< Objawienie 18 >

1 Po tym wszystkim zobaczyłem innego anioła, zstępującego z nieba. Posiadał on ogromną władzę, a jego blask rozjaśnił całą ziemię.
ಇದಾದನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಕೆಳಗೆ ಇಳಿದು ಬರುವುದನ್ನು ಕಂಡೆನು. ಅವನ ತೇಜಸ್ಸಿನಿಂದ ಭೂಮಿಯು ಬೆಳಗಿತು.
2 Donośnym głosem zawołał on: „Upadł potężny Babilon” i stał się mieszkaniem demonów, siedliskiem złych duchów oraz schronieniem nieczystych ptaków i zwierząt.
ಅವನು ಮಹಾಧ್ವನಿಯಿಂದ: “‘ಬಿದ್ದಳು! ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ದೆವ್ವಗಳಿಗೆ ವಾಸಸ್ಥಾನವೂ ಎಲ್ಲಾ ದುರಾತ್ಮಗಳಿಗೂ ಅಶುದ್ಧವಾದ ಹಾಗೂ ಅಸಹ್ಯವಾದ ಪ್ರತಿಯೊಂದು ಪ್ರಾಣಿಪಕ್ಷಿಗಳಿಗೂ ನಿವಾಸವಾಗಿದ್ದಾಳೆ.
3 Miasto to było bowiem prostytutką, która upajała mieszkańców ziemi rozwiązłością. Grzeszyli z nią władcy całego świata, a ludzie interesu zdobyli majątek, dzięki jej wielkiemu przepychowi.
ಏಕೆಂದರೆ ಎಲ್ಲಾ ದೇಶಗಳೂ ಆಕೆಯ ಜಾರತ್ವಗಳೆಂಬ ಅತ್ಯಾಸಕ್ತಿಯ ದ್ರಾಕ್ಷಾರಸವನ್ನು ಕುಡಿದಿವೆ. ಭೂಲೋಕದ ಅರಸರು ಆಕೆಯೊಂದಿಗೆ ವ್ಯಭಿಚಾರ ಮಾಡಿದರು, ಭೂಲೋಕದ ವರ್ತಕರು ಆಕೆಯ ಭೋಗ ವಸ್ತುಗಳಿಂದ ಸಿರಿವಂತರಾದರು,” ಎಂದು ಕೂಗಿದನು.
4 Następnie usłyszałem jeszcze inny głos, wołający z nieba: „Wy, którzy należycie do Boga, musicie wyjść z tego miasta”, aby nie mieć udziału w jego grzechach i nie doświadczyć spadających na nie klęsk.
ಅನಂತರ ಪರಲೋಕದಿಂದ ಇನ್ನೊಂದು ಧ್ವನಿಯು: “‘ನನ್ನ ಜನರೇ, ಆಕೆಯನ್ನು ಬಿಟ್ಟು ಬನ್ನಿರಿ, ನೀವು ಆಕೆಯ ಪಾಪಗಳಲ್ಲಿ ಪಾಲುಗಾರರಾಗಬಾರದು, ಆಕೆಯ ಉಪದ್ರವಗಳಿಗೆ ಗುರಿಯಾಗಬಾರದು.’
5 Gdyby grzechy Babilonu ułożono na stosie, sięgnęłyby bowiem aż do nieba —Bóg widzi całe jego zło!
ಏಕೆಂದರೆ ಆಕೆಯ ಪಾಪಗಳು ಒಂದಕ್ಕೊಂದು ಸೇರಿ ಆಕಾಶದಷ್ಟಾಗಿವೆ. ದೇವರು ಆಕೆಯ ಅಪರಾಧಗಳನ್ನು ಜ್ಞಾಪಿಸಿಕೊಂಡಿದ್ದಾರೆ.
6 Postąpcie z tym miastem tak, jak ono postępowało z wami, a nawet wymierzcie mu podwójna karę. Niech wypije dwukrotnie więcej niż ci, których wcześniej upajało.
ಆಕೆಯು ನಿಮಗೆ ಕೊಟ್ಟಿದ್ದಕ್ಕೆ ಸರಿಯಾಗಿ ಹಿಂದಕ್ಕೆ ಕೊಡಿರಿ. ಕೃತ್ಯಗಳಿಗೆ ಸರಿಯಾಗಿ ಎರಡರಷ್ಟು ಅವಳಿಗೆ ಕೊಡಿರಿ. ಆಕೆಯ ಬಟ್ಟಲಿನಿಂದಲೇ ಎರಡರಷ್ಟು ಆಕೆಗೆ ಕಲಸಿ ಕೊಡಿರಿ.
7 Dotychczas żyło w luksusie i używało przyjemności, teraz więc odpłaćcie mu cierpieniem i bólem. Myślało sobie bowiem w sercu, że zawsze będzie żyć jak królowa i nigdy nie zazna smutku ani cierpienia.
ಆಕೆಯು ಯಾವುದರಿಂದ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಳೋ ಅದಕ್ಕೆ ತಕ್ಕಂತೆ ನೀವು ಆಕೆಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಏಕೆಂದರೆ ಆಕೆ ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ. ನಾನು ವಿಧವೆಯಲ್ಲ, ಎಂದೆಂದಿಗೂ ದುಃಖಿಸುವುದಿಲ್ಲ!’ ಎಂದುಕೊಳ್ಳುತ್ತಾಳೆ.
8 Dlatego jednego dnia spadną na to miasto wszystkie klęski: ból, głód oraz śmierć. I pochłonie je ogień! Pan, który je osądzi, jest potężnym Bogiem!
ಆದ್ದರಿಂದ ಒಂದೇ ದಿನದಲ್ಲಿ ಆಕೆಯ ಉಪದ್ರವಗಳಾಗಿರುವ ಮರಣ, ಗೋಳಾಟ ಮತ್ತು ಕ್ಷಾಮವು ಬರುವುವು. ಆಕೆಯನ್ನು ತೀರ್ಪುಮಾಡುವ ಕರ್ತದೇವರು ಶಕ್ತರಾಗಿರುವುದರಿಂದ ಆಕೆಯು ಬೆಂಕಿಯಿಂದ ನಾಶವಾಗುವಳು.”
9 Władcy świata, którzy uczestniczyli w rozwiązłości tego miasta i czerpali z tego przyjemność, zapłakali i pogrążyli się w smutku, widząc unoszący się nad nim dym.
“ಆಕೆಯೊಂದಿಗೆ ಜಾರತ್ವ ಮಾಡಿರುವ ಭೂರಾಜರು, ಆಕೆಯ ದಹನದಿಂದ ಏರುವ ಹೊಗೆಯನ್ನು ಕಂಡಾಗೆಲ್ಲಾ ಆಕೆಗಾಗಿ ಅಳುತ್ತಾ ಗೋಳಾಡುವರು.
10 Patrząc z daleka, przejęci i przerażeni losem Babilonu, zawołali: „To straszne, co spotkało Babilon! Tak wielkie nieszczęście w jednej chwili spadło na to potężne miasto!”.
ಆಕೆಯ ಯಾತನೆಯ ದೆಸೆಯಿಂದ ಹೆದರಿ, ದೂರದಲ್ಲಿ ನಿಂತು: “‘ಅಯ್ಯೋ! ಅಯ್ಯೋ! ಮಹಾನಗರಿಯೇ, ಬಲಿಷ್ಠನಗರಿ ಬಾಬಿಲೋನೇ! ಒಂದೇ ತಾಸಿನಲ್ಲಿ ನಿನಗೆ ತೀರ್ಪಾಯಿತಲ್ಲಾ?’ ಎಂದು ಶೋಕಿಸುವರು.
11 Nad losem Babilonu ubolewali również handlowcy z całego świata, ponieważ stracili zbyt na swoje towary:
“ಭೂಮಿಯ ವರ್ತಕರು ಆಕೆಗಾಗಿ ದುಃಖಿಸಿ ಗೋಳಾಡುತ್ತಾ ತಮ್ಮ ಸರಕು ಸಾಮಗ್ರಿಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ದುಃಖಿಸುವರು.
12 złoto, srebro, kamienie szlachetne, perły, czysty len, purpurę, jedwab, szkarłat, pachnące drewno, wyroby z kości słoniowej oraz szlachetnego drewna, brązu, stali i marmuru.
ಅವರ ಸರಕುಗಳಾದ ಚಿನ್ನ, ಬೆಳ್ಳಿ, ಬೆಲೆಬಾಳುವ ಕಲ್ಲು ಹಾಗೂ ಮುತ್ತುಗಳು, ನಯವಾದ ನಾರುಮಡಿ, ಕಡುಗೆಂಪು ವಸ್ತ್ರ, ರೇಷ್ಮೆ, ಊದಾವರ್ಣದ ವಸ್ತ್ರ, ಅಗಿಲು ಮರ ಮತ್ತು ದಂತ ಪಾತ್ರೆಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ,
13 Babilon nie będzie już kupować wyszukanych przypraw oraz perfum, mirry, kadzidła, wina, oliwy, najlepszej mąki i zboża, bydła, owiec, koni, wozów oraz ludzkich ciał i dusz.
ಸರಕುಗಳಾದ ದಾಲ್ಚಿನ್ನಿ ಮತ್ತು ಮಸಾಲೆ, ಧೂಪ, ಸುಗಂಧ ತೈಲ, ರಕ್ತಬೋಳ, ದ್ರಾಕ್ಷಾರಸ ಮತ್ತು ಓಲಿವ್ ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು ಮತ್ತು ಕುರಿಗಳು, ಕುದುರೆಗಳು, ವಾಹನಗಳು, ಗುಲಾಮರು ಹಾಗೂ ಮನುಷ್ಯರು ಇವುಗಳನ್ನೆಲ್ಲಾ ಆ ವರ್ತಕರು ಅವಳಿಗೆ ಮಾರುತ್ತಿದ್ದರು.
14 Płacząc nad Babilonem, powiedzieli: „To, co tak bardzo kochałeś, przeminęło. Zniknął już bowiem otaczający cię splendor i luksus—wszystko to bezpowrotnie przepadło!”.
“ನೀನು ಬಯಸಿದ ನಿನ್ನ ಪ್ರಾಣ ಫಲವು ನಿನ್ನಿಂದ ತೊಲಗಿಹೋಗಿದೆ. ನಿನ್ನ ಎಲ್ಲಾ ವೈಭವವು ಹಾಗೂ ನಿನ್ನ ಶೋಭೆಯ ಸೊಗಸುಗಳೆಲ್ಲಾ ನಿನ್ನಿಂದ ನಾಶವಾದವು. ಅವರು ಅವುಗಳನ್ನು ಇನ್ನೆಂದೂ ಕಾಣಲಾರರು.
15 Ludzie, którzy—dzięki handlowi z Babilonem—zdobyli majątek, stanęli z daleka, przerażeni jego cierpieniem. Płacząc i rozpaczając nad jego losem, powiedzieli:
ಆಕೆಯಿಂದ ಸಿರಿವಂತರಾದ ಆ ಸರಕುಗಳ ವರ್ತಕರು ದೂರದಲ್ಲಿ ನಿಂತು ಆಕೆಯ ಯಾತನೆಯ ದೆಸೆಯಿಂದ ಭಯಪಟ್ಟು, ದುಃಖಿಸಿ,
16 „To straszne, co spotkało to potężne miasto! Nosiło ono najlepsze ubrania, z czystego lnu, purpury i szkarłatu, oraz biżuterię ze złota, szlachetnych kamieni i pereł.
“‘ಅಯ್ಯೋ! ಅಯ್ಯೋ! ಶೋಕಭರಿತ ಮಹಾನಗರಿಯೇ, ನೀನು ನೇರಳೆ, ಕಡುಗೆಂಪು ನಾರುಮಡಿಯನ್ನು ಧರಿಸಿ, ಚಿನ್ನ, ಬೆಲೆಬಾಳುವ ಕಲ್ಲು ಮತ್ತು ಮುತ್ತುಗಳಿಂದ ಬೆಳಗುತ್ತಿದ್ದೆ.
17 Bogactwo to przepadło jednak w jednej chwili”. Armatorzy, kapitanowie i załogi okrętów oraz wszyscy inni, którzy zarabiali na transporcie morskim, z daleka
ಒಂದೇ ತಾಸಿನಲ್ಲಿ ಅಂಥ ಮಹಾ ಐಶ್ವರ್ಯವು ನಾಶವಾಗಿ ಹೋಯಿತಲ್ಲಾ?’” ಎಂದು ಗೋಳಾಡುವರು. “ಪ್ರತಿಯೊಂದು ಹಡಗಿನ ಮಾಲೀಕರು ಮತ್ತು ಹಡಗು ಪಯಣಿಗರು, ನಾವಿಕರು ಮತ್ತು ಸಮುದ್ರದಿಂದ ತಮ್ಮ ಜೀವನೋಪಾಯ ಮಾಡುವವರೆಲ್ಲರೂ ದೂರದಲ್ಲಿ ನಿಂತು
18 obserwowali pożar Babilonu i dym wznoszący się nad miastem. Poruszeni tym widokiem, wołali: „Czy jakieś inne miasto na świecie jest podobne do potężnego Babilonu?”.
ಆಕೆಯ ದಹನದ ಹೊಗೆಯನ್ನು ನೋಡಿ, ‘ಈ ಮಹಾಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಕೂಗುವರು.
19 Posypywali głowy popiołem i zrozpaczeni krzyczeli: „To straszne, co spotkało to potężne miasto! Wszyscy armatorzy zdobyli majątek dzięki jego wielkiemu bogactwu, a teraz, w ciągu jednej chwili, wszystko to zostało zniszczone!”.
ಆಗ ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು ಅಳುತ್ತಾ ದುಃಖಿಸುತ್ತಾ ಹೀಗೆ ಕೂಗುವರು: “‘ಅಯ್ಯೋ! ಅಯ್ಯೋ! ದುಃಖಭರಿತ ಮಹಾನಗರಿಯೇ, ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಆಕೆಯ ವೈಭವದಿಂದಲೇ ಐಶ್ವರ್ಯವಂತರಾದರಲ್ಲಾ! ಒಂದು ತಾಸಿನಲ್ಲಿ ಆಕೆ ಹಾಳಾದಳಲ್ಲಾ?’
20 „Dla mieszkańców nieba, dla świętych, proroków i apostołów był to jednak powód do radości, Bóg ukarał bowiem tych, którzy ich skrzywdzili”.
“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”
21 Wtedy potężny anioł podniósł wielki głaz, ogromny jak młyńskie koło, i rzucił go w morze, wołając: „Tak właśnie zostanie strącony potężny Babilon i to będzie jego koniec!
ಅನಂತರ ಒಬ್ಬ ಬಲಿಷ್ಠನಾದ ದೂತನು, ಬೀಸುವ ಕಲ್ಲಿನಷ್ಟಿರುವ ದೊಡ್ಡ ಕಲ್ಲೊಂದನ್ನು ತೆಗೆದುಕೊಂಡು ಅದನ್ನು ಸಮುದ್ರದೊಳಗೆ ಬಿಸಾಡಿ: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಬಲಾತ್ಕಾರದಿಂದ ಕೆಡವಲಾಗಿ ಎಂದಿಗೂ ಕಾಣಿಸದು.
22 W mieście tym nie usłyszy się już śpiewu ani dźwięki harfy, fletu czy trąbki. Nikt już nie będzie tam prowadził interesów. Nie usłyszy się tam nawet odgłosu mielenia ziarna.
ಬಾಬಿಲೋನೇ, ನಿನ್ನಲ್ಲಿ ಮತ್ತೆ ತಂತಿವಾದ್ಯ ನುಡಿಸುವವರು, ಸಂಗೀತಗಾರರು, ಕೊಳಲೂದುವವರು, ತುತೂರಿಯವರು, ಮಾಡುವ ಧ್ವನಿ ಎಂದೂ ಕೇಳಿಸದು. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಎಂದೂ ಕಂಡುಬಾರನು. ಬೀಸುವ ಕಲ್ಲಿನ ಶಬ್ದವು, ನಿನ್ನಲ್ಲಿ ಎಂದೂ ಕೇಳಿಸದು.
23 Nie zabłyśnie tam już żadne światło ani nie zabrzmią radosne głosy nowożeńców. Handlowcy miasta mieli władzę nad światem, a czary Babilonu oszukały wszystkie narody.
ದೀಪದ ಬೆಳಕು ನಿನ್ನಲ್ಲಿ ಎಂದೂ ಪ್ರಕಾಶಿಸದು. ವಧೂವರರ ಸ್ವರವು ಮತ್ತೆ ನಿನ್ನಲ್ಲಿ ಎಂದೂ ಕೇಳಿಬರದು. ಏಕೆಂದರೆ ನಿನ್ನ ವರ್ತಕರು ಭೂಮಿಯ ಮಹಾ ಪುರುಷರಾಗಿದ್ದು, ನಿನ್ನ ಮಾಂತ್ರಿಕ ಶಕ್ತಿಯ ದೆಸೆಯಿಂದ ಎಲ್ಲಾ ದೇಶಗಳವರು ವಂಚಿತರಾದರು.
24 Miasto to jest również winne morderstw —zabiło bowiem wielu proroków i świętych”.
ಆಕೆಯಲ್ಲಿ ಪ್ರವಾದಿಗಳ ಮತ್ತು ಪರಿಶುದ್ಧರ ರಕ್ತವೂ ಮತ್ತು ಭೂಮಿಯ ಮೇಲೆ ಕೊಲೆಯಾದವರ ರಕ್ತವೂ ಸಿಕ್ಕಿತು,” ಎಂದು ಹೇಳಿದನು.

< Objawienie 18 >