< Romanos 14 >
1 Ora, quanto ao que está enfermo na fé, recebei-o, não em contendas de disputas.
೧ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ.
2 Porque um crê que de tudo se pode comer, e outro, que é enfermo, come legumes.
೨ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.
3 O que come não despreze ao que não come; e o que não come não julgue ao que come; porque Deus o recebeu por seu
೩ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ?
4 Quem és tu, que julgas ao servo alheio? Para seu proprio Senhor está em pé ou cae; porém estará firme; porque poderoso é Deus para o firmar.
೪ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.
5 Um faz differença entre dia e dia, mas outro julga eguaes todos os dias. Cada um esteja inteiramente seguro em seu proprio animo.
೫ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ.
6 Aquelle que faz caso do dia, para o Senhor o faz; e o que não faz caso do dia, para o Senhor o não faz. O que come, para o Senhor come, porque dá graças a Deus; e o que não come, para o Senhor não come, e dá graças a Deus.
೬ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.
7 Porque nenhum de nós vive para si, e nenhum morre para si.
೭ನಮ್ಮಲ್ಲಿ ಯಾರು ತನಗಾಗಿ ಬದುಕುವುದು ಇಲ್ಲ. ತನಗಾಗಿ ಸಾಯುವುದೂ ಇಲ್ಲ,
8 Porque, se vivemos, para o Senhor vivemos: se morremos, para o Senhor morremos. De sorte que, ou vivamos ou morramos, somos do Senhor.
೮ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತನವರೇ.
9 Porque para isto tambem morreu Christo, e resuscitou, e tornou a viver; para ser Senhor, tanto dos mortos, como dos vivos.
೯ಯಾಕೆಂದರೆ ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು.
10 Mas tu, porque julgas a teu irmão? Ou tu, tambem, porque desprezas a teu irmão? Pois todos havemos de comparecer ante o tribunal de Christo.
೧೦ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.
11 Porque está escripto: Vivo eu, diz o Senhor: que todo o joelho se dobrará diante de mim, e toda a lingua confessará a Deus.
೧೧ಪವಿತ್ರ ಶಾಸ್ತ್ರದಲ್ಲಿ: “ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ.
12 De maneira que cada um de nós dará conta de si mesmo a Deus.
೧೨ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.
13 Assim que não nos julguemos mais uns aos outros; mas antes julgae isto, não pôr tropeço ou escandalo ao irmão.
೧೩ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.
14 Eu sei, e estou certo no Senhor Jesus, que nenhuma coisa é de si mesmo immunda senão para aquelle que a tem por immunda, para esse é immunda.
೧೪ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.
15 Mas, se por causa da comida se contrista teu irmão, já não andas conforme o amor. Não destruas com a tua comida aquelle por quem Christo morreu.
೧೫ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ಅವನನ್ನು ನಿನಗೆ ಇಷ್ಟವಾದ ಆಹಾರದ ನಿಮಿತ್ತ ಕೆಡಿಸಬಾರದು.
16 Não seja pois blasphemado o vosso bem;
೧೬ನಿಮಗಿರುವ ಉತ್ತಮ ಕ್ರಮಗಳು ದೂಷಣೆಗೆ ಆಸ್ಪದವಾಗಬಾರದು.
17 Porque o reino de Deus não é comida nem bebida, mas justiça, e paz, e alegria no Espirito Sancto.
೧೭ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.
18 Porque quem n'isto serve a Christo agradavel é a Deus e acceito aos homens.
೧೮ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ.
19 Sigamos pois as coisas que servem para a paz e para a edificação de uns para com os outros.
೧೯ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.
20 Não destruas por causa da comida a obra de Deus. É verdade que todas as coisas são limpas, mas é mau para o homem que come com escandalo.
೨೦ದೇವರು ಕಟ್ಟಿದ್ದನ್ನು ನೀನು ಆಹಾರದ ನಿಮಿತ್ತವಾಗಿ ಕೆಡವಬೇಡ. ಎಲ್ಲಾ ಪದಾರ್ಥಗಳೂ ಶುದ್ಧವೇ; ಆದರೆ ತಿಂದು ಮತ್ತೊಬ್ಬರಿಗೆ ವಿಘ್ನವನ್ನುಂಟುಮಾಡುವುದು ಕೆಟ್ಟದ್ದು.
21 Bom é não comer carne, nem beber vinho, nem fazer outras coisas em que teu irmão tropece, ou se escandalize, ou se enfraqueça.
೨೧ಮಾಂಸ ತಿನ್ನುವುದನ್ನಾಗಲಿ, ದ್ರಾಕ್ಷಾರಸ ಕುಡಿಯುವುದಾಗಲಿ, ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವುದನ್ನಾಗಲಿ ಬಿಟ್ಟುಬಿಡುವುದೇ ಒಳ್ಳೆಯದು.
22 Tens tu fé? Tem-n'a em ti mesmo diante de Deus. Bemaventurado aquelle que não se condemna a si mesmo no que approva.
೨೨ನಿನಗಿರುವ ನಂಬಿಕೆಯು ದೇವರಿಗೆ ಮಾತ್ರ ಗೋಚರವಾಗಿ ಅದು ನಿನ್ನ ಮಟ್ಟಿಗೆ ಮಾತ್ರ ಇರಲಿ. ತಾನು ಒಪ್ಪಿದ ವಿಷಯದಲ್ಲಿ ಸಂಶಯ ಪಡದವನೇ ಧನ್ಯನು.
23 Mas aquelle que duvida, se come está condemnado, porque não come por fé; e tudo que não é de fé é peccado.
೨೩ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. ನಂಬಿಕೆಯ ಆಧಾರವಿಲ್ಲದಿರುವುದೆಲ್ಲವೂ ಪಾಪವೇ ಆಗಿದೆ.