< Malaquias 1 >
1 Carga da palavra do Senhor contra Israel, pelo ministério de Malachias.
೧ಯೆಹೋವನು ಇಸ್ರಾಯೇಲರ ಕುರಿತು ಮಲಾಕಿಯ ಮೂಲಕ ನುಡಿದ ದೈವೋಕ್ತಿ.
2 Eu vos amei, diz o Senhor; mas vós dizeis: Em que nos amastes? Não foi Esaú irmão de Jacob? disse o Senhor; todavia amei a Jacob,
೨ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ಪ್ರೀತಿಸಿದ್ದೇನೆ.” ನೀವೋ “ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ?” ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ?
3 E aborreci a Esaú: e fiz dos seus montes uma assolação, e dei a sua herança aos dragões do deserto.
೩“ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ, ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ” ಇದು ಯೆಹೋವನ ನುಡಿ.
4 Ainda que Edom dizia: Empobrecidos somos, porém tornaremos a edificar os lugares desertos: eles edificarão, e eu destruirei: e lhes chamarão; Termo de impiedade, e povo contra quem o Senhor está irado para sempre.
೪ಹೀಗಿರಲು ಎದೋಮ್ಯರು, “ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು” ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಡಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು.
5 E os vossos olhos o verão, e direis: O Senhor seja engrandecido desde o termo de Israel.
೫ನೀವೇ ಇದನ್ನು ಕಣ್ಣಾರೆ ಕಂಡು ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ, ‘ಮಹಾ ಮಹಿಮೆಯುಳ್ಳವನು’” ಅಂದುಕೊಳ್ಳುವಿರಿ.
6 O filho honrará a seu pai, e o servo ao seu senhor; e, se eu sou pai, onde está a minha honra? e, se eu sou o Senhor, onde está o meu temor? diz o Senhor dos exércitos a vós, ó sacerdotes, que desprezais o meu nome; mas vós dizeis: Em que desprezamos nós o teu nome?
೬“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.
7 Ofereceis sobre o meu altar pão imundo, e dizeis: Em que te havemos profanado? nisto que dizeis: A mesa do Senhor é desprezível.
೭ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. “ಯಾವ ವಿಷಯದಲ್ಲಿ ಅಶುದ್ಧಗೊಳಿಸಿದ್ದೇವೆ?” ಅನ್ನುತ್ತೀರಿ. “ಯೆಹೋವನ ಮೇಜಿಗೆ ಘನತೆಯೇನಿದೆ?” ಎಂದು ನೀವು ಅಂದುಕೊಳ್ಳುವುದರಲ್ಲಿಯೇ ಇದೆ.
8 Porque, quando trazeis animal cego para o sacrificardes, não é isto mau? e, quando ofereceis o coxo ou o enfermo, não é isto mau? Ora apresenta-o ao teu príncipe; porventura terá ele agrado em ti? ou aceitará ele a tua pessoa? diz o Senhor dos exércitos.
೮ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವುದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ, ರೋಗದ ಪಶುವನ್ನೂ ಅರ್ಪಿಸುವುದು ದೋಷವಲ್ಲವೆಂದು ನಂಬುತ್ತೀರೋ? ಇಂಥದ್ದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು; ನಿನಗೆ ಮೆಚ್ಚುಗೆ ವ್ಯಕ್ತಪಡಿಸುವನೋ? ನಿಮ್ಮ ಕೋರಿಕೆಯನ್ನು ನೆರವೇರಿಸುವನೋ? ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
9 Agora, pois, suplicai a face de Deus, e ele terá piedade de nós: isto veio da vossa mão, aceitará ele a vossa pessoa? diz o Senhor dos exércitos.
೯“ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಬೇಡಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ?” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
10 Quem há também entre vós que feche as portas por nada? e não acendeis por nada o fogo do meu altar. Eu não tomo prazer em vós, diz o Senhor dos exércitos, nem aceitarei da vossa mão a oblação.
೧೦“ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
11 Mas desde o nascente do sol até ao poente será grande entre as nações o meu nome; e em todo o lugar se oferecerá ao meu nome incenso e uma oblação pura; porque o meu nome será grande entre as nações, diz o Senhor dos exércitos
೧೧“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
12 Mas vós o profanais, quando dizeis: A mesa do Senhor é imunda, e, quanto ao seu rendimento, sua comida é desprezível.
೧೨ನೀವೋ, “ಯೆಹೋವನ ಮೇಜು ಅಶುದ್ಧ, ಅದರ ಮೇಲಣ ನೈವೇದ್ಯ ಅಸಹ್ಯ ಅಂದುಕೊಳ್ಳುವುದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.
13 E dizeis: Eis aqui, que canceira! e o lançastes com desprezo, diz o Senhor dos exércitos: vós também ofereceis o roubado, e o coxo e o enfermo, e ofereceis a oferta: ser-me-á aceito isto de vossa mão? diz o Senhor.
೧೩ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.
14 Pois maldito seja o enganoso que, tendo no seu rebanho um animal, promete e oferece ao Senhor o que é corrompido, porque eu sou grande Rei, diz o Senhor dos exércitos, o meu nome será tremendo entre as nações.
೧೪“ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.