< Isaías 23 >
1 Pezo de Tyro. Uivai, navios de Tharsis, porque já assolada está até n'ella casa nenhuma mais ficar e n'ella ninguem mais entrar: desde a terra de Chittim lhes foi isto revelado.
೧ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.
2 Calae-vos, moradores da ilha, vós a quem encheram os mercadores de Sidon, navegando pelo mar.
೨ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ಹಾದು ಹೋಗುವ, ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನವಾಗಿರಿ!
3 E a sua provisão era a semente de Sichor, que vinha com as muitas aguas da sega do rio, e era a feira das nações.
೩ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ, ನೈಲ್ ನದಿಯ ಬೆಳೆಯಿಂದಲೂ ಆದಾಯಹೊಂದಿದ ನಿಮ್ಮ ನಗರವು ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.
4 Envergonha-te, ó Sidon, porque já o mar, a fortaleza do mar, falla, dizendo: Eu não tive dôres de parto, nem pari, nem ainda creei mancebos, nem eduquei donzellas.
೪ಚೀದೋನೇ, ನಾಚಿಕೆಪಡು. ಏಕೆಂದರೆ ಸಮುದ್ರವೂ, ಸಮುದ್ರದ ದುರ್ಗವೂ, “ನಾವು ವೇದನೆ ಪಡಲಿಲ್ಲ, ಪ್ರಸವಿಸಲಿಲ್ಲ, ಯುವತಿ ಯುವಕರನ್ನು ಸಾಕಿ ಸಲಹಲಿಲ್ಲ” ಎಂದು ನುಡಿದಿದೆಯಷ್ಟೆ.
5 Como com as novas do Egypto, assim haverá dôres quando se ouvirem as de Tyro.
೫ತೂರಿನ ಸಮಾಚಾರವು ಐಗುಪ್ತ್ಯರಿಗೆ ಮುಟ್ಟಿದಾಗ ಅದಕ್ಕಾಗಿ ಸಂಕಟಪಡುವರು.
6 Passae a Tharsis: uivae, moradores da ilha.
೬ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ದ್ವೀಪ ನಿವಾಸಿಗಳೇ, ಗೋಳಾಡಿರಿ!
7 É esta porventura a vossa cidade que andava pulando de alegria? cuja antiguidade é dos dias antigos? pois leval-a-hão os seus proprios pés para longe andarem a peregrinar.
೭ನಿಮ್ಮ ಉಲ್ಲಾಸದ ಪಟ್ಟಣವು ಇದೇನೋ? ಅದರ ಉತ್ಪತ್ತಿಯು ಪುರಾತನವಾದದ್ದೇ ಸರಿ; ಅವರ ಕಾಲುಗಳು ಅವರನ್ನು ದೂರ ದೇಶದಲ್ಲಿ ವಾಸಿಸುವುದಕ್ಕೆ ಕರೆದುಕೊಂಡು ಹೋಗುವವು.
8 Quem formou este designio contra Tyro, a coroadora? cujos mercadores são principes e cujos negociantes os mais nobres da terra?
೮ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು?
9 O Senhor dos Exercitos formou este designio para profanar a soberba de todo o ornamento, e envilecer os mais nobres da terra.
೯ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.
10 Passa-te como rio pela tua terra, ó filha de Tharsis, pois já não ha precinta.
೧೦ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ.
11 A sua mão estendeu sobre o mar, e turbou os reinos: o Senhor deu mandado contra Canaan, que se destruissem as suas fortalezas.
೧೧ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ.
12 E disse: Nunca mais pularás de alegria, ó opprimida donzella, filha de Sidon: levanta-te, passa a Chittim, e ainda ali não terás descanço.
೧೨ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ.
13 Vêde a terra dos chaldeos, ainda este povo não era povo; a Assyria o fundou para os que moravam no deserto: levantaram as suas fortalezas, e edificaram os seus paços; porém a arruinou de todo.
೧೩ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು. ಗೋಪುರಗಳನ್ನು ಕಟ್ಟಿಕೊಂಡು ಅದರ ಕೋಟೆಗಳನ್ನು ಕೆಡವಿ ಅದನ್ನು ನಾಶಪಡಿಸಿದರು.
14 Uivae, navios de Tharsis, porque já é destruida a vossa força.
೧೪ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು.
15 E será n'aquelle dia que Tyro será posta em esquecimento por setenta annos, como os dias d'um rei: porém no fim de setenta annos haverá em Tyro cantigas, como a cantiga d'uma prostituta.
೧೫ಆ ದಿನದಲ್ಲಿ ತೂರ್ ಪಟ್ಟಣವು ಒಬ್ಬ ಅರಸನ ಆಡಳಿತದ ಎಪ್ಪತ್ತು ವರ್ಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವುದು; ಎಪ್ಪತ್ತು ವರ್ಷದ ಮೇಲೆ ವ್ಯಭಿಚಾರಿ ವಿಷಯವಾದ ಗೀತೆಯಂತೆ ಆಗುವುದು.
16 Toma a harpa, rodeia a cidade, ó prostituta entregue ao esquecimento; toca bem, canta e repete a aria, para que haja memoria de ti.
೧೬ಅದೇನೆಂದರೆ, “ಎಲ್ಲರೂ ಮರೆತುಹೋದ ವ್ಯಭಿಚಾರಿಯೇ, ಕಿನ್ನರಿಯನ್ನು ತೆಗೆದುಕೊಂಡು ಪಟ್ಟಣದಲ್ಲಿ ಅಲೆಯುತ್ತಾ, ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು” ಎಂಬುದೇ.
17 Porque será no fim de setenta annos que o Senhor visitará a Tyro, e se tornará á sua ganancia de prostituta, e fornicará com todos os reinos da terra que ha sobre a face da terra.
೧೭ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬರಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು.
18 E o seu commercio e a sua ganancia de prostituta será consagrado ao Senhor; não se enthesourará, nem se fechará; mas o seu commercio será para os que habitam perante o Senhor, para que comam até se saciarem, e tenham vestimenta duravel.
೧೮ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.