< Ezequiel 16 >

1 E veiu a mim a palavra do Senhor, dizendo:
ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
2 Filho do homem, faze conhecer a Jerusalem as suas abominações.
“ನರಪುತ್ರನೇ, ನೀನು ಯೆರೂಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ,
3 E dize: Assim diz o Senhor Jehovah a Jerusalem: A tua origem e o teu nascimento procedem da terra dos cananeos: teu pae era amorrheo, e a tua mãe hethea.
ಕರ್ತನಾದ ಯೆಹೋವನು ಯೆರೂಸಲೇಮ್ ಎಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ, ‘ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.
4 E, quanto ao teu nascimento, no dia em que nasceste não te foi cortado o umbigo, nem foste lavada com a agua, vendo-te eu; nem tão pouco foste esfregada com sal, nem envolta em faixas.
ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿನದಲ್ಲಿ ತಾಯಿಯು ನಿನ್ನ ಹೊಕ್ಕಳು ಕೊಯ್ದು ಕಟ್ಟಲಿಲ್ಲ, ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲು ಸುತ್ತಲಿಲ್ಲ.
5 Não se compadeceu de ti olho algum, para te fazer alguma coisa d'isto, compadecido de ti; antes foste lançada na face do campo, pelo nojo da tua alma, no dia em que tu nasceste.
ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿನದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿ ಬಿಟ್ಟರು.’
6 E, passando eu por ao pé de ti, vi-te pizada no teu sangue, e disse-te: Ainda que estejas no teu sangue, vive; sim, disse-te: Ainda que estejas no teu sangue, vive
“‘ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿದೆನು. ಹೌದು, ‘ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆನು.
7 Eu te fiz multiplicar como o renovo do campo, e cresceste, e te engrandeceste, e chegaste á grande formosura: avultaram os peitos, e brotou o teu pello; porém estavas nua e descoberta.
‘ಭೂಮಿಯಲ್ಲಿ ಮೊಳೆಯುವ ಮೊಳಿಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಲು, ನೀನು ಬಲಿತು ಪ್ರಾಯತುಂಬಿ ಅತಿಸುಂದರಿಯಾದಿ; ನಿನಗೆ ಸ್ತನಗಳು ಮೂಡಿದವು, ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ.
8 E, passando eu por ao pé de ti, vi-te, e eis que o teu tempo era tempo de amores; e estendi sobre ti a ourela do meu manto, e cobri a tua nudez; e dei-te juramento, e entrei em concerto comtigo, diz o Senhor Jehovah, e tu ficaste sendo minha.
ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.
9 Então te lavei na agua, e te enxuguei do teu sangue, e te ungi com oleo.
“ಆಗ ನಾನು ನೀರಿನಲ್ಲಿ ನಿನ್ನನ್ನು ಸ್ನಾನಮಾಡಿಸಿ ನಿನ್ನ ಮೇಲಣ ರಕ್ತವನ್ನು ತೊಳೆದುಬಿಟ್ಟು ನಿನಗೆ ತೈಲವನ್ನು ಹಚ್ಚಿದೆನು.
10 E te vesti de bordadura, e te calcei de pello de texugo, e te cingi de linho fino, e te cobri de seda.
೧೦ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲಪ್ರಾಣಿಯ ಕೆಂಪು ಚರ್ಮದ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರು ಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು.
11 E te ornei com ornamentos, e te puz braceletes nas mãos e um collar á rodo do teu pescoço.
೧೧ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಕಂಠಕ್ಕೆ ಮಾಲೆಯನ್ನು,
12 E te puz uma joia pendente na testa, e pendentes nas orelhas, e uma corôa de gloria na cabeça.
೧೨ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆನು.
13 E assim foste ornada de oiro e prata, e o teu vestido foi de linho fino, e de seda e bordadura: nutriste-te de flor de farinha, e mel e oleo; e foste formosa em extremo, e foste prospera, até chegares a ser rainha.
೧೩ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು, ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದೆ.
14 E saiu de ti a fama entre as nações, por causa da tua formosura, porque perfeita era, por causa da minha gloria que eu tinha posto sobre ti, diz o Senhor Jehovah.
೧೪ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯವು ಪರಿಪೂರ್ಣವಾಯಿತು; ನಿನ್ನ ಚೆಲುವು ಹೆಸರುವಾಸಿಯಾಗಿ ಜನಾಂಗಗಳಲ್ಲಿ ಹಬ್ಬಿತು” ಇದು ಕರ್ತನಾದ ಯೆಹೋವನ ನುಡಿ.
15 Porém confiaste na tua formosura, e fornicaste por causa da tua fama; derramaste as tuas fornicações a todo o que passava, para seres sua.
೧೫“ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು, ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ವ್ಯಭಿಚಾರಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರಮಾಡಿದೆ, ಪ್ರತಿಯೊಬ್ಬನ ಸಂಗಡ ವ್ಯಭಿಚಾರಕ್ಕೆ ಒಳಗಾದೆ.
16 E tomaste dos teus vestidos, e fizeste logares altos enfeitados, de diversas côres, e fornicaste sobre elles: taes coisas não vieram, nem hão de vir.
೧೬ನೀನು ಪೂಜಾ ಸ್ಥಾನಗಳನ್ನು ಕಟ್ಟಿಕೊಂಡು ನಿನ್ನ ಚಿತ್ರವಿಚಿತ್ರ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ ಅಲ್ಲಿ ವ್ಯಭಿಚಾರ ನಡಿಸಿದೆ. ಇದು ನಡೆಯತಕ್ಕದ್ದಲ್ಲ. ಆಗಬಾರದಾಗಿತ್ತು.
17 E tomaste as tuas joias de enfeite, que eu te dei do meu oiro e da minha prata, e fizeste imagens do homens, e fornicaste com ellas.
೧೭ಮತ್ತು ನಾನು ನನ್ನ ಬೆಳ್ಳಿ ಬಂಗಾರದಿಂದ ನಿನಗೆ ಮಾಡಿಸಿಕೊಟ್ಟಿದ್ದ ನಿನ್ನ ಚಂದವಾದ ಆಭರಣಗಳನ್ನು ನೀನು ತೆಗೆದು ಅವುಗಳಿಂದ ಪುರುಷ ಮೂರ್ತಿಗಳನ್ನು ರೂಪಿಸಿಕೊಂಡು ಅವುಗಳೊಡನೆ ವ್ಯಭಿಚಾರ ಮಾಡಿದೆ.
18 E tomaste os teus vestidos bordados, e os cobriste; e o meu oleo e o meu perfume pozeste diante d'ellas.
೧೮ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ, ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದೆ.
19 E o meu pão que te dei, a flor de farinha, e o oleo e o mel com que eu te sustentava tambem pozeste diante d'ellas em cheiro suave; e assim foi, diz o Senhor Jehovah.
೧೯ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ, ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!” ಇದು ಕರ್ತನಾದ ಯೆಹೋವನ ನುಡಿ.
20 Além d'isto, tomaste a teus filhos e tuas filhas, que me tinhas gerado, e os sacrificaste a ellas, para os consumirem: acaso é pequena a tua fornicação?
೨೦“ಇದಲ್ಲದೆ ನೀನು ನನಗೆ ಹೆತ್ತ ಗಂಡು ಮತ್ತು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞಮಾಡಿದೆ. ನಿನ್ನ ವ್ಯಭಿಚಾರವು ಅಲ್ಪಕಾರ್ಯವೆಂದು ಭಾವಿಸಿದಿಯೋ?
21 E mataste a meus filhos, e os entregaste a ellas para os fazerem passar pelo fogo.
೨೧ಅದನ್ನೂ ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ, ಆಹುತಿಕೊಟ್ಟು ಮೂರ್ತಿಗಳಿಗೆ ಅರ್ಪಿಸಿದಿಯೋ?
22 E em todas as tuas abominações, e tuas fornicações, não te lembraste dos dias da tua mocidade, quando tu estavas nua e descoberta, e pizada no teu sangue.
೨೨ಈ ನಿನ್ನ ಅಸಹ್ಯಕಾರ್ಯಗಳನ್ನೂ, ವ್ಯಭಿಚಾರವನ್ನು ನೀನು ಪದೇ ಪದೇ ನಡೆಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.
23 E succedeu, depois de toda a tua maldade (ai! ai de ti! diz o Senhor Jehovah),
೨೩ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!” ಎಂಬುದು ಕರ್ತನಾದ ಯೆಹೋವನ ನುಡಿ.
24 Que edificaste uma abobada, e fizeste logares altos por todas as ruas.
೨೪“ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ಮಂಟಪವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿರುವೆ.
25 A cada canto do caminho edificaste o teu logar alto, e fizeste abominavel a tua formosura, e alargaste os teus pés a todo o que passava: e assim multiplicaste as tuas fornicações.
೨೫ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನು ಸೇರಿಸಿ ವ್ಯಭಿಚಾರವನ್ನು ಹೆಚ್ಚಾಗಿ ನಡೆಸಿರುವೆ.
26 Tambem fornicaste com os filhos do Egypto, teus visinhos de grandes carnes, e multiplicaste a tua fornicação para me provocares á ira.
೨೬ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಐಗುಪ್ತ್ಯರೊಂದಿಗೆ ಸಹ ನೀನು ಬೆರೆತು ಹೆಚ್ಚಾಗಿ ವ್ಯಭಿಚಾರಮಾಡಿ ನನ್ನನ್ನು ರೇಗಿಸಿರುವೆ.
27 Pelo que eis que estendi a minha mão sobre ti, e diminui a tua porção; e te entreguei á vontade das que te aborrecem, a saber, das filhas dos philisteos, as quaes se envergonhavam do teu caminho depravado.
೨೭ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು.
28 Tambem fornicaste com os filhos da Assyria, porquanto eras insaciavel; e, fornicando com elles, nem ainda assim ficaste farta;
೨೮ಮತ್ತು ಇಷ್ಟೂ ಸಾಲದೆಂದು ಅಶ್ಶೂರ್ಯರೊಂದಿಗೂ ವ್ಯಭಿಚಾರಮಾಡಿದಿ; ಹೌದು, ಅವರೊಡನೆ ವ್ಯಭಿಚಾರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.
29 Antes multiplicaste as tuas fornicações na terra de Canaan até Chaldea, e nem ainda com isso te fartaste.
೨೯ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ದೀಯ ದೇಶಕ್ಕೆ ಸೇರಿ, ಅಲ್ಲಿಯೂ ಬಹಳ ವ್ಯಭಿಚಾರಮಾಡಿದೆ, ಆದರೂ ನಿನಗೆ ತೃಪ್ತಿಯಾಗಲಿಲ್ಲ.”
30 Quão fraco está o teu coração, diz o Senhor Jehovah, fazendo tu todas estas coisas, obras d'uma mulher meretriz e imperiosa!
೩೦ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿನ್ನ ಮನಸ್ಸು ಮೋಹಕ್ಕೆ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಸ್ತ್ರೀಯಾಗಿರುವೆ.
31 Edificando tu a tua abobada ao canto de cada caminho, e fazendo o teu logar alto em cada rua! nem foste como a meretriz, desprezando a paga;
೩೧ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ, ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ವ್ಯಭಿಚಾರಿಯಂತೆ ನೀನು ನಡೆಯುವವಳಲ್ಲ.
32 Antes como a mulher adultera que, em logar de seu marido, recebe os estranhos.
೩೨“ನೀನು ವ್ಯಭಿಚಾರಮಾಡುವ ಪತಿವ್ರತೆ! ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ!
33 A todas as meretrizes dão paga, mas tu dás os teus presentes a todos os teus amantes; e lhes dás presentes, para que venham a ti de todas as partes, por tuas fornicações.
೩೩ಎಲ್ಲಾ ಕಡೆ ವ್ಯಭಿಚಾರಿ ಸ್ತ್ರೀಗೆ ಹಣಕೊಡುವುದುಂಟು; ನೀನಾದರೋ ನಿನ್ನ ಪ್ರಿಯರಿಗೆಲ್ಲ ನೀನೇ ಹಣವನ್ನು ಕೊಡುತ್ತಿರುವೆ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ.
34 Assim que comtigo succede o contrario das mulheres nas tuas fornicações, pois após ti não andam para fornicar; porque, dando tu a paga, e a ti não sendo dada a paga, te fizeste contraria ás outras.
೩೪ನಿನ್ನ ವ್ಯಭಿಚಾರಕ್ಕೂ, ಇತರ ವೇಶ್ಯೆಯರ ವ್ಯಭಿಚಾರಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರ ಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರವು ವಿಪರೀತವೇ!”
35 Portanto, ó meretriz, ouve a palavra do Senhor.
೩೫ಹೀಗಿರಲು ವ್ಯಭಿಚಾರಿಯೇ, ಯೆಹೋವನ ಈ ವಾಕ್ಯವನ್ನು ಕೇಳು,
36 Assim diz o Senhor Jehovah: Porquanto se derramou o teu dinheiro, e se descobriu a tua nudez nas tuas fornicações com os teus amantes, como tambem com todos os idolos das tuas abominações, e no sangue de teus filhos que lhes deste:
೩೬ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ಮಿತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಪ್ರಿಯರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,
37 Portanto, eis que ajuntarei a todos os teus amantes, com os quaes te misturaste, como tambem a todos os que amaste, com todos os que aborreceste, e ajuntal-os-hei contra ti em redor, e descobrirei a tua nudez diante d'elles, para que vejam toda a tua nudez.
೩೭ಇವುಗಳನ್ನು ನಾನು ನೋಡಿ, ನೀನು ಸಂಭೋಗಿಸಿದ ನಿನ್ನ ಎಲ್ಲಾ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನ್ನ ವಿರುದ್ಧವಾಗಿ ಕೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.
38 E julgar-te-hei segundo o teu juizo das adulteras e das que derramam sangue; e entregar-te-hei ao sangue de furor e de ciume.
೩೮ವ್ಯಭಿಚಾರ ಮಾಡುವಂಥ, ರಕ್ತಸುರಿಸುವಂಥ ಹೆಂಗಸರಿಗೆ ತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ರಕ್ತವನ್ನು ಸುರಿಸುವೆನು.
39 E entregar-te-hei nas suas mãos, e derribarão a tua abobada, e transtornarão os teus altos logares, e te despirão os teus vestidos, e tomarão as tuas joias de enfeite, e te deixarão nua e descoberta.
೩೯ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ಮಂಟಪವನ್ನು ಕೆಡವಿ, ನಿನ್ನ ಜಗಲಿಗಳನ್ನು ಒಡೆದು, ನಿನ್ನ ಬಟ್ಟೆಗಳನ್ನು ಕಿತ್ತು ನಿನ್ನ ಒಡವೆಗಳನ್ನು ಸುಲಿದುಕೊಂಡು, ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು.
40 Então farão subir contra ti um ajuntamento, e te apedrejarão com pedra, e te traspassarão com as suas espadas.
೪೦ಅವರು ನಿನ್ನ ವಿಚಾರವಾಗಿ ನ್ಯಾಯಸಭೆಯನ್ನು ಕೂಡಿಸಿ, ನಿನ್ನನ್ನು ಕಲ್ಲೆಸೆದು ಕೊಲ್ಲುವರು, ಕತ್ತಿಗಳಿಂದ ಹತಿಸುವರು.
41 E queimarão as tuas casas a fogo, e executarão juizos contra ti, aos olhos de muitas mulheres; e te farei cessar de ser meretriz, e paga não darás mais.
೪೧ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಹಣಕೊಡದಿರುವಿ.
42 Assim farei descançar em ti o meu furor, e os meus ciumes se desviarão de ti, e me aquietarei, e nunca mais me indignarei.
೪೨ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.
43 Porquanto não te lembraste dos dias da tua mocidade, e me provocaste á ira com tudo isto: pelo que, eis que tambem eu farei recair o teu caminho sobre a tua cabeça, diz o Senhor Jehovah, e não farás tal enormidade de mais sobre todas as tuas abominações.
೪೩“ನೀನು ನಿನ್ನ ಯೌವನ ಕಾಲವನ್ನು ಜ್ಞಾಪಕಮಾಡಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿರುವೆ” ಇದು ಕರ್ತನಾದ ಯೆಹೋವನ ನುಡಿ.
44 Eis que todo o que usa de proverbios usará de ti n'este proverbio, dizendo: Qual a mãe, tal sua filha.
೪೪“ಆಹಾ, ಗಾದೆಗಳಲ್ಲಿ ಜಾಣರು ‘ತಾಯಿಯಂತೆ ಮಗಳು’ ಎಂಬ ಗಾದೆಯನ್ನು ನಿನ್ನ ವಿಷಯವಾಗಿ ನುಡಿಯುವರು.
45 Tu és a filha de tua mãe, que tinha nojo de seu marido e de seus filhos; e tu és a irmã de tuas irmãs, que tinham nojo de seus maridos e de seus filhos: vossa mãe foi hethea, e vosso pae amorrheo.
೪೫ಗಂಡನಿಗೂ, ಮಕ್ಕಳಿಗೂ ಬೇಸರಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ, ಮಕ್ಕಳಿಗೂ ಬೇಸರಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
46 E tua irmã maior é Samaria, ella e suas filhas, a qual habita á tua esquerda: e tua irmã menor que tu, que habita á tua mão direita, é Sodoma e suas filhas
೪೬ನಿನ್ನ ಉತ್ತರಕ್ಕೆ ತನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ನಿನ್ನ ದಕ್ಷಿಣಕ್ಕೆ ನಿನ್ನ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
47 Todavia não andaste nos caminhos, nem fizeste conforme as suas abominações, como se isto mui pouco fôra; porém te corrompeste mais do que ellas, em todos os teus caminhos.
೪೭ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.”
48 Vivo eu, diz o Senhor Jehovah, que não fez Sodoma, tua irmã, nem ella, nem suas filhas, como fizeste tu e tuas filhas.
೪೮ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನೀನೂ ನಿನ್ನ ಕುಮಾರ್ತೆಯರೂ ನಡೆದಂತೆ ಸೊದೋಮೆಂಬ ನಿನ್ನ ತಂಗಿಯಾಗಲಿ, ಆಕೆಯ ಕುಮಾರ್ತೆಯರಾಗಲಿ ನಡೆಯಲಿಲ್ಲ.
49 Eis que esta foi a maldade de Sodoma, tua irmã; soberba, fartura de pão, e abundancia de ociosidade teve ella e suas filhas, porém nunca esforçou a mão do pobre e do necessitado.
೪೯ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.
50 E se ensoberbeceram, e fizeram abominação diante de mim; pelo que as tirei d'ali, vendo eu isto.
೫೦ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲ ಮಾಡಿದೆನು.
51 Tambem Samaria não commetteu a metade de teus peccados: e multiplicaste as tuas abominações mais do que ellas, e justificaste a tuas irmãs, com todas as tuas abominações que fizeste.
೫೧ಸಮಾರ್ಯವೆಂಬಾಕೆಯು ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.
52 Tu pois tambem leva a tua vergonha, tu que julgaste a tuas irmãs, pelos teus peccados, que fizeste mais abominaveis do que ellas; mais justas são do que tu: envergonha-te logo tambem, e leva a tua vergonha, pois justificaste a tuas irmãs.
೫೨ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯ ಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಲಜ್ಜೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.
53 Eu pois farei voltar os captivos d'elles; os captivos de Sodoma e suas filhas, e os captivos de Samaria e suas filhas, e os captivos do teu captiveiro entre ellas;
೫೩“ಸೊದೋಮ್ ಮತ್ತು ಆಕೆಯ ಕುಮಾರ್ತೆಯರು, ಸಮಾರ್ಯ ಮತ್ತು ಆಕೆಯ ಕುಮಾರ್ತೆಯರು, ಇವರ ದುರಾವಸ್ಥೆಯನ್ನು ನಾನು ತಪ್ಪಿಸುವೆನು, ಅದರೊಂದಿಗೆ ನಿನ್ನ ದುರಾವಸ್ಥೆಯನ್ನೂ ತಪ್ಪಿಸುವೆನು.
54 Para que leves a tua vergonha, e sejas envergonhada por tudo o que fizeste, dando-lhes tu consolação.
೫೪ಹೀಗಿರಲು ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವಿ, ನಾಚಿಕೆಗೊಳ್ಳುವಿ.
55 Quando tuas irmãs, Sodoma e suas filhas, tornarem ao seu primeiro estado, e tambem Samaria e suas filhas tornarem ao seu primeiro estado, tambem tu e tuas filhas tornareis ao vosso primeiro estado.
೫೫ಆಗ ಸಮಾರ್ಯ ಮತ್ತು ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ ಮತ್ತು ಅವರ ಕುಮಾರ್ತೆಯರೂ ತಮ್ಮ ಪೂರ್ವಸ್ಥಿತಿಗೆ ಸೇರುವರು, ನೀನೂ ನಿನ್ನ ಕುಮಾರ್ತೆಯರೂ ನಿಮ್ಮ ಪೂರ್ವಸ್ಥಿತಿಗೆ ಸೇರುವಿರಿ.
56 Nem até Sodoma, tua irmã, foi ouvida na tua bocca, no dia das tuas soberbas,
೫೬ಅರಾಮಿನ ಕುಮಾರ್ತೆಯರು ಮತ್ತು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುಮಾರ್ತೆಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮೊದಲು,
57 Antes que se descobrisse a tua maldade, como no tempo do desprezo das filhas da Syria, e de todos os que estavam ao redor d'ella, as filhas dos philisteos, que te desprezavam em redor.
೫೭ನಿನ್ನ ಕೆಟ್ಟತನವು ಬಯಲಿಗೆ ಬರುವುದಕ್ಕೆ ಮೊದಲು, ಆ ನಿನ್ನ ಗರ್ವಕಾಲದಲ್ಲಿ ಅರಾಮ್ಯರ ಪುತ್ರಿಯರಿಂದಲೂ ಮತ್ತು ಫಿಲಿಷ್ಟಿಯರ ಪುತ್ರಿಯರಿಂದಲೂ ನಿನ್ನ ಹೆಸರು ಅವರ ಬಾಯಲ್ಲಿ ಬರಲೇ ಇಲ್ಲ.
58 A tua enormidade e as tuas abominações tu levarás, diz o Senhor.
೫೮ಈಗ ನಿನ್ನ ದುರ್ನಡತೆಯ ಮತ್ತು ದುರಾಚಾರಗಳ ಫಲವನ್ನು ನೀನು ಅನುಭವಿಸಬೇಕಾಗಿ ಬಂತು” ಇದು ಯೆಹೋವನ ನುಡಿ.
59 Porque assim diz o Senhor Jehovah: Tambem te farei como fizeste; que desprezaste o juramento, quebrantando o concerto.
೫೯ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿರುವೆ ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.
60 Comtudo eu me lembrarei do meu concerto comtigo nos dias da tua mocidade; e estabelecerei comtigo um concerto eterno.
೬೦ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೊಂಡು, ನಿನ್ನ ಸಂಗಡ ಎಂದಿಗೂ ತಪ್ಪದ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.
61 Então te lembrarás dos teus caminhos, e te confundirás, quando receberes tuas irmãs maiores do que tu, com as menores do que tu, porque t'as darei por filhas, porém não pelo teu concerto.
೬೧ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ಮತ್ತು ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಪಿಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.
62 Porque eu estabelecerei o meu concerto comtigo, e saberás que eu sou o Senhor;
೬೨ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.
63 Para que te lembres d'isso, e te envergonhes, e nunca mais abras a tua bocca por causa da tua vergonha, quando me reconciliar comtigo de tudo quanto fizeste, diz o Senhor Jehovah.
೬೩ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.

< Ezequiel 16 >