< João 1 >

1 No princípio era o Verbo, e o Verbo estava com Deus, e o Verbo era Deus.
ಆದಿಯಲ್ಲಿ ವಾಕ್ಯವಿತ್ತು, ಆ ವಾಕ್ಯವು ದೇವರ ಬಳಿಯಲ್ಲಿತ್ತು, ಆ ವಾಕ್ಯವು ದೇವರಾಗಿತ್ತು.
2 Ele estava no princípio com Deus.
ಆ ವಾಕ್ಯವೆಂಬುವವರು ಆದಿಯಲ್ಲಿ ದೇವರ ಬಳಿಯಲ್ಲಿದ್ದರು.
3 Todas as coisas foram feitas por ele, e sem ele nada, do que foi feito, se fez.
ಆ ವಾಕ್ಯವೆಂಬುವವರ ಮೂಲಕವಾಗಿಯೇ ಸಮಸ್ತವೂ ಸೃಷ್ಟಿಯಾಯಿತು. ಸೃಷ್ಟಿಯಾದವುಗಳಲ್ಲಿ ಯಾವುದೂ ಅವರಿಲ್ಲದೆ ಸೃಷ್ಟಿಯಾಗಲಿಲ್ಲ.
4 Nele estava a vida, e a vida era a luz dos homens;
ಅವರಲ್ಲಿ ಜೀವವಿತ್ತು. ಆ ಜೀವವು ಮಾನವರಿಗೆ ಬೆಳಕಾಗಿತ್ತು.
5 E a luz resplandece nas trevas, e as trevas não a compreenderam.
ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲೆಯು ಆ ಬೆಳಕನ್ನು ಅಡಗಿಸಲಿಲ್ಲ.
6 Houve um homem enviado de Deus, cujo nome era João.
ದೇವರು ಕಳುಹಿಸಿದ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಹಾನನು.
7 Este veio para testemunho, para que testificasse da luz; para que todos cressem por ele.
ತನ್ನ ಮೂಲಕ ಎಲ್ಲರು ವಿಶ್ವಾಸವಿಡುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡಲು ಯೋಹಾನನು ಸಾಕ್ಷಿಯಾಗಿ ಬಂದನು.
8 Não era ele a luz; mas para que testificasse da luz.
ಅವನೇ ಆ ಬೆಳಕಾಗಿರಲಿಲ್ಲ. ಆ ಬೆಳಕಿನ ವಿಷಯದಲ್ಲಿ ಸಾಕ್ಷಿಯಾಗಿ ಬಂದನಷ್ಟೇ.
9 Este era a luz verdadeira, que alumia a todo o homem que vem ao mundo.
ನಿಜ ಬೆಳಕು ಲೋಕಕ್ಕೆ ಬರುವುದಾಗಿತ್ತು. ಆ ಬೆಳಕೇ ಪ್ರತಿ ಮಾನವನಿಗೂ ಬೆಳಕನ್ನು ನೀಡುವುದಾಗಿತ್ತು.
10 Estava no mundo, e o mundo foi feito por ele, e o mundo não o conheceu.
ಆ ವಾಕ್ಯವೆಂಬುವವರು ಲೋಕದಲ್ಲಿದ್ದರು ಮತ್ತು ಲೋಕವು ಅವರ ಮೂಲಕ ಉಂಟಾಯಿತು. ಆದರೂ ಲೋಕವು ಅವರ ಗುರುತು ಹಿಡಿಯಲಿಲ್ಲ.
11 Veio para o que era seu, e os seus não o receberam.
ಅವರು ತಮ್ಮ ಸ್ವಜನರ ಬಳಿಗೆ ಬಂದರು. ಆದರೆ ಸ್ವಜನರೇ ಅವರನ್ನು ಸ್ವೀಕರಿಸಲಿಲ್ಲ.
12 Mas, a todos quantos o receberam, deu-lhes o poder de serem feitos filhos de Deus, a saber, aos que crêem no seu nome;
ಆದರೂ ಯಾರಾರು ಅವರನ್ನು ಸ್ವೀಕರಿಸಿದರೋ, ಅಂದರೆ ಅವರ ಹೆಸರಿನಲ್ಲಿ ವಿಶ್ವಾಸವಿಟ್ಟರೋ ಅವರೆಲ್ಲರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಕೊಟ್ಟರು.
13 Os quais não nasceram do sangue, nem da vontade da carne, nem da vontade do varão, mas de Deus.
ಇವರು ರಕ್ತಸಂಬಂಧದಿಂದಾಗಲಿ, ದೈಹಿಕ ಇಚ್ಛೆಯಿಂದಾಗಲಿ, ಪುರುಷನ ಇಚ್ಛೆಯಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
14 E o Verbo se fez carne, e habitou entre nós, e vimos a sua glória, como a glória do unigênito do Pai, cheio de graça e de verdade.
ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.
15 João testificou dele; e clamou, dizendo: Este era aquele de quem eu dizia: O que vem depois de mim é antes de mim, porque era primeiro do que eu.
“ಅವರನ್ನು ಕುರಿತು ಯೋಹಾನನು ಸಾಕ್ಷಿ ಕೊಡುತ್ತಾ, ‘ನನ್ನ ಬಳಿಕ ಬರುವವರು ನನಗಿಂತ ಮೊದಲೇ ಇದ್ದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದವರು ಇವರೇ,” ಎಂದು ಘೋಷಿಸಿದನು.
16 E todos nós recebemos também da sua plenitude, e graça por graça.
ಅವರ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಪಡೆದೆವು.
17 Porque a lei foi dada por Moisés; a graça e a verdade vieram por Jesus Cristo.
ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.
18 Deus nunca foi visto por alguém. O Filho unigênito, que está no seio do Pai, ele no-lo declarou.
ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.
19 E este é o testemunho de João, quando os judeus mandaram de Jerusalém sacerdotes e levitas para que lhe perguntassem: Quem és tu
ಯೆರೂಸಲೇಮಿನ ಯೆಹೂದ್ಯ ನಾಯಕರು, ಯಾಜಕರನ್ನು ಮತ್ತು ಲೇವಿಯರನ್ನು ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದರು.
20 E confessou, e não negou; confessou: Eu não sou o Cristo.
ಅದಕ್ಕೆ ಯೋಹಾನನು, “ನಾನು ಕ್ರಿಸ್ತನಲ್ಲ” ಎಂದು ಅರಿಕೆಮಾಡಿ ಸಾಕ್ಷಿಕೊಟ್ಟನು.
21 E perguntaram-lhe: Pois que? És tu Elias? E disse: Não sou. És tu profeta? E respondeu: Não.
ಅದಕ್ಕೆ ಅವರು, “ಹಾಗಾದರೆ ನೀನು ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ.” “ನೀನು ಆ ಪ್ರವಾದಿಯೋ?” ಎಂದು ಕೇಳಿದರು. ಅದಕ್ಕೆ ಅವನು, “ಅಲ್ಲ” ಎಂದನು.
22 Disseram-lhe pois: Quem és? para que demos resposta àqueles que nos enviaram; que dizes de ti mesmo?
ಅವರು, “ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡುವಂತೆ ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.
23 Disse: Eu sou a voz do que clama no deserto: endireitai o caminho do Senhor, como disse o profeta Isaias.
ಅದಕ್ಕೆ ಯೋಹಾನನು, “ಪ್ರವಾದಿ ಯೆಶಾಯನು ಹೇಳಿದಂತೆ, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವೇ ನಾನು,” ಎಂದು ಹೇಳಿದನು.
24 E os que tinham sido enviados eram dos fariseus;
ಬಂದಿದ್ದವರು ಫರಿಸಾಯರ ಕಡೆಯವರಾಗಿದ್ದರು.
25 E perguntaram-lhe, e disseram-lhe: Porque batizas pois, se tu não és o Cristo, nem Elias, nem o profeta?
ಅವರು ಯೋಹಾನನಿಗೆ, “ನೀನು ಕ್ರಿಸ್ತ ಇಲ್ಲವೆ ಎಲೀಯನಾಗಲಿ, ಆ ಪ್ರವಾದಿಯಾಗಲಿ ಆಗಿರದಿದ್ದರೆ ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.
26 João respondeu-lhes, dizendo: Eu batizo com água; mas no meio de vós está um a quem vós não conheceis.
ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದ ಒಬ್ಬ ವ್ಯಕ್ತಿ ನಿಮ್ಮ ನಡುವೆ ಇದ್ದಾರೆ.
27 Este é aquele que vem após mim, que já foi antes de mim, do qual eu não sou digno de desatar a correia da alparca.
ಅವರೇ ನನ್ನ ಬಳಿಕ ಬರುವವರು. ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.
28 Estas coisas aconteceram em Bethania, da outra banda do Jordão, onde João estava batizando.
ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಕಡೆಯಲ್ಲಿರುವ ಬೇಥಾನ್ಯದಲ್ಲಿ ನಡೆಯಿತು.
29 No dia seguinte João viu a Jesus, que vinha para ele, e disse: Eis aqui o Cordeiro de Deus, que tira o pecado do mundo.
ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,
30 Este é aquele do qual eu disse: Após mim vem um varão que já foi antes de mim; porque já era primeiro do que eu.
‘ನನ್ನ ತರುವಾಯ ಬರುವವರು ನನಗಿಂತ ಮೊದಲೇ ಇದ್ದುದರಿಂದ ಅವರು ನನಗಿಂತಲೂ ಶ್ರೇಷ್ಠರು,’ ಎಂದು ನಾನು ಹೇಳಿದವರು ಇವರೇ.
31 E eu não o conhecia; mas, para que fosse manifestado a Israel, por isso vim eu batizando com água.
ನನಗೂ ಇವರ ಗುರುತಿರಲಿಲ್ಲ. ಆದರೆ ಇವರನ್ನು ಇಸ್ರಾಯೇಲರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತಾ ಬಂದೆನು,” ಎಂದು ಹೇಳಿದನು.
32 E João testificou, dizendo: Eu vi o espírito descer do céu como uma pomba, e repousar sobre ele.
ಯೋಹಾನನು ಸಾಕ್ಷಿಕೊಟ್ಟು, “ಪವಿತ್ರಾತ್ಮರು ಪರಲೋಕದಿಂದ ಪಾರಿವಾಳದಂತೆ ಇಳಿದುಬಂದು ಯೇಸುವಿನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.
33 E eu não o conhecia, mas o que me mandou a batizar com água esse me disse: Sobre aquele que vires descer o espírito, e repousar sobre ele, esse é o que batiza com o Espírito Santo.
ನನಗೂ ಅವರ ಗುರುತಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಲು ನನ್ನನ್ನು ಕಳುಹಿಸಿದವರು, ‘ಯಾರ ಮೇಲೆ ಪವಿತ್ರಾತ್ಮರು ಇಳಿದುಬಂದು ನೆಲೆಸುವುದನ್ನು ನೀನು ನೋಡುವಿಯೋ ಅವರೇ ಪವಿತ್ರಾತ್ಮರಿಂದ ದೀಕ್ಷಾಸ್ನಾನ ಮಾಡಿಸುವವರು,’ ಎಂದು ತಿಳಿಸಿದರು.
34 E eu vi, e tenho testificado que este é o Filho de Deus.
ಈಗ ನಾನು ಕಂಡು, ಇವರೇ ದೇವರ ಪುತ್ರರು ಎಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.
35 No dia seguinte João estava outra vez ali, e dois dos seus discípulos;
ಮರುದಿನ ಯೋಹಾನನು ಪುನಃ ತನ್ನ ಶಿಷ್ಯರಲ್ಲಿ ಇಬ್ಬರೊಂದಿಗೆ ನಿಂತುಕೊಂಡಿದ್ದನು.
36 E, vendo por ali andar a Jesus, disse: Eis aqui o Cordeiro de Deus.
ಆಗ ಯೇಸು ಹೋಗುತ್ತಿರುವುದನ್ನು ಕಂಡು ಅವನು, “ಇಗೋ, ದೇವರ ಕುರಿಮರಿ,” ಎಂದು ಹೇಳಿದನು.
37 E os dois discípulos ouviram-no dizer isto, e seguiram a Jesus.
ಆ ಇಬ್ಬರು ಶಿಷ್ಯರು ಅವನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು.
38 E Jesus, voltando-se e vendo que eles o seguiam, disse-lhes: Que buscais? E eles lhe disseram: rabi, (que, traduzido, quer dizer, Mestre) onde moras?
ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು, ಅವರು, “ಬೋಧಕರೇ, ನೀವು ವಾಸಿಸುವುದು ಎಲ್ಲಿ?” ಎಂದು ಕೇಳಿದರು.
39 Ele lhes disse: Vinde, e vede. Foram, e viram onde morava, e ficaram com ele aquele dia: e era já quase a hora décima.
ಯೇಸು ಅವರಿಗೆ, “ಬಂದು ನೋಡಿರಿ,” ಎಂದು ಹೇಳಲು, ಅವರು ಹೋಗಿ ಯೇಸು ವಾಸಿಸುತ್ತಿದ್ದ ಸ್ಥಳವನ್ನು ಕಂಡು ಆ ದಿವಸ ಅವರ ಸಂಗಡ ಇದ್ದರು. ಆಗ ಸಂಜೆ ಸುಮಾರು ನಾಲ್ಕು ಗಂಟೆಯಾಗಿತ್ತು.
40 Era André, irmão de Simão Pedro, um dos dois que ouviram aquilo de João, e o haviam seguido.
ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರ ಅಂದ್ರೆಯನು ಒಬ್ಬನಾಗಿದ್ದನು.
41 Este achou primeiro a seu irmão Simão, e disse-lhe: Já achamos o Messias (que, traduzido, é o Christo).
ಅಂದ್ರೆಯನು ಮೊದಲು ತನ್ನ ಸಹೋದರ ಸೀಮೋನನನ್ನು ಕಂಡು, “ನಾವು ಮೆಸ್ಸೀಯ ಆಗಿರುವವರನ್ನು ಕಂಡೆವು,” ಎಂದು ಹೇಳಿ,
42 E levou-o a Jesus. E, olhando Jesus para ele, disse: Tu és Simão, filho de Jonas; tu serás chamado Cephas (que quer dizer Pedro).
ಅವನನ್ನು ಯೇಸುವಿನ ಬಳಿಗೆ ಕರೆತಂದನು. “ಮೆಸ್ಸೀಯ” ಎಂದರೆ ಕ್ರಿಸ್ತ ಎಂದು ಅರ್ಥ. ಯೇಸು ಅವನನ್ನು ನೋಡಿ, “ನೀನು ಯೋಹಾನನ ಮಗ ಸೀಮೋನನು. ನಿನ್ನನ್ನು ‘ಕೇಫ’ ಎಂದು ಕರೆಯುವರು,” ಎಂದು ಹೇಳಿದರು. “ಕೇಫ” ಎಂದರೆ ಪೇತ್ರ ಇಲ್ಲವೆ ಬಂಡೆ ಎಂದರ್ಥ.
43 No dia seguinte quis Jesus ir à Galiléia, e achou a Felipe, e disse-lhe: Segue-me.
ಯೇಸು ಮರುದಿನ ಗಲಿಲಾಯಕ್ಕೆ ಹೋಗಬೇಕೆಂದಿದ್ದಾಗ, ಅವರು ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದರು.
44 E Felipe era de Betsaida, cidade de André e de Pedro.
ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿದಕ್ಕೆ ಸೇರಿದವನು.
45 Felipe achou Nathanael, e disse-lhe: Havemos achado aquele de quem Moisés escreveu na lei, e os profetas, a saber: Jesus de Nazareth, filho de José.
ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.
46 Disse-lhe Nathanael: Pode vir alguma coisa boa de Nazareth? Disse-lhe Felipe: Vem, e vê.
“ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ನತಾನಯೇಲನು ಕೇಳಲು, “ಬಂದು ನೋಡು,” ಎಂದು ಫಿಲಿಪ್ಪನು ಹೇಳಿದನು.
47 Jesus viu Nathanael vir ter com ele, e disse dele: Eis aqui um verdadeiro israelita, em quem não há dolo.
ನತಾನಯೇಲನು ತಮ್ಮ ಬಳಿಗೆ ಬರುವುದನ್ನು ಯೇಸು ಕಂಡು ಅವನ ವಿಷಯವಾಗಿ, “ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ,” ಎಂದು ಹೇಳಿದರು.
48 Disse-lhe Nathanael: de onde me conheces tu? Jesus respondeu, e disse-lhe: Antes que Felipe te chamasse, te vi eu, estando tu debaixo da figueira.
ಅದಕ್ಕೆ ನತಾನಯೇಲನು, “ನೀವು ನನ್ನನ್ನು ಹೇಗೆ ಬಲ್ಲಿರಿ?” ಎಂದು ಕೇಳಲು, ಯೇಸು ಅವನಿಗೆ, “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮುಂಚೆಯೇ ನೀನು ಅಂಜೂರದ ಮರದ ಕೆಳಗಿರುವುದನ್ನು ನಾನು ಕಂಡೆನು,” ಎಂದು ಉತ್ತರಿಸಿದರು.
49 Nathanael respondeu, e disse-lhe: rabi, tu és o Filho de Deus, tu és o Rei de Israel.
ಅದಕ್ಕೆ ನತಾನಯೇಲನು, “ಗುರುವೇ, ನೀವು ದೇವಪುತ್ರ; ಇಸ್ರಾಯೇಲಿನ ಅರಸ ನೀವೇ,” ಎಂದನು.
50 Jesus respondeu, e disse-lhe: Porque te disse: Vi-te debaixo da figueira, crês? coisas maiores do que estas verás.
ಯೇಸು ಅವನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ಕಂಡಿದ್ದೆ ಎಂದು ನಾನು ಹೇಳಿದ್ದಕ್ಕೆ ನೀನು ನಂಬುತ್ತೀಯೋ? ನೀನು ಇವುಗಳಿಗಿಂತಲೂ ಮಹಾಕಾರ್ಯಗಳನ್ನು ಕಾಣುವೆ,” ಎಂದು ಉತ್ತರಿಸಿದರು.
51 E disse-lhe: Na verdade, na verdade vos digo que daqui em diante vereis o céu aberto, e os anjos de Deus subirem e descerem sobre o Filho do homem.
ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು.

< João 1 >