< Objawienie 14 >

1 Potem zobaczyłem Baranka, stojącego na górze Syjon, a wraz z nim—sto czterdzieści cztery tysiące tych, którzy mają wypisane na czołach Jego imię oraz imię Ojca.
ಆನಂತರ ನಾನು ನೋಡಲಾಗಿ ಯಜ್ಞದ ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವುದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.
2 Usłyszałem też z nieba odgłos podobny do huku wielkiego wodospadu lub potężnego grzmotu. Brzmiał on jak dźwięk muzyki granej przez wielu harfiarzy.
ಇದಲ್ಲದೆ ಪರಲೋಕದಿಂದ ಜಲಪ್ರವಾಹದ ಘೋಷದಂತೆಯೂ ದೊಡ್ಡ ಗುಡುಗಿನ ಶಬ್ದದಂತೆಯೂ ಇದ್ದ ಮಹಾಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ವೀಣೆಗಳನ್ನು ನುಡಿಸಿಕೊಂಡು ಹಾಡುತ್ತಿರುವ ವೀಣೆಗಾರರ ಶಬ್ದದಂತಿತ್ತು.
3 I usłyszałem nową pieśń, śpiewaną przed tronem Boga, przed czterema istotami i przed starszymi. Nikt oprócz stu czterdziestu czterech tysięcy, uratowanych przez Boga z ziemi, nie mógł nauczyć się tej pieśni.
ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
4 Ludzie ci, za życia na ziemi, trzymali się z dala od rozwiązłości seksualnej i są bez skazy—zawsze okazują posłuszeństwo Barankowi. Zostali uratowani z ziemi i są szczególnie cenni dla Boga i Baranka.
ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.
5 Z ich ust nigdy nie wyszło żadne kłamstwo—są nienaganni!
ಇವರ ಬಾಯಲ್ಲಿ ಸುಳ್ಳು ಇರಲೇ ಇಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.
6 Następnie zobaczyłem anioła: leciał środkiem nieba i miał ogłosić mieszkańcom ziemi wieczną dobrą nowinę—miał dotrzeć z nią do każdego narodu, plemienia, języka i ludu. (aiōnios g166)
ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು. (aiōnios g166)
7 Potężnym głosem wołał on: „Nadszedł czas Bożego sądu! Okażcie więc respekt Bogu i oddajcie cześć Temu, który stworzył niebo, lądy, morza i wszystkie źródła wód!”.
ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.
8 Zaraz po nim pojawił się inny anioł, wołający: „Upadł wielki Babilon, który upajał wszystkie narody świata swoją rozwiązłością!”.
ಅವನ ಹಿಂದೆ ಎರಡನೆಯ ದೇವದೂತನು ಬಂದು, “ಬಿದ್ದಳು! ಬಿದ್ದಳು! ಬಾಬೆಲೆಂಬ ಮಹಾನಗರಿಯು ಬಿದ್ದಳು, ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು” ಎಂದು ಹೇಳಿದನು.
9 Za nim pojawił się trzeci anioł. Potężnym głosem wołał on: „Ci, którzy pokłonią się bestii i jej posągowi oraz przyjmą jej znak na rękę lub czoło,
ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ,
10 doświadczą Bożego gniewu i nie będzie dla nich litości! Na oczach świętych aniołów oraz Baranka będą cierpieć w ogniu i siarce.
೧೦ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.
11 Dym z palącego ich ognia będzie się unosił na wieki, będą oni bowiem cierpieć dzień i noc, bez chwili wytchnienia. Taka kara spotka ludzi, którzy oddali cześć bestii i jej posągowi oraz przyjęli znak jej imienia!”. (aiōn g165)
೧೧ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು. (aiōn g165)
12 Niech te słowa zachęcają świętych do wytrwałości, posłuszeństwa Bożym przykazaniom i zaufania Jezusowi.
೧೨ಇದರಲ್ಲಿ ದೇವರ ಆಜ್ಞೆಗಳನ್ನೂ, ಯೇಸುವಿನ ಬಗ್ಗೆ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ಇಲ್ಲಿ ತೋರಿಬರಬೇಕಾಗಿದೆ.
13 Potem usłyszałem głos z nieba: —Zapisz te słowa: „Szczęśliwi ci, którzy umierają, wierząc Panu. Duch Święty potwierdza, że odpoczną oni po swojej ciężkiej pracy i otrzymają nagrodę za to, czego dokonali, żyjąc na ziemi”.
೧೩ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.
14 Następnie zobaczyłem biały obłok, na którym siedział ktoś, kto wyglądał jak Syn Człowieczy. Na głowie miał złoty wieniec, a w dłoni trzymał ostry sierp.
೧೪ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.
15 Wtedy ze świątyni wyszedł anioł i głośno zawołał do Tego, który siedział na obłoku: „Ziemia dojrzała już do żniwa, zacznij więc zbiory!”.
೧೫ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು.
16 Wówczas Ten, który siedział na obłoku, zebrał z niej plon.
೧೬ಮೇಘದ ಮೇಲೆ ಕುಳಿತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು. ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು.
17 Wtedy wyszedł ze świątyni inny anioł—on również trzymał w ręku ostry sierp.
೧೭ಮತ್ತೊಬ್ಬ ದೇವದೂತನು ಪರಲೋಕದಲ್ಲಿರುವ ದೇವಾಲಯದೊಳಗಿನಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು.
18 Od strony ołtarza nadszedł wtedy następny anioł, mający władzę nad ogniem. Głośno zawołał on do anioła trzymającego sierp: „Zbierz z ziemi grona winorośli, bo już dojrzały i są gotowe na sąd!”.
೧೮ತರುವಾಯ ಬೆಂಕಿಯ ಮೇಲೆ ಅಧಿಕಾರ ಹೊಂದಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷಿಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರಾ ಮಾಗಿವೆ” ಎಂದು ಮಹಾಧ್ವನಿಯಿಂದ ಕೂಗಿದನು.
19 Wówczas anioł, który miał w dłoni sierp, zebrał z ziemi grona i wsypał je do wielkiej tłoczni Bożego gniewu.
೧೯ಆಗ ಆ ದೂತನು ತನ್ನ ಕುಡುಗೋಲಿನಿಂದ ಭೂಮಿಯ ಮೇಲಿನ ದ್ರಾಕ್ಷಿಬಳ್ಳಿಯಲ್ಲಿದ್ದ ದ್ರಾಕ್ಷಿಹಣ್ಣನ್ನು ಕೊಯ್ದು ಕೂಡಿಸಿ, ದೇವರ ರೌದ್ರವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಹಾಕಿದನು.
20 Tłocznia ta znajdowała się poza miastem. Gdy wyciśnięto grona, wypłynęła z niej rzeka krwi—miała ona trzysta kilometrów długości i była tak głęboką, że sięgała wędzideł koni.
೨೦ಆಗ ಆಲೆಯನ್ನು ಪಟ್ಟಣದ ಹೊರಗೆ ತೆಗೆದುಕೊಂಡು ಹೋಗಿ ತುಳಿದರು. ಆ ಆಲೆಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಮೇಲಕ್ಕೆ ಬಂದು ಮುನ್ನೂರು ಕಿಲೋಮೀಟರಿನಷ್ಟು ದೂರ ಹರಿಯಿತು.

< Objawienie 14 >