< Gênesis 19 >
1 E vieram os dois anjos a Sodoma à tarde, e estava Lot assentado à porta de Sodoma; e vendo-os Lot, levantou-se ao seu encontro, e inclinou-se com o rosto à terra;
೧ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,
2 E disse: Eis agora, meus senhores, entrai, peço-vos, em casa de vosso servo, e passai nela a noite, e lavai os vossos pés; e de madrugada vos levantareis, e ireis vosso caminho. E eles disseram: Não, antes na rua passaremos a noite.
೨“ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ಇಳಿದುಕೊಂಡು ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡಿದುಕೊಂಡು ಹೋಗಬಹುದು” ಅಂದನು. ಅವರು, “ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ” ಎನ್ನಲು
3 E porfiou com eles muito, e vieram com ele, e entraram em sua casa: e fez-lhes banquete, e cozeu bolos sem levadura, e comeram.
೩ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.
4 E antes que se deitassem, cercaram a casa, os varões daquela cidade, os varões de Sodoma, desde o moço até ao velho; todo o povo de todos os bairros.
೪ಅವರು ಮಲಗುವುದಕ್ಕಿಂತ ಮುಂಚೆ ಹುಡುಗರು ಮುದುಕರು ಸಹಿತವಾಗಿ ಸೊದೋಮಿನ ಪಟ್ಟಣದವರೆಲ್ಲರೂ ಒಗ್ಗಟ್ಟಾಗಿ ಮನೆಯನ್ನು ಮುತ್ತಿಗೆ ಹಾಕಿ,
5 E chamaram a Lot, e disseram-lhe: Onde estão os varões que a ti vieram nesta noite? tra-los fora a nós, para que os conheçamos.
೫ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು.
6 Então saiu Lot a eles à porta, e fechou a porta atráz de si,
೬ಲೋಟನು ಅವರ ಬಳಿಗೆ ಹೊರಕ್ಕೆ ಬಂದು ತನ್ನ ಹಿಂದೆ ಕದಹಾಕಿ,
7 E disse: Meus irmãos, rogo-vos que não façais mal:
೭“ಅಣ್ಣಂದಿರೇ, ಈ ದುಷ್ಟತನವನ್ನು ಮಾಡಬೇಡಿರಿ.
8 Eis aqui, duas filhas tenho, que ainda não conheceram varão; fora vo-las trarei, e fareis delas como bom for nos vossos olhos; somente nada façais a estes varões, porque por isso vieram à sombra do meu telhado.
೮ಕೇಳಿರಿ, ನನಗೆ ಪುರುಷನನ್ನು ಅರಿಯದ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ; ಅವರನ್ನಾದರೂ ನಿಮಗೆ ತಂದು ಒಪ್ಪಿಸುತ್ತೇನೆ; ಅವರನ್ನು ಮನಸ್ಸು ಬಂದಂತೆ ಮಾಡಬಹುದು; ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕೆ ಬಂದವರು; ಅವರಿಗೆ ಏನೂ ಮಾಡಕೂಡದು” ಎಂದು ಹೇಳಿದನು.
9 Eles porém disseram: sai dali. Disseram mais: Como estrangeiro este indivíduo veio aqui habitar, e quereria ser juiz em tudo? Agora te faremos mais mal a ti do que a eles. E arremessaram-se sobre o varão, sobre Lot, e aproximaram-se para arrombar a porta.
೯ಅವರು ದಾರಿ ಬಿಡು ಎಂದು ಹೇಳಿ, “ಇವನು ಯಾರೋ ಒಬ್ಬ ಪರದೇಶಿಯಾಗಿ ಬಂದು ಈಗ ನ್ಯಾಯಾಧಿಪತಿಯಾಗಬೇಕೆಂದಿದ್ದಾನೆ; ಆ ಮನುಷ್ಯರಿಗೆ ಕೇಡು ಮಾಡುವುದಕ್ಕಿಂತ ಹೆಚ್ಚಾಗಿ ನಿನಗೇ ಕೇಡು ಮಾಡುತ್ತೇವೆ” ಎಂದು ಹೇಳಿ ಲೋಟನ ಮೇಲೆ ಬಿದ್ದು ಬಹಳವಾಗಿ ತುಳಿದು ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.
10 Aqueles varões porém estenderam a sua mão, e fizeram entrar a Lot consigo na casa, e fecharam a porta;
೧೦ಆದರೆ ಒಳಗಿದ್ದ ಆ ಮನುಷ್ಯರು ಕೈಚಾಚಿ ಲೋಟನನ್ನು ತಮ್ಮ ಕಡೆಗೆ ಎಳೆದುಕೊಂಡು ಮನೆಯೊಳಗೆ ಸೇರಿಸಿ ಕದ ಮುಚ್ಚಿದರು.
11 E feriram de cegueira os varões que estavam à porta da casa, desde o menor até ao maior, de maneira que se cançaram para achar a porta.
೧೧ಇದಲ್ಲದೆ ಅವರು ಮನೆಯ ಹೊರಗಿದ್ದ ಮನುಷ್ಯರಿಗೆ ಚಿಕ್ಕವರಿಗೂ ದೊಡ್ಡವರಿಗೂ ಕೂಡ ಕಣ್ಣು ಮೊಬ್ಬಾಗುವಂತೆ ಮಾಡಿದ್ದರಿಂದ ಅವರು ಬಾಗಿಲು ಯಾವುದೆಂದು ತಿಳಿಯದೆ ಬೇಸರಗೊಂಡರು.
12 Então disseram aqueles varões a Lot: Tens alguém mais aqui? teu genro, e teus filhos, e tuas filhas, e todos quantos tens nesta cidade, tira-os fora deste lugar;
೧೨ಆಗ ಆ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.
13 Porque nós vamos destruir este lugar, porque o seu clamor tem engrossado diante da face do Senhor, e o Senhor nos enviou a destruí-lo.
೧೩ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.
14 Então saiu Lot, e falou a seus genros, aos que haviam de tomar as suas filhas, e disse: levantai-vos, saí deste lugar; porque o Senhor há de destruir a cidade. Foi tido porém por zombador aos olhos de seus genros.
೧೪ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು.
15 E ao amanhecer os anjos apertaram com Lot, dizendo: Levanta-te, toma tua mulher, e tuas duas filhas que aqui estão, para que não pereças na injustiça desta cidade.
೧೫ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು.
16 Ele porém demorava-se, e aqueles varões lhe pegaram pela mão, e pela mão de sua mulher, e pela mão de suas duas filhas, sendo-lhe o Senhor misericordioso, e tiraram-o, e puseram-no fora da cidade.
೧೬ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.
17 E aconteceu que, tirando-os fora, disse: Escapa-te por tua vida; não olhes para traz de ti, e não pares em toda esta campina; escapa lá para o monte, para que não pereças.
೧೭ಅವರನ್ನು ಹೊರಗೆ ತಂದ ಮೇಲೆ ಅವರಲ್ಲಿ ಒಬ್ಬನು, “ಓಡಿಹೋಗು, ಪ್ರಾಣವನ್ನು ಉಳಿಸಿಕೋ; ಹಿಂದಕ್ಕೆ ತಿರುಗಿ ನೋಡಬೇಡ; ಈ ಪ್ರದೇಶದೊಳಗೆ ಎಲ್ಲಿಯೂ ನಿಲ್ಲದೆ ಬೆಟ್ಟದ ಸೀಮೆಗೆ ಓಡಿಹೋಗು; ನಿನಗೂ ನಾಶವುಂಟಾದೀತು” ಎಂದನು.
18 E Lot disse-lhe: Ora não, Senhor!
೧೮ಅದಕ್ಕೆ ಲೋಟನು, “ಕರ್ತನೇ, ಅದು ನನ್ನಿಂದಾಗದು;
19 Eis que agora o teu servo tem achado graça aos teus olhos, e engrandeceste a tua misericórdia que a mim me fizeste, para guardar a minha alma em vida: e eu não posso escapar no monte, para que porventura não me apanhe este mal, e eu morra.
೧೯ನೀನು ನಿನ್ನ ದಾಸನ ಮೇಲೆ ದಯೆ ಇಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿ ಹೋಗಲಾರೆನು; ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.
20 Eis que agora esta cidade está perto, para fugir para lá, e é pequena: ora para ali me escaparei (não é pequena?), para que minha alma viva
೨೦ಆಗೋ, ಅಲ್ಲಿ ಒಂದು ಪಟ್ಟಣ ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವುದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವುದು; ಆ ಊರು ಸಣ್ಣದಲ್ಲವೇ?” ಎಂದನು.
21 E disse-lhe: Eis aqui, tenho-te aceitado também neste negócio, para não derribar esta cidade, de que falaste:
೨೧ಅದಕ್ಕಾತನು, “ಈ ವಿಷಯದಲ್ಲಿಯೂ ನಿನ್ನ ಬೇಡಿಕೆಯನ್ನು ಅನುಗ್ರಹಿಸಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡವಿ ಹಾಕುವುದಿಲ್ಲ.
22 Apressa-te, escapa-te para ali; porque nada poderei fazer, enquanto não tiveres ali chegado. Por isso se chamou o nome da cidade Zoar.
೨೨ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ” ಎಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.
23 Saiu o sol sobre a terra, quando Lot entrou em Zoar.
೨೩ಲೋಟನು ಚೋಗರ್ ಮುಟ್ಟುವಷ್ಟರಲ್ಲಿ ಸೂರ್ಯನು ಉದಯಿಸಿದನು.
24 Então o Senhor fez chover enxofre e fogo, do Senhor desde os céus, sobre Sodoma e Gomorra;
೨೪ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ
25 E derribou aquelas cidades, e toda aquela campina, e todos os moradores daquelas cidades, e o que nascia da terra.
೨೫ಆ ಪಟ್ಟಣಗಳನ್ನೂ ಸುತ್ತಲಿರುವ ಸೀಮೆಯೆಲ್ಲವನ್ನೂ ಊರುಗಳಲ್ಲಿದ್ದ ಜನರೆಲ್ಲರನ್ನೂ ಭೂಮಿಯ ಮೇಲಣ ಎಲ್ಲಾ ಬೆಳೆಯನ್ನೂ ಹಾಳುಮಾಡಿದನು.
26 E a mulher de Lot olhou para traz dele, e ficou convertida numa estátua de sal.
೨೬ಲೋಟನ ಹೆಂಡತಿ ಅವನ ಹಿಂದೆ ಬರುತ್ತಿರುವಾಗ ಹಿಂತಿರುಗಿ ನೋಡಿದ್ದರಿಂದ ಉಪ್ಪಿನ ಕಂಬವಾದಳು.
27 E Abraão levantou-se aquela mesma manhã, de madrugada, e foi para aquele lugar onde estivera diante da face do Senhor;
೨೭ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರುಗಿ ಬಂದು ಸೊದೋಮ್ ಗೊಮೋರಗಳ ಕಡೆಗೂ
28 E olhou para Sodoma e Gomorra, e para toda a terra da campina; e viu, e eis que o fumo da terra subia, como o fumo de uma fornalha.
೨೮ಸೊದೋಮ್ ಗೊಮೋರದ ಸುತ್ತಲಿನ ಎಲ್ಲಾ ದಿಕ್ಕುಗಳ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಮೇಲಕ್ಕೇರುತ್ತಿತ್ತು.
29 E aconteceu que, destruindo Deus as cidades da campina, Deus se lembrou de Abraão, e tirou a Lot do meio da destruição, derrubando aquelas cidades em que Lot habitara.
೨೯ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.
30 E subiu Lot de Zoar, e habitou no monte, e as suas duas filhas com ele; porque temia de habitar em Zoar; e habitou numa caverna, ele e as suas duas filhas.
೩೦ಲೋಟನು ಚೋಗರಿನಲ್ಲಿರುವುದಕ್ಕೆ ಹೆದರಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಕರೆದುಕೊಂಡು ಬೆಟ್ಟವನ್ನು ಹತ್ತಿ ಅಲ್ಲಿ ವಾಸಮಾಡಿದನು. ಅವನೂ ಅವನ ಇಬ್ಬರು ಹೆಣ್ಣುಮಕ್ಕಳೂ ಒಂದು ಗವಿಯಲ್ಲಿ ವಾಸಮಾಡಿದರು.
31 Então a primogênita disse à menor: Nosso pai é já velho, e não há varão na terra que entre a nós, segundo o costume de toda a terra;
೩೧ಹೀಗಿರುವಲ್ಲಿ ಹಿರೀಮಗಳು ತನ್ನ ತಂಗಿಗೆ, “ನಮ್ಮ ತಂದೆ ಮುದುಕನಷ್ಟೆ; ಸರ್ವಲೋಕದ ಪದ್ಧತಿಯ ಮೇರೆಗೆ ನಮ್ಮನ್ನು ಮದುವೆ ಮಾಡಿಕೊಳ್ಳುವ ಪುರುಷರು ಎಲ್ಲಿಯೂ ಇಲ್ಲ;
32 Vem, demos de beber vinho a nosso pai, e deitemo-nos com ele, para que em vida conservemos semente de nosso pai.
೩೨ನಾವು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ಅವನ ಸಂಗಡ ಮಲಗಿಕೊಂಡು ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.
33 E deram de beber vinho a seu pai naquela noite; e veio a primogênita, e deitou-se com seu pai, e não sentiu ele quando ela se deitou, nem quando se levantou.
೩೩ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದಾಗ ಹಿರೀ ಮಗಳು ಅವನ ಸಂಗಡ ಮಲಗಿಕೊಂಡಳು; ಯಾವಾಗ ಮಲಗಿಕೊಂಡಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.
34 E sucedeu, no outro dia, que a primogênita disse à menor: Vês aqui, eu já ontem à noite me deitei com meu pai: demos-lhe de beber vinho também esta noite, e então entra tu, deita-te com ele, para que em vida conservemos semente de nosso pai.
೩೪ಮಾರನೆಯ ದಿನ ಹಿರಿಯವಳು ಕಿರಿಯವಳಿಗೆ, “ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆ ಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ” ಎಂದು ಹೇಳಿದಳು.
35 E deram de beber vinho a seu pai, também naquela noite; e levantou-se a menor, e deitou-se com ele; e não sentiu ele quando ela se deitou, nem quando se levantou.
೩೫ಆ ರಾತ್ರಿಯೂ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು; ಅವಳು ಯಾವಾಗ ಮಲಗಿದಳೋ ಯಾವಾಗ ಎದ್ದು ಹೋದಳೋ ಅವನಿಗೇನೂ ತಿಳಿಯಲಿಲ್ಲ.
36 E conceberam as duas filhas de Lot de seu pai.
೩೬ಹೀಗೆ ಲೋಟನ ಇಬ್ಬರು ಹೆಣ್ಣುಮಕ್ಕಳು ತಂದೆಯಿಂದ ಬಸುರಾದರು.
37 E pariu a primogênita um filho, e chamou o seu nome Moab; este é o pai dos moabitas, até ao dia de hoje.
೩೭ಹಿರಿಯವಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಮೋವಾಬ್” (ತಂದೆಯಿಂದ ಹುಟ್ಟಿದವನು) ಎಂದು ಹೆಸರಿಟ್ಟಳು. ಇಂದಿನ ವರೆಗೂ ಇರುವ ಮೋವಾಬ್ಯರಿಗೆ ಅವನೇ ಮೂಲಪುರುಷನು.
38 E a menor também pariu um filho, e chamou o seu nome Benammi; este é o pai dos filhos de Ammon, até o dia de hoje.
೩೮ಕಿರಿಯ ಮಗಳು ಗಂಡು ಮಗುವನ್ನು ಹೆತ್ತು ಅದಕ್ಕೆ “ಬೆನಮ್ಮಿ” (ರಕ್ತ ಸಂಬಂಧಿಕನ ಮಗ) ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷನು.