< Marcos 1 >
1 Principio do Evangelho de Jesus Christo, Filho de Deus;
೧ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು.
2 Como está escripto nos prophetas: Eis-que eu envio o meu anjo ante a tua face, o qual preparará o teu caminho diante de ti.
೨ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ, “ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”
3 Voz do que clama no deserto: preparae o caminho do Senhor, endireitae as suas veredas.
೩“‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.
4 Estava João baptizando no deserto, e pregando o baptismo do arrependimento, para remissão dos peccados.
೪ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.
5 E toda a provincia da Judea e os de Jerusalem iam ter com elle; e todos eram baptizados por elle no rio Jordão, confessando os seus peccados.
೫ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.
6 E João andava vestido de pellos de camelo, e com um cinto de coiro em redor de seus lombos, e comia gafanhotos e mel silvestre.
೬ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು.
7 E prégava, dizendo: Após mim vem aquelle que é mais forte do que eu, ao qual não sou digno de, encurvando-me, desatar a correia das suas alparcas.
೭ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.
8 Eu, em verdade, tenho-vos baptizado com agua; elle, porém, vos baptizará com o Espirito Sancto.
೮ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು.
9 E aconteceu n'aquelles dias que Jesus, tendo ido de Nazareth, da Galilea, foi baptizado por João, no Jordão.
೯ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು.
10 E, logo que saiu da agua, viu os céus abertos, e o Espirito, que como pomba descia sobre elle.
೧೦ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.
11 E ouviu-se uma voz dos céus, que dizia: Tu és o meu Filho amado em quem me comprazo.
೧೧ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.
12 E logo o Espirito o impelliu para o deserto,
೧೨ಕೂಡಲೇ ಪವಿತ್ರಾತ್ಮ ಪ್ರೇರಿತನಾಗಿ ಯೇಸು ಅಡವಿಗೆ ಹೋದನು.
13 E esteve ali no deserto quarenta dias, tentado por Satanaz. E estava com as féras, e os anjos o serviam.
೧೩ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.
14 E, depois que João foi entregue á prisão, veiu Jesus para a Galilea, prégando o Evangelho do reino de Deus,
೧೪ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,
15 E dizendo: O tempo está cumprido, e o reino de Deus está proximo. Arrependei-vos, e crede no Evangelho.
೧೫“ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”
16 E, andando junto do mar da Galilea, viu Simão, e André, seu irmão, que lançavam a rede ao mar, porque eram pescadores.
೧೬ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.
17 E Jesus lhes disse: Vinde após mim, e eu farei que sejaes pescadores de homens.
೧೭ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳಿದನು.
18 E, deixando logo as suas redes, o seguiram.
೧೮ಕೂಡಲೆ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
19 E, passando d'ali um pouco mais adiante, viu Thiago, filho de Zebedeo, e João, seu irmão, que estavam no barco concertando as redes,
೧೯ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.
20 E logo os chamou. E elles, deixando o seu pae Zebedeo no barco com os jornaleiros, foram após elle.
೨೦ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.
21 E entraram em Capernaum, e, logo no sabbado, entrando na synagoga, ensinava.
೨೧ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.
22 E maravilharam-se da sua doutrina, porque os ensinava como tendo auctoridade, e não como os escribas.
೨೨ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.
23 E estava na synagoga d'elles um homem com um espirito immundo, e exclamou, dizendo:
೨೩ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.
24 Ah! que temos comtigo, Jesus nazareno? Vieste destruir-nos? Bem sei quem és: o Sancto de Deus.
೨೪ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.
25 E reprehendeu-o Jesus, dizendo: Cala-te, e sae d'elle.
೨೫ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು.
26 Então o espirito immundo, despedaçando-o, e clamando com grande voz, saiu d'elle.
೨೬ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು.
27 E todos se admiraram, a ponto de perguntarem entre si, dizendo: Que é isto? que nova doutrina é esta? pois até com auctoridade ordena aos espiritos immundos, e elles lhe obedecem!
೨೭ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.
28 E logo correu a sua fama por toda a provincia da Galilea.
೨೮ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.
29 E logo, saindo da synagoga, foram a casa de Simão e de André com Thiago e João.
೨೯ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು.
30 E a sogra de Simão estava deitada com febre; e logo lhe fallaram d'ella.
೩೦ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.
31 Então, chegando-se a ella, tomou-a pela mão, e levantou-a: e logo a febre a deixou, e servia-os.
೩೧ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.
32 E, tendo chegado a tarde, quando já se estava pondo o sol, trouxeram-lhe todos os que se achavam enfermos, e os endemoninhados.
೩೨ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.
33 E toda a cidade se ajuntou á porta.
೩೩ಊರಿನವರೆಲ್ಲಾ ಬಾಗಿಲಿನ ಮುಂದೆ ಒಟ್ಟುಗೂಡಿದ್ದರು.
34 E curou muitos que se achavam enfermos de diversas enfermidades, e expulsou muitos demonios, porém não deixava fallar os demonios, porque o conheciam.
೩೪ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.
35 E, levantando-se de manhã muito cedo, fazendo ainda escuro, saiu, e foi para um logar deserto, e ali orava.
೩೫ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.
36 E seguiram-n'o Simão e os que com elle estavam.
೩೬ಸೀಮೋನನೂ ಅವನ ಸಂಗಡ ಇದ್ದವರೂ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು,
37 E, achando-o, lhe disseram: Todos te buscam.
೩೭ಆತನನ್ನು ಕಂಡಾಗ “ಎಲ್ಲರೂ ನಿನ್ನನ್ನು ಎದುರುನೋಡುತ್ತಿದ್ದಾರೆ” ಎಂದರು.
38 E elle lhes disse: Vamos ás aldeias visinhas, para que eu ali tambem prégue; porque para isso vim.
೩೮ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು.
39 E prégava nas synagogas d'elles por toda a Galilea, e expulsava os demonios.
೩೯ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.
40 E approximou-se d'elle um leproso, rogando-lhe, e pondo-se de joelhos diante d'elle, e dizendo-lhe: Se queres, podes limpar-me.
೪೦ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.
41 E Jesus, movido de grande compaixão, estendeu a mão, e tocou-o, e disse-lhe: Quero; sê limpo.
೪೧ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು.
42 E, tendo elle dito isto, logo a lepra desappareceu, e ficou limpo.
೪೨ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು.
43 E, ameaçando-o, logo o despediu de si,
೪೩ಆಗ ಯೇಸು ಅವನಿಗೆ, “ಯಾರಿಗೂ ಏನೂ ಹೇಳಬೇಡ ನೋಡು;
44 E disse-lhe: Olha, não digas nada a ninguem; porém vae, mostra-te ao sacerdote, e offerece pela tua purificação o que Moysés determinou, para lhes servir de testemunho.
೪೪ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ” ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.
45 Mas, tendo elle saido, começou a apregoar muitas coisas, e a divulgar o que acontecera; de sorte que Jesus já não podia entrar publicamente na cidade, mas conservava-se fóra em logares desertos: e de todas as partes iam ter com elle.
೪೫ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.