< Romanos 16 >

1 Recommendo-vos pois Phebe, nossa irmã, a qual serve na egreja que está em Cenchrea.
ನಮ್ಮ ಸಹೋದರಿಯೂ ಕೆಂಖ್ರೆಯ ಸಭೆಯ ಸೇವಕಿಯೂ ಆಗಿರುವ ಫೊಯಿಬೆಯನ್ನು ನಿಮಗೆ ಪರಿಚಯಿಸುತ್ತೇನೆ.
2 Para que a recebaes no Senhor, como convem aos sanctos e a ajudeis em qualquer coisa que de vós necessitar; porque tem hospedado a muitos, como tambem a mim mesmo.
ಕರ್ತನಲ್ಲಿ ದೇವಜನರಿಗೆ ಯೋಗ್ಯವಾಗಿರುವ ರೀತಿಯಲ್ಲಿ ಆಕೆಯನ್ನು ಸ್ವೀಕರಿಸಿ, ಆಕೆಯು ಅನೇಕರಿಗೂ ನನಗೂ ವಿಶೇಷವಾದ ರೀತಿಯಲ್ಲಿ ಸಹಾಯ ಮಾಡಿದವಳಾಗಿರುವುದರಿಂದ ನಿಮಗೆ ಯಾವ ಕೊರತೆಗಳಿದ್ದರೂ ಆಕೆಗೆ ಬೇಕಾದದ್ದನ್ನು ಒದಗಿಸಿರಿ.
3 Saudae a Priscilla e a Aquila, meus cooperadores em Christo Jesus,
ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಕೆಲಸದವರಾಗಿರುವ ಪ್ರಿಸ್ಕಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.
4 Que pela minha vida expozeram as suas cabeças; aos quaes não só eu agradeço, mas tambem todas as egrejas dos gentios.
ಅವರು ನನ್ನ ಪ್ರಾಣದ ನಿಮಿತ್ತವಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಒಡ್ಡಿದರು. ಅವರಿಗೆ ನಾನು ಮಾತ್ರವೇ ಅಲ್ಲ ಯೆಹೂದ್ಯರಲ್ಲದವರು ಎಲ್ಲಾ ಸಭೆಗಳವರೂ ಕೃತಜ್ಞರಾಗಿರುತ್ತಾರೆ.
5 Saudae tambem a egreja que está em sua casa. Saudae a Epéneto, meu amado, que é as primicias da Asia em Christo.
ಅವರ ಮನೆಯಲ್ಲಿ ಸೇರಿ ಬರುವ ಸಭೆಗೂ ನನ್ನ ವಂದನೆಗಳನ್ನು ತಿಳಿಸಿರಿ. ಏಷ್ಯಾ ಪ್ರಾಂತದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾಗಿರುವ ಎಪೈನೆತನಿಗೂ ನನ್ನ ವಂದನೆಗಳನ್ನು ತಿಳಿಸಿರಿ.
6 Saudae a Maria, que trabalhou muito por nós.
ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆಗಳು.
7 Saudae a Andronico e a Junia, meus parentes e meus companheiros na prisão, os quaes se assignalam entre os apostolos e que foram antes de mim em Christo.
ನನ್ನ ಬಂಧುಗಳೂ ಜೊತೆ ಸೆರೆಯವರೂ ಆದ ಅಂದ್ರೋನಿಕನಿಗೂ ಯೂನ್ಯಳಿಗೂ ವಂದನೆಗಳು. ಅವರು ಅಪೊಸ್ತಲರಲ್ಲಿ ಪ್ರಸಿದ್ಧರೂ ಮತ್ತು ನನಗಿಂತ ಮೊದಲೇ ಕ್ರಿಸ್ತನಲ್ಲಿದ್ದವರೂ ಆಗಿರುತ್ತಾರೆ.
8 Saudae a Amplias, meu amado no Senhor.
ನನಗೆ ಕರ್ತನಲ್ಲಿ ಪ್ರಿಯನಾದ ಅಂಪ್ಲಿಯಾತನಿಗೆ ವಂದನೆಗಳು.
9 Saudae a Urbano, nosso cooperador em Christo, e a Stachys, meu amado.
ಕ್ರಿಸ್ತನಲ್ಲಿ ನನ್ನ ಜೊತೆ ಸೇವಕನಾಗಿರುವ ಉರ್ಬಾನನಿಗೂ ನನಗೆ ಪ್ರಿಯನಾದ ಸ್ತಾಖುನಿಗೂ ವಂದನೆಗಳು.
10 Saudae a Apelles, approvado em Christo. Saudae aos da familia d'Aristobulo.
ಕ್ರಿಸ್ತನಲ್ಲಿ ಪರಿಶೋಧಿತನಾದ ಅಪೆಲ್ಲನಿಗೆ ವಂದನೆಗಳು, ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.
11 Saudae a Herodião, meu parente. Saudae aos da familia de Narciso, os que estão no Senhor.
ನನ್ನ ಸಂಬಂಧಿಯಾಗಿರುವ ಹೆರೊಡಿಯೋನನಿಗೆ ವಂದನೆಗಳು, ಕರ್ತನಲ್ಲಿರುವ ನಾರ್ಕಿಸ್ಸನ ಕುಟುಂಬದವರಿಗೆ ವಂದನೆಗಳು.
12 Saudae a Tryphena e a Tryphosa, as quaes trabalham no Senhor. Saudae á amada Persida, a qual muito trabalhou no Senhor.
ಕರ್ತನ ಸೇವೆಯಲ್ಲಿ ದುಡಿಯುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು, ಕರ್ತನಲ್ಲಿ ತುಂಬಾ ಶ್ರಮಪಟ್ಟು ದುಡಿದಿರುವ ಪ್ರೀತಿಯ ಪೆರ್ಸೀಸಳಿಗೂ ನನ್ನ ವಂದನೆಗಳು.
13 Saudae a Rufo, eleito no Senhor, e a sua mãe e minha.
ಕರ್ತನಲ್ಲಿ ಆಯ್ಕೆಯಾಗಿರುವ ರೂಫನಿಗೂ ನನಗೂ ತಾಯಿಯಂತಿದ್ದ ಅವನ ತಾಯಿಗೂ ವಂದನೆಗಳು.
14 Saudae a Asyncrito, a Phlegonte, a Hermas, a Patrobas, a Hermes, e aos irmãos que estão com elles.
ಅಸುಂಕ್ರಿತ, ಪ್ಲೆಗೋನ, ಹೆರ್ಮೆಯನಿಗೂ ಪತ್ರೋಬನಿಗೂ ಹೆರ್ಮಾನ ಮತ್ತು ಅವನೊಂದಿಗಿರುವ ಪ್ರಿಯರಿಗೂ ವಂದನೆಗಳು.
15 Saudae a Philologo e a Julia, a Nereo e a sua irmã, e a Olympia, e a todos os sanctos que com elles estão.
ಫಿಲೊಲೊಗ, ಯೂಲ್ಯಳು, ನೇರ್ಯ ಮತ್ತು ಅವನ ಸಹೋದರಿ, ಒಲುಂಪ ಮತ್ತು ಅವರೊಂದಿಗಿರುವ ಎಲ್ಲಾ ಭಕ್ತರಿಗೂ ವಂದನೆಗಳು.
16 Saudae-vos uns aos outros com sancto osculo. As egrejas de Christo vos saudam.
ಪವಿತ್ರವಾದ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಎಲ್ಲಾ ಸಭೆಗಳವರೂ ನಿಮಗೆ ವಂದನೆಗಳನ್ನು ಕಳುಹಿಸುತ್ತಾರೆ.
17 E rogo-vos, irmãos, que vos acauteleis dos que promovem dissensões e escandalos contra a doutrina que aprendestes; desviae-vos d'elles.
ಪ್ರಿಯರೇ, ನೀವು ಕಲಿತುಕೊಂಡ ಬೋಧನೆಗೆ ವಿರೋಧವಾಗಿರುವ ಭೇದಗಳನ್ನೂ ಅಭ್ಯಂತರಗಳನ್ನೂ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರಿಂದ ದೂರವಾಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
18 Porque os taes não servem a nosso Senhor Jesus Christo, mas ao seu ventre: e com suaves palavras e lisonjas enganam os corações dos simplices.
ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
19 Porque a vossa obediencia é conhecida de todos. Comprazo-me pois em vós; e quero que sejaes sabios no bem, porém simplices no mal.
ನಿಮ್ಮ ವಿಧೇಯತೆಯು ಎಲ್ಲಾ ಮನುಷ್ಯರಿಗೂ ಪ್ರಸಿದ್ಧವಾಯಿತು. ಆದ್ದರಿಂದ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ಆದರೆ ನೀವು ಒಳ್ಳೆಯದನ್ನು ಕುರಿತು ಜ್ಞಾನಿಗಳಾಗಿಯೂ ಕೆಟ್ಟವುಗಳನ್ನು ಕುರಿತು ನಿಷ್ಕಳಂಕರಾಗಿಯೂ ಇರಬೇಕೆಂದು ಅಪೇಕ್ಷಿಸುತ್ತೇನೆ.
20 E o Deus de paz esmagará logo a Satanaz debaixo dos vossos pés. A graça de Nosso Senhor Jesus Christo seja comvosco. Amen.
ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.
21 Saudam-vos Timotheo, meu cooperador, e Lucio, e Jason, e Sosipater, meus parentes.
ನನ್ನ ಜೊತೆ ಕೆಲಸದವನಾಗಿರುವ ತಿಮೊಥೆಯನು ನಿಮಗೆ ವಂದನೆಗಳನ್ನು ತಿಳಿಸುತ್ತಾನೆ. ಹಾಗೆಯೇ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ.
22 Eu, Tercio, que esta carta escrevi, vos saudo no Senhor.
ಈ ಪತ್ರವನ್ನು ಬರೆದ ತೆರ್ತ್ಯನೆಂಬ ನಾನು ಕರ್ತನಲ್ಲಿ ನಿಮ್ಮನ್ನು ವಂದಿಸುತ್ತೇನೆ.
23 Sauda-vos Gaio, meu hospedeiro, e de toda a egreja. Sauda-vos Erasto, procurador da cidade, e tambem o irmão Quarto.
ಇಲ್ಲಿ ನನಗೂ ಇಡೀ ಸಭೆಗೂ ಅತಿಥಿ ಸತ್ಕಾರ ಮಾಡುತ್ತಿರುವ ಗಾಯನು ತನ್ನ ವಂದನೆಗಳನ್ನು ತಿಳಿಸುತ್ತಾನೆ. ಈ ಪಟ್ಟಣದ ಖಜಾಂಚಿಯಾಗಿರುವ ಎರಸ್ತನೂ ಮತ್ತು ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
24 A graça de nosso Senhor Jesus Christo seja com todos vós. Amen.
ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೆಲ್ಲರೊಡನೆ ಇರಲಿ! ಆಮೆನ್.
25 Ora, áquelle que é poderoso para vos confirmar segundo o meu evangelho, e a prégação de Jesus Christo, conforme a revelação do mysterio que desde tempos eternos foi encoberto, (aiōnios g166)
ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ. (aiōnios g166)
26 Mas agora se manifestou, e se notificou pelas Escripturas dos prophetas, segundo o mandamento do Deus eterno, para obediencia da fé entre todas as nações, (aiōnios g166)
ಆದರೆ ನಿತ್ಯ ದೇವರು ಆಜ್ಞಾಪಿಸಿದಂತೆ ಈಗ ಪ್ರವಾದಿಗಳ ಗ್ರಂಥಗಳ ಮೂಲಕ ಮುಂತಿಳಿಸಿರುವಂತೆ, ಈ ಸಂದೇಶವು ಯೆಹೂದ್ಯರಲ್ಲದ ಜನರೆಲ್ಲರಿಗೂ ತಿಳಿಸಲಾಗಿದೆ. ಹೀಗೆ ಅವರು ನಂಬಿದ್ದರಿಂದ ವಿಧೇಯರಾಗುತ್ತಾರೆ. (aiōnios g166)
27 Ao unico Deus, sabio, seja gloria por Jesus Christo para todo o sempre. Amen. (aiōn g165)
ಶಕ್ತರಾಗಿರುವ ಒಬ್ಬರೇ ಜ್ಞಾನವಂತರಾಗಿರುವ ದೇವರಿಗೆ ಕ್ರಿಸ್ತ ಯೇಸುವಿನ ಮೂಲಕ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್. (aiōn g165)

< Romanos 16 >