< Powtórzonego 34 >
1 Potem Mojżesz wstąpił z równin Moabu na górę Nebo, na szczyt Pizga, który jest naprzeciw Jerycha. I PAN pokazał mu całą ziemię, od Gileadu aż po Dan;
ಆಗ ಮೋಶೆ ಮೋವಾಬಿನ ಬಯಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿಹೋದನು. ಅಲ್ಲಿ ಯೆಹೋವ ದೇವರು ಅವನಿಗೆ ದೇಶವನ್ನೆಲ್ಲಾ ದಾನಿನವರೆಗಿರುವ ಗಿಲ್ಯಾದನ್ನೂ
2 I całą ziemię Neftalego, ziemię Efraima i Manassesa oraz całą ziemię Judy aż po Morze Zachodnie;
ಎಲ್ಲಾ ನಫ್ತಾಲಿಯನ್ನೂ ಸಮಸ್ತ ಎಫ್ರಾಯೀಮ್, ಮನಸ್ಸೆಯ ದೇಶವನ್ನೂ, ಸಮುದ್ರದ ಕಟ್ಟಕಡೆಯವರೆಗಿರುವ ಸಮಸ್ತ ಯೆಹೂದ ದೇಶವನ್ನೂ,
3 I [stronę] południową, i równinę doliny Jerycha, miasta palm aż po Soar.
ನೆಗೆವನ್ನೂ ಖರ್ಜೂರಗಳ ಪಟ್ಟಣವಾದ ಯೆರಿಕೋ ಕಣಿವೆಯ ಬಯಲನ್ನೂ, ಚೋಗರ್ ಊರಿನ ತನಕ ತೋರಿಸಿದರು.
4 Wtedy PAN mu powiedział: To jest ziemia, którą poprzysiągłem Abrahamowi, Izaakowi i Jakubowi, mówiąc: Dam ją twemu potomstwu. Pozwoliłem ci ją zobaczyć na własne oczy, ale do niej nie wejdziesz.
ಅನಂತರ ಯೆಹೋವ ದೇವರು ಅವನಿಗೆ, “ಅಬ್ರಹಾಮನಿಗೂ ಅವನ ಸಂತತಿಗೂ ಕೊಡುತ್ತೇನೆಂದು ನಾನು ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದ ದೇಶವು ಇದೇ. ಇದನ್ನು ನಿನಗೆ ತೋರಿಸಿದೆನು. ಆದರೆ ನೀನು ಅಲ್ಲಿಗೆ ಸೇರುವುದಿಲ್ಲ,” ಎಂದು ಹೇಳಿದರು.
5 Tam właśnie umarł Mojżesz, sługa PANA, w ziemi Moabu, według słowa PANA.
ಯೆಹೋವ ದೇವರ ಮಾತಿನ ಹಾಗೆ ಅವರ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಮರಣಹೊಂದಿದನು.
6 I pogrzebał go w dolinie, w ziemi Moabu, naprzeciw Bet-Peor, a nikt nie zna jego grobu aż po dziś dzień.
ದೇವರು ಅವನನ್ನು ಮೋವಾಬಿನ ದೇಶದ ಬೇತ್ ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೂಣಿಟ್ಟರು. ಆದರೆ ಅವನ ಸಮಾಧಿ ಎಲ್ಲಿದೆಯೆಂದು ಇಂದಿನವರೆಗೆ ಯಾರಿಗೂ ಗೊತ್ತಿಲ್ಲ.
7 Mojżesz miał sto dwadzieścia lat, gdy umarł. Jego wzrok nie był przyćmiony i jego siła go nie opuściła.
ಮೋಶೆಯು ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ. ಅವನ ಬಲ ಕುಂದಿಹೋಗಿರಲಿಲ್ಲ.
8 I synowie Izraela opłakiwali Mojżesza na równinach Moabu przez trzydzieści dni. Potem skończyły się dni płaczu i żałoby po Mojżeszu.
ಇಸ್ರಾಯೇಲರು ಮೋವಾಬಿನ ಬಯಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ದುಃಖಿಸಿದರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಸಂತಾಪದ ದಿವಸಗಳು ಮುಗಿದವು.
9 A Jozue, syn Nuna, był pełen ducha mądrości, bo Mojżesz włożył na niego swoje ręce. I synowie Izraela byli mu posłuszni i czynili tak, jak PAN nakazał Mojżeszowi.
ಇದಲ್ಲದೆ ನೂನನ ಮಗ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದವನಾಗಿದ್ದನು. ಏಕೆಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರು ಯೆಹೋಶುವನ ಮಾತು ಕೇಳಿದರು.
10 I nie powstał już prorok w Izraelu równy Mojżeszowi, którego PAN znał twarzą w twarz;
ಯೆಹೋವ ದೇವರ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದ ಮೋಶೆಯಂಥ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ.
11 We wszystkich znakach i cudach, dla których PAN posłał go, by je czynił w ziemi Egiptu [wobec] faraona, wszystkich jego sług i całej jego ziemi;
ಈಜಿಪ್ಟಿನಲ್ಲಿ ಫರೋಹನ ಮುಂದೆಯೂ, ಅವನ ಎಲ್ಲಾ ಅಧಿಕಾರಿಗಳ ಮುಂದೆಯೂ, ಜನರ ಮುಂದೆಯೂ ಸೂಚಕಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ಮಾಡುವುದಕ್ಕೆ ಯೆಹೋವ ದೇವರು ಮೋಶೆಯನ್ನು ಕಳುಹಿಸಿದ್ದರು.
12 I we wszystkich [sprawach] potężnej ręki, i w całej wielkiej grozie, którą Mojżesz wywołał na oczach całego Izraela.
ಇಸ್ರಾಯೇಲರ ಮುಂದೆ ಮೋಶೆಯು ನಡೆಸಿದ ವಿಶೇಷವಾದ ಕಾರ್ಯಗಳನ್ನು ಮತ್ತು ಭುಜಪರಾಕ್ರಮವನ್ನು ಯಾರೂ ಎಂದೂ ತೋರಿಸಿರಲಿಲ್ಲ ಅಥವಾ ಮಾಡಿರಲ್ಲ.