< Daniel 6 >
1 E pareceu bem a Dario constituir sobre o reino a cento e vinte presidentes, que estivessem sobre todo o reino;
೧ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ನೇಮಿಸಿದನು.
2 E sobre eles três príncipes, dos quais Daniel era um, aos quais estes presidentes dessem conta, para que o rei não sofresse dano.
೨ರಾಜರಿಗೆ ನಷ್ಟವಾಗದಂತೆ ಆ ದೇಶಾಧಿಪತಿಗಳ ಮೇಲೆ ಅವರಿಂದ ಲೆಕ್ಕ ತೆಗೆದುಕೊಳ್ಳುವ ಮೂವರು ಮುಖ್ಯಾಧಿಕಾರಿಗಳನ್ನೂ ನೇಮಿಸಬೇಕೆಂದು ನಿಶ್ಚಯಿಸಿಕೊಂಡನು; ಆ ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನು.
3 Então o mesmo Daniel sobrepujou a estes príncipes e presidentes; porque nele havia um espírito excelente; porquanto o rei pensava constitui-lo sobre todo o reino.
೩ಈ ದಾನಿಯೇಲನಲ್ಲಿ ಪರಮಬುದ್ಧಿ ಇದ್ದುದರಿಂದ ಅವನು ಉಳಿದ ಮುಖ್ಯಾಧಿಕಾರಿಗಳಿಗಿಂತಲೂ, ದೇಶಾಧಿಪತಿಗಳಿಗಿಂತಲೂ ಅಧಿಕ ಸಮರ್ಥನೆನಿಸಿಕೊಂಡಿದ್ದನು. ಅವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.
4 Então os príncipes e os presidentes procuravam achar ocasião contra Daniel a respeito do reino; mas não podiam achar ocasião ou culpa alguma; porque ele era fiel, e não se achava nele nenhum vício nem culpa.
೪ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.
5 Então estes homens disseram: Nunca acharemos ocasião alguma contra este Daniel, se não a acharmos contra ele na lei do seu Deus.
೫ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪುಹೊರಿಸಲು ಇವನ ದೇವಧರ್ಮದ ಮೂಲಕವೇ ಹೊರತು ಇನ್ಯಾವುದರಲ್ಲಿಯೂ ನಮಗೆ ಅವಕಾಶ ದೊರೆಯದು” ಎಂದುಕೊಂಡರು.
6 Então estes príncipes e presidentes foram juntos ao rei, e disseram-lhe assim: Ó rei Dario, vive para sempre!
೬ಹೀಗೆ ಆ ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು!
7 Todos os príncipes do reino, os prefeitos e presidentes, capitães e governadores, tomaram conselho afim de estabelecerem um edito real e fazerem um mandamento firme: que qualquer que, por espaço de trinta dias, fizer uma petição a qualquer deus, ou a qualquer homem, e não a ti, ó rei, seja lançado na cova dos leões.
೭ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.
8 Agora pois, ó rei, confirma o edito, e assina a escritura, para que não se mude, conforme a lei dos medos e dos persas, que se não pode revogar.
೮ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಮೇದ್ಯರ ಮತ್ತು ಪಾರಸಿಯರ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಬೇರೆಯಾಗದಂತೆ ಶಾಸನಕ್ಕೆ ಹಸ್ತಾಕ್ಷರ ಮಾಡು” ಎಂದು ಬಿನ್ನವಿಸಿದರು.
9 Por esta causa o rei Dario assinou esta escritura e edito.
೯ಆದುದರಿಂದ ರಾಜನಾದ ದಾರ್ಯಾವೆಷನು ಆ ನಿಬಂಧನಶಾಸನಕ್ಕೆ ರುಜು ಹಾಕಿದನು.
10 Daniel, pois, quando soube que a escritura estava assinada, entrou na sua casa (ora havia no seu quarto janelas abertas da banda de jerusalém), e três vezes no dia se punha de joelhos, e orava, e confessava diante do seu Deus, como também antes costumava fazer.
೧೦ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು
11 Então aqueles homens foram juntos, e acharam a Daniel orando e suplicando diante do seu Deus.
೧೧ಆಗ ಆ ಜನರು ಗುಂಪಾಗಿ ಕೂಡಿ ದಾನಿಯೇಲನು ತನ್ನ ದೇವರ ಸಮ್ಮುಖದಲ್ಲಿ ಪ್ರಾರ್ಥಿಸಿ ವಿಜ್ಞಾಪಿಸುತ್ತಿರುವುದನ್ನು ಕಂಡರು.
12 Então se chegaram, e disseram diante do rei: No tocante ao edito real, porventura não assinaste o edito, que todo o homem que fizesse uma petição a qualquer deus, ou a qualquer homem, por espaço de trinta dias, e não a ti, ó rei, fosse lançado na cova dos leões? Respondeu o rei, e disse: Esta palavra é certa, conforme a lei dos medos e dos persas, que se não pode revogar.
೧೨ಅವರು ರಾಜನ ಬಳಿಗೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜನೇ, ಯಾರಾದರೂ ಮೂವತ್ತು ದಿನಗಳ ತನಕ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆವಿಜ್ಞಾಪನೆ ಮಾಡಿದರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ನಿಬಂಧನೆಗೆ ರುಜು ಹಾಕಿದ್ದೀಯಲ್ಲಾ” ಎಂದು ಕೇಳಲು, ರಾಜನು, “ಹೌದು, ಮೇದ್ಯರ ಮತ್ತು ಪಾರಸಿಯರ ರದ್ದಾಗದ ಧರ್ಮವಿಧಿಗಳಂತೆ ಇದು ಸ್ಥಿರವಾದ ನಿಬಂಧನೆ” ಎಂದು ಉತ್ತರಕೊಟ್ಟನು.
13 Então responderam, e disseram diante do rei: Daniel, que é dos transportados de Judá, não tem feito caso de ti, ó rei, nem do edito que assinaste, antes três vezes por dia faz a sua oração.
೧೩ಆಗ ಅವರು ರಾಜನ ಸನ್ನಿಧಿಯಲ್ಲಿ, “ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ, ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ, ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಅವನ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದಾನೆ” ಎಂದು ಅರಿಕೆ ಮಾಡಿದರು.
14 Ouvindo então o rei o negócio, ficou muito penalizado, e a favor de Daniel propôs dentro do seu coração tirá-lo; e até ao pôr do sol trabalhou por o salvar.
೧೪ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ಇದರಿಂದ ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಆಲೋಚಿಸುತ್ತಿದ್ದನು.
15 Então aqueles homens se foram juntos ao rei, e disseram ao rei: Sabe, ó rei, que é uma lei dos medos e dos persas que nenhum edito ou ordenança, que o rei determine, se pode mudar.
೧೫ಇದನ್ನು ತಿಳಿದು ಆ ಜನರು ರಾಜನ ಬಳಿಗೆ ಕೂಡಿಬಂದು, “ಪ್ರಭುವೇ, ರಾಜನು ವಿಧಿಸಿದ ಯಾವ ನಿಬಂಧನೆಯಾಗಲಿ, ನಿಯಮವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರವು ಮೇದ್ಯಯರಲ್ಲಿಯೂ, ಪಾರಸಿಯರಲ್ಲಿಯೂ ಉಂಟೆಂಬುದು ನಿನಗೆ ಗೊತ್ತಿರಲಿ” ಎಂದು ಹೇಳಿದರು. ಇದರಿಂದ ಅನಿವಾರ್ಯವಾಗಿ ರಾಜನು ಅಪ್ಪಣೆ ಕೊಡಲೇ ಬೇಕಾಯಿತು.
16 Então o rei ordenou que trouxessem a Daniel, e o lançaram na cova dos leões. E, falando o rei, disse a Daniel: O teu Deus, a quem tu continuamente serves, ele te livrará.
೧೬ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ರಾಜನ ಅಪ್ಪಣೆಯಂತೆ ಹಾಕಿಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ನಿತ್ಯವೂ ಆರಾಧಿಸುವ ದೇವರು ನಿನ್ನನ್ನುದ್ಧರಿಸಲಿ” ಎಂದು ಹರಸಿದನು.
17 E foi trazida uma pedra, e foi posta sobre a boca da cova; e o rei a selou com o seu anel e com o anel dos seus grandes, para que se não mudasse a sentença acerca de Daniel.
೧೭ಕೂಡಲೆ ಬಂಡೆಯನ್ನು ತಂದು ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಶಿಕ್ಷೆಯನ್ನು ಯಾರು ಬದಲಾಯಿಸದಂತೆ ರಾಜನ ಮುದ್ರೆಯಿಂದಲೂ, ತನ್ನ ಮುಖಂಡರ ಮುದ್ರೆಯಿಂದಲೂ ಅದಕ್ಕೆ ಮುದ್ರೆಯನ್ನು ಹಾಕಿ ಭದ್ರ ಮಾಡಲಾಯಿತು.
18 Então o rei se foi para o seu palácio, e passou a noite em jejum, e não deixou trazer à sua presença instrumentos de música; e fugiu dele o sono.
೧೮ರಾಜನು ಅರಮನೆಯಲ್ಲಿ ವಿನೋದವಾದ್ಯಗಳನ್ನು ತನ್ನ ಮುಂದೆ ತರಿಸದೆ, ಉಪವಾಸವಾಗಿ ರಾತ್ರಿಯನ್ನು ಕಳೆದನು; ಅವನಿಗೆ ನಿದ್ರೆ ಬರಲಿಲ್ಲ.
19 Então o rei se levantou pela manhã cedo, e foi com pressa à cova dos leões.
೧೯ಮರುದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು.
20 E, chegando-se à cova, chamou por Daniel com voz triste; e, falando o rei, disse a Daniel: Daniel, servo do Deus vivo! dar-se-ia o caso que o teu Deus, a quem tu continuamente serves, te pudesse livrar dos leões?
೨೦ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ಅವನು ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವ ಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಶಕ್ತನಾದನೋ?” ಎಂದು ಕೇಳಿದನು.
21 Então Daniel falou ao rei: Ó rei, vive para sempre!
೨೧ಅದಕ್ಕೆ ದಾನಿಯೇಲನು ರಾಜನಿಗೆ, “ಅರಸನೇ, ಚಿರಂಜೀವಿಯಾಗಿರು!
22 O meu Deus enviou o seu anjo, e fechou a boca dos leões, para que não me fizessem dano, porque foi achada em mim inocência diante dele; e também contra ti, ó rei, não tenho cometido delito algum.
೨೨ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.
23 Então o rei muito se alegrou em si mesmo, e mandou tirar a Daniel da cova: assim foi tirado Daniel da cova, e nenhum dano se achou nele, porque crêra no seu Deus.
೨೩ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.
24 Então ordenou o rei, e foram trazidos aqueles homens que tinham acusado a Daniel, e foram lançados na cova dos leões, eles, seus filhos e suas mulheres; e ainda não tinham chegado ao fundo da cova quando os leões se apoderaram deles, e lhes esmigalharam todos os ossos.
೨೪ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.
25 Então o rei Dario escreveu a todos os povos, nações e línguas que moram em toda a terra: A paz vos seja multiplicada.
೨೫ಆಗ ರಾಜನಾದ ದಾರ್ಯಾವೆಷನು ಲೋಕದಲ್ಲೆಲ್ಲಾ ವಾಸಿಸುವ ಸಕಲ ಜನಾಂಗ, ಕುಲ, ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿ, ಅದನ್ನು ಅನುಸರಿಸಿ ನಡೆಯಲು ಆಜ್ಞೆಮಾಡಿದನು. ದಾನಿಯೇಲನ ದೇವರ ದಯೆಯಿಂದ ನಿಮಗೆ ಸುಖವು ಹೆಚ್ಚೆಚ್ಚಾಗಲಿ!
26 Da minha parte é feito um decreto, que em todo o domínio do meu reino tremam todos e temam perante o Deus de Daniel; porque ele é o Deus vivo e permanecente para sempre, e o seu reino não se pode destruir, e o seu domínio dura até ao fim
೨೬“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;
27 Ele faz escapar e livra, e faz sinais e maravilhas no céu e na terra, o qual fez escapar a Daniel do poder dos leões.
೨೭ಆತನು ಉದ್ಧರಿಸುವವನೂ, ರಕ್ಷಿಸುವವನೂ, ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡೆಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದನು.”
28 Este Daniel, pois, prosperava no reinado de Dario, e no reinado de Cyro, o persa.
೨೮ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸನ್ಮಾನ, ಗೌರವಗಳಿಂದ ಬಾಳಿದನು.