< Levítico 14 >
1 Depois falou o Senhor a Moisés, dizendo:
೧ಯೆಹೋವನು ಮೋಶೆಯೊಂದಿಗೆ ಮಾತನಾಡಿ,
2 Esta será a lei do leproso no dia da sua purificação: será levado ao sacerdote,
೨“ಕುಷ್ಠರೋಗಿಯು ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡೆಸಬೇಕಾದ ಕ್ರಮ ಹೇಗೆಂದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು.
3 E o sacerdote sairá fora do arraial, e o sacerdote, examinando, e eis que, se a praga da lepra do leproso for sarada,
೩ಯಾಜಕನು ಪಾಳೆಯದ ಹೊರಗೆ ಹೋಗಿ ಅವನಲ್ಲಿರುವ ಕುಷ್ಠವು ವಾಸಿಯಾಗಿದೆಯೋ ಎಂದು ಪರೀಕ್ಷಿಸಬೇಕು.
4 Então o sacerdote ordenará que por aquele que se houver de purificar se tomem duas aves vivas e limpas, e pau de cedro, e carmezim e hissopo.
೪ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.
5 Mandará também o sacerdote que se degole uma ave num vaso de barro sobre águas vivas,
೫ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಬೇಕು.
6 E tomará a ave viva, e o pau de cedro, e o carmezim, e o hissopo, e os molhará com a ave viva no sangue da ave que foi degolada sobre as águas vivas.
೬“ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು.
7 E sobre aquele que há de purificar-se da lepra espargirá sete vezes; então o declarará por limpo, e soltará a ave viva sobre a face do campo.
೭ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.
8 E aquele que tem a purificar-se lavará os seus vestidos, e rapará todo o seu pelo, e se lavará com água; assim será limpo: e depois entrará no arraial, porém ficará fora da sua tenda por sete dias;
೮ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೆ ಇರಬೇಕು.
9 E será que ao sétimo dia rapará todo o seu pelo, a sua cabeça, e a sua barba, e as sobrancelhas dos seus olhos; e rapará todo o seu outro pelo, e lavará os seus vestidos, e lavará a sua carne com água, e será limpo.
೯ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.
10 E ao dia oitavo tomará dois cordeiros sem mancha, e uma cordeira sem mancha, de um ano, e três dizimas de flor de farinha para oferta de manjares, amassada com azeite, e um log de azeite;
೧೦“ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.
11 E o sacerdote que faz a purificação apresentará ao homem que houver de purificar-se com aquelas coisas perante o Senhor, à porta da tenda da congregação.
೧೧ಶುದ್ಧಿ ಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನ ಗುಡಾರದ ಬಾಗಿಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.
12 E o sacerdote tomará um dos cordeiros, e o oferecerá por expiação da culpa, e o log de azeite; e os moverá por oferta movida perante o Senhor.
೧೨ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.
13 Então degolará o cordeiro no lugar em que se degola a expiação do pecado e o holocausto, no lugar santo; porque assim a expiação da culpa como a expiação do pecado é para o sacerdote; coisa santíssima é.
೧೩ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ.
14 E o sacerdote tomará do sangue da expiação da culpa, e o sacerdote o porá sobre a ponta da orelha direita daquele que tem a purificar-se, e sobre o dedo polegar da sua mão direita, e no dedo polegar do seu pé direito.
೧೪ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.
15 Também o sacerdote tomará do log de azeite, e o derramará na palma da sua própria mão esquerda.
೧೫ಆಗ ಯಾಜಕನು ಆ ಒಂದು ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
16 Então o sacerdote molhará o seu dedo direito no azeite que está na sua mão esquerda, e daquele azeite com o seu dedo espargirá sete vezes perante o Senhor;
೧೬ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ, ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.
17 E o restante do azeite, que está na sua mão, o sacerdote porá sobre a ponta da orelha direita daquele que tem a purificar-se, e sobre o dedo polegar da sua mão direita, e sobre o dedo polegar do seu pé direito, em cima do sangue da expiação da culpa;
೧೭ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
18 E o restante do azeite que está na mão do sacerdote, o porá sobre a cabeça daquele que tem a purificar-se: assim o sacerdote fará expiação por ele perante o Senhor
೧೮ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.
19 Também o sacerdote fará a expiação do pecado, e fará expiação por aquele que tem a purificar-se da sua imundícia; e depois degolará o holocausto;
೧೯“ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆ ಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ಸರ್ವಾಂಗಹೋಮಕ್ಕಾಗಿ ವಧಿಸಬೇಕು.
20 E o sacerdote oferecerá o holocausto e a oferta de manjares sobre o altar: assim o sacerdote fará expiação por ele, e será limpo.
೨೦ಅವನು ಆ ಸರ್ವಾಂಗಹೋಮವನ್ನು ಮತ್ತು ಧಾನ್ಯನೈವೇದ್ಯವನ್ನು ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.
21 Porém se for pobre, e a sua mão não alcançar tanto, tomará um cordeiro para expiação da culpa em oferta de movimento, para fazer expiação por ele, e a dizima de flor de farinha, amassada com azeite, para oferta de manjares, e um log de azeite
೨೧“ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು.
22 E duas rolas, ou dois pombinhos, conforme alcançar a sua mão, dos quais um será para expiação do pecado, e o outro para holocausto.
೨೨ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.
23 E ao oitavo dia da sua purificação os trará ao sacerdote, à porta da tenda da congregação, perante o Senhor,
೨೩ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
24 E o sacerdote tomará o cordeiro da expiação da culpa, e o log de azeite, e o sacerdote os moverá por oferta movida perante o Senhor.
೨೪ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನು, ಒಂದು ಸೇರು ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
25 Então degolará o cordeiro da expiação da culpa, e o sacerdote tomará do sangue da expiação da culpa, e o porá sobre a ponta da orelha direita daquele que tem a purificar-se, e sobre o dedo polegar da sua mão direita, e sobre o dedo polegar do seu pé direito.
೨೫ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.
26 Também o sacerdote derramará do azeite na palma da sua própria mão esquerda;
೨೬ಅನಂತರ ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
27 Depois o sacerdote com o seu dedo direito espargirá do azeite que está na sua mão esquerda, sete vezes perante o Senhor,
೨೭ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿಮುಕಿಸಬೇಕು.
28 E o sacerdote porá do azeite que está na sua mão na ponta da orelha direita daquele que tem a purificar-se, e no dedo polegar da sua mão direita, e no dedo polegar do seu pé direito; no lugar do sangue da expiação da culpa.
೨೮ಆಮೇಲೆ ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
29 E o que sobejar do azeite que está na mão do sacerdote porá sobre a cabeça do que tem a purificar-se, para fazer expiação por ele perante o Senhor.
೨೯ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.
30 Depois oferecerá uma das rolas ou dos pombinhos, conforme alcançar a sua mão.
೩೦ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳನ್ನಾಗಲಿ
31 Do que alcançar a sua mão, será um para expiação do pecado e o outro para holocausto com a oferta de manjares; e assim o sacerdote fará expiação por aquele que tem a purificar-se perante o Senhor.
೩೧ಪಾರಿವಾಳದ ಮರಿಗಳನ್ನಾಗಲಿ ದೋಷಪರಿಹಾರಕ ಯಜ್ಞವಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಧಾನ್ಯನೈವೇದ್ಯದೊಂದಿಗೆ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.
32 Esta é a lei daquele em quem estiver a praga da lepra, cuja mão não alcançar aquilo para a sua purificação.
೩೨“ಶುದ್ಧೀಕರಣ ಯಜ್ಞಗಳನ್ನು ಮಾಡುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ನಿಯಮ” ಎಂದು ಹೇಳಿದನು.
33 Falou mais o Senhor a Moisés e a Aarão, dizendo:
೩೩ಯೆಹೋವನು ಮೋಶೆ ಮತ್ತು ಆರೋನರಿಗೆ,
34 Quando tiverdes entrado na terra de Canaan que vos hei de dar por possessão, e eu enviar a praga da lepra em alguma casa da terra da vossa possessão,
೩೪“ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,
35 Então virá aquele, cuja for a casa, e o fará saber ao sacerdote, dizendo: Parece-me que há como que praga em minha casa.
೩೫ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ’ ಎಂದು ಅವನಿಗೆ ತಿಳಿಸಬೇಕು.
36 E o sacerdote ordenará que despejem a casa, antes que venha o sacerdote para examinar a praga, para que tudo o que está na casa não seja contaminado: e depois virá o sacerdote, para examinar a casa:
೩೬ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮೊದಲು ಆ ಮನೆಯನ್ನು ಬರಿದುಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುತ್ತದೆ. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವುದಕ್ಕೆ ಒಳಗೆ ಹೋಗಬೇಕು.
37 E, vendo a praga, e eis que se a praga nas paredes da casa tem covinhas verdes ou vermelhas, e parecem mais fundas do que a parede,
೩೭ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ಪರೀಕ್ಷಿಸಿ ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು, ಗೋಡೆಯ ಮಟ್ಟಕ್ಕಿಂತ ಆಳವಾಗಿ ತೋರಿದರೆ,
38 Então o sacerdote sairá daquela casa para fora da porta da casa, e cerrará a casa por sete dias.
೩೮ಯಾಜಕನು ಹೊರಗೆ ಬಂದು ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು.
39 Depois tornará o sacerdote ao sétimo dia, e examinará; e se vir que a praga nas paredes da casa se tem estendido,
೩೯ಏಳನೆಯ ದಿನದಲ್ಲಿ ಯಾಜಕನು ಬಂದು ಪರೀಕ್ಷಿಸಿ ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ,
40 Então o sacerdote ordenará que arranquem as pedras, em que estiver a praga, e que as lancem fora da cidade num lugar imundo:
೪೦ಆ ಗುರುತುಗಳು ಇರುವ ಕಲ್ಲುಗಳನ್ನು ತೆಗೆದುಬಿಟ್ಟು, ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು.
41 E fará raspar a casa por dentro ao redor, e o pó que houverem raspado lançarão fora da cidade num lugar imundo.
೪೧ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
42 Depois tomarão outras pedras, e as porão no lugar das primeiras pedras; o outro barro se tomará, e a casa se rebocará.
೪೨ಆಗ ಅವರು ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ, ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.
43 Porém, se a praga tornar, e brotar na casa, depois de se arrancarem as pedras, e depois da casa ser raspada, e depois de ser rebocada,
೪೩“ಅವನು ಆ ಕಲ್ಲುಗಳನ್ನು ತೆಗಿಸಿ, ಮನೆಯ ಗೋಡೆಗಳನ್ನು ಕೆರೆದು ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ಪುನಃ ಕಂಡುಬಂದರೆ ಯಾಜಕನು ಬಂದು ಅದನ್ನು ನೋಡಬೇಕು.
44 Então o sacerdote entrará, e, examinando, eis que, se a praga na casa se tem estendido, lepra roedora há na casa: imunda está.
೪೪ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು.
45 Portanto se derribará a casa, as suas pedras, e a sua madeira, como também todo o barro da casa; e se levará para fora da cidade a um lugar imundo.
೪೫ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.
46 E o que entrar naquela casa, em qualquer dia em que estiver fechada, será imundo até à tarde.
೪೬ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
47 Também o que se deitar a dormir em tal casa, lavará os seus vestidos: e o que comer em tal casa lavará os seus vestidos.
೪೭ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.
48 Porém, tornando o sacerdote a entrar, e, examinando, eis que, se a praga na casa se não tem estendido, depois que a casa foi rebocada, o sacerdote declarará a casa por limpa, porque a praga está curada.
೪೮“ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.
49 Depois tomará para expiar a casa duas aves, e pau de cedro, e carmezim e hissopo:
೪೯ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು.
50 E degolará uma ave num vaso de barro sobre águas vivas:
೫೦ಅವನು ಒಂದು ಪಕ್ಷಿಯನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು,
51 Então tomará pau de cedro, e o hissopo, e o carmezim, e a ave viva, e o molhará na ave degolada e nas águas vivas, e espargirá a casa sete vezes:
೫೧ಆ ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪಿನ ಬರಲನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಸಜೀವವಾದ ಮತ್ತೊಂದು ಪಕ್ಷಿಯನ್ನು ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಹಾಗು ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.
52 Assim expiará aquela casa com o sangue da avezinha, e com as águas vivas, e com a avezinha viva, e com o pau de cedro, e com o hissopo, e com o carmezim.
೫೨ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಅವನು ಶುದ್ಧಿಮಾಡುವನು.
53 Então soltará a ave viva para fora da cidade sobre a face do campo: assim fará expiação pela casa, e será limpa.
೫೩ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗೋಸ್ಕರ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು.
54 Esta é a lei de toda a praga da lepra, e da tinha,
೫೪“ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ,
55 E da lepra dos vestidos, e das casas,
೫೫ಕೂದಲು ಬೆಳೆಯದ ಗಾಯ, ಬಟ್ಟೆಯಲ್ಲಿ ಅಥವಾ ಮನೆಯ ಗೋಡೆಯಲ್ಲಿ ಕಾಣಿಸುವ ಕುಷ್ಠ ರೋಗದ ಗುರುತು,
56 E da inchação, e da apostema, e das empolas;
೫೬ಶರೀರದ ಚರ್ಮದ ಮೇಲೆ ಉಂಟಾಗುವ ಬಾವು, ಗುಳ್ಳೆ, ಹೊಳೆಯುವ ಕಲೆ
57 Para ensinar em que dia alguma coisa será imunda, e em que dia será limpa. Esta é a lei da lepra.
೫೭ಇವುಗಳಲ್ಲಿ ಶುದ್ಧ ಅಥವಾ ಅಶುದ್ಧದ ಭೇದವನ್ನು ತಿಳಿಸುವ ನಿಯಮ ಇದೇ” ಎಂದು ಹೇಳಿದನು.