< Hebreus 9 >
1 Ora tambem o primeiro tinha ordenanças de culto divino, e um sanctuario terrestre.
ಮೊದಲನೆಯ ಒಡಂಬಡಿಕೆಯಲ್ಲಿ ದೈವಿಕ ಆರಾಧನೆಯ ಕ್ರಮಗಳಿದ್ದವು. ಮಾತ್ರವಲ್ಲದೆ ಮಾನವ ನಿರ್ಮಿತ ಪವಿತ್ರ ಸ್ಥಳವೂ ಇತ್ತು.
2 Porque o tabernaculo foi preparado, o primeiro, em que estava o candieiro, e a mesa e os pães da proposição, o que se chama o sanctuario.
ಅದರೊಳಗೆ ಒಂದು ಗುಡಾರವು ಕಟ್ಟಲಾಗಿತ್ತು. ಅದರ ಪ್ರಥಮ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು. ಅದು ಪವಿತ್ರ ಸ್ಥಳ ಎಂದು ಕರೆಯಲಾಗಿತ್ತು.
3 Mas após o segundo véu estava o tabernaculo, que se chama o sancto dos sanctos,
ಎರಡನೆಯ ತೆರೆಯ ಆಚೆ ಅತಿ ಪವಿತ್ರ ಸ್ಥಳ ಎಂದು ಕರೆಯಲಾದ ಗುಡಾರವಿತ್ತು.
4 Que tinha o incensario de oiro, e a arca do concerto, coberta de oiro toda em redor: em que estava a talha de oiro, que continha o manná, e a vara de Aarão, que tinha florescido, e as taboas do concerto;
ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.
5 E sobre a arca os cherubins da gloria, que faziam sombra no propiciatorio; das quaes coisas não fallaremos agora particularmente.
ಮಂಜೂಷದ ಮೇಲೆ ಮಹಿಮೆಯ ಕೆರೂಬಿಯರು ಕರುಣಾಸನವನ್ನು ಮುಚ್ಚಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಸವಿಸ್ತಾರವಾಗಿ ನಾನು ಹೇಳುವುದಕ್ಕಾಗದು.
6 Ora, estando estas coisas assim preparadas, a todo o tempo entravam os sacerdotes no primeiro tabernaculo, para cumprir os serviços divinos;
ಇವುಗಳು ಹೀಗೆ ಸಿದ್ಧವಾದ ಬಳಿಕ ಯಾಜಕರು ಯಾವಾಗಲೂ ಹೊರಗಿನ ಗುಡಾರವನ್ನು ಪ್ರವೇಶಿಸಿ ದೈವಿಕ ಆರಾಧನೆಯನ್ನು ನಡೆಸುತ್ತಿದ್ದರು.
7 Mas no segundo só o summo sacerdote, uma vez no anno, não sem sangue, o qual offerecia por si mesmo e pelas culpas do povo:
ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೆ ಒಂದೇ ಸಾರಿ ಪ್ರವೇಶಿಸುತ್ತಿದ್ದನು. ಅವನು ರಕ್ತವನ್ನು ತೆಗೆದುಕೊಳ್ಳದೆ ಎಂದಿಗೂ ಹೋಗುತ್ತಿರಲಿಲ್ಲ. ಬಲಿಯ ರಕ್ತವನ್ನು ತನಗೋಸ್ಕರವೂ ಜನರು ತಿಳಿಯದೆ ಮಾಡಿದ ಪಾಪಗಳಿಗೋಸ್ಕರವೂ ಸಮರ್ಪಿಸುತ್ತಿದ್ದನು.
8 Dando n'isto a entender o Espirito Sancto que ainda o caminho do sanctuario não estava descoberto emquanto se conservava em pé o primeiro tabernaculo:
ಹೊರಗಿನ ಗುಡಾರವು ಇನ್ನೂ ಇರುವ ತನಕ ಅತಿ ಪವಿತ್ರ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬುದನ್ನು ಪವಿತ್ರಾತ್ಮ ದೇವರು ವ್ಯಕ್ತಪಡಿಸುತ್ತಾರೆ
9 O qual era figura para o tempo de então, em que se offereciam presentes e sacrificios, que, quanto á consciencia, não podiam aperfeiçoar aquelle que fazia o serviço.
ಈ ಗುಡಾರವು ಈ ಕಾಲವನ್ನು ಸೂಚಿಸುವ ಒಂದು ಮಾದರಿಯಾಗಿದೆ. ಆಗ ಆರಾಧಿಸುವವರ ಮನಸ್ಸಾಕ್ಷಿಯನ್ನು ಪರಿಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲಾಗುತ್ತಿದ್ದವು.
10 Pois consistiam sómente em manjares, e bebidas, e varias abluções e justificações da carne, impostas até ao tempo da correcção.
ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.
11 Mas, vindo Christo, o summo sacerdote dos bens futuros, por um maior e mais perfeito tabernaculo, não feito por mãos, isto é, não d'esta feitura,
ಆದರೆ ಕ್ರಿಸ್ತ ಯೇಸು ಈಗಾಗಲೇ ಮಹಾಯಾಜಕರಾಗಿ ಬಂದಿದ್ದಾರೆ. ಅವರು ಕೊಡುವ ಒಳ್ಳೆಯವುಗಳು ಈಗಾಗಲೇ ನಮಗೆ ದೊರೆತಿವೆ. ಅವರು ಹಿಂದಿನವುಗಳಿಗಿಂತಲೂ ಶ್ರೇಷ್ಠವಾದದ್ದೂ ಪರಿಪೂರ್ಣವಾದದ್ದೂ ಆಗಿರುವ ಗುಡಾರವನ್ನು ಅಂದರೆ ಕೈಯಿಂದ ಕಟ್ಟಿರದಂತದ್ದೂ ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿರದಂತದ್ದೂ ಆಗಿರುವ ಗುಡಾರವನ್ನು ಪ್ರವೇಶಿಸಿದರು.
12 Nem por sangue de bodes e bezerros, mas por seu proprio sangue, uma vez entrou no sanctuario, havendo effectuado uma eterna redempção. (aiōnios )
ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು. (aiōnios )
13 Porque, se o sangue dos toiros e bodes, e a cinza da novilha espargida sobre os immundos, os sanctifica, quanto á purificação da carne,
ಹೋತ ಹೋರಿಗಳ ರಕ್ತವನ್ನೂ ಅಶುದ್ಧರಾದವರ ಮೇಲೆ ಚಿಮುಕಿಸಲಾಯಿತು. ಯಜ್ಞಪಶುಗಳ ಬೂದಿಯನ್ನೂ ಅವರ ಮೇಲೆ ತೂರಲಾಯಿತು. ಇದು ಅವರ ದೇಹವನ್ನು ಶುದ್ಧೀಕರಿಸಿತು.
14 Quanto mais o sangue de Christo, que pelo Espirito eterno se offereceu a si mesmo immaculado a Deus, purificará as vossas consciencias das obras mortas para servirdes ao Deus vivo? (aiōnios )
ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ? (aiōnios )
15 E por isso é Mediador do novo Testamento, para que, intervindo a morte para remissão das transgressões que havia debaixo do primeiro testamento, os chamados recebam a promessa da herança eterna. (aiōnios )
ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ. (aiōnios )
16 Porque onde ha testamento necessario é que intervenha a morte do testador.
ಮರಣ ಶಾಸನವು ಎಲ್ಲಿದೆಯೋ ಅಲ್ಲಿ ಅದನ್ನು ಮಾಡಿಕೊಂಡಾತನ ಮರಣ ಅವಶ್ಯ ಎಂಬುದನ್ನು ರುಜುಪಡಿಸಬೇಕು.
17 Porque o testamento confirma-se nos mortos; porquanto não é valido emquanto vive o testador,
ಮರಣ ಶಾಸನವು ಬರೆದವನು ಜೀವದಿಂದಿರುವವರೆಗೂ ಅದು ಎಂದಿಗೂ ಜಾರಿಗೆ ಬರುವುದಿಲ್ಲ.
18 Pelo que tambem o primeiro não foi consagrado sem sangue;
ಆದ್ದರಿಂದ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಪ್ರತಿಷ್ಠಾಪನೆ ಆಗಲಿಲ್ಲ.
19 Porque, havendo Moysés relatado a todo o povo todos os mandamentos segundo a lei, tomou o sangue dos bezerros e dos bodes, com agua, lã purpurea e hyssope, e aspergiu tanto o mesmo livro como todo o povo,
ಮೋಶೆಯು ಪ್ರತಿಯೊಂದು ಆಜ್ಞೆಯನ್ನು ನಿಯಮದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪು ಇವುಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಚಿಮುಕಿಸಿದನು.
20 Dizendo: Este é o sangue do testamento que Deus vos tem mandado.
ಹಾಗೆ ಚಿಮುಕಿಸುವಾಗ ಮೋಶೆಯು, “ಇದು ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯ ರಕ್ತ,” ಎಂದು ಹೇಳಿದನು.
21 E similhantemente aspergiu com sangue o tabernaculo e todos os vasos do ministerio.
ಅದೇ ರೀತಿಯಾಗಿ ಮೋಶೆಯು ಗುಡಾರದ ಮೇಲೆಯೂ ಸೇವೆಯ ಎಲ್ಲಾ ಉಪ ಪಾತ್ರೆಗಳ ಮೇಲೆಯೂ ರಕ್ತವನ್ನು ಚಿಮುಕಿಸಿದನು.
22 E quasi todas as coisas, segundo a lei, se purificam com sangue; e sem derramamento de sangue não se faz remissão.
ಹೀಗೆ ದೇವರ ನಿಯಮದ ಪ್ರಕಾರ ಎಲ್ಲವೂ ರಕ್ತದಿಂದಲೇ ಶುದ್ಧಿಯಾಗಬೇಕು. ರಕ್ತಧಾರೆ ಇಲ್ಲದೆ ಪಾಪಪರಿಹಾರವು ಉಂಟಾಗುವುದಿಲ್ಲ.
23 De sorte que era bem necessario que as figuras das coisas que estão no céu se purificassem com estas coisas; porém as proprias coisas celestiaes com sacrificios melhores do que estes.
ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತೆ ಇರುವ ವಸ್ತುಗಳನ್ನು ಈ ಯಜ್ಞಗಳಿಂದ ಶುದ್ಧಿಮಾಡುವುದು ಅವಶ್ಯವಾಗಿದೆ. ಹಾಗಾದರೆ ಪರಲೋಕದ ನಿಜ ವಸ್ತುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯಕವಾಗಿವೆ.
24 Porque Christo não entrou no sanctuario feito por mãos, figura do verdadeiro, porém no mesmo céu, para agora comparecer por nós perante a face de Deus
ಏಕೆಂದರೆ ಕ್ರಿಸ್ತ ಯೇಸು ನಿಜ ದೇವಾಲಯದ ಪ್ರತಿರೂಪದಂತಿರುವ, ಕೈಯಿಂದ ಕಟ್ಟಿದ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವಂತೆ ಪರಲೋಕದಲ್ಲಿಯೇ ಪ್ರವೇಶಿಸಿದರು.
25 Nem tambem para a si mesmo se offerecer muitas vezes, como o summo sacerdote cada anno entra no sanctuario com sangue alheio;
ಇದಲ್ಲದೆ ಮಹಾಯಾಜಕನು ಪ್ರತಿವರ್ಷವೂ ತನ್ನ ಸ್ವಂತದ್ದಾಗಿರದ ರಕ್ತವನ್ನು ತೆಗದುಕೊಂಡು ಅತಿ ಪವಿತ್ರ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಯೇಸು ತಮ್ಮನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಪ್ರವೇಶಿಸಲಿಲ್ಲ.
26 D'outra maneira, necessario lhe fôra padecer muitas vezes desde a fundação do mundo: mas agora na consummação dos seculos uma vez se manifestou, para aniquilar o peccado pelo sacrificio de si mesmo. (aiōn )
ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು. (aiōn )
27 E, como aos homens está ordenado morrerem uma vez, vindo depois d'isso o juizo,
ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.
28 Assim tambem Christo, offerecendo-se uma vez para tirar os peccados de muitos, apparecerá a segunda vez, sem peccado, aos que o esperam para salvação.
ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.