< Amós 4 >
1 Ouvi esta palavra, vós, vacas de Basan, vós, que estais no monte de Samaria, vós, que oprimis aos pobres, que quebrantais os necessitados, vós, que dizeis a seus senhores: dai cá, para que bebamos.
೧ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.
2 Jurou o Senhor Jehovah, pela sua santidade, que eis que dias estão para vir sobre vós, em que vos levarão com anzois e a vossos descendentes com anzois de pesca.
೨ಕರ್ತನಾದ ಯೆಹೋವನು ತನ್ನ ಪರಿಶುದ್ಧತ್ವದ ಮೇಲೆ ಆಣೆಯಿಟ್ಟು: “ಇಗೋ ನಿಮ್ಮನ್ನು ಕೊಂಡಿಗಳಿಂದಲೂ, ನಿಮ್ಮಲ್ಲಿ ಉಳಿದವರನ್ನು ಮೀನುಗಾಳಗಳಿಂದಲೂ, ಎಳೆದುಕೊಂಡು ಹೋಗುವ ದಿನಗಳು ನಿಮಗೆ ಬರುತ್ತವೆ ಎಂದು ಪ್ರಮಾಣ ಮಾಡಿದ್ದಾನೆ.
3 E saireis pelas brechas, uma após outra, e lançareis fora o que levastes para o palácio, disse o Senhor.
೩ಗೋಡೆಯಲ್ಲಿಯ ಬಿರುಕುಗಳ ಮೂಲಕ, ಪ್ರತಿಯೊಬ್ಬ ಸ್ತ್ರೀಯೂ ನೇರವಾಗಿ ತನ್ನ ಮುಂದೆಯೇ ಹೊರಟು ಹೋಗುವಳು, ಹರ್ಮೋನಿನ ದಿಕ್ಕಿನ ಕಡೆಗೆ ತಳ್ಳಲ್ಪಡುವಿರಿ” ಇದು ಯೆಹೋವನ ನುಡಿ.
4 Vinde a bethel, e transgredi, em Gilgal aumentai as transgressões, e de manhã trazei os vossos sacrifícios, e os vossos dízimos ao terceiro dia.
೪“ಬೇತೇಲಿಗೆ ಹೋಗಿ ದ್ರೋಹ ಮಾಡಿರಿ, ಗಿಲ್ಗಾಲಿನಲ್ಲಿ ಸೇರಿ ದ್ರೋಹವನ್ನು ಇನ್ನೂ ಹೆಚ್ಚಿಸಿರಿ. ಪ್ರತಿದಿನ ಬೆಳಿಗ್ಗೆ ನಿಮ್ಮ ಬಲಿಗಳನ್ನು ಅರ್ಪಿಸಿರಿ, ಮೂರು ದಿನಕ್ಕೆ ಒಂದು ಸಲ ದಶಮಾಂಶವನ್ನು ಸಲ್ಲಿಸಿರಿ.
5 E queimai o sacrifício de louvores do pão levedado, e apregoai os sacrifícios voluntários, fazei-o ouvir; porque assim o quereis, ó filhos de Israel, disse o Senhor Jehovah.
೫ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮ ಮಾಡಿರಿ; ಕೊಟ್ಟ ಕಾಣಿಕೆಯನ್ನು ಪ್ರಕಟಿಸಿರಿ; ಸಾರಿಹೇಳಿರಿ, ಇಸ್ರಾಯೇಲರೇ ಹೀಗೆ ಮಾಡುವುದು ನಿಮಗೆ ಇಷ್ಟ” ಇದು ಕರ್ತನಾದ ಯೆಹೋವನ ನುಡಿ.
6 Por isso também vos dei limpeza de dentes em todas as vossas cidades, e falta de pão em todos os vossos lugares; contudo não vos convertestes a mim, disse o Senhor.
೬“ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.
7 Além disso, retive de vós a chuva, faltando ainda três meses até à sega; e fiz chover sobre uma cidade, e sobre outra cidade não fiz chover; sobre um campo choveu, mas o outro, sobre o qual não choveu, se secou.
೭“ಸುಗ್ಗಿಗೆ ಮೂರು ತಿಂಗಳು ಕಳೆಯಬೇಕಾದಾಗಲೂ, ನಿಮಗೆ ಮಳೆಯನ್ನು ತಡೆದೆನು. ಒಂದು ಪಟ್ಟಣದ ಮೇಲೆ ಮಳೆಯಾಗುವಂತೆಯೂ, ಇನ್ನೊಂದು ಪಟ್ಟಣದ ಮೇಲೆ ಮಳೆಯಾಗದಂತೆಯೂ ಮಾಡಿದೆನು. ಒಂದು ಭಾಗದ ಹೊಲದಲ್ಲಿ ಮಳೆಯಾಯಿತು. ಮಳೆಯಾಗದ ಹೊಲದ ಭಾಗವು ಬಾಡಿಹೋಯಿತು.
8 E andaram vagabundas duas ou três cidades a uma cidade, para beberem água, mas não se saciaram: contudo não vos convertestes a mim, disse o Senhor.
೮ಎರಡು ಅಥವಾ ಮೂರು ಪಟ್ಟಣದವರು ನೀರು ಕುಡಿಯುವುದಕ್ಕೆ ಮತ್ತೊಂದು ಪಟ್ಟಣಕ್ಕೆ ಬಳಲುತ್ತಾ ಹೋಗುತ್ತಿದ್ದರು, ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ.” ಇದು ಯೆಹೋವನ ನುಡಿ.
9 Feri-vos com queimadura, e com ferrugem; a multidão das vossas hortas, e das vossas vinhas, e das vossas figueiras, e das vossas oliveiras, comeu a locusta; contudo não vos convertestes a mim, disse o Senhor.
೯“ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.
10 Enviei a peste contra vós, à maneira do Egito: os vossos mancebos matei à espada, e os vossos cavalos deixei levar presos, e o fedor dos vossos exércitos fiz subir aos vossos narizes; contudo não vos convertestes a mim, disse o Senhor.
೧೦“ಐಗುಪ್ತದ ವ್ಯಾಧಿಗಳಂತಹ ವ್ಯಾಧಿಯನ್ನು ನಿಮ್ಮ ಮೇಲೆ ಕಳುಹಿಸಿದೆನು. ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಕುದರೆಗಳನ್ನು ಸೂರೆಮಾಡಿಸಿದೆನು, ನಿಮ್ಮ ದಂಡುಗಳ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.
11 Subverti a alguns dentre vós, como Deus subverteu a Sodoma e Gomorra, sendo vós como um tição arrebatado do incêndio; contudo não vos convertestes a mim, disse o Senhor.
೧೧“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.
12 Portanto, assim te farei, ó Israel! Porquanto pois isto te farei, prepara-te, ó Israel, a encontrares o teu Deus.
೧೨“ಆದಕಾರಣ ಇಸ್ರಾಯೇಲೇ, ನಾನು ನಿನಗೆ ಮಾಡುತ್ತೇನೆ; ನಾನು ಮಾಡಬೇಕೆಂದಿರುವುದರಿಂದ, ಇಸ್ರಾಯೇಲೇ, ನಿನ್ನ ದೇವರ ಬರುವಿಕೆಗೆ ನಿನ್ನನ್ನು ಸಿದ್ಧಮಾಡಿಕೋ!
13 Porque eis que o que forma os montes, e cria o vento, e declara ao homem qual seja o seu pensamento, o que faz da manhã trevas, e piza os altos da terra, o Senhor Deus dos exércitos é o seu nome.
೧೩ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.