< Izajasza 38 >
1 W one dni zachorował Ezechyjasz aż na śmierć. I przyszedł do niego Izajasz prorok, syn Amosowy, a rzekł do niego: Tak mówi Pan: Rozpraw dom swój; albowiem umrzesz, a nie zostaniesz żyw.
೧ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದು ಹೇಳಿದನು.
2 Tedy obrócił Ezechyjasz twarz swoję do ściany, a modlił się Panu.
೨ಇದನ್ನು ಕೇಳಿದೊಡನೆ ಹಿಜ್ಕೀಯನು ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವನನ್ನು ಪ್ರಾರ್ಥಿಸಿದನು.
3 I rzekł: Proszę, o Panie! wspomnij teraz, żem chodził przed tobą w prawdzie i w sercu uprzejmem, czyniąc to, co dobrego jest w oczach twoich. I płakał Ezechyjasz płaczem wielkim.
೩ಹಿಜ್ಕೀಯನು, “ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.
4 I stało się słowo Pańskie do Izajasza, mówiąc:
೪ಆಗ ಯೆಹೋವನು ಯೆಶಾಯನಿಗೆ,
5 Idź, a powiedz Ezechyjaszowi: Tak mówi Pan, Bóg Dawida, ojca twego: Wysłuchałem modlitwę twoję, widziałem łzy twoje; oto Ja przyczynię do dni twoich piętnaście lat;
೫“ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.
6 I z ręki króla Assyryjskiego wyrwę ciebie i to miasto, a będę bronił miasta tego.
೬ನಿನ್ನನ್ನೂ, ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುವೆನು, ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು.
7 A to będziesz miał za znak od Pana, że Pan uczyni to, co mówił.
೭ಯೆಹೋವನು ನುಡಿದದ್ದನ್ನು ನೆರವೇರಿಸುವನು ಎಂಬುದಕ್ಕೆ ಒಂದು ಗುರುತನ್ನು ಕಾಣುವಿ.
8 Oto Ja wrócę nazad cień po stopniach po których szedł, na zegarze słonecznym Achazowym na dziesięć stopni po tychże stopniach, po których było zeszło.
೮ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡುವೆನು’ ಎಂದು ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬುದಾಗಿ ತಿಳಿಸು” ಎಂದು ಆಜ್ಞಾಪಿಸಿದನು. ಅದರಂತೆ ಸೋಪಾನಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂತು.
9 Pisanie Ezechyjasza, króla Judzkiego, gdy był zachorował i wyzdrowiał z niemocy swojej:
೯ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಆರೋಗ್ಯವನ್ನು ಹೊಂದಿದ ನಂತರ ಬರೆದದ್ದು.
10 Jam rzekł w ukróceniu dni moich: Wnijdę do bram grobu, pozbawion będę ostatka lat swoich; (Sheol )
೧೦ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು. (Sheol )
11 Rzekłem, że nie ujrzę Pana, Pana w ziemi żyjących; nie oglądam więcej człowieka między obywatelami na świecie.
೧೧ನಾನು ಇನ್ನು ಜೀವಲೋಕದವನಾಗಿ ಯೆಹೋವನ ದರ್ಶನವನ್ನು ಹೊಂದಿದೆನಲ್ಲಾ, ಇನ್ನು ಭೂಲೋಕ ನಿವಾಸಿಗಳಲ್ಲಿ ಒಬ್ಬನಾಗಿ ಮನುಷ್ಯರನ್ನು ದೃಷ್ಟಿಸಲಾರೆನು.
12 Pobyt mój pomija, a przenosi się odemnie, jako namiot pasterski; oderznąłem żywot swój, jako tkacz; od krosien oderznie mię; dziś, pierwej niż noc nadejdzie, dokonasz mię.
೧೨ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು, ನನ್ನ ಕಡೆಯಿಂದ ಒಯ್ಯಲ್ಪಟ್ಟಿದೆ. ಆತನು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀ.
13 Rozmyślałem sobie z poranku, że jako lew potrze wszystkie kości moje, dziś, pierwej niż noc nadejdzie, dokonasz mię.
೧೩ನಾನು ಬೆಳಗಿನ ತನಕ ಕೂಗಿಕೊಂಡೇ ಇದ್ದೆನು. ಆತನು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ, ಉದಯದಿಂದ ಅಸ್ತಮಾನದೊಳಗೇ ನನ್ನನ್ನು ತೀರಿಸುತ್ತೀಯಲ್ಲಾ ಎಂದು ಪ್ರಲಾಪಿಸಿದೆನು.
14 Jako żóraw i jaskółka szczebiotałem, stękałem jako gołębica; oczy moje ku górze podniesione były, i rzekłem: Panie! gwałt cierpię, przedłuż mi żywota.
೧೪ನಾನು ಬಾನಕ್ಕಿಯಂತೆಯೂ, ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಆಶ್ರಯವಾಗು ಎಂದು ನಿನ್ನನು ದೃಷ್ಟಿಸುತ್ತಾ ಕಂಗೆಟ್ಟೆನು.
15 Ale cóż mam więcej rzec? Onci mi odpowiedział, i sam uczynił, że żyć będę mimo wszystkie lata swe po gorzkości duszy mojej.
೧೫ನಾನು ಏನು ಹೇಳಲಿ! ಆತನು ನನಗೆ ಮಾತುಕೊಟ್ಟು ಅದರಂತೆ ತಾನೇ ನೆರವೇರಿಸಿದ್ದಾನೆ! ನನ್ನ ಆತ್ಮಕ್ಕೆ ಸಂಭವಿಸಿದ ದುಃಖವನ್ನು ಸ್ಮರಿಸುತ್ತಾ ನನ್ನ ಜೀವಮಾನದಲ್ಲೆಲ್ಲಾ ಮೆಲ್ಲಗೆ ನಡೆಯುವೆನು.
16 Panie! kto po nich i w nich żyć będzie, wszystkim znajomy będzie żywot dychania mego, żeś mi zdrowie przywrócił, a zachowałeś mię przy żywocie.
೧೬ಯೆಹೋವನೇ, ಇಂಥಾ ಸಂಭವಗಳಿಂದ ಮನುಷ್ಯರು ಬದುಕುತ್ತಾರೆ. ಅವುಗಳಿಂದಲೇ ನನ್ನ ಆತ್ಮವು ಜೀವಿಸುತ್ತದೆ. ಈಗ ನನ್ನನ್ನು ಸ್ವಸ್ಥಮಾಡಿ ಬದುಕುವಂತೆ ಮಾಡಿದೆ.
17 Oto czasu pokoju przyszła na mię była gorzkość najgorzciejsza; ale się tobie podobało wyrwać duszę moję z przepaści skażenia, przeto, żeś zarzucił w tył swój wszystkie grzechy moje.
೧೭ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಮೇಲೆ ಹಾಕಿಕೊಂಡಿದ್ದಿ.
18 Albowiem nie grób wysławia cię, ani śmierć chwali cię, ani ci, którzy w dół wstępują, oczekują prawdy twojej. (Sheol )
೧೮ಪಾತಾಳದವರು ನಿನ್ನನ್ನು ಸ್ತುತಿಸುವುದಿಲ್ಲ, ಸತ್ತವರು ನಿನ್ನನ್ನು ಕೀರ್ತಿಸುವುದಿಲ್ಲ, ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯ ಸಂಧತೆಯನ್ನು ಆಶ್ರಯಿಸುವುದಿಲ್ಲ. (Sheol )
19 Żywy, żywy, ten cię wysławiać będzie, jako ja dzisiaj, a ojciec synom oznajmi prawdę twoję.
೧೯ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.
20 Pan mię wybawił; przetoż pieśń moję śpiewać będziemy po wszystkie dni żywota naszego w domu Pańskim.
೨೦ಯೆಹೋವನು ನನಗೆ ರಕ್ಷಣಾಪರನಾಗಿದ್ದಾನೆ. ನಮ್ಮ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ನಮ್ಮ ಕಿನ್ನರಿ ವೀಣೆಗಳನ್ನು ನುಡಿಸುವೆವು.”
21 I rzekł był Izajasz: Niech wezmą bryłę suchych fig, i przyłożą na wrzód, a będzie uzdrowiony.
೨೧ಯೆಶಾಯನು, “ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ ಹುಣ್ಣಿನ ಮೇಲೆ ಇಟ್ಟರೆ ಅರಸನು ಗುಣಹೊಂದುವನು” ಎಂದು ಅಪ್ಪಣೆಕೊಟ್ಟನು.
22 I rzekł był Ezechyjasz: Cóż jest za znak, że wstąpię do domu Pańskiego?
೨೨ಹಿಜ್ಕೀಯನು, “ನಾನು ಗುಣಹೊಂದಿ ಯೆಹೋವನ ಆಲಯವನ್ನು ಸೇರುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದ್ದನು.