇ ಇದ್ದಾನೆ.
14 Słyszeliśmy nawet, jak mówił, że Jezus z Nazaretu zburzy świątynię i zmieni zwyczaje, przekazane nam przez Mojżesza.
ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿಬಿಡುತ್ತಾರೆಂದೂ ನಮಗೆ ಒಪ್ಪಿಸಿದ ಮೋಶೆಯ ಪದ್ಧತಿಗಳನ್ನು ಬದಲಾಯಿಸುತ್ತಾರೆಂದೂ ಇವನು ಹೇಳುವುದನ್ನು ನಾವು ಕೇಳಿದ್ದೇವೆ,” ಎಂದು ಅವನ ವಿರುದ್ಧ ಸಾಕ್ಷಿ ಹೇಳಿಸಿದರು.
15 W tym momencie wszyscy zgromadzeni skierowali wzrok na Szczepana, jego twarz była bowiem podobna do twarzy anioła.
ನ್ಯಾಯಸಭೆಯಲ್ಲಿ ಕುಳಿತುಕೊಂಡಿದ್ದವರೆಲ್ಲರೂ ಸ್ತೆಫನನ ಮುಖವನ್ನೇ ದಿಟ್ಟಿಸಿ ನೋಡುತ್ತಿದ್ದರು. ಅವನ ಮುಖವು ದೇವದೂತನ ಮುಖದಂತೆ ಕಾಣಿಸುತ್ತಿತ್ತು.