< Ezequiel 40 >
1 No anno vinte e cinco do nosso captiveiro, no principio do anno, no decimo dia do mez, quatorze annos depois que a cidade foi ferida, n'aquelle mesmo dia veiu sobre mim a mão do Senhor, e me levou para lá.
ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೆಯ ದಿನದಲ್ಲಿ, ಪಟ್ಟಣವು ನಾಶವಾದ ಮೇಲೆ, ಹದಿನಾಲ್ಕನೆಯ ವರ್ಷದ ಅದೇ ದಿನದಲ್ಲಿ, ಯೆಹೋವ ದೇವರ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.
2 Em visões de Deus me levou á terra d'Israel, e me poz sobre um monte mui alto, e havia sobre elle como edificio de cidade para a banda do sul.
ದೇವರ ದರ್ಶನಗಳಲ್ಲಿ ಅವರು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ನಿಲ್ಲಿಸಿದರು. ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.
3 E, havendo-me levado ali, eis que um homem cujo parecer era como o parecer de cobre tinha um cordel de linho na sua mão e uma canna de medir; e elle estava em pé na porta.
ಅವರು ನನ್ನನ್ನು ಅಲ್ಲಿಗೆ ತಂದಾಗ, ಅಲ್ಲಿ ಕಂಚಿನಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲೂ ಅಳತೆಯ ಕೋಲೂ ಇತ್ತು. ಅವನು ಬಾಗಿಲಲ್ಲೇ ನಿಂತಿದ್ದನು.
4 E disse-me o homem: Filho do homem, vê com os teus olhos, e ouve com os teus ouvidos, e põe no teu coração tudo quanto eu te fizer vêr; porque afim de t'o mostrar foste tu aqui trazido: annuncia pois á casa de Israel tudo quanto tu vires
ಆ ಮನುಷ್ಯನು ನನಗೆ, “ಮನುಷ್ಯಪುತ್ರನೇ ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ಮತ್ತು ನಾನು ತೋರಿಸುವ ಎಲ್ಲಾ ಸಂಗತಿಗಳಿಗೆ ನೀನು ಮನಸ್ಸಿಡು. ನಾನು ನಿನಗೆ ಅವುಗಳನ್ನೆಲ್ಲಾ ತೋರಿಸುವುದಕ್ಕಾಗಿಯೇ ಇಲ್ಲಿಗೆ ನಿನ್ನನ್ನು ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ಜನರಿಗೆ ತಿಳಿಸು,” ಎಂದರು.
5 E eis um muro fóra da casa em redor, e na mão do homem uma canna de medir, de seis covados, cada covado d'um covado e um palmo, e mediu a largura do edificio, d'uma canna, e a altura, d'uma canna.
ನಾನು ದೇವಾಲಯದ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರೆದಿರುವ ಒಂದು ಗೋಡೆಯನ್ನು ಕಂಡೆನು. ಆ ಮನುಷ್ಯನ ಕೈಯಲ್ಲಿದ್ದ ಅಳತೆ ಕೋಲು ಸುಮಾರು ಮೂರು ಮೀಟರ್ ಉದ್ದವಿತ್ತು, ಪ್ರತಿಯೊಂದೂ ಒಂದು ಮೀಟರ್ ಮತ್ತು ಒಂದು ಅಂಗೈ ಅಗಲವಾಗಿತ್ತು. ಆ ಮನುಷ್ಯನು ಗೋಡೆಯನ್ನು ಅಳೆದನು. ಅದು ಒಂದು ಕೋಲು ಅಗಲ ಮತ್ತು ಒಂದು ಕೋಲು ಎತ್ತರವಾಗಿತ್ತು.
6 Então veiu á porta que olhava para o caminho do oriente, e subiu pelos seus degraus; mediu o umbral da porta, uma canna de largo, e o outro umbral, d'uma canna de largo.
ಆಮೇಲೆ ಅವನು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಬಾಗಿಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಿಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು.
7 E cada camarinha era uma canna de comprido, e outra canna de largo, e entre as camarinhas havia cinco covados; e o umbral da porta, ao pé do vestibulo da porta, era d'uma canna, por dentro.
ಕಾವಲುಗಾರರ ಕೋಣೆಯ ಉಪವಿಭಾಗಗಳು ಒಂದು ಕೋಲು ಉದ್ದ ಮತ್ತು ಒಂದು ಕೋಲು ಅಗಲವಿದ್ದವು ಮತ್ತು ಕೋಣೆಯ ಉಪವಿಭಾಗಗಳ ನಡುವಿನ ಗೋಡೆಗಳು ಸುಮಾರು ಮೂರು ಮೀಟರ್ ದಪ್ಪವಾಗಿದ್ದವು. ಮತ್ತು ದೇವಾಲಯಕ್ಕೆ ಎದುರಾಗಿರುವ ದ್ವಾರಮಂಟಪದ ಮುಂದಿನ ಹೆಬ್ಬಾಗಿಲಿನ ಹೊಸ್ತಿಲು ಒಂದು ಕೋಲು ಆಳವಾಗಿತ್ತು.
8 Tambem mediu o vestibulo da porta por dentro, d'uma canna.
ನಂತರ ಅವನು ಹೆಬ್ಬಾಗಿಲಿನ ದ್ವಾರಮಂಟಪವನ್ನು ಅಳೆದನು.
9 Então mediu o outro alpendre da porta, de oito covados, e os seus pilares, de dois covados, e o vestibulo da porta, por dentro.
ಆಮೇಲೆ ಬಾಗಿಲಿನ ದ್ವಾರಾಂಗಣವನ್ನು ಸುಮಾರು ನಾಲ್ಕು ಮೀಟರ್ ಅದರ ಕಂಬಗಳನ್ನು ಸುಮಾರು ಒಂದು ಮೀಟರ್ ಎಂದು ಅಳೆದನು. ಹೆಬ್ಬಾಗಿಲಿನ ದ್ವಾರಮಂಟಪವು ದೇವಾಲಯಕ್ಕೆ ಎದುರಾಗಿತ್ತು.
10 E as camarinhas da porta do caminho para o oriente eram tres d'esta e tres da outra banda, uma mesma medida era a das tres: tambem os pilares d'esta e da outra banda tinham a mesma medida.
ಪೂರ್ವದಿಕ್ಕಿನ ಕೋಣೆಯ ಉಪವಿಭಾಗಗಳು ಈ ಕಡೆಯಲ್ಲಿ ಮೂರೂ ಆ ಕಡೆಯಲ್ಲಿ ಮೂರೂ ಇದ್ದವು. ಆ ಮೂರಕ್ಕೂ ಒಂದೇ ಅಳತೆ ಇತ್ತು. ಎರಡೂ ಕಡೆಯ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು.
11 Mediu mais a largura da entrada da porta, de dez covados; e o comprimento da porta, treze covados.
ಅನಂತರ ಅವನು ಹೆಬ್ಬಾಗಿಲ ದ್ವಾರವನ್ನು ಅಳೆದನು. ಅದರ ಅಗಲ ಸುಮಾರು ಐದು ಮೀಟರ್ ಹಾಗು ಉದ್ದ ಸುಮಾರು ಆರುವರೆ ಮೀಟರ್ ಇತ್ತು.
12 E o espaço de diante das camarinhas era de um covado, e de um covado o espaço da outra banda: e cada camarinha tinha seis covados d'uma e seis covados da outra banda.
ಪ್ರತಿಯೊಂದು ಕೋಣೆಯ ಉಪವಿಭಾಗಗಳ ಮುಂದೆ ಸುಮಾರು ಅರ್ಧ ಮೀಟರ್ ಎತ್ತರದ ಗೋಡೆಯಿತ್ತು. ಕೋಣೆಯ ಉಪವಿಭಾಗಗಳು ಸುಮಾರು ಮೂರು ಚದರ ಮೀಟರ್ ಆಗಿದ್ದವು.
13 Então mediu a porta desde o telhado d'uma camarinha até ao telhado da outra, vinte e cinco covados de largo, porta contra porta.
ಆಗ ಅವನು, ಒಂದು ಕೋಣೆಯ ಉಪವಿಭಾಗದ ಮಾಳಿಗೆಯಿಂದ ಇನ್ನೊಂದು ಕೋಣೆಯ ಉಪವಿಭಾಗದ ಮಾಳಿಗೆಯವರೆಗೆ ಅಳೆದನು. ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಸುಮಾರು ಹದಿಮೂರು ಮೀಟರಿತ್ತು.
14 Tambem fez pilares de sessenta covados, a saber, para o pilar do atrio, em roda da porta.
ಬಾಗಿಲಿನ ಚೌಕಟ್ಟಿನ ಕಂಬಗಳನ್ನು ಅಳತೆಮಾಡಲು ಸುಮಾರು ಮೂವತ್ತೆರಡು ಮೀಟರ್ ಇದ್ದವು. ಅದು ಬಾಗಿಲಿನ ಸುತ್ತಮುತ್ತಲಿರುವ ಕಂಬದವರೆಗೂ ಇತ್ತು.
15 E, desde a dianteira da porta da entrada até á dianteira do vestibulo da porta interior, havia cincoenta covados.
ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳಬಾಗಿಲಿನ ದ್ವಾರದ ಅಂಗಳದವರೆಗೂ ಸುಮಾರು ಇಪ್ಪತ್ತೇಳು ಮೀಟರ್ ದೂರವಿತ್ತು.
16 Fez tambem janellas de fechar nas camarinhas, e nos seus pilares, dentro da porta ao redor, e da mesma sorte nos vestibulos: e as janellas estavam á roda pela parte de dentro, e nos pilares havia palmas.
ಕೋಣೆಯ ಉಪವಿಭಾಗಗಳು ಮತ್ತು ಬಾಗಿಲ ಚೌಕಟ್ಟಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು. ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು. ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು.
17 E elle me levou ao atrio exterior; e eis que havia n'elle camaras, e um solhado que estava feito no atrio em redor: trinta camaras havia n'aquelle solhado.
ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆತಂದನು. ಅಲ್ಲಿ ನಾನು ಕೆಲವು ಕೋಣೆಗಳನ್ನು ಮತ್ತು ಅಂಗಳದ ಸುತ್ತಲೂ ನಿರ್ಮಿಸಲಾದ ಒಂದು ಕಾಲುದಾರಿಯನ್ನು ಕಂಡೆನು. ಕಾಲುದಾರಿ ಉದ್ದಕ್ಕೂ ಮೂವತ್ತು ಕೋಣೆಗಳಿದ್ದವು.
18 E o solhado da banda das portas era a par do comprimento das portas: o solhado estava debaixo.
ಬಾಗಿಲುಗಳ ಪಾರ್ಷ್ವದಲ್ಲಿಯೂ ಬಾಗಿಲುಗಳ ಉದ್ದಕ್ಕೆ ಸರಿಯಾಗಿಯೂ ಇದ್ದ ಆ ಕಲ್ಲು ಹಾಸಿದ ನೆಲವು ಕೆಳಗಿನ ನೆಲಗಟ್ಟಾಗಿತ್ತು.
19 E mediu a largura da dianteira do atrio interior, por fóra, cem covados, da banda do oriente e do norte.
ಆಗ ಅವನು ಕೆಳಗಿನ ಬಾಗಿಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು.
20 E, quanto á porta que olhava para o caminho do norte, no atrio exterior, elle mediu o seu comprimento e a sua largura.
ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರಗಿನ ಬಾಗಿಲಿನ ಉದ್ದವನ್ನೂ ಅಗಲವನ್ನೂ ಅಳೆದನು.
21 E as suas camarinhas, tres d'uma banda, e tres da outra, e os seus pilares e os seus vestibulos eram da medida da primeira porta: cincoenta covados era o seu comprimento, e a largura vinte e cinco covados.
ಅದರ ಕೋಣೆಯ ಉಪವಿಭಾಗಗಳು ಈ ಕಡೆಗೂ ಆ ಕಡೆಗೂ ಮೂರು ಇದ್ದವು. ಅದರ ಕಂಬಗಳು ಮತ್ತು ಅದರ ಕೈಸಾಲೆಗಳು ಮೊದಲನೆಯ ಬಾಗಿಲಿನ ಅಳತೆಯಂತೆ ಇದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.
22 E as suas janellas, e os seus vestibulos, e as suas palmas, eram da medida da porta que olhava para o caminho do oriente; e subiam a ella por sete degraus, e os seus vestibulos estavam diante d'ellas.
ಅದರ ಕಿಟಕಿಗಳೂ ಅದರ ಕೈಸಾಲೆಗಳೂ ಅದರ ಖರ್ಜೂರದ ಗಿಡಗಳೂ ಪೂರ್ವ ಕಡೆಯ ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.
23 E estava a porta do atrio interior defronte da porta do norte e do oriente; e mediu de porta a porta cem covados.
ಒಳಗಿನ ಅಂಗಳದ ಬಾಗಿಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಿಲಿಗೆ ಎದುರಾಗಿತ್ತು. ಅವನು ಬಾಗಿಲಿನಿಂದ ಬಾಗಿಲಿಗೆ ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು.
24 Então elle me levou ao caminho do sul, e eis uma porta que olhava para o caminho do sul, e mediu os seus pilares e os seus vestibulos conforme estas medidas.
ಆಮೇಲೆ ಆತನು ನನ್ನನ್ನು ದಕ್ಷಿಣದ ಕಡೆಗೆ ಕರೆತಂದನು ಅಲ್ಲಿಯೂ ಬಾಗಿಲು ಇತ್ತು, ಅವನು ಅದರ ಕಂಬಗಳನ್ನು ಅದರ ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು.
25 E tinha tambem janellas em redor dos seus vestibulos, como estas janellas: cincoenta covados o comprimento, e a largura vinte e cinco covados.
ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.
26 E de sete degraus eram as suas subidas, e os seus vestibulos diante d'ellas; e tinha umas palmas, uma d'uma banda e outra da outra banda, nos seus pilares.
ಅದಕ್ಕೆ ಏರುವ ಹಾಗೆ ಏಳೂ ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು. ಅದರ ಕಂಬಗಳು ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರದಿಂದ ಅಲಂಕರಿಸಲಾಗಿತ್ತು.
27 Tambem havia uma porta no atrio interior para o caminho do sul; e mediu de porta a porta, para o caminho do sul, cem covados.
ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಿಲಿತ್ತು. ಅವನು ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿಗೆ ದಕ್ಷಿಣವಾಗಿ ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು.
28 Então me levou ao atrio interior pela porta do sul; e mediu a porta do sul, conforme estas medidas.
ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಿಲನ್ನು ಅಳೆದನು.
29 E as suas camarinhas, e os seus pilares, e os seus vestibulos eram conforme estas medidas; e tinham tambem janellas ao redor dos seus vestibulos: o comprimento era de cincoenta covados, e a largura de vinte e cinco covados.
ಅಲ್ಲಿನ ಕೋಣೆಯ ಉಪವಿಭಾಗಗಳನ್ನೂ ಅದರ ಕಂಬಗಳನ್ನೂ ಅದರ ಪಡಸಾಲೆಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಸುತ್ತಲೂ ಇರುವ ಅದರ ಪಡಸಾಲೆಗಳಲ್ಲಿಯೂ ಕಿಟಕಿಗಳಿದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.
30 E havia vestibulos em redor: o comprimento era de vinte e cinco covados, e a largura de cinco covados.
ಸುತ್ತಲಿರುವ ಕೈಸಾಲೆಗಳೂ ಸುಮಾರು ಇಪ್ಪತ್ತೈದು ಮೀಟರ್ ಉದ್ದವಾಗಿಯೂ ಸುಮಾರು ಹದಿಮೂರು ಮೀಟರ್ ಅಗಲವಾಗಿಯೂ ಇದ್ದವು.
31 E os seus vestibulos estavam no atrio exterior, e tinham palmas nos seus pilares; e de oito degraus eram as suas subidas.
ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗಿದ್ದವು. ಅದರ ಕಂಬಗಳಲ್ಲಿ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು. ಅದಕ್ಕೆ ಏರುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು.
32 Depois me levou ao atrio interior, para o caminho do oriente, e mediu a porta conforme estas medidas;
ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ಬಾಗಿಲನ್ನು ಅಳೆದನು.
33 Como tambem as suas camarinhas, e os seus pilares, e os seus vestibulos, conforme estas medidas; e tinha tambem janellas em redor dos seus vestibulos: o comprimento de cincoenta covados, e a largura de vinte e cinco covados.
ಅಲ್ಲಿನ ಕೋಣೆಯ ಉಪವಿಭಾಗಗಳನ್ನೂ ಅದರ ಕಂಬಗಳನ್ನೂ ಅದರ ಪಡಸಾಲೆಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಸುತ್ತಲೂ ಇರುವ ಅದರ ಪಡಸಾಲೆಗಳಲ್ಲಿಯೂ ಕಿಟಕಿಗಳಿದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.
34 E os seus vestibulos estavam no atrio de fóra: tambem havia palmas nos seus pilares de uma e de outra banda; e eram as suas subidas de oito degraus.
ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು; ಮೇಲೆ ಹತ್ತುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು.
35 Então me levou á porta do norte, e mediu conforme estas medidas;
ಅವನು ನನ್ನನ್ನು ಉತ್ತರದ ಬಾಗಿಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು;
36 As suas camarinhas, os seus pilares, e os seus vestibulos; tambem tinha janellas em redor: o comprimento era de cincoenta covados, e a largura de vinte e cinco covados.
ಅಲ್ಲಿಯ ಕೋಣೆಯ ಉಪವಿಭಾಗಗಳು, ಅಲ್ಲಿನ ಕಂಬಗಳು, ಅಲ್ಲಿನ ಕೈಸಾಲೆಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.
37 E os seus pilares estavam no atrio exterior: tambem havia palmas nos seus pilares de uma e de outra banda; e eram as suas subidas de oito degraus.
ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗೆ ಇದ್ದವು. ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು; ಮೇಲೆ ಹತ್ತುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು.
38 E a sua camara e a sua porta estavam junto aos pilares das portas onde levavam o holocausto.
ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಿಲುಗಳ ಕಂಬಗಳ ಬಳಿಯಲ್ಲಿ, ದಹನಬಲಿಯನ್ನು ತೊಳೆಯುವಲ್ಲಿ ಇದ್ದವು;
39 E no vestibulo da porta havia duas mesas de uma banda, e duas mesas da outra, para n'ellas se degolar o holocausto e o sacrificio pelo peccado e pela culpa.
ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡು ಮೇಜುಗಳು ಈ ಕಡೆಗೆ ಮತ್ತು ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.
40 Tambem da banda de fóra da subida para a entrada da porta do norte havia duas mesas; e da outra banda, que estava no vestibulo da porta, havia duas mesas.
ಉತ್ತರ ಹೆಬ್ಬಾಗಿಲ ಪ್ರವೇಶಸ್ಥಾನದ ಮೆಟ್ಟಲುಗಳ ಹತ್ತಿರ, ಆ ಬಾಗಿಲ ಕೈಸಾಲೆಯ ಹೊರಗೆ, ಒಂದು ಕೊನೆಯಲ್ಲಿ ಎರಡು ಮೇಜುಗಳೂ ಇದ್ದವು.
41 Quatro mesas de uma, e quatro mesas da outra banda; aos lados da porta oito mesas, sobre as quaes immolavam.
ಬಾಗಿಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞಗಳನ್ನು ಅರ್ಪಿಸುತ್ತಿದ್ದರು.
42 E as quatro mesas para o holocausto eram de pedras lavradas: o comprimento era de um covado e meio, e a largura de um covado e meio, e a altura de um covado: e sobre ellas se punham os instrumentos com que immolavam o holocausto e o sacrificio.
ದಹನಬಲಿಗಾಗಿ ಇದ್ದ ಆ ನಾಲ್ಕು ಮೇಜುಗಳು ಕೆತ್ತಿದ ಕಲ್ಲುಗಳಿಂದ ನಿರ್ಮಿತವಾಗಿದ್ದವು. ಅವುಗಳ ಉದ್ದ ಮತ್ತು ಅಗಲ ಸುಮಾರು ಎಂಬತ್ತು ಸೆಂಟಿಮೀಟರ್, ಎತ್ತರವೂ ಸುಮಾರು ಐವತ್ತಮೂರು ಸೆಂಟಿಮೀಟರ್. ಇವುಗಳ ಮೇಲೆ ಅವರು ದಹನಬಲಿಯನ್ನೂ ಅರ್ಪಣೆಯನ್ನೂ ವಧಿಸುವ ಸಲಕರಣೆಗಳನ್ನೂ ಇಡುತ್ತಿದ್ದರು.
43 E as pedras do lar eram de um palmo de grossura, postas na casa em redor, e sobre as mesas a carne da offerta.
ಒಳಗೆ ಸುತ್ತಲಾಗಿ ಅಂಗೈ ಅಗಲದಷ್ಟು ಕೊಂಡಿಗಳು ಜಡಿಯಲಾಗಿದ್ದವು. ಮೇಜುಗಳ ಮೇಲೆ ಬಲಿಯ ಮಾಂಸವಿತ್ತು.
44 E fóra da porta interior estavam as camaras dos cantores, no atrio de dentro, que estava da banda da porta do norte e olhava para o caminho do sul: uma estava á banda da porta do oriente, a qual olhava para o caminho do norte.
ಅನಂತರ ಅವನು ನನ್ನನ್ನು ಒಳಗಿನ ಪ್ರಾಕಾರಕ್ಕೆ ಕರೆತಂದರು. ಅಲ್ಲಿ ಎರಡು ಕೊಠಡಿಗಳು ಇದ್ದವು. ಒಂದು ಉತ್ತರದ ಬಾಗಿಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಿಲಿನ ಕಡೆಗೆ ಉತ್ತರಕ್ಕೆ ಅಭಿಮುಖವಾಗಿತ್ತು.
45 E elle me disse: Esta camara que olha para o caminho do sul é para os sacerdotes que teem a guarda do templo.
ಅವನು ನನಗೆ ಹೇಳಿದ್ದೇನೆಂದರೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ದೇವಾಲಯದ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.
46 Mas a camara que olha para o caminho do norte é para os sacerdotes que teem a guarda do altar: estes são os filhos de Zadoc, que se chegam ao Senhor, d'entre os filhos de Levi, para o servir.
ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಬಲಿಪೀಠದ ಮೇಲ್ವಿಚಾರಕರಾದ ಯಾಜಕರದು. ಚಾದೋಕನ ಪುತ್ರರಾದ ಇವರು ಲೇವಿಯ ಕುಲದವರಲ್ಲಿ ಯೆಹೋವ ದೇವರ ಸನ್ನಿಧಿಯ ಸೇವಕರಾಗಿದ್ದಾರೆ.”
47 E mediu o atrio: o comprimento de cem covados e a largura de cem covados, quadrado; e o altar estava diante do templo.
ಹೀಗೆ ಅವನು ಅಂಗಳವನ್ನು ಅಳೆದನು. ಅದರ ಉದ್ದವು ಸುಮಾರು ಐವತ್ತು ಮೀಟರ್, ಅಗಲವು ಸುಮಾರು ಐವತ್ತು ಮೀಟರ್ ಚಚ್ಚೌಕವಾಗಿತ್ತು. ಆ ಬಲಿಪೀಠವು ದೇವಾಲಯದ ಮುಂದೆ ಇತ್ತು.
48 Então me levou ao vestibulo do templo, e mediu a cada pilar do vestibulo, cinco covados de uma banda, e cinco covados da outra; e a largura da porta, tres covados de uma banda, e tres covados da outra.
ಅವನು ನನ್ನನ್ನು ಮನೆಯ ದ್ವಾರಮಂಟಪಕ್ಕೆ ಕರೆದುಕೊಂಡು ಹೋಗಿ, ದ್ವಾರಮಂಟಪ ಪ್ರತಿಯೊಂದು ಕಂಬವನ್ನೂ ಅಳೆದನು. ದ್ವಾರಮಂಟಪ ಅಗಲವು ಸುಮಾರು ಏಳು ಮೀಟರ್ ಮತ್ತು ಪಕ್ಕದ ಗೋಡೆಗಳ ಅಗಲವು ಎರಡೂ ಬದಿಗಳಲ್ಲಿ ಸುಮಾರು ಒಂದೂವರೆ ಮೀಟರ್ ಆಗಿತ್ತು.
49 O comprimento do vestibulo era de vinte covados, e a largura de onze covados, e com degraus, pelos quaes se subia; e havia columnas junto aos pilares, uma de uma banda e outra da outra.
ದ್ವಾರಮಂಟಪದ ಅಗಲವು ಸುಮಾರು ಹನ್ನೊಂದು ಮೀಟರ್ ಮತ್ತು ಮುಂಭಾಗದಿಂದ ಹಿಂಭಾಗಕ್ಕೆ ಸುಮಾರು ಆರು ಮೀಟರ್. ಅದನ್ನು ಹತ್ತಲು ಮೆಟ್ಟಿಲುಗಳಿದ್ದವು ಮತ್ತು ಎರಡೂ ಬದಿಗಳಲ್ಲಿ ಬಾಗಿಲಿನ ಚೌಕಟ್ಟುಗಳ ಬದಿಗಳಲ್ಲಿ ಕಂಬಗಳು ಇದ್ದವು.