< Hioba 32 >
1 A gdy przestali oni trzej mężowie odpowiadać Ijobowi, przeto, że się sobie zdał być sprawiedliwym:
೧ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು.
2 Tedy się rozpalił gniewem Elihu, syn Barachela Buzytczyka z rodu Syryjskiego, przeciw Ijobowi się rozpalił gniewem, iż usprawiedliwiał duszę swoję, więcej niż Boga.
೨ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.
3 Także przeciwko trzem przyjaciołom jego rozpalił się gniew jego, że nie znalazłszy odpowiedzi, przecię potępiali Ijoba.
೩ಇದಲ್ಲದೆ ಅವನ ಮೂವರು ಸ್ನೇಹಿತರು ಯೋಬನನ್ನು ಖಂಡಿಸತಕ್ಕ ಉತ್ತರವನ್ನು ಹೇಳಲಾರದೆ ಹೋದುದರಿಂದ ಅವನು ಅವರ ಮೇಲೂ ಕೋಪಿಸಿಕೊಂಡನು.
4 Bo Elihu oczekiwał, jako oni Ijobowi odpowiedzą, gdyż oni starsi byli w latach niż on.
೪ಅವರು ತನಗಿಂತ ವೃದ್ಧರಾಗಿದ್ದ ಕಾರಣ, ಎಲೀಹು ಯೋಬನೊಂದಿಗೆ ಮೊದಲು ಮಾತನಾಡದೆ ತಡೆದಿದ್ದನು.
5 Ale widząc Elihu, że nie było odpowiedzi w ustach onych trzech mężów, rozpalił się w gniewie swoim.
೫ಎಲೀಹು ಈ ಮೂವರ ಬಾಯಲ್ಲಿ ತಕ್ಕ ಉತ್ತರವಿಲ್ಲದ್ದನ್ನು ಕಂಡು ರೋಷಗೊಂಡನು.
6 I odpowiedział Elihu, syn Barachela Buzytczyka, i rzekł: Jam najmłodszy w latach, a wyście starcy; przetoż wstydziłem się, i nie śmiałem wam oznajmić zdania swego.
೬ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು; ಆದುದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆಮಾಡಲು ಹೆದರಿದೆನು.”
7 Myślałem: Długi wiek mówić będzie, a mnóstwo lat nauczy mądrości.
೭ಅದಕ್ಕೆ ಅವನು, “ಹೆಚ್ಚು ದಿನಗಳವರು ಮಾತನಾಡಲಿ, ಬಹಳ ವರ್ಷದವರು ಜ್ಞಾನೋಪದೇಶಮಾಡಲಿ” ಎಂದುಕೊಂಡಿದ್ದೆನು.
8 Aleć duch, który jest w ludziach, i natchnienie Wszechmogącego daje rozum.
೮ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.
9 Zacni nie zawsze mądrzy, a starcy nie zawżdy rozumieją sądu.
೯ವೃದ್ಧರೇ ಜ್ಞಾನಿಗಳಲ್ಲ, ಮುದುಕರು ಮಾತ್ರ ನ್ಯಾಯ ಬಲ್ಲವರಲ್ಲ.
10 Przetoż mówię: słuchaj mię; ja też oznajmię zdanie swoje.
೧೦ಆದಕಾರಣ, “ನನ್ನ ಕಡೆಗೆ ಕಿವಿಗೊಡಿರಿ, ನಾನು ನನ್ನ ಅಭಿಪ್ರಾಯವನ್ನು ಅರಿಕೆಮಾಡುವೆನೆಂದು ಹೇಳಿಕೊಳ್ಳುತ್ತೇನೆ.
11 Otom oczekiwał słów waszych, a przysłuchiwałem się dowodom waszym, czekając, ażbyście doszli rzeczy.
೧೧ಇಗೋ, ನೀವು ಆಡುತ್ತಿದ್ದ ಮಾತುಗಳನ್ನು ಕಾದು ಕೇಳುತ್ತಿದ್ದೆನು; ಏನು ಹೇಳಬೇಕೆಂದು ನೀವು ಆಲೋಚಿಸುತ್ತಿದ್ದಾಗ ನಿಮ್ಮ ನ್ಯಾಯಗಳಿಗಾಗಿ ಕಿವಿಗೊಟ್ಟಿದ್ದೆನು.
12 I przypatrywałem się wam, a oto żaden z was Ijoba przekonać nie mógł; i nie masz między wami, ktoby odpowiedział słowom jego.
೧೨ನಿಮ್ಮ ಮೇಲೆ ಲಕ್ಷ್ಯವಿಟ್ಟಿದ್ದೆನು; ಆಹಾ, ನಿಮ್ಮಲ್ಲಿ ಯೋಬನನ್ನು ಖಂಡಿಸಬಲ್ಲವನು, ಅವನ ಮಾತುಗಳಿಗೆ ಉತ್ತರಕೊಡತಕ್ಕವನು, ಯಾರೂ ಸಿಕ್ಕಲಿಲ್ಲ.
13 Ale snać rzeczecie: Znaleźliśmy mądrość; sam go Bóg przekonywa, nie człowiek.
೧೩‘ನಾವು ಅವನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ, ದೇವರೇ ಅವನನ್ನು ಖಂಡಿಸಿಬಿಡಲಿ, ಮನುಷ್ಯನಿಂದಾಗುವುದಿಲ್ಲ’ ಎಂದು ಅಂದುಕೊಳ್ಳಬೇಡಿರಿ.
14 Aczci się Ijob nie zemną wdał w rzecz, a ja mu też nie waszemi słowy odpowiem.
೧೪ಅವನು ನನಗೆ ಪ್ರತಿಕೂಲವಾಗಿ ಇನ್ನೂ ವಾದವನ್ನು ಹೂಡಲಿಲ್ಲ; ನಾನೂ ಅವನಿಗೆ ಉತ್ತರಕೊಡುವಾಗ ನಿಮ್ಮ ಹಾಗೆ ಮಾತನಾಡೆನು.
15 Polękali się, nie odpowiadają dalej; niedostaje im słów.
೧೫ಅವರು ಬೆರಗಾಗಿ ಇನ್ನು ಉತ್ತರಕೊಡಲಾರರು, ಅವರ ಸೊಲ್ಲೇ ಅಡಗಿಹೋಯಿತು.
16 Czekałemci, ale nie mówią; umilknęli, a nic więcej nie odpowiadają.
೧೬ಅವರು ಇನ್ನು ಉತ್ತರಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ?
17 Odpowiem ja też z mej strony; oznajmię ja też zdanie swoje.
೧೭ನಾನೂ ನನ್ನ ಪಾಲಿನ ಉತ್ತರವನ್ನು ಹೇಳುವೆನು, ನಾನೂ ನನ್ನ ಅಭಿಪ್ರಾಯವನ್ನು ತಿಳಿಸುವೆನು.
18 Bom pełen słów; ciasno we mnie duchowi żywota mego.
೧೮ನನ್ನಲ್ಲಿ ಮಾತುಗಳು ತುಂಬಿವೆ, ನನ್ನ ಅಂತರಾತ್ಮವು ನನ್ನನ್ನು ಒತ್ತಾಯಪಡಿಸುತ್ತದೆ.
19 Oto żywot mój jest jako moszcz bez oddechu, a jako beczka nowa rozpękłby się.
೧೯ಆಹಾ, ದ್ರಾಕ್ಷಾರಸವನ್ನು ತುಂಬಿ, ಬಾಯಿಕಟ್ಟಿದ ಹೊಸ ಬುದ್ದಲಿಗಳಂತೆ ನನ್ನ ಹೊಟ್ಟೆಯು ಒಡೆದುಹೋಗುವ ಹಾಗಿದೆ.
20 Będę tedy mówił, a wytchnę sobie; otworzę wargi swe, i odpowiem.
೨೦ನನಗೆ ಉಪಶಮನವಾಗುವ ಹಾಗೆ ಮಾತನಾಡುವೆನು. ನನ್ನ ತುಟಿಗಳನ್ನು ತೆರೆದು ಉತ್ತರ ಹೇಳುವೆನು.
21 Nie będę teraz miał względu na żadną osobę, a z człowiekiem bez tytułów mówić będę.
೨೧ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು.
22 Bo nie umiem tytułować, by mię w rychle nie porwał stworzyciel mój.
೨೨ಮುಖಸ್ತುತಿಯನ್ನು ಮಾಡುವುದಕ್ಕೆ ನನ್ನಿಂದಾಗುವುದಿಲ್ಲ; ಮಾಡಿದರೆ ನನ್ನ ಸೃಷ್ಟಿಕರ್ತನು ನನ್ನನ್ನು ಬೇಗ ನಿರ್ಮೂಲ ಮಾಡುವೆನು.