< Deuteronômio 3 >
1 Depois nós viramos e subimos o caminho de Basan: e Og rei de Basan, nos saiu ao encontro, ele e todo o seu povo, à peleja em Edrei.
೧ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಮೇಲಕ್ಕೆ ಹೋದಾಗ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈ ಊರಿಗೆ ಹೊರಟುಬಂದನು.
2 Então o Senhor me disse: Não temas, porque a ele e a todo o seu povo, e a sua terra, tenho dado na tua mão: e far-lhe-ás como fizeste a Sehon, rei dos amorreus, que habitava em Hesbon.
೨ಆಗ ಯೆಹೋವನು ನನಗೆ, “ಅವನಿಗೆ ಭಯಪಡಬೇಡ; ನಾನು ಅವನನ್ನೂ, ಅವನ ಸಮಸ್ತ ಜನರನ್ನೂ ಮತ್ತು ದೇಶವನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರವೇ ಇವನಿಗೂ ಮಾಡಬೇಕು” ಎಂದು ಆಜ್ಞಾಪಿಸಿದನು.
3 E também o Senhor nosso Deus nos deu na nossa mão a Og, rei de Basan, e a todo o seu povo: de maneira que o ferimos, até que ninguém lhe ficou de restante.
೩ಬಾಷಾನಿನ ಅರಸನಾದ ಓಗನೂ ಅವನ ಜನರೆಲ್ಲರೂ ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಯೆಹೋವನು ಮಾಡಲಾಗಿ ಅವರಲ್ಲಿ ಒಬ್ಬರಾದರೂ ಉಳಿಯದಂತೆ ಅವರನ್ನು ಹತಮಾಡಿದೆವು.
4 E naquele tempo tomamos todas as suas cidades: nenhuma cidade houve que lhes não tomassemos: sessenta cidades, toda a borda da terra de Argob, o reino de Og em Basan.
೪ಆ ಕಾಲದಲ್ಲಿ ನಾವು ಅವನ ಎಲ್ಲಾ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದೇ ಇದ್ದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.
5 Todas estas cidades eram fortificadas com altos muros, portas e ferrolhos: de mais de outras muitas cidades sem muros.
೫ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ, ಕದಗಳಿಂದಲೂ, ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು.
6 E destruimo-las como fizemos a Sehon, rei de Hesbon, destruindo todas as cidades, homens, mulheres e crianças.
೬ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದಂತೆ ಇವುಗಳಿಗೂ ಮಾಡಿದೆವು. ಅವುಗಳಲ್ಲಿದ್ದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಸಂಪೂರ್ಣವಾಗಿ ನಾಶಮಾಡಿದೆವು.
7 Porém todo o gado, e o despojo das cidades, tomamos para nós por presa.
೭ಪಶುಗಳನ್ನು ಮಾತ್ರ ಉಳಿಸಿ ಸ್ವಂತಕ್ಕೆ ತೆಗೆದುಕೊಂಡು ಊರುಗಳನ್ನೆಲ್ಲಾ ಸೂರೆಮಾಡಿಬಿಟ್ಟೆವು.
8 Assim naquele tempo tomamos a terra da mão daqueles dois reis dos amorreus, que estavam de aquém do Jordão: desde o rio de Arnon, até ao monte de Hermon;
೮ಆ ಕಾಲದಲ್ಲಿ ನಾವು ಅರ್ನೋನ್ ನದಿ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ, ಯೊರ್ದನ್ ನದಿಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.
9 (Os sidônios a Hermon chamam Sirion; porém os amorreus o chamam Senir);
೯(ಹೆರ್ಮೋನ್ ಪರ್ವತಕ್ಕೆ ಚೀದೋನ್ಯರು ಸಿರ್ಯೋನ್ ಎಂದೂ ಮತ್ತು ಅಮೋರಿಯರು ಸೆನೀರ್ ಎಂದೂ ಕರೆಯುತ್ತಿದ್ದರು.)
10 Todas as cidades da terra plana, e todo o Gilead, e todo o Basan, até Salcha e Edrei, cidades do reino de Og em Basan.
೧೦ಹೀಗೆ ಮೀಶೊರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಗಿಲ್ಯಾದ್ ಸೀಮೆಯನ್ನೂ, ಓಗನ ರಾಜ್ಯವಾದ ಸಲ್ಕಾ ಮತ್ತು ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.
11 Porque só Og, o rei de Basan, ficou do resto dos gigantes; eis que o seu leito, um leito de ferro, não está porventura em Rabba dos filhos de Ammon? de nove côvados o seu comprimento, e de quatro côvados a sua largura, pelo côvado dum homem.
೧೧(ರೆಫಾಯರೊಳಗೆ ಬಾಷಾನಿನ ಅರಸನಾದ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈ ಅಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)
12 Tomamos pois esta terra em possessão naquele tempo: desde Aroer, que está junto ao ribeiro de Arnon, e a metade da montanha de Gilead, com as suas cidades, tenho dado aos rubenitas e gaditas.
೧೨ಆ ಕಾಲದಲ್ಲಿ ನಾವು ಆ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದ ವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು.
13 E o resto de Gilead, como também todo o Basan, o reino de Og, dei à meia tribo de Manasseh; toda aquela borda da terra de Argob, por todo o Basan, se chamava a terra dos gigantes.
೧೩ಗಿಲ್ಯಾದಿನ ಮಿಕ್ಕ ಭಾಗವನ್ನೂ ಓಗನ ರಾಜ್ಯವಾಗಿದ್ದ ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಬಾಷಾನ್ ದೇಶವನ್ನೂ ಮನಸ್ಸೆ ಕುಲದ ಅರ್ಧ ಜನರಿಗೆ ಕೊಟ್ಟೆನು.
14 Jair, filho de Manasseh, alcançou toda a borda da terra de Argob, até ao termo dos gesuritas, e maachatitas, e a chamou de seu nome, Basan-havot-jair até este dia.
೧೪(ಬಾಷಾನ್ ದೇಶವು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡನು. ಅವನು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನ ವರೆಗೂ ಉಂಟು.)
15 E a Machir dei Gilead.
೧೫ನಾನು ಗಿಲ್ಯಾದ್ ದೇಶವನ್ನು ಮಾಕೀರನಿಗೂ ಗಿಲ್ಯಾದ್ ಮೊದಲುಗೊಂಡು (ದಕ್ಷಿಣದ) ಅರ್ನೋನ್ ತಗ್ಗಿನ ವರೆಗೂ,
16 Mas aos rubenitas e gaditas dei desde Gilead até ao ribeiro de Arnon, o meio do ribeiro, e o termo: e até ao ribeiro de Jabbok, o termo dos filhos de Ammon.
೧೬(ಪೂರ್ವದ) ಯಬ್ಬೋಕ್ ನದಿಯ ವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಮತ್ತು ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ (ದಕ್ಷಿಣ) ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ನದಿಯು ಅವರ (ಪೂರ್ವದಿಕ್ಕಿನವರೆಗೆ) ಮೇರೆ.
17 Como também a campina, e o Jordão com o termo: desde Cinnereth até ao mar da campina, o Mar Salgado, abaixo de Asdoth-Pisga para o oriente.
೧೭ಅದಲ್ಲದೆ ಆರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರದಿಂದ ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣಸಮುದ್ರದ ವರೆಗೆ ಯೊರ್ದನ್ ನದಿಯು ಅವರ (ಪಶ್ಚಿಮದ ವರೆಗೆ) ಮೇರೆ.
18 E vos dei ordem mais no mesmo tempo, dizendo: O Senhor vosso Deus vos deu esta terra, para possui-la: passai pois armados vós, todos os homens valentes, diante de vossos irmãos, os filhos de Israel.
೧೮ಆ ಕಾಲದಲ್ಲಿ ನಾನು ನಿಮಗೆ, “ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವತ್ತಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಸೈನಿಕರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಹೊರಟು ಹೊಳೆ ದಾಟಿ ಹೋಗಬೇಕು.
19 Tão somente vossas mulheres, e vossas crianças, e vosso gado (porque eu sei que tendes muito gado) ficarão nas vossas cidades, que já vos tenho dado
೧೯ನಿಮಗೆ ಬಹಳ ದನಕುರಿಗಳು ಉಂಟೆಂಬುದನ್ನು ನಾನು ಬಲ್ಲೆ. ನಿಮ್ಮ ದೇವರಾದ ಯೆಹೋವನು ಯೊರ್ದನ್ ನದಿಯ ಆಚೆ ನಿಮ್ಮ ಸಹೋದರರಿಗೆ ಕೊಡುವ ದೇಶವು ಅವರಿಗೆ ಸ್ವಾಧೀನವಾಗುವವರೆಗೆ ನಿಮ್ಮ ಹೆಂಡತಿ ಮಕ್ಕಳೂ, ದನಕುರಿಗಳೂ ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೇ ಇರಲಿ.
20 Até que o Senhor dê descanço a vossos irmãos como a vós: para que eles herdem também a terra que o Senhor vosso Deus lhes há de dar de além do Jordão: então voltareis cada qual à sua herança que já vos tenho dado
೨೦ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವತ್ತಿಗೆ ಹಿಂತಿರುಗಿ ಬರಬಹುದು” ಎಂದು ಆಜ್ಞಾಪಿಸಿದೆನು.
21 Também dei ordem a Josué no mesmo tempo, dizendo: Os teus olhos veem tudo o que o Senhor vosso Deus tem feito a estes dois reis; assim fará o Senhor a todos os reinos, a que tu passarás.
೨೧ಆ ಕಾಲದಲ್ಲಿ ನಾನು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವನು ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನು ನೋಡೇ ಇದ್ದೀ. ನೀನು ನದಿ ದಾಟಿಹೋಗುವ ಎಲ್ಲಾ ರಾಜ್ಯಗಳನ್ನೂ ಆತನು ಹಾಗೆಯೇ ನಾಶಮಾಡುವನು.
22 Não os temais: porque o Senhor vosso Deus é o que peleja por vós.
೨೨ನೀವು ಅವರಿಗೆ ಭಯಪಡಬೇಡಿರಿ; ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಪರವಾಗಿ ಯುದ್ಧಮಾಡುವನು” ಎಂದು ಆಜ್ಞಾಪಿಸಿದೆನು.
23 Também eu pedi graça ao Senhor no mesmo tempo, dizendo:
೨೩ಆ ಕಾಲದಲ್ಲಿ ನಾನು ಯೆಹೋವನಿಗೆ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹತ್ವವನ್ನೂ, ಭುಜಬಲವನ್ನೂ ನಿನ್ನ ದಾಸನಿಗೆ ತೋರಿಸಲಾರಂಭಿಸಿದಿ.
24 Senhor Jehovah! já começaste a mostrar ao teu servo a tua grandeza e a tua forte mão: porque, que Deus há nos céus e na terra, que possa obrar segundo as tuas obras, e segundo a tua fortaleza?
೨೪ನೀನು ನಡಿಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಬೇರೆ ಯಾವ ದೇವರು ನಡೆಸಲಾರನು?
25 Rogo-te que me deixes passar, para que veja esta boa terra que está de além do Jordão; esta boa montanha, e o líbano.
೨೫ಕರ್ತನೇ, ನಾನೂ ಈ ನದಿಯನ್ನು ದಾಟಿ ಆಚೆಯಿರುವ ಒಳ್ಳೆಯ ದೇಶವನ್ನು ಅಂದರೆ ಆ ಅಂದವಾದ ಬೆಟ್ಟದ ಸೀಮೆಯನ್ನೂ, ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬಿನ್ನವಿಸಿದೆನು.
26 Porém o Senhor indignou-se muito contra mim por causa de vós, e não me ouviu; antes me disse: Baste-te; não me fales mais neste negócio:
೨೬ಆದರೆ ಯೆಹೋವನು ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪವುಳ್ಳವನಾಗಿ ನನ್ನ ಮನವಿಯನ್ನು ಕೇಳದೆ, “ಸಾಕು, ಇದರ ವಿಷಯದಲ್ಲಿ ಇನ್ನು ನನ್ನ ಸಂಗಡ ಮಾತನಾಡಬೇಡ; ನೀನು ಯೊರ್ದನ್ ನದಿಯನ್ನು ದಾಟಬಾರದು.
27 Sobe ao cume de Pisga, e levanta os teus olhos ao ocidente, e ao norte, e ao sul, e ao oriente, e vê com os teus olhos: porque não passarás este Jordão.
೨೭ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ ತುದಿಯಲ್ಲಿ ನಿಂತು, ನಾಲ್ಕು ದಿಕ್ಕುಗಳಲ್ಲಿ ಸುತ್ತಲೂ ಇರುವ ದೇಶವನ್ನು ಕಣ್ಣು ತುಂಬಾ ನೋಡಬಹುದು.
28 Manda pois a Josué, e esforça-o, e conforta-o; porque ele passará diante deste povo, e o fará possuir a terra que vires.
೨೮ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೆ ಈ ಅಧಿಕಾರವನ್ನು ಕೊಡಬೇಕು; ಅವನು ದೃಢವಾಗುವಂತೆ ಅವನನ್ನು ಧೈರ್ಯಪಡಿಸಬೇಕು” ಎಂದು ಉತ್ತರಕೊಟ್ಟನು.
29 Assim ficamos neste vale, defronte de Beth-peor.
೨೯ಆಗ ನಾವು ಬೇತ್‍ಪೆಗೋರಿಗೆ ಮುಂದೆ ಇದ್ದ ಕಣಿವೆಯಲ್ಲಿ ವಾಸವಾಗಿದ್ದೆವು.