< Levítico 3 >
1 E se a sua oferta for sacrifício pacífico: se a oferecer de gado macho ou fêmea, a oferecerá sem mancha diante do Senhor.
“‘ಯಾರಾದರು ಸಮಾಧಾನ ಸಮರ್ಪಣೆಗಾಗಿ ಬಲಿದಾನ ಮಾಡಬೇಕಾದರೆ, ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ ಯೆಹೋವ ದೇವರ ದೃಷ್ಟಿಯಲ್ಲಿ ಕಳಂಕರಹಿತವಾಗಿರಬೇಕು.
2 E porá a sua mão sobre a cabeça da sua oferta, e a degolará diante da porta da tenda da congregação: e os filhos de Aarão, os sacerdotes, espargirão o sangue sobre o altar em roda
ಅವನು ಅರ್ಪಿಸಬೇಕಾದ ಆ ಪ್ರಾಣಿಯನ್ನು ಯೆಹೋವ ದೇವರ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈ ಇಡಬೇಕು. ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
3 Depois oferecerá do sacrifício pacífico a oferta queimada ao Senhor; a gordura que cobre a fressura, e toda a gordura que está sobre a fressura.
ಅವನು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ,
4 Então ambos os rins, e a gordura que está sobre eles, e sobre as tripas, e o redenho que está sobre o fígado com os rins, tirará.
ಎರಡು ಮೂತ್ರ ಜನಕಾಂಗಗಳನ್ನೂ, ಪಕ್ಕೆಯ ಬದಿಯಲ್ಲಿಯ ಅವುಗಳ ಮೇಲಿರುವ ಕೊಬ್ಬನ್ನೂ, ಮೂತ್ರ ಜನಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಯೆಹೋವ ದೇವರಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು.
5 E os filhos de Aarão o queimarão sobre o altar, em cima do holocausto, que estará sobre a lenha que está no fogo: oferta queimada é de cheiro suave ao Senhor.
ಆರೋನನ ಪುತ್ರರು ಅದನ್ನು ಬಲಿಪೀಠದಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನಬಲಿಯಾಗಿ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು, ಯೆಹೋವ ದೇವರಿಗೆ ಸುವಾಸನೆಯಾಗಿರುವುದು.
6 E, se a sua oferta for de gado miúdo por sacrifício pacífico ao Senhor, seja macho ou fêmea, sem mancha o oferecerá.
“‘ಅವನ ಕಾಣಿಕೆಯು ಸಮಾಧಾನದ ಬಲಿಯಾಗಿ, ಅದು ಯೆಹೋವ ದೇವರಿಗೆ ತನ್ನ ಆಡುಕುರಿಗಳಿಂದಾದ ಕಾಣಿಕೆಯಾಗಿದ್ದರೆ, ಗಂಡಾಗಲಿ, ಹೆಣ್ಣಾಗಲಿ ಕಳಂಕರಹಿತವಾದದ್ದನ್ನು ಅವನು ಸಮರ್ಪಿಸಬೇಕು.
7 Se oferecer um cordeiro por sua oferta, oferece-lo-á perante o Senhor;
ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವುದಾದರೆ, ಅದನ್ನು ಅವನು ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು.
8 E porá a sua mão sobre a cabeça da sua oferta, e a degolará diante da tenda da congregação; e os filhos de Aarão espargirão o seu sangue sobre o altar em redor.
ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು, ಅದನ್ನು ದೇವದರ್ಶನದ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಪುತ್ರರು ಬಲಿಪೀಠದ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.
9 Então do sacrifício pacífico oferecerá ao Senhor por oferta queimada a sua gordura, a cauda toda, a qual tirará do espinhaço, e a gordura que cobre a fressura, e toda a gordura que está sobre a fressura;
ಸಮಾಧಾನದ ಬಲಿಗಾಗಿ ಅದರ ಇಡೀ ಹಿಂಭಾಗವನ್ನೂ, ಅದರ ಕೊಬ್ಬನ್ನೂ, ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ,
10 Como também tirará ambos os rins, e a gordura que está sobre eles, e sobre as tripas, e o redenho que está sobre o fígado com os rins.
ಎರಡು ಮೂತ್ರ ಜನಕಾಂಗಗಳನ್ನೂ, ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ, ಕಾಳಿಜದ ಉತ್ತಮ ಭಾಗ, ಮೂತ್ರಜನಕಾಂಗಗಳೊಂದಿಗೆ ವಪೆಯ ಮೇಲಿರುವ ಪೊರೆಯನ್ನೂ ತೆಗೆದುಕೊಂಡು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.
11 E o sacerdote o queimará sobre o altar: manjar é da oferta queimada ao Senhor.
ಯಾಜಕನು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುವುದು.
12 Mas, se a sua oferta for uma cabra, perante o Senhor a oferecerá,
“‘ಸಮರ್ಪಣೆಯು ಮೇಕೆಯಾಗಿದ್ದರೆ, ಅದನ್ನು ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು.
13 E porá a sua mão sobre a sua cabeça, e a degolará diante da tenda da congregação; e os filhos de Aarão espargirão o seu sangue sobre o altar em redor.
ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ದೇವದರ್ಶನದ ಗುಡಾರದ ಮುಂದೆ ಅದನ್ನು ವಧಿಸಬೇಕು. ಆಗ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.
14 Depois oferecerá dela a sua oferta, por oferta queimada ao Senhor, a gordura que cobre a fressura, e toda a gordura que está sobre a fressura;
ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ,
15 Como também tirará ambos os rins, e a gordura que está sobre eles, e sobre as tripas, e o redenho que está sobre o fígado com os rins.
ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗ, ಮೂತ್ರಜನಕಾಂಗಗಳೊಂದಿಗೆ ವಪೆಯ ಮೇಲಿರುವ ಪೊರೆಯನ್ನೂ ತೆಗೆದುಕೊಂಡು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.
16 E o sacerdote o queimará sobre o altar; manjar é da oferta queimada de cheiro suave. Toda a gordura será do Senhor.
ಯಾಜಕನು ಅವುಗಳನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಸುವಾಸನೆಯ ಯಜ್ಞಾರ್ಪಣೆಯ ಆಹಾರವಾಗಿರುವುದು. ಎಲ್ಲಾ ಕೊಬ್ಬು ಯೆಹೋವ ದೇವರದೇ.
17 Estatuto perpétuo é nas vossas gerações, em todas as vossas habitações: nenhuma gordura nem sangue algum comereis.
“‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’” ಎಂದು ಹೇಳಿದರು.