< 2 Reis 11 >
1 Vendo pois Athalia, mãe de Achazias, que seu filho era morto, levantou-se, e destruiu toda a semente real.
ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ಕಂಡಾಗ, ಅವಳು ಎದ್ದು ರಾಜಸಂತಾನದವರನ್ನೆಲ್ಲಾ ನಾಶಮಾಡಲು ಆರಂಭಿಸಿದಳು.
2 Mas Josebath, filha do rei Jorão, irmã de Achazias, tomou a Joás, filho de Achazias, e o furtou dentre os filhos do rei, aos quais matavam, e o pos, a ele e à sua ama na recâmara, e o escondeu d'Athalia, e assim não o mataram.
ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಆದ ಯೆಹೋಷೆಬಳು ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನು ಹತನಾಗದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯಳಿಗೆ ಕಾಣದ ಹಾಗೆ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು.
3 E esteve com ela escondido na casa do Senhor seis anos: e Athalia reinava sobre a terra.
ಹೀಗೆ ಅವನು ಯೆಹೋಷೆಬಳ ಸಂಗಡ ಆರು ವರ್ಷ ಯೆಹೋವ ದೇವರ ಆಲಯದಲ್ಲಿ ಗುಪ್ತವಾಗಿದ್ದನು, ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.
4 E no sétimo ano enviou Joiada, e tomou os centuriões, com os capitães, e com os da guarda, e os meteu consigo na casa do Senhor: e fez com eles um concerto e os ajuramentou na casa do Senhor, e lhes mostrou o filho do rei.
ಏಳನೆಯ ವರ್ಷದಲ್ಲಿ ಯೆಹೋಯಾದಾವನು ಶತಾಧಿಪತಿಯಾದವರನ್ನೂ, ಕಾರಿ ಎಂಬ ಸಿಪಾಯಿಗಳ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯಿಸಿ, ತನ್ನ ಬಳಿಗೆ ಯೆಹೋವ ದೇವರ ಆಲಯಕ್ಕೆ ಕರೆದುಕೊಂಡು ಬಂದನು. ಅವರ ಸಂಗಡ ಒಡಂಬಡಿಕೆಯನ್ನು ಮಾಡಿ, ಯೆಹೋವ ದೇವರ ಆಲಯದಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು, ಅನಂತರ ಅವನಿಗೆ ಅರಸನ ಮಗನನ್ನು ತೋರಿಸಿದನು.
5 E deu-lhes ordem, dizendo: Esta é a obra que vós haveis de fazer: uma terça parte de vós, que entra no sábado, fará a guarda da casa do rei:
ಅವರಿಗೆ, “ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ಅರಮನೆಯ ಕಾವಲುಗಾರರಾಗಿರಬೇಕು.
6 E outra terça parte estará à porta Sur; e a outra terça parte à porta detraz dos da guarda: assim fareis a guarda desta casa, afastando a todos.
ಇನ್ನೊಂದು ಭಾಗವು ಸೂರ್ ಎಂಬ ಬಾಗಿಲ ಬಳಿಯಲ್ಲಿಯೂ, ಮತ್ತೊಂದು ಭಾಗವು ಕಾವಲಿನ ಹಿಂದೆ ಇರುವ ಬಾಗಿಲ ಬಳಿಯಲ್ಲಿಯೂ ಇರಿ. ಹೀಗೆಯೇ ದೇವಾಲಯ ಕಾವಲು ಮುರಿಯದ ಹಾಗೆ ಅದನ್ನು ಕಾಯಿರಿ.
7 E as duas partes de vós, a saber, todos os que saem no sábado, farão a guarda da casa do Senhor junto ao rei.
ಇದಲ್ಲದೆ ಸಬ್ಬತ್ ದಿನದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಯೆಹೋವ ದೇವರ ಆಲಯದಲ್ಲಿರುವ ಅರಸನನ್ನು ಕಾಯುವವರಾಗಿರಿ.
8 E rodeareis o rei, cada um com as suas armas nas mãos, e aquele que entrar entre as fileiras o matarão; e vós estareis com o rei quando sair e quando entrar.
ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಯಾವನಾದರೂ ನಿಮ್ಮ ಸಾಲುಗಳಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಆದರೆ ಅರಸನು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಆಜ್ಞಾಪಿಸಿದನು.
9 Fizeram pois os centuriões conforme tudo quanto ordenara o sacerdote Joiada, tomando cada um os seus homens, tanto aos que entravam no sábado como aos que saiam no sábado; e vieram ao sacerdote Joiada.
ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಶತಾಧಿಪತಿಗಳು ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಯೆಹೋಯಾದಾವನ ಬಳಿಗೆ ಕರೆದುಕೊಂಡು ಬಂದರು.
10 E o sacerdote deu aos centuriões as lanças, e os escudos que haviam sido do rei David, que estavam na casa do Senhor.
ಆಗ ಯಾಜಕನು ಯೆಹೋವ ದೇವರ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ, ಗುರಾಣಿಗಳನ್ನೂ ಶತಾಧಿಪತಿಗಳಿಗೆ ಕೊಟ್ಟನು.
11 E os da guarda se puseram, cada um com as armas na mão, desde o lado direito da casa até ao lado esquerdo da casa, da banda do altar, e da banda da casa, junto ao rei em redor.
ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು, ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ನಿಂತುಕೊಂಡರು.
12 Então ele tirou o filho do rei, e lhe pôs a coroa, e lhe deu o testemunho; e o fizeram rei, e o ungiram, e bateram as mãos, e disseram: Viva o rei!
ಆಗ ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅರಸನನ್ನಾಗಿ ಮಾಡಿ ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು ಚಪ್ಪಾಳೆ ಹೊಡೆದು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.
13 E Athalia, ouvindo a voz dos da guarda e do povo, entrou ao povo na casa do Senhor.
ಅತಲ್ಯಳು ಕಾವಲುಗಾರರ ಮತ್ತು ಜನರ ಶಬ್ದವನ್ನೂ ಕೇಳಿದಾಗ, ಯೆಹೋವ ದೇವರ ಆಲಯದಲ್ಲಿ ಜನರ ಬಳಿಗೆ ಬಂದಳು.
14 E olhou, e eis que o rei estava junto à coluna, conforme o costume, e os capitães e as trombetas junto ao rei, e todo o povo da terra estava alegre e tocava as trombetas: então Athalia rasgou os seus vestidos, e clamou: Traição! Traição!
ಅಲ್ಲಿ ಅರಸನು ಪದ್ಧತಿಯ ಪ್ರಕಾರ ಕಂಬದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.
15 Porém o sacerdote Joiada deu ordem aos centuriões que comandavam as tropas, e disse-lhes: tirai-a para fora das fileiras, e a quem a seguir matai-o à espada. Porque o sacerdote disse: Não a matem na casa do Senhor.
ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.
16 E lançaram-lhe as mãos a ela, e foi pelo caminho da entrada dos cavalos à casa do rei, e ali a mataram.
ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಂದುಹಾಕಿದರು.
17 E Joiada fez um concerto entre o Senhor e o rei e o povo, que seria o povo do Senhor; como também entre o rei e o povo.
ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ಯೆಹೋವ ದೇವರಿಗೂ, ಅರಸನಿಗೂ, ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಹಾಗೆಯೇ ಅರಸನಿಗೂ, ಜನರಿಗೂ ಮಧ್ಯದಲ್ಲಿ ಒಡಂಬಡಿಕೆ ಮಾಡಿಸಿದನು.
18 Então todo o povo da terra entrou na casa de Baal, e a derribaram, como também os seus altares, e as suas imagens totalmente quebraram, e a Mattan, sacerdote de Baal, mataram perante os altares: então o sacerdote pôs oficiais sobre a casa do Senhor.
ದೇಶದ ಜನರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಆಗ ಯಾಜಕನಾದ ಯೆಹೋಯಾದಾವನು ಯೆಹೋವ ದೇವರ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು.
19 E tomou os centuriões, e os capitães, e os da guarda, e todo o povo da terra: e conduziram da casa do Senhor o rei, e vieram, pelo caminho da porta dos da guarda, à casa do rei, e se assentou no trono dos reis.
ಅವನು ಶತಾಧಿಪತಿಗಳನ್ನೂ, “ಕಾರಿ” ಎಂಬ ಸಿಪಾಯಿಗಳ ಅಧಿಕಾರಿಗಳನ್ನೂ, ಕಾವಲುಗಾರರನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕಾವಲುಗಾರರ ಬಾಗಿಲ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಬಂದು, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.
20 E todo o povo da terra se alegrou, e a cidade repousou, depois que mataram a Athalia à espada junto à casa do rei.
ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
21 Era Joás da idade de sete anos quando o fizeram rei.
ಯೋವಾಷ್ ಅರಸನಾದಾಗ ಏಳು ವರ್ಷದವನಾಗಿದ್ದನು.