< Deuteronômio 9 >
1 Ouve, ó Israel, hoje passarás o Jordão, para entrar a possuir nações maiores e mais fortes do que tu; cidades grandes, e muradas até aos céus;
೧ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.
2 Um povo grande e alto, filhos de gigantes, que tu conheces, e de que já ouvistes: Quem pararia diante dos filhos dos gigantes?
೨ಆ ದೇಶದ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ, “ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ?” ಎಂಬ ಮಾತನ್ನು ಕೇಳಿದ್ದೀರಿ.
3 Sabe pois hoje que o Senhor teu Deus, que passa diante de ti, é um fogo que consome, que os destruirá, e os derrubará de diante de ti: e tu os lançarás fora, e cedo os desfarás, como o Senhor te tem dito.
೩ಆದುದರಿಂದ ನಿಮ್ಮ ದೇವರಾದ ಯೆಹೋವನು ತಾನೇ ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾನೆಂದು ಈಗ ತಿಳಿದುಕೊಳ್ಳಿರಿ. ಆತನೇ ಅವರನ್ನು ನಾಶಮಾಡುವನು; ಆತನೇ ಅವರನ್ನು ನಿಮ್ಮ ಮುಂದೆ ಸೋತುಹೋಗುವಂತೆ ಮಾಡುವನು. ಯೆಹೋವನು ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ, ಬೇಗನೆ ನಾಶಮಾಡುವಿರಿ.
4 Quando pois o Senhor teu Deus os lançar fora de diante de ti, não fales no teu coração, dizendo: Por causa da minha justiça é que o Senhor me trouxe a esta terra para a possuir: porque pela impiedade destas nações é que o Senhor as lança fora, diante de ti.
೪ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದ ನಂತರ ನೀವು ನಿಮ್ಮ ಮನಸ್ಸಿನಲ್ಲಿ, “ಯೆಹೋವನು ನಮ್ಮನ್ನು ಈ ದೇಶಕ್ಕೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದಕ್ಕೆ ಕಾರಣ ನಮ್ಮ ಸದಾಚಾರವೇ” ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.
5 Não é por causa da tua justiça, nem pela retidão do teu coração que entras a possuir a sua terra, mas pela impiedade destas nações o Senhor teu Deus as lança fora, de diante de ti; e para confirmar a palavra que o Senhor teu Deus jurou a teus pais, Abraão, Isaac e Jacob.
೫ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ನಿಮ್ಮ ಸದಾಚಾರವಾಗಲಿ, ನಿಮ್ಮ ಒಳ್ಳೆಯ ಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.
6 Sabe pois que não é por causa da tua justiça que o Senhor teu Deus te dá esta boa terra para possui-la, pois tu és povo obstinado.
೬ನಿಮ್ಮ ದೇವರಾದ ಯೆಹೋವನು ಆ ಉತ್ತಮ ದೇಶವನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಸದಾಚಾರದ ಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿರಿ. ನೀವು ಆತನ ಆಜ್ಞೆಯನ್ನು ಪಾಲಿಸದ ಮೊಂಡ ಜನರೇ ಆಗಿದ್ದೀರಿ.
7 Lembra-te, e não te esqueças, de que muito provocaste a ira ao Senhor teu Deus no deserto; desde o dia em que saístes do Egito, até que chegastes a esse lugar, rebeldes fostes contra o Senhor;
೭ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.
8 Pois em Horeb tanto provocastes à ira o Senhor, que se acendeu contra vós para vos destruir.
೮ಉದಾಹರಣೆಗೆ, ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸ ಮಾಡಬೇಕೆಂದಿದ್ದನು.
9 Subindo eu ao monte a receber as tábuas de pedra, as tábuas do concerto que o Senhor fizera convosco, então fiquei no monte quarenta dias e quarenta noites; pão não comi, e água não bebi;
೯ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.
10 E o Senhor me deu as duas tábuas de pedra, escritas com o dedo de Deus; e nelas tinha escrito conforme a todas aquelas palavras que o Senhor tinha falado convosco no monte, do meio do fogo, no dia da congregação.
೧೦ಆಗ ಯೆಹೋವನು ತನ್ನ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟನು. ನೀವು ಸಭೆ ಕೂಡಿದ ದಿನದಲ್ಲಿ ಯೆಹೋವನು ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಿಗೆಗಳಲ್ಲಿದ್ದವು.
11 Sucedeu pois que ao fim dos quarenta dias e quarenta noites, o Senhor me deu as duas tábuas de pedra, as tábuas do concerto.
೧೧ಆ ನಲ್ವತ್ತು ದಿನಗಳು ಕಳೆದ ಮೇಲೆ ಯೆಹೋವನು ತನ್ನ ಆಜ್ಞೆಗಳಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು, “ನೀನು ಬೇಗ ಇಲ್ಲಿಂದ ಹೋಗು;
12 E o Senhor me disse: Levanta-te, desce depressa daqui, porque o teu povo, que tiraste do Egito, já se tem corrompido: cedo se desviaram do caminho que eu lhes tinha ordenado: imagem de fundição para si fizeram.
೧೨ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ” ಎಂದು ಹೇಳಿದನು.
13 Falou-me mais o Senhor, dizendo: atentei para este povo, e eis que ele é povo obstinado:
೧೩ಅದಲ್ಲದೆ ಆತನು ನನಗೆ, “ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ; ಇವರು ನನ್ನ ಆಜ್ಞೆಗೆ ಅವಿಧೇಯರಾದವರು.
14 Deixa-me que os destrua, e apague o seu nome de debaixo dos céus: e te faça a ti nação mais poderosa e mais numerosa do que esta.
೧೪ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾ ಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು” ಎಂದು ಹೇಳಿದನು.
15 Então virei-me, e desci do monte; e o monte ardia em fogo e as duas tábuas do concerto estavam em ambas as minhas mãos.
೧೫ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುವ ಆ ಬೆಟ್ಟದಿಂದ ಇಳಿದು ಬಂದು ನೋಡಲಾಗಿ
16 E olhei, e eis que havieis pecado contra o Senhor vosso Deus; vós tinheis feito um bezerro de fundição: cedo vos desviastes do caminho que o Senhor vos ordenara.
೧೬ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಿ ಲೋಹದ ಬಸವನನ್ನು ಮಾಡಿಸಿಕೊಂಡು, ಯೆಹೋವನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟು ಹೋದದ್ದು ನನಗೆ ಕಂಡುಬಂತು.
17 Então peguei das duas tábuas, e as arrojei de ambas as minhas mãos, e as quebrei aos vossos olhos.
೧೭ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮಗೆದುರಾಗಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆನು.
18 E me lancei perante o Senhor; como de antes, quarenta dias e quarenta noites não comi pão e não bebi água, por causa de todo o vosso pecado que havieis pecado, fazendo mal aos olhos do Senhor, para o provocar à ira
೧೮ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನ ಪಾನಗಳನ್ನು ಬಿಟ್ಟು ನಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.
19 Porque temi por causa da ira e do furor, com que o Senhor tanto estava irado contra vós, para vos destruir: porém ainda por esta vez o Senhor me ouviu.
೧೯ಯೆಹೋವನು ನಿಮ್ಮ ಮೇಲೆ ಬಹುಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿಕೊಂಡೆನು. ಆದರೆ ಆ ಸಮಯದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು.
20 Também o Senhor se irou muito contra Aarão para o destruir; mas também orei por Aarão ao mesmo tempo.
೨೦ಅದಲ್ಲದೆ ಯೆಹೋವನು ಆರೋನನ ಮೇಲೆ ಬಹಳ ಸಿಟ್ಟುಗೊಂಡು ಅವನನ್ನೂ ನಾಶಮಾಡಬೇಕೆಂದಿದ್ದರಿಂದ ನಾನು ಅವನಿಗೋಸ್ಕರವಾಗಿಯೂ ಆ ಸಮಯದದಲ್ಲಿ ಪ್ರಾರ್ಥಿಸಿದೆನು.
21 Porém eu tomei o vosso pecado, o bezerro que tinheis feito, e o queimei a fogo, e o pisei, moendo-o bem, até que se desfez em pó: e o seu pó lancei no ribeiro que descia do monte.
೨೧ಮತ್ತು ನೀವು ಯಾವುದರ ಮೂಲಕ ಪಾಪವನ್ನು ಮಾಡಿದ್ದಿರೋ ಆ ಬಸವನನ್ನು ನಾನು ತೆಗೆದುಕೊಂಡು ಬೆಂಕಿಯಿಂದ ಸುಟ್ಟು, ಒಡೆದು, ಅರೆದು ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬೀಸಾಡಿಬಿಟ್ಟೆ.
22 Também em Taberah, e em Massah, e em Quibroth-hattaava provocastes muito a ira do Senhor.
೨೨ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದ್ದಿರಿ.
23 Quando também o Senhor vos enviou desde Cades-barnea, dizendo: Subi, e possui a terra, que vos tenho dado: rebeldes fostes ao mandado do Senhor vosso Deus, e não o crestes, e não obedecestes à sua voz.
೨೩ಅದಲ್ಲದೆ ಕಾದೇಶ್ ಬರ್ನೇಯದಲ್ಲಿ ಯೆಹೋವನು ನಿಮಗೆ, “ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ” ಎಂದು ಅಪ್ಪಣೆಕೊಟ್ಟಾಗಲೂ ನೀವು ನಿಮ್ಮ ದೇವರಾದ ಯೆಹೋವನ ಆ ಆಜ್ಞೆಯನ್ನು ಧಿಕ್ಕರಿಸಿ, ಆತನನ್ನು ನಂಬದೆ, ಆತನ ಮಾತನ್ನು ಅಲಕ್ಷ್ಯ ಮಾಡಿದಿರಿ.
24 Rebeldes fostes contra o Senhor desde o dia em que vos conheci.
೨೪ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನಿಗೆ ದ್ರೋಹಿಗಳಾಗಿ ನಡೆದುಕೊಂಡಿದ್ದೀರಿ.
25 E prostrei-me perante o Senhor aqueles quarenta dias e quarenta noites em que estava prostrado; porquanto o Senhor dissera que vos queria destruir.
೨೫ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ಆ ನಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.
26 E eu orei ao Senhor, dizendo: Senhor Deus, não destruas o teu povo e a tua herança, que resgataste com a tua grandeza, que tiraste do Egito com mão forte.
೨೬ನಾನು ಆತನನ್ನು ಬೇಡಿಕೊಳ್ಳುತ್ತಾ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.
27 Lembra-te dos teus servos, Abraão, Isaac, e Jacob: não atentes para a dureza deste povo, nem para a sua impiedade, nem para o seu pecado:
೨೭ಇವರ ಮೊಂಡುತನ, ದುಷ್ಟತ್ವ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರನ್ನು ನೆನಪಿಗೆ ತಂದುಕೋ.
28 Para que o povo da terra de onde nos tiraste não diga: Porquanto o Senhor os não pode introduzir na terra de que lhes tinha falado, e porque os aborrecia, os tirou para os matar no deserto:
೨೮ನೀನು ಯಾವ ದೇಶದಿಂದ ನಮ್ಮನ್ನು ಬರಮಾಡಿದಿಯೋ ಆ ದೇಶದವರು, ‘ಯೆಹೋವನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಲಾರದೆ ಹಗೆಮಾಡಿ ಅರಣ್ಯದಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದನು’ ಎಂದು ಹೇಳುವುದಕ್ಕೆ ಆಸ್ಪದವಾದೀತು.
29 Todavia são eles o teu povo e a tua herança, que tu tiraste com a tua grande força e com o teu braço estendido.
೨೯ಇವರು ಮಹಾಶಕ್ತಿಯಿಂದಲೂ ಮತ್ತು ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ” ಎಂದು ಬಿನ್ನೈಸಿದೆನು.