< II Tymoteusza 3 >
1 A to wiedz, iż w ostateczne dni nastaną czasy trudne.
೧ಆದರೆ ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ.
2 Albowiem będą ludzie sami siebie miłujący, łakomi, chlubni, pyszni, bluźniercy, rodzicom nieposłuszni, niewdzięczni, niepobożni,
೨ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,
3 Bez przyrodzonej miłości, przymierza nie trzymający, potwarcy, niepowściągliwi, nieskromni, dobrych nie miłujący,
೩ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ,
4 Zdrajcy, skwapliwi, nadęci, rozkoszy raczej miłujący niż miłujący Boga;
೪ದ್ರೋಹಿಗಳೂ, ದುಡುಕುವವರೂ, ದುರಹಂಕಾರವುಳ್ಳವರೂ, ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ,
5 Którzy mają kształt pobożności, ale się skutku jej zaparli; i tych się chroń.
೫ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.
6 Albowiem z tych są ci, którzy się wrywają w domy i pojmane wiodą niewiastki grzechami obciążone, które uwodzą rozmaite pożądliwości;
೬ಅವರಲ್ಲಿ ಕೆಲವರು ಮನೆಗಳಲ್ಲಿ ನುಸುಳಿ, ಪಾಪಗಳಿಂದ ತುಂಬಿದವರೂ, ನಾನಾ ವಿಧವಾದ ಆಸೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಆಗಿರುತ್ತಾರೆ.
7 Które się zawsze uczą, a nigdy do znajomości prawdy przyjść nie mogą.
೭ಆ ಸ್ತ್ರೀಯರು ಯಾವಾಗಲೂ ಉಪದೇಶ ಕೇಳುತ್ತಿದ್ದರೂ ಸತ್ಯದ ಪರಿಜ್ಞಾನವನ್ನು ಹೊಂದಲಾರದವರು.
8 A jako Jannes i Jambres sprzeciwiali się Mojżeszowi, tak i ci sprzeciwiają się prawdzie, ludzie rozumu skażonego, odrzuceni z strony wiary.
೮ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.
9 Ale nie postąpią dalej; albowiem głupstwo ich jawne będzie wszystkim, jako i onych było.
೯ಆದರೆ ಅವರು ಹೆಚ್ಚು ಮುಂದುವರಿಯಲು ಸಾಧ್ಯವಿಲ್ಲ. ಆ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪ್ರಕಟವಾಗಿ ಬಂದ ಹಾಗೆಯೇ ಇವರದೂ ಪ್ರಕಟವಾಗುವುದು.
10 Aleś ty doszedł nauki mojej, sposobu żywota mego, przedsięwzięcia wiary, nieskwapliwości, miłości i cierpliwości,
೧೦ನೀನಾದರೋ ನನ್ನನ್ನು ಅನುಸರಿಸುವವನಾಗಿದ್ದು, ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ ಇವುಗಳನ್ನೂ,
11 Prześladowania, ucierpienia, które mię spotkały w Antyjochii, w Ikonii i w Listrze, jakiem prześladowania podejmował; a ze wszystkich wyrwał mię Pan.
೧೧ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ, ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು, ಅವೆಲ್ಲವುಗಳೊಳಗಿನಿಂದ ಕರ್ತನು ನನ್ನನ್ನು ಬಿಡಿಸಿದನು.
12 Aleć i wszyscy, którzy chcą pobożnie żyć w Chrystusie Jezusie, prześladowani będą.
೧೨ಕ್ರಿಸ್ತ ಯೇಸುವಿನಲ್ಲಿ ಸದ್ಭಕ್ತರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.
13 Lecz źli ludzie i zwodziciele postąpią w gorsze, jako zwodzący tak i zwiedzeni.
೧೩ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
14 Ale ty trwaj w tem, czegoś się nauczył i czegoć powierzono, wiedząc, od kogoś się tego nauczył.
೧೪ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬುದನ್ನು ಆಲೋಚಿಸು.
15 A iż z dzieciństwa umiesz Pisma święte, które cię mogą uczynić mądrym ku zbawieniu przez wiarę, która jest w Chrystusie Jezusie.
೧೫ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.
16 Wszystko Pismo od Boga jest natchnione i pożyteczne ku nauce, ku strofowaniu, ku naprawie, ku ćwiczeniu, które jest w sprawiedliwości;
೧೬ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ.
17 Aby człowiek Boży był doskonały, ku wszelkiej sprawie dobrej dostatecznie wyćwiczony.
೧೭ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.