< Deuteronômio 6 >

1 Estes, pois, são os mandamentos, os estatutos e os juízos que mandou o Senhor vosso Deus para se vos ensinar, para que os fizesseis na terra a que passais a possuir;
ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.
2 Para que temas ao Senhor teu Deus, e guardes todos os seus estatutos e mandamentos, que eu te ordeno, tu, e teu filho, e o filho de teu filho, todos os dias da tua vida, e que teus dias sejam prolongados.
ನೀವೂ, ನಿಮ್ಮ ಮಕ್ಕಳು, ಅವರ ಮಕ್ಕಳು ಮತ್ತು ಅವರ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದುಕೊಂಡು, ನಾನು ಈಗ ಬೋಧಿಸುವ ಆತನ ವಿಧಿನಿಯಮಗಳನ್ನೆಲ್ಲಾ ಅನುಸರಿಸಬೇಕೆಂದೂ ಮತ್ತು ನೀವು ಬಹುಕಾಲ ಬಾಳಬೇಕೆಂದೂ ಇವುಗಳನ್ನು ಆಜ್ಞಾಪಿಸಿದ್ದಾನೆ.
3 Ouve pois, ó Israel, e atenta que os guardes, para que bem te suceda, e muito te multipliques, como te disse o Senhor Deus de teus pais, na terra que mana leite e mel.
ಆದುದರಿಂದ ಇಸ್ರಾಯೇಲರೇ, ನಿಮ್ಮ ಪೂರ್ವಿಕರ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಮತ್ತು ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವುದಕ್ಕೂ, ನೀವು ಬಹಳವಾಗಿ ಹೆಚ್ಚುವುದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.
4 Ouve, Israel, o Senhor nosso Deus é o único Senhor.
ಇಸ್ರಾಯೇಲರೇ, ಕೇಳಿರಿ, ನಮ್ಮ ದೇವರಾದ ಯೆಹೋವನು ಒಬ್ಬನೇ ದೇವರು;
5 Amarás pois o Senhor teu Deus de todo o teu coração, e de toda a tua alma, e de todo o teu poder.
ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.
6 E estas palavras, que hoje te ordeno, estarão no teu coração;
ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು.
7 E as intimarás a teus filhos, e delas falarás assentado em tua casa, e andando pelo caminho, e deitando-te e levantando-te.
ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು.
8 Também as atarás por sinal na tua mão, e te serão por testeiras entre os teus olhos.
ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು, ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು.
9 E as escreverás nos umbrais de tua casa, e nas tuas portas.
ನಿಮ್ಮ ಮನೆಬಾಗಿಲಿನ ನಿಲುವು ಪಟ್ಟಿಗಳಲ್ಲಿಯೂ ಮತ್ತು ದ್ವಾರಗಳ ಮೇಲೆಯೂ ಇವುಗಳನ್ನು ಬರೆಯಬೇಕು.
10 Havendo-te pois o Senhor teu Deus indroduzido na terra que jurou a teus pais, Abraão, Isaac e Jacob, te daria: grandes e boas cidades, que tu não edificaste,
೧೦ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದಾಗ ನೀವು ಕಟ್ಟದ ಒಳ್ಳೆಯ ದೊಡ್ಡ ಪಟ್ಟಣಗಳನ್ನೂ, ನೀವು ಕೂಡಿಸದ ಉತ್ತಮ ವಸ್ತುಗಳಿಂದ
11 E casas cheias de todo o bem, que tu não encheste, e poços cavados, que tu não cavaste, vinhas e olivais, que tu não plantaste, e comeres, e te fartares,
೧೧ತುಂಬಿದ ಮನೆಗಳನ್ನೂ, ನೀವು ತೋಡದ ನೀರುಗುಂಡಿಗಳನ್ನೂ, ನೀವು ಬೆಳಸದ ದ್ರಾಕ್ಷಿತೋಟಗಳನ್ನೂ ಮತ್ತು ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ,
12 Guarda-te, e que te não esqueças do Senhor, que te tirou da terra do Egito, da casa da servidão.
೧೨ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ.
13 O Senhor teu Deus temerás, e a ele servirás, e pelo seu nome jurarás.
೧೩ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.
14 Não seguireis outros deuses, os deuses dos povos que houver à roda de vós;
೧೪ಸುತ್ತಮುತ್ತಲಿರುವ ಜನಾಂಗಗಳು ಸೇವಿಸುವ ದೇವರುಗಳನ್ನು ನೀವು ಆರಾಧಿಸಬಾರದು.
15 Porque o Senhor vosso Deus é um Deus zeloso no meio de ti, para que a ira do Senhor teu Deus se não acenda contra ti, e te destrua de sobre a face da terra.
೧೫ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸುವುದಿಲ್ಲ, ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಾನು.
16 Não tentareis o Senhor vosso Deus, como o tentaste em Massah.
೧೬ನೀವು ಮಸ್ಸದಲ್ಲಿ ನಿಮ್ಮ ದೇವರಾದ ಯೆಹೋವನನ್ನು ಪರೀಕ್ಷಿಸಿದಂತೆ ಇನ್ನು ಮುಂದೆ ಮಾಡಬೇಡಿರಿ.
17 Diligentemente guardareis os mandamentos do Senhor vosso Deus; como também os seus testemunhos, e seus estatutos, que te tem mandado.
೧೭ನಿಮ್ಮ ದೇವರಾದ ಯೆಹೋವನು ನಿಮಗೆ ನೇಮಿಸಿದ ಆಜ್ಞಾವಿಧಿನಿಯಮಗಳನ್ನು ಅನುಸರಿಸಲೇಬೇಕು.
18 E farás o reto e o bom aos olhos do Senhor: para que bem te suceda, e entres, e possuas a boa terra, sobre a qual o Senhor jurou a teus pais.
೧೮ಯೆಹೋವನ ದೃಷ್ಟಿಗೆ ಯಾವುದು ನ್ಯಾಯವೂ ಮತ್ತು ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವುದು, ಮತ್ತು ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.
19 Para que lance fora a todos os teus inimigos de diante de ti, como o Senhor tem dito.
೧೯ಆತನು ತಾನೇ ನಿಮ್ಮ ಶತ್ರುಗಳನ್ನು ನಿಮ್ಮ ಎದುರಿನಿಂದ ಹೊರಡಿಸುವೆನೆಂದು ಮಾತುಕೊಟ್ಟನಲ್ಲವೇ.
20 Quando teu filho te perguntar pelo tempo adiante, dizendo: quais são os testemunhos, e estatutos e juízos que o Senhor nosso Deus vos ordenou?
೨೦ಇನ್ನು ಮುಂದೆ ನಿಮ್ಮ ಮಕ್ಕಳು, “ಈ ಆಜ್ಞಾವಿಧಿನಿಯಮಗಳನ್ನು ನಮ್ಮ ದೇವರಾದ ಯೆಹೋವನು ಏಕೆ ನೇಮಿಸಿದನು?” ಎಂದು ವಿಚಾರಿಸುವಾಗ
21 Então dirás a teu filho: éramos servos de faraó no Egito; porém o Senhor nos tirou com mão forte do Egito;
೨೧ನೀವು ಅವರಿಗೆ, “ನಾವು ಐಗುಪ್ತದೇಶದಲ್ಲಿ ಫರೋಹನಿಗೆ ದಾಸರಾಗಿದ್ದಾಗ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡುಗಡೆಮಾಡಿದನು.
22 E o Senhor deu sinais grandes, e nocivas maravilhas no Egito, a faraó e a toda a sua casa, aos nossos olhos;
೨೨ಆತನು ಐಗುಪ್ತ್ಯರನ್ನೂ, ಫರೋಹನನ್ನೂ ಮತ್ತು ಅವನ ಮನೆಯವರನ್ನೂ ಬಾಧಕವಾದ ದೊಡ್ಡ ಮಹತ್ಕಾರ್ಯಗಳಿಂದಲೂ, ಉತ್ಪಾತಗಳಿಂದಲೂ ನಮ್ಮ ಕಣ್ಣೆದುರಿನಲ್ಲಿ ಶಿಕ್ಷಿಸಿ,
23 E dali nos tirou, para nos levar, e nos dar a terra que jurara a nossos pais.
೨೩ತಾನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಮ್ಮನ್ನು ಸೇರಿಸುವುದಕ್ಕಾಗಿ ಐಗುಪ್ತದೇಶದೊಳಗಿಂದ ಬರಮಾಡಿದನು.
24 E o Senhor nos ordenou que fizessemos todos estes estatutos, para temer ao Senhor nosso Deus, para o nosso perpétuo bem, para nos guardar em vida, como no dia de hoje.
೨೪ಆ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ಆತನು ನಮಗೆ ಅಪ್ಪಣೆಕೊಟ್ಟಿದ್ದಾನೆ. ಯಾವಾಗಲೂ ಶುಭವುಂಟಾಗುವಂತೆಯೂ, ಆತನು ಈಗಲೂ ನಮ್ಮ ಪ್ರಾಣಗಳನ್ನು ಕಾಪಾಡುವಂತೆಯೂ ನಾವು ನಮ್ಮ ದೇವರಾದ ಯೆಹೋವನಿಗೆ ಭಯಭಕ್ತಿಯುಳ್ಳವರಾಗಿರಬೇಕು.
25 E será para nós justiça, quando tivermos cuidado de fazer todos estes mandamentos perante o Senhor nosso Deus, como nos tem ordenado.
೨೫ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿಸಲು ಯೋಗ್ಯರಾಗುವೆವು” ಎಂಬುದಾಗಿ ನೀವು ಉತ್ತರಕೊಡಬೇಕು.

< Deuteronômio 6 >