< I Kronik 27 >
1 A synów Izraelskich według liczby ich, przedniejszych w domach ojcowskich, i półkowników, i rotmistrzów, i przełożonych nad tymi, którzy służyli królowi we wszelkiej potrzebie, w podziałach swoich, przychodzących i odchodzących na każdy miesiąc przez wszystkie miesiące w roku; w każdym podziale było dwadzieścia i cztery tysiące.
೧ಇಸ್ರಾಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳೂ, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳ ವಿವರ: ವರ್ಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರದಿಯ ಪ್ರಕಾರ ಕೆಲಸಕ್ಕಾಗಿ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು ಇದ್ದರು.
2 Nad hufem pierwszego miesiąca był Jasobeam, syn Sabdyjelowy, a w podziele jego było dwadzieścia i cztery tysiące.
೨ಪೆರೆಚನ ಸಂತಾನದವನೂ, ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕನು.
3 Ten był z synów Faresowych przedniejszym nad wszystkiemi przełożonymi w wojsku miesiąca pierwszego.
೩ಇವನು ಮೊದಲನೆಯ ತಿಂಗಳಿನ ಸೈನ್ಯಾಧಿಪತಿಯ ಮುಖ್ಯಸ್ಥನು. ಮೊದಲನೆಯ ತಿಂಗಳಿನಲ್ಲಿ ಸೇವೆ ಮಾಡತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.
4 A nad podziałem wtórego miesiąca był Dodaj Achochytczyk i z podziałem swym; po nim Michlot, książę, a w podziale jego było ludu dwadzieścia i cztery tysiące.
೪ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕನು. ಆ ವರ್ಗದಲ್ಲಿ ಮಿಕ್ಲೋತನೆಂಬವನು ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತ್ನಾಲ್ಕು ಸಾವಿರ.
5 Przełożony trzeci wojska miesiąca trzeciego był Banajas, syn Jojady kapłana, przedniejszym, a w podziale jego dwadzieścia i cztery tysiące.
೫ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕನು. ಮೂರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.
6 Ten Banajas był mocarz między trzydziestoma, i nad trzydziestoma, a nad podziałem jego był Ammisadab, syn jego.
೬ಈ ಬೆನಾಯನು ಮೂವತ್ತು ಜನರಲ್ಲಿ ಪ್ರಸಿದ್ಧನಾದ ಯುದ್ಧವೀರನೂ ಅವರ ಮುಖ್ಯಸ್ಥನೂ ಆಗಿದ್ದನು. ಅವನ ವರ್ಗದಲ್ಲಿ ಅವನ ಮಗನಾದ ಅಮ್ಮೀಜಾಬಾದನು ಇದ್ದನು.
7 Czwarty czwartego miesiąca był Asael, brat Joabowy, a po nim Zabadyjasz, syn jego, a w podziale jego dwadzieścia i cztery tysiące.
೭ಯೋವಾಬನ ತಮ್ಮನಾದ ಅಸಾಹೇಲನು. ಅವನು ಸತ್ತ ನಂತರ ಅವನ ಮಗನಾದ ಜೆಬದ್ಯನು ನಾಲ್ಕನೆಯ ವರ್ಗದ ನಾಯಕನು. ನಾಲ್ಕನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
8 Piąty miesiąca piątego był przełożonym Samut Jezrahytczyk, a w podziale jego dwadzieścia i cztery tysiące.
೮ಇಜ್ರಾಹ್ಯನಾದ ಶಮ್ಹೂತನು ಐದನೆಯ ವರ್ಗದ ನಾಯಕನು. ಐದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
9 Szósty miesiąca szóstego był Hyra, syn Ikkiessa Tekuitczyka, a w podziale jego dwadzieścia i cztery tysiące.
೯ತೆಕೋವಿನ ಇಕ್ಕೇಷನ ಮಗನಾದ ಈರ ಎಂಬುವನು ಆರನೆಯ ವರ್ಗದ ನಾಯಕನು. ಆರನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
10 Siódmy miesiąca siódmego był Heles Felonitczyk z synów Efraimowych, a w podziale jego dwadzieścia i cztery tysiące.
೧೦ಎಫ್ರಾಯೀಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕನು. ಏಳನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
11 Osmy miesiąca ósmego był Sobochaj Husatczyk z Zarchejczyków, a w podziale jego dwadzieścia i cztery tysiące.
೧೧ಹುಷ ಊರಿನ ಜೆರಹೀಯನಾದ ಸಿಬ್ಬೆಕೈಯು ಎಂಟನೆಯ ವರ್ಗದ ನಾಯಕನು. ಎಂಟನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
12 Dziewiąty miesiąca dziewiątego był Abijezer Anatotczyk z synów Jemini, a w podziale jego dwadzieścia i cztery tysiące.
೧೨ಬೆನ್ಯಾಮೀನ್ ಕುಲದ ಅನತೋತ್ ಊರಿನವನಾದ ಅಬೀಯೆಜೆರನು ಒಂಬತ್ತನೆಯ ವರ್ಗದ ನಾಯಕನು. ಒಂಬತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
13 Dziesiąty miesiąca dziesiątego był Mahary Netofatczyk z Zarchejczyków, a w podziale jego dwadzieścia i cztery tysiące.
೧೩ನೆಟೋಫ ಊರಿನವನಾದ ಜೆರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕನು. ಹತ್ತನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
14 Jedenasty miesiąca jedenastego był Banajas Faratońszyk z synów Efraimowych, a w podziale jego dwadzieścia i cztery tysiące.
೧೪ಎಫ್ರಾಯೀಮ್ ಕುಲದ ಪಿರ್ರಾತೋನ್ಯನಾದ ಬೆನಾಯನು ಹನ್ನೊಂದನೆಯ ವರ್ಗದ ನಾಯಕನು. ಹನ್ನೊಂದನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
15 Dwunasty miesiąca dwunastego był Haldaj Netofatczyk z Otonijela, a w podziale jego dwadzieścia i cztery tysiące.
೧೫ನೆಟೋಫ ಊರಿನವನಾದ ಒತ್ನೀಯೇಲನ ಸಂತಾನದವನಾದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕನು. ಹನ್ನೆರಡನೆಯ ತಿಂಗಳಿನಲ್ಲಿ ಸೇವೆಮಾಡತಕ್ಕ ಅವನ ವರ್ಗದವರ ಸಂಖ್ಯೆಯು ಇಪ್ಪತ್ತ್ನಾಲ್ಕು ಸಾವಿರ.
16 Nadto nad pokoleniem Izraelskiem byli: Nad Rubeńczykami był książęciem Elijezer, syn Zychrego; nad Symeończykami Sefatyjasz, syn Maachowy;
೧೬ಇಸ್ರಾಯೇಲಿನ ಕುಲ ಪ್ರಭುಗಳು: ರೂಬೇನ್ಯರಲ್ಲಿ ಜಿಕ್ರೀಯ ಮಗನಾದ ಎಲೀಯೆಜೆರನು; ಸಿಮೆಯೋನ್ಯರಲ್ಲಿ ಮಾಕನ ಮಗನಾದ ಶೆಪಟ್ಯನು;
17 Nad pokoleniem Lewiego Chasabijasz, syn Chemuelowy; nad Aaronowem Sadok;
೧೭ಲೇವಿಯರಲ್ಲಿ ಕೆಮುವೇಲನ ಮಗನಾದ ಹಷಬ್ಯ; ಆರೋನ್ಯರಲ್ಲಿ ಚಾದೋಕ್;
18 Nad Judowem Elihu z braci Dawidowych; nad Isascharowem Amry, syn Michaelowy;
೧೮ಯೆಹೂದ್ಯರಲ್ಲಿ ದಾವೀದನ ಅಣ್ಣನಾದ ಎಲೀಹು; ಇಸ್ಸಾಕಾರ್ಯರಲ್ಲಿ ಮೀಕಾಯೇಲನ ಮಗನಾದ ಒಮ್ರಿ;
19 Nad Zabulonowem Jesmajasz, syn Abdyjaszowy; nad Neftalimowem Jerymot, syn Asryjelowy;
೧೯ಜೆಬುಲೂನ್ಯರಲ್ಲಿ ಓಬದ್ಯನ ಮಗನಾದ ಇಷ್ಮಾಯ; ನಫ್ತಾಲ್ಯರಲ್ಲಿ ಅಜ್ರೀಯೇಲನ ಮಗನಾದ ಯೆರೀಮೋತ್;
20 Nad synami Efraimowymi Hosejasz, syn Azazyjaszowy; nad połową pokolenia Manasesowego Joel, syn Fadajaszowy;
೨೦ಎಫ್ರಾಯೀಮ್ಯರಲ್ಲಿ ಅಜಜ್ಯನ ಮಗನಾದ ಹೊಷೇಯ; ಮನಸ್ಸೆಯ ಅರ್ಧ ಕುಲದವರಲ್ಲಿ ಪೆದಾಯನ ಮಗನಾದ ಯೋವೇಲ್;
21 Nad drugą połową pokolenia Manasesowego w Galaadzie Iddo, syn Zacharyjaszowy; nad Benjaminowem Jaasyjel, syn Abnerowy.
೨೧ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಕುಲದವರಲ್ಲಿ ಜೆಕರ್ಯಯನ ಮಗನಾದ ಇದ್ದೋ; ಬೆನ್ಯಾಮೀನ್ಯರಲ್ಲಿ ಅಬ್ನೇರನ ಮಗನಾದ ಯಗಸೀಯೇಲ್;
22 Nad Danowem Azraeel, syn Jerohamowy. Cić są książęta pokoleń Izraelskich.
೨೨ದಾನ್ಯರಲ್ಲಿ ಯೆರೋಹಾಮನ ಮಗನಾದ ಅಜರೇಲನು ಇವರೇ.
23 A nie włożył Dawid w liczbę ich żadnego, co miał dwadzieścia lat i niżej; albowiem Pan był powiedział, iż miał rozmnożyć Izraela jako gwiazdy niebieskie.
೨೩ಇಸ್ರಾಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬುದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆ ವಯಸ್ಸುಳ್ಳವರನ್ನು ಪರಿಗಣಿಸಲಿಲ್ಲ.
24 A Joab, syn Sarwii, począł był liczyć, ale nie dokończył, dlatego że był gniew przypadł na Izraela. I nie weszła ta liczba w liczbę kronik o sprawach króla Dawida.
೨೪ಚೆರೂಯಳ ಮಗನಾದ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾದ್ದರಿಂದ ಅದನ್ನು ಪೂರ್ತಿಗೊಳಿಸಲು ಸಾಧ್ಯವಾಗಲಿಲ್ಲ. ಈ ಜನಗಣತಿಯು ದಾವೀದನ ರಾಜ್ಯದ ವೃತ್ತಾಂತ ಗ್ರಂಥದಲ್ಲಿ ಲಿಖಿತವಾಗಲಿಲ್ಲ.
25 A nad skarbami królewskiemi był Asmawet, syn Abdyjelowy; a nad dochodami z pól, z miast, i ze wsi i z zamków był Jonatan, syn Uzyjaszowy;
೨೫ಅರಸನಾದ ದಾವೀದನ ಸೊತ್ತಿನ ಮೇಲೆ ಮೇಲ್ವಿಚಾರಕರಾಗಿ ನೇಮಿಸಲ್ಪಟ್ಟವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗನಾದ ಅಜ್ಮಾವೆತ್, ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಹಳ್ಳಿಗಳಲ್ಲಿಯೂ, ಬುರುಜಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗನಾದ ಯೋನಾತಾನನು,
26 A nad oraczami, którzy uprawiali ziemię, był Ezer, syn Chalubowy.
೨೬ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಮೇಲೆ ಕೆಲೂಬನ ಮಗನಾದ ಎಜ್ರೀ,
27 A nad winnicami był Semejasz Ramatczyk; a nad urodzajami winnic i nad piwnicami winnemi Zabdyjasz Zyfmejczyk.
೨೭ದ್ರಾಕ್ಷಿ ತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ, ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ,
28 A nad oliwnicami, i nad drzewami figowemi, które są w polach, był Balanan Giedertczyk, a nad piwnicami oliwnemi Joas.
೨೮ಎಣ್ಣೇ ಮರದ ತೋಪುಗಳ ಮೇಲೆಯೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆಯೂ ಗೆದೇರಾ ಊರಿನವನಾದ ಬಾಳ್ಹಾನಾನ್ ಮತ್ತು ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್,
29 A nad bydłem, które paszono w Saron, Sytraj Saronitczyk; a nad bydłem po dolinach Safat, syn Adlajego.
೨೯ಶಾರೋನಿನಲ್ಲಿ ಮೇಯುವ ಹಸುಗಳ ಮೇಲೆ ಶಾರೋನ್ಯನಾದ ಶಿಟ್ರೈ, ತಗ್ಗುಗಳಲ್ಲಿ ಮೇಯುವ ಹಸುಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು,
30 A nad wielbłądami był Obil Ismaelitczyk, a nad oślicami był Jechdejasz Merończyk.
೩೦ಒಂಟೆಗಳ ಮೇಲೆ ಇಷ್ಮಾಯೇಲ್ಯನಾದ ಓಬೀಲ್, ಹೆಣ್ಣುಕತ್ತೆಗಳ ಮೇಲೆ ಮೇರೊನೋತ್ಯನಾದ ಯೆಹ್ದೆಯ,
31 A nad drobnem bydłem Jazys Agiertczyk. Cić wszysct byli przełożonymi nad majętnościami króla Dawida.
೩೧ಆಡುಕುರಿಗಳ ಮೇಲೆ ಹಗ್ರೀಯನಾದ ಯಾಜೀಜ್.
32 Ale Jonatan, stryj Dawidowy, był radcą, mąż mądry, i nauczony; ten, i Jehijel, syn Chachmonowy, był z synami królewskimi.
೩೨ವಿವೇಕಿಯೂ, ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು, ಮಂತ್ರಿಯೂ ಹಕ್ಮೋನಿಯ ಮಗನಾದ ಯೆಹೀಯೇಲನು ರಾಜಪುತ್ರಪಾಲಕನೂ ಆಗಿದ್ದರು.
33 Achitofel też był radcą królewskim, a Chusaj Archytczyk przyjacielem królewsskim.
೩೩ಅಹೀತೋಫೆಲನು ಅರಸನ ಮಂತ್ರಿಯೂ, ಅರ್ಕೀಯನಾದ ಹೂಷೈಯು ಅವನ ಮಿತ್ರನಾಗಿದ್ದನು.
34 A po Achitofelu był Jojada, syn Banajasowy, i Abujatar. A Joab był hetmanem wojska królewskiego.
೩೪ಬೆನಾಯನ ಮಗನಾದ ಯೆಹೋಯಾದಾವನೂ, ಎಬ್ಯಾತಾರನೂ, ಅಹೀತೋಫೆಲನ ಉತ್ತರಾಧಿಕಾರಿಗಳಾದರು. ಯೋವಾಬನು ಅರಸನ ಸೈನ್ಯಾಧಿಪತಿಯಾಗಿದ್ದನು.