< Łukasza 17 >
1 I rzekł do uczniów: Nie można, aby zgorszenia przyjść nie miały; ale biada temu, przez którego przychodzą!
೧ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?
2 Lepiej by mu było, aby młyński kamień zawieszony był na szyi jego, i wrzucony był w morze, niżby jednego z tych małych zgorszyć miał.
೨ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು.
3 Miejcież się na pieczy. A jeźliby zgrzeszył przeciwko tobie brat twój, strofuj go, a jeźliby się upamiętał, odpuść mu.
೩ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು.
4 A choćby siedmkroć na dzień zgrzeszył przeciwko tobie, i siedmkroć przez dzień się do ciebie nawrócił, mówiąc: Żal mi tego; odpuść mu.
೪ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.
5 I rzekli Apostołowie Panu: Przymnóż nam wiary.
೫ಅಪೊಸ್ತಲರು ಕರ್ತನಿಗೆ, “ನಮ್ಮ ನಂಬಿಕೆಯನ್ನು ಹೆಚ್ಚಿಸು” ಎಂದು ಹೇಳಲು,
6 A Pan rzekł: Jeźlibyście mieli wiarę jako ziarno gorczyczne, a rzeklibyście temu drzewu leśnej figi: Wyrwij się z korzenia, a wsadź się w morzu, usłuchałoby was.
೬ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು.
7 I któż z was jest, co by miał sługę orzącego albo pasącego, który gdyby się wrócił, zaraz by mu rzekł: Pójdź, a usiądź za stół?
೭“ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ?
8 I owszem, izali mu nie rzecze: Nagotuj, co bym wieczerzał, a przepasawszy się, służ mi, aż się najem i napiję, a potem i ty jedz i pij?
೮ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ.
9 Izali dziękuje słudze onemu, iż uczynił to, co mu było rozkazano? Nie zda mi się.
೯ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ, ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ.
10 Także i wy, gdy uczynicie wszystko, co wam rozkazano, mówcie: Słudzy nieużyteczni jesteśmy, bo cośmy byli powinni uczynić, uczyniliśmy.
೧೦ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು.
11 I stało się, gdy szedł do Jeruzalemu, że szedł pośrodkiem Samaryi i Galilei.
೧೧ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.
12 A gdy wchodził do niektórego miasteczka, zabieżało mu dziesięć mężów trędowatych, którzy stanęli z daleka.
೧೨ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು,
13 A ci podniósłszy głos swój, rzekli: Jezusie, Nauczycielu! zmiłuj się nad nami.
೧೩“ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು” ಎಂದು ಕೂಗಿ ಹೇಳಿದರು.
14 Które on ujrzawszy, rzekł im: Szedłszy okażcie się kapłanom. I stało się, gdy szli, że oczyszczeni są.
೧೪ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
15 Ale jeden z nich ujrzawszy, że jest uzdrowiony, wrócił się, wielkim głosem chwaląc Boga;
೧೫ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು,
16 I padł na oblicze swoje u nóg jego, dziękując mu; a ten był Samarytanin.
೧೬ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.
17 A Jezus odpowiadając, rzekł: Zaż nie dziesięć jest oczyszczonych, a dziewięć kędy?
೧೭ಯೇಸು ಇದನ್ನು ನೋಡಿ, “ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ?
18 Nie znaleźli się, aby się wrócili, i dali chwałę Bogu, jedno ten cudzoziemiec?
೧೮ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?” ಎಂದು ಹೇಳಿ,
19 I rzekł mu: Wstań, idź, wiara twoja ciebie uzdrowiła.
೧೯ಅವನಿಗೆ, “ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ” ಎಂದು ಹೇಳಿದನು.
20 A będąc pytany od Faryzeuszów, kiedy przyjdzie królestwo Boże, odpowiedział im i rzekł: Nie przyjdzieć królestwo Boże z postrzeżeniem;
೨೦ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ.
21 Ani rzeką: Oto tu, albo oto tam jest: albowiem oto królestwo Boże wewnątrz was jest.
೨೧‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ” ಎಂದು ಹೇಳಿದನು.
22 I rzekł do uczniów: Przyjdą dni, że będziecie żądać, abyście widzieli jeden dzień ze dni Syna człowieczego, ale nie oglądacie.
೨೨ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.
23 I rzeką wam: Oto tu, albo oto tam jest; ale nie chodźcie, ani się za nimi udawajcie.
೨೩ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ.
24 Albowiem jako błyskawica, błyskając się od jednej strony, która jest pod niebem, aż do drugiej, która jest pod niebem, świeci: tak będzie i Syn człowieczy w dzień swój.
೨೪ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.
25 Ale pierwej musi wiele ucierpieć, i być odrzuconym od narodu tego.
೨೫ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತತಿಯಿಂದ ತಿರಸ್ಕರಿಸಲ್ಪಡಬೇಕು.
26 A jako było za dni Noego, tak będzie i za dni Syna człowieczego.
೨೬ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿನಗಳಲ್ಲಿಯೂ ನಡೆಯುವುದು.
27 Jedli, pili, żenili się i za mąż wydawali aż do onego dnia, którego wszedł Noe do korabia, i przyszedł potop, a wytracił wszystkie.
೨೭ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.
28 Także też jako się działo za dni Lotowych, jedli, pili, kupowali, sprzedawali, szczepili, budowali.
೨೮ಮತ್ತು ಲೋಟನ ದಿನಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
29 Ale dnia tego, gdy wyszedł Lot z Sodomy, spadł jako deszcz ogień z siarką z nieba, i wytracił wszystkie.
೨೯ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿನದಲ್ಲಿ, ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.
30 Takci też będzie w on dzień, którego się Syn człowieczy objawi.
೩೦ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿನದಲ್ಲಿ ಅದೇ ರೀತಿಯಾಗಿ ಇರುವುದು.
31 Onegoż dnia, byłliby kto na dachu, a naczynia jego w domu, niech nie zstępuje, aby je pobrał; a kto na roli, niech się także nie wraca do tego, co jest pozad.
೩೧ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.
32 Pamiętajcie na żonę Lotową.
೩೨ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ.
33 Ktobykolwiek chciał zachować duszę swoję, straci ją; a kto by ją kolwiek stracił, ożywi ją.
೩೩ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.
34 Powiadam wam: Onej nocy będą dwaj na jednem łożu; jeden wzięty będzie, a drugi zostawiony.
೩೪ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು.
35 Dwie będą mleć z sobą; jedna wzięta będzie, a druga zostawiona.
೩೫ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು. ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.”
36 Dwaj będą na roli; jeden będzie wzięty, a drugi zostawiony.
೩೬“ಹೊಲದಲ್ಲಿ ಇಬ್ಬರಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು” ಅಂದನು.
37 A odpowiadając rzekli mu: Gdzież Panie? A on im rzekł: Gdzie będzie ścierw, tam się zgromadzą i orły.
೩೭ಈ ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, “ಹೆಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು” ಎಂದು ಉತ್ತರಕೊಟ್ಟನು.