< Deuteronômio 11 >
1 Amarás pois ao Senhor teu Deus, e guardarás a sua observância, e os seus estatutos, e os seus juízos, e os seus mandamentos, todos os dias.
೧ಆದುದರಿಂದ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನ ನಿಯಮಗಳನ್ನು ಕೈಕೊಂಡು, ಆತನ ಆಜ್ಞಾವಿಧಿನಿಯಮಗಳನ್ನು ಯಾವಾಗಲೂ ಅನುಸರಿಸಬೇಕು.
2 E hoje sabereis que falo, não com vossos filhos, que o não sabem, e não viram a instrução do Senhor vosso Deus, a sua grandeza, a sua mão forte, e o seu braço estendido;
೨ನೀವು ನಿಮ್ಮ ದೇವರಾದ ಯೆಹೋವನ ಶಿಕ್ಷಣ ಕ್ರಮವನ್ನೂ, ಮಹಿಮೆಯನ್ನೂ, ಭುಜಬಲವನ್ನೂ ಮತ್ತು ಶಿಕ್ಷಾಹಸ್ತವನ್ನೂ ಅಂದರೆ,
3 Nem tão pouco os seus sinais, nem os seus feitos, que fez no meio do Egito a faraó, rei do Egito, e a toda a sua terra;
೩ಆತನು ಐಗುಪ್ತದೇಶದಲ್ಲಿ ಫರೋಹನನ್ನೂ ಹಾಗೂ ಅವನ ದೇಶವನ್ನೂ ಶಿಕ್ಷಿಸುವುದಕ್ಕಾಗಿ ನಡಿಸಿದ ಸೂಚಕಕಾರ್ಯಗಳನ್ನೂ ಮತ್ತು ಮಹತ್ಕಾರ್ಯಗಳನ್ನೂ,
4 Nem o que fez ao exército dos egípcios, aos seus cavalos e aos seus carros, fazendo passar sobre eles as águas do Mar Vermelho quando vos perseguiam: e o Senhor os destruiu até ao dia de hoje;
೪ಐಗುಪ್ತ್ಯರ ಸೈನ್ಯ ಅಂದರೆ, ಅವರ ರಥಾಶ್ವಬಲಗಳು ನಿಮ್ಮನ್ನು ಹಿಂದಟ್ಟಿ ಬಂದಾಗ ಆತನು ಕೆಂಪು ಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ,
5 Nem o que vos fez no deserto, até que chegastes a este lugar;
೫ನೀವು ಈ ಸ್ಥಳಕ್ಕೆ ಸೇರುವ ತನಕ ಆತನು ನಿಮಗೋಸ್ಕರ ಅರಣ್ಯದಲ್ಲಿ ಉಪಕಾರಮಾಡಿದ್ದನ್ನೂ,
6 E o que fez a Dathan e a Abiram, filhos de Eliab, filho de Ruben: como a terra abriu a sua boca e os tragou com as suas casas e com as suas tendas, como também tudo o que subsistia, e lhes pertencia, no meio de todo o Israel:
೬ರೂಬೇನನ ಮೊಮ್ಮಕ್ಕಳೂ, ಎಲೀಯಾಬನ ಮಕ್ಕಳೂ ಆದ ದಾತಾನ್ ಮತ್ತು ಅಬೀರಾಮರು ತಿರುಗಿ ಬಿದ್ದಾಗ ಭೂಮಿಯು ಬಾಯ್ದೆರೆದು ಅವರನ್ನೂ, ಅವರ ಮನೆಯವರನ್ನೂ, ಅವರ ಡೇರೆಗಳನ್ನೂ ಮತ್ತು ಅವರಿಗೆ ಸೇರಿದ ಎಲ್ಲಾ ಪ್ರಾಣಿಗಳನ್ನೂ ಇಸ್ರಾಯೇಲರ ನಡುವೆ ನುಂಗಿಬಿಟ್ಟದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ.
7 Porquanto os vossos olhos são os que viram toda a grande obra que fez o Senhor.
೭ಯೆಹೋವನು ನಡಿಸಿದ ಆ ವಿಶೇಷ ಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಿದ್ದೇನೆ.
8 Guardai pois todos os mandamentos que eu vos ordeno hoje, para que vos esforceis, e entreis, e possuais a terra que passais a possuir;
೮ಆದುದರಿಂದಲೇ ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿಯನ್ನು ದಾಟಿ ಆಚೆಯಿರುವ
9 E para que prolongueis os dias na terra que o Senhor jurou a vossos pais da-la a eles e à sua semente, terra que mana leite e mel.
೯ದೇಶವನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ. ಯೆಹೋವನು ನಿಮ್ಮ ಪೂರ್ವಿಕರಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ದೇಶದಲ್ಲಿ ನೀವು ಬಹುಕಾಲ ಬದುಕುವಿರಿ. ಅದು ಹಾಲೂ ಮತ್ತು ಜೇನೂ ಹರಿಯುವ ದೇಶ.
10 Porque a terra que entras a possuir não é como a terra do Egito, de onde saístes, em que semeavas a tua semente, e a regavas com o teu pé, como a uma horta.
೧೦ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಬಿಟ್ಟುಬಂದ ಐಗುಪ್ತದೇಶದ ಹಾಗಲ್ಲ. ಐಗುಪ್ತದೇಶದಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ವ್ಯವಸಾಯ ಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರು ಕಟ್ಟುತ್ತಿದ್ದಿರಿ.
11 Mas a terra que passais a possuir é terra de montes e de vales: da chuva dos céus beberá as águas:
೧೧ಆದರೆ ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ದೇಶವೋ ಹಳ್ಳದಿಣ್ಣೆಗಳ ದೇಶ; ಆಕಾಶದಿಂದ ಮಳೆಬಿದ್ದ ಪ್ರಕಾರವೇ ಅದಕ್ಕೆ ನೀರು ದೊರೆಯುವುದು.
12 Terra de que o Senhor teu Deus tem cuidado: os olhos do Senhor teu Deus estão sobre ela continuamente, desde o princípio até ao fim do ano.
೧೨ಅದು ನಿಮ್ಮ ದೇವರಾದ ಯೆಹೋವನು ಪರಾಂಬರಿಸುವ ದೇಶ; ವರ್ಷದ ಪ್ರಾರಂಭ ಮೊದಲುಗೊಂಡು ಕೊನೆಯ ವರೆಗೂ ಆತನು ಅದನ್ನು ಸದಾ ಕಟಾಕ್ಷಿಸುವನು.
13 E será que, se diligentemente obedecerdes a meus mandamentos que hoje te ordeno, de amar ao Senhor teu Deus, e de o servir de todo o teu coração e de toda a tua alma,
೧೩ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ,
14 Então darei a chuva da vossa terra a seu tempo, a temporã e a serodia, para que recolhas o teu grão, e o teu mosto e o teu azeite.
೧೪ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.
15 E darei erva no teu campo às tuas bestas, e comerás, e fartar-te-ás.
೧೫ಅಡವಿಯಲ್ಲಿ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವನು; ನೀವು ಆಹಾರದಿಂದ ತೃಪ್ತರಾಗಿರುವಿರಿ.
16 Guardai-vos, que o vosso coração não se engane, e vos desvieis, e sirvais a outros deuses, e vos inclineis perante eles:
೧೬ಆದರೆ ನೀವು ಎಚ್ಚರದಿಂದಿರಬೇಕು; ನಿಮ್ಮ ಹೃದಯವು ಮರುಳುಗೊಂಡು ಯೆಹೋವನು ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ,
17 E a ira do Senhor se acenda contra vós, e feche ele os céus, e não haja água, e a terra não dê a sua novidade, e cedo pereçais da boa terra que o Senhor vos dá.
೧೭ಆತನು ನಿಮ್ಮ ಮೇಲೆ ಸಿಟ್ಟುಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಬಿಟ್ಟಾನು; ಆಗ ಭೂಮಿಯಲ್ಲಿ ಬೆಳೆಯಾಗದೆ ಯೆಹೋವನು ನಿಮಗೆ ಕೊಡುವ ಆ ಉತ್ತಮ ದೇಶದಲ್ಲಿ ನೀವು ಉಳಿಯದೆ ಬೇಗ ನಾಶವಾಗಿ ಹೋಗುವಿರಿ.
18 Ponde pois estas minhas palavras no vosso coração e na vossa alma, e atai-as por sinal na vossa mão, para que estejam por testeiras entre os vossos olhos,
೧೮ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲಿಯೂ, ಮನಸ್ಸಿನಲ್ಲಿಯೂ ಇಟ್ಟುಕೊಳ್ಳಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು. ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.
19 E ensinai-as a vossos filhos, falando delas assentado em tua casa, e andando pelo caminho, e deitando-te, e levantando-te;
೧೯ನೀವು ಮನೆಯಲ್ಲಿರುವಾಗಲೂ, ಪ್ರಯಾಣದಲ್ಲಿರುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಅಭ್ಯಾಸಮಾಡಿಸಬೇಕು.
20 E escreve-as nos umbrais de tua casa, e nas tuas portas:
೨೦ನಿಮ್ಮ ಮನೆ ಬಾಗಿಲಿನ ನಿಲುವುಪಟ್ಟಿಗಳಲ್ಲಿಯೂ ಮತ್ತು ಹೆಬ್ಬಾಗಿಲುಗಳ ಮೇಲೆಯೂ ಇವುಗಳನ್ನು ಬರೆಯಬೇಕು.
21 Para que se multipliquem os vossos dias e os dias de vossos filhos na terra que o Senhor jurou a vossos pais dar-lhes, como os dias dos céus sobre a terra.
೨೧ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶವು ಎಷ್ಟು ಕಾಲ ಇರುವುದೋ, ಅಷ್ಟು ಕಾಲದ ವರೆಗೆ ನೀವೂ ಮತ್ತು ನಿಮ್ಮ ಸಂತತಿಯವರೂ ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ದೇಶದಲ್ಲಿ ಬಾಳುವಿರಿ.
22 Porque, se diligentemente guardardes todos estes mandamentos que vos ordeno para os guardardes, amando ao Senhor vosso Deus, andando em todos os seus caminhos, e a ele vos achegardes,
೨೨ನಾನು ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆದು, ಆತನನ್ನೇ ಹೊಂದಿಕೊಂಡಿರಬೇಕು.
23 Também o Senhor de diante de vós lançará fora todas estas nações, e possuireis nações maiores e mais poderosas do que vós
೨೩ಆಗ ಆತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಎದುರಿನಿಂದ ಹೊರಡಿಸುವನು. ನಿಮಗಿಂತಲೂ ಮಹಾಬಲಿಷ್ಠ ಜನಾಂಗಗಳ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವಿರಿ.
24 Todo o lugar que pisar a planta do vosso pé será vosso: desde o deserto, e desde o líbano, desde o rio, o rio Euphrates, até ao mar ocidental, será o vosso termo.
೨೪ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳು ನಿಮ್ಮದಾಗುವವು. ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದ ವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವುದು.
25 Ninguém parará diante de vós: o Senhor vosso Deus porá sobre toda a terra que pisardes o vosso terror e o vosso temor, como já vos tem dito.
೨೫ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು.
26 Eis que hoje eu ponho diante de vós a benção e a maldição:
೨೬ಇಗೋ ನೋಡಿರಿ, ಈ ಹೊತ್ತು ನಾನು ಆಶೀರ್ವಾದವನ್ನೂ ಮತ್ತು ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ.
27 A benção, quando ouvirdes os mandamentos do Senhor vosso Deus, que hoje vos mando;
೨೭ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ ಆಶೀರ್ವಾದವೂ,
28 Porém a maldição, se não ouvirdes os mandamentos do Senhor vosso Deus, e vos desviardes do caminho que hoje vos ordeno, para seguirdes outros deuses que não conhecestes.
೨೮ಈ ಆಜ್ಞೆಗಳಿಗೆ ಅವಿಧೇಯರಾಗಿ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ ಶಾಪವೂ ನಿಮಗುಂಟಾಗುವವು.
29 E será que, havendo-te o Senhor teu Deus introduzido na terra, a que vais para possui-la, então pronunciarás a benção sobre o monte de Gerizim, e a maldição sobre o monte de Ebal
೨೯ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಮತ್ತು ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.
30 Porventura não estão eles de aquém do Jordão, junto ao caminho do pôr do sol, na terra dos cananeus, que habitam na campina defronte do Gilgal, junto aos carvalhais de Moreh?
೩೦ಆ ಬೆಟ್ಟಗಳು ಯೊರ್ದನ್ ನದಿಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ, ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಇವೆ.
31 Porque passareis o Jordão para entrardes a possuir a terra, que vos dá o Senhor vosso Deus: e a possuireis, e nela habitareis.
೩೧ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಬೇಕು. ನೀವು ಆ ದೇಶವನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಾಗ
32 Tende pois cuidado em fazer todos os estatutos e os juízos, que eu hoje vos proponho.
೩೨ನಾನು ಈಗ ನಿಮಗೆ ತಿಳಿಸುವ ಎಲ್ಲಾ ಆಜ್ಞಾವಿಧಿಗಳನ್ನು ಅನುರಿಸಿ ನಡೆಯಲೇಬೇಕು.