< 1 Coríntios 5 >
1 Geralmente se ouve que há entre vós fornicação, e fornicação tal, qual nem ainda entre os gentios, como é haver quem abuse da mulher de seu pai.
೧ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.
2 E estais inchados, e nem ao menos vos entristecestes por não ter sido dentre vós tirado quem cometeu tal feito.
೨ಹೀಗಿದ್ದರೂ ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ.
3 Eu na verdade, ainda que ausente, no corpo, mas presente no espírito, já determinei como se estivesse presente, que o que tal assim cometeu,
೩ನಾನಂತೂ ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ, ಆತ್ಮದಿಂದ ಹತ್ತಿರದಲ್ಲಿದ್ದು ಈ ಕಾರ್ಯ ಮಾಡಿದವನನ್ನು ಕುರಿತು ಆಗಲೇ ನಿಮ್ಮ ಹತ್ತಿರವಿದ್ದವನಂತೆ ತೀರ್ಪು ಮಾಡಿದ್ದೇನೆ.
4 Em nome de nosso Senhor Jesus Cristo, juntos vós e o meu espírito, em virtude de nosso Senhor Jesus Cristo,
೪ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ
5 Seja entregue a Satanás para destruição da carne, para que o espírito seja salvo no dia do Senhor Jesus.
೫ಅವನನ್ನು ಸೈತಾನನಿಗೆ ಒಪ್ಪಿಸಿರಿ ಯಾಕೆಂದರೆ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವುದಕ್ಕಾಗಿ ಅವನ ಶರೀರಭಾವವು ನಾಶವಾಗುವಂತೆ ಕರ್ತನಾದ ಯೇಸುವಿನ ಶಕ್ತಿಯಿಂದ ತೀರ್ಪು ಮಾಡಿದ್ದೇನೆ.
6 Não é boa a vossa jactância. Não sabeis que um pouco de fermento faz levedar toda a massa?
೬ನೀವು ಹೊಗಳಿಕೊಳ್ಳುವುದು ಒಳ್ಳೆಯದಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?
7 Limpai pois o fermento velho, para que sejais uma nova massa, assim como sois sem fermento. Porque Cristo, nossa pascoa, foi sacrificado por nós.
೭ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.
8 Pelo que façamos a festa, não com o fermento velho, nem com o fermento da maldade e da malícia, mas com os pães asmos da sinceridade e da verdade.
೮ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.
9 Já por carta vos tenho escrito, que não vos associeis com os fornicadores;
೯ಜಾರರ ಸಹವಾಸ ಮಾಡಬಾರದೆಂದು ನನ್ನ ಪತ್ರಿಕೆಯಲ್ಲಿ ಬರೆದಿದ್ದೇನೆ.
10 Mas não absolutamente com os fornicadores deste mundo, ou com os avarentos, ou com os roubadores, ou com os idólatras; porque então vos seria necessário sair do mundo.
೧೦ಅದು ಈ ಲೋಕದಲ್ಲಿರುವ ಜಾರರು, ಆಸೆಬುರುಕರು, ಸುಲುಕೊಳ್ಳುವವರು, ವಿಗ್ರಹಾರಾಧಕರು, ಮೊದಲಾದವರ ಸಹವಾಸವನ್ನು ಬಿಟ್ಟುಬಿಡಬೇಕೆಂಬ ಅರ್ಥದಲ್ಲಿ ಅಲ್ಲ; ಹಾಗೆ ಬಿಡಬೇಕಾದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು.
11 Mas agora vos escrevi que não vos associeis, quero dizer, que, se algum, chamando-se irmão, for fornicador, ou avarento, ou idólatra, ou maldizente, ou beberrão, ou roubador, com o tal nem ainda comais.
೧೧ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.
12 Porque, que tenho eu em julgar também os que estão fora? Não julgais vós os que estão dentro?
೧೨ಸಭೆಯ ಹೊರಗಿರುವವರನ್ನು ತೀರ್ಪುಮಾಡುವುದಕ್ಕೆ ನನಗೇನಧಿಕಾರವಿದೆ? ಒಳಗಿನವರನ್ನು ತೀರ್ಪುಮಾಡುವವರು ನೀವೇ ಅಲ್ಲವೇ.
13 Mas Deus julga os que estão fora. tirai pois dentre vós a esse iníquo.
೧೩ಹೊರಗಿರುವವರನ್ನು ತೀರ್ಪುಮಾಡುವವನು ದೇವರು. “ನಿಮ್ಮ ಮಧ್ಯದಲ್ಲಿರುವ ಆ ದುಷ್ಟ ವ್ಯಕ್ತಿಯನ್ನು ತೆಗೆದುಹಾಕಿರಿ.”