< 2 Reis 7 >

1 Então disse Eliseo: Ouvi a palavra do Senhor: assim diz o Senhor: amanhã, quase a este tempo, uma medida de farinha haverá por um siclo, e duas medidas de cevada por um siclo, à porta de Samaria.
ಆಗ ಎಲೀಷನು ಅವನಿಗೆ, “ಯೆಹೋವನ ವಾಕ್ಯವನ್ನು ಕೇಳು, ಆತನು, ‘ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು’” ಎನ್ನುತ್ತಾನೆ ಎಂದು ಹೇಳಿದನು.
2 Porém um capitão, em cuja mão o rei se encostava, respondeu ao homem de Deus e disse: Eis que ainda que o Senhor fizesse janelas no céu, poder-se-ia fazer isso? E ele disse: Eis que o verás com os teus olhos, porém daí não comerás.
ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.
3 E quatro homens leprosos estavam à entrada da porta, os quais disseram uns aos outros: Para que estaremos nós aqui até morrermos?
ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?
4 Se dissermos: Entremos na cidade, há fome na cidade, e morreremos ai; e se ficarmos aqui, também morreremos: vamos nós pois agora, e demos conosco no arraial dos siros: se nos deixarem viver, viveremos, e se nos matarem, tão somente morreremos.
ಪಟ್ಟಣದೊಳಗೆ ಬರವಿರುವುದರಿಂದ ಅಲ್ಲಿ ಹೋದರೂ ಸಾಯಬೇಕು, ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಅರಾಮ್ಯರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ” ಎಂದು ಮಾತನಾಡಿಕೊಂಡರು.
5 E levantaram-se ao crepúsculo, para se irem ao arraial dos siros: e, chegando à entrada do arraial dos siros, eis que não havia ali ninguém.
ಅವರು ಸಾಯಂಕಾಲವಾಗಲು ಅರಾಮ್ಯರ ಪಾಳೆಯಕ್ಕೆ ಹೊರಟರು. ಅವರು ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.
6 Porque o Senhor fizera ouvir no arraial dos siros ruído de carros e ruído de cavalos, como o ruído dum grande exército; de maneira que disseram uns aos outros: Eis que o rei de Israel alugou contra nós os reis dos heteus e os reis dos egípcios, para virem contra nós.
ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,
7 Pelo que se levantaram, e fugiram no crepúsculo, e deixaram as suas tendas, e os seus cavalos, e os seus jumentos, e o arraial como estava: e fugiram para salvarem a sua vida.
ತಮ್ಮ ಗುಡಾರಗಳನ್ನೂ, ಕತ್ತೆ ಕುದುರೆಗಳನ್ನೂ ಪಾಳೆಯದಲ್ಲಿದ್ದುದ್ದೆಲ್ಲವನ್ನೂ ಬಿಟ್ಟು ತಮ್ಮ ಜೀವರಕ್ಷಣೆಗಾಗಿ ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು.
8 Chegando pois estes leprosos à entrada do arraial, entraram numa tenda, e comeram e beberam e tomaram dali prata, e ouro, e vestidos, e foram e os esconderam: então voltaram, e entraram em outra tenda, e dali também tomaram, e o esconderam.
ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ, ಬಟ್ಟೆಗಳನ್ನೂ ತೆಗೆದುಕೊಂಡು ಅಡಗಿಸಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿಟ್ಟರು.
9 Então disseram uns para os outros: Não fazemos bem: este dia é dia de boas novas, e nos calamos; se esperarmos até à luz da manhã, algum mal nos sobrevirá; pelo que agora vamos, e o anunciemos à casa do rei.
ಅನಂತರ ಅವರು, “ಇದು ಶುಭವಾರ್ತೆಯ ದಿನವಾಗಿದೆ. ನಾವು ಇದನ್ನು ಪ್ರಕಟಿಸದಿರುವುದು ಒಳ್ಳೇಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾದೇವು. ಆದುದರಿಂದ ಹೋಗಿ ಅರಸನಿಗೆ ಈ ಸಂಗತಿ ತಿಳಿಸೋಣ” ಎಂದು ಮಾತನಾಡಿಕೊಂಡು ಅಲ್ಲಿಂದ ಹೊರಟರು.
10 Vieram pois, e bradaram aos porteiros da cidade, e lhes anunciaram, dizendo: Fomos ao arraial dos siros e eis que lá não havia ninguém, nem voz de homem, porém só cavalos atados, e jumentos atados, e as tendas como estavam de antes.
೧೦ಊರಬಾಗಿಲಿಗೆ ಬಂದು ಕಾವಲುಗಾರರಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ” ಎಂದು ಕೂಗಿ ಹೇಳಿದರು.
11 E chamaram os porteiros, e o anunciaram dentro da casa do rei.
೧೧ಬಾಗಿಲು ಕಾಯುವವರು ಕೂಡಲೆ ಅರಸನ ಮನೆಯವರನ್ನು ಕೂಗಿ, ಅವರಿಗೆ ಈ ವರ್ತಮಾನವನ್ನು ತಿಳಿಸಿದರು.
12 E o rei se levantou de noite, e disse a seus servos: Agora vos farei saber o que é que os siros nos fizeram: bem sabem eles que esfaimados estamos, pelo que sairam do arraial, a esconder-se pelo campo, dizendo: Quando sairem da cidade, então os tomaremos vivos, e entraremos na cidade.
೧೨ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಅರಾಮ್ಯರ ಉಪಾಯವನ್ನು ಹೇಳುತ್ತೇನೆ ಕೇಳಿರಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುವುದನ್ನು ಅವರು ಬಲ್ಲರು. ಆದುದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ. ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಜೀವ ಸಹಿತವಾಗಿ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ” ಎಂದನು.
13 Então um dos seus servos respondeu e disse: Tomem-se pois cinco dos cavalos do resto que ficaram aqui dentro (eis que são como toda a multidão dos israelitas que ficaram aqui de resto, e eis que são como toda a multidão dos israelitas que já pereceram) e enviemo-los, e vejamos.
೧೩ಆಗ ಅವರಲ್ಲೊಬ್ಬನು ಅರಸನಿಗೆ, “ರಾಹುತರು ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಾಯೇಲರ ಗತಿಯಾಗಲಿ, ಸತ್ತುಹೋದವರ ಗತಿಯಾಗಲಿ, ಸಂಭವಿಸುವುದಷ್ಟೆ” ಎಂದು ಹೇಳಿದನು.
14 Tomaram pois dois cavalos de carro; e o rei os enviou após o exército dos siros, dizendo: Ide, e vede.
೧೪ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ, ಅರಾಮ್ಯರ ಸೈನ್ಯವು ಎಲ್ಲಿರುತ್ತದೆ ಎಂಬುವುದನ್ನು ನೋಡಿ, ಬರುವುದಕ್ಕಾಗಿ ರಾಹುತರನ್ನು ಕಳುಹಿಸಿದನು.
15 E foram após eles até ao Jordão, e eis que todo o caminho estava cheio de vestidos e de aviamentos, que os siros, apressando-se, lançaram fora: e voltaram os mensageiros, e o anunciaram ao rei:
೧೫ಅವರು ಯೊರ್ದನ್ ನದಿಯವರೆಗೂ ಹೋಗಿ, ಅವಸರದಿಂದ ಓಡಿಹೋದ ಅರಾಮ್ಯರು ದಾರಿಯಲ್ಲೆಲ್ಲಾ ತಮ್ಮ ಬಟ್ಟೆಗಳನ್ನು ಸಾಮಾನುಗಳನ್ನು ಬಿಸಾಡಿದ್ದನ್ನೂ ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.
16 Então saiu o povo, e saqueou o arraial dos siros: e havia uma medida de farinha por um siclo, e duas medidas de cevada por um siclo, conforme a palavra do Senhor.
೧೬ಆಗ ಜನರು ಹೊರಗೆ ಹೋಗಿ ಅರಾಮ್ಯರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಯೆಹೋವನ ಮಾತಿನಂತೆ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಟ್ಟವು.
17 E pusera o rei à porta o capitão em cuja mão se encostava; e o povo o atropelou na porta, e morreu, como falara o homem de Deus, o que falou quando o rei descera a ele.
೧೭ಅರಸನು ತನ್ನ ಸಹವರ್ತಿಯಾದ ಸರದಾರನನ್ನು ಊರಬಾಗಿಲು ಕಾಯುವುದಕ್ಕಾಗಿ ಕಳುಹಿಸಿದ್ದರಿಂದ, ಅವನು ಜನರಿಂದ ತುಳಿಯಲ್ಪಟ್ಟು ಸತ್ತು ಹೋದನು. ಹೀಗೆ ದೇವರ ಮನುಷ್ಯನು ಅರಸನ ಜೊತೆಯಲ್ಲಿ, ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.
18 Porque assim sucedeu como o homem de Deus falara ao rei dizendo: amanhã, quase a este tempo, haverá duas medidas de cevada por um siclo, e uma medida de farinha por um siclo, à porta de Samaria.
೧೮ದೇವರ ಮನುಷ್ಯನು ಅರಸನಿಗೆ, “ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವವು” ಎಂದು ಹೇಳಿದನು.
19 E aquele capitão respondeu ao homem de Deus, e disse: Eis que ainda que o Senhor fizesse janelas no céu, poder-se-ia isso fazer conforme essa palavra? E ele disse: Eis que o verás com os teus olhos, porém daí não comerás.
೧೯ಆ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ, ಇದು ಸಂಭವಿಸಲು ಸಾಧ್ಯವಿಲ್ಲ?” ಎಂದು ಹೇಳಿದ್ದನು. ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ನೀನು, ಅದನ್ನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವುದಿಲ್ಲ” ಎಂದು ನುಡಿದಿದ್ದನು.
20 E assim lhe sucedeu, porque o povo o atropelou à porta, e morreu.
೨೦ಅವನು ಊರುಬಾಗಿಲಿನಲ್ಲಿ ಜನರಿಂದ ತುಳಿಯಲ್ಪಟ್ಟು ಮರಣ ಹೊಂದಿದನು. ಎಲೀಷನು ಹೇಳಿದ ಈ ಮಾತು ನೆರವೇರಿತು.

< 2 Reis 7 >