< Marcos 16 >
1 E, passado o sábado, Maria Magdalena, e Maria, mãe de Thiago, e Salomé, compraram aromas para irem ungi-lo.
೧ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು.
2 E, no primeiro dia da semana, foram ao sepulcro, de manhã cedo, ao nascer do sol;
೨ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು.
3 E diziam umas às outras: Quem nos revolverá a pedra da porta do sepulcro?
೩“ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
4 E, olhando, viram que já a pedra estava revolvida; porque era muito grande.
೪ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು.
5 E, entrando no sepulcro, viram um mancebo assentado à direita, vestido de uma roupa comprida, branca; e ficaram espantadas.
೫ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.
6 Porém ele disse-lhes: Não vos assusteis; buscais a Jesus Nazareno, que foi crucificado; já resuscitou, não está aqui; eis aqui o lugar onde o puseram.
೬ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,
7 Porém ide, dizei a seus discípulos, e a Pedro, que ele vai adiante de vós para a Galiléia; ali o vereis, como ele vos disse.
೭ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು.
8 E, saindo elas apressadamente, fugiram do sepulcro, porque estavam possuídas de temor e assombro; e nada diziam a ninguém, porque temiam.
೮ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.
9 (note: The most reliable and earliest manuscripts do not include Mark 16:9-20.) E Jesus, tendo resuscitado na manhã do primeiro dia da semana, apareceu primeiramente a Maria Magdalena, da qual tinha expulsado sete demônios.
೯(note: The most reliable and earliest manuscripts do not include Mark 16:9-20.) ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು.
10 E, partindo ela, anunciou-o àqueles que tinham estado com ele, os quais estavam tristes, e chorando.
೧೦ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು.
11 E, ouvindo eles que vivia, e que tinha sido visto por ela, não o creram.
೧೧“ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು” ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ.
12 E depois manifestou-se em outra forma a dois deles, que iam de caminho para o campo.
೧೨ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು.
13 E, indo estes, anunciaram-no aos outros, mas nem ainda estes creram.
೧೩ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ.
14 Finalmente apareceu aos onze, estando eles assentados juntamente, e lançou-lhes em rosto a sua incredulidade e dureza de coração, por não haverem crido nos que o tinham visto já resuscitado.
೧೪ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.
15 E disse-lhes: Ide por todo o mundo, pregai o evangelho a toda a criatura:
೧೫ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.
16 Quem crer e for batizado será salvo; mas quem não crer será condenado.
೧೬ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.
17 E estes sinais seguirão aos que crerem: Em meu nome expulsarão os demônios; falarão novas línguas:
೧೭“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;
18 Pegarão nas serpentes; e, se beberem alguma coisa mortífera, não lhes fará dano algum; e porão as mãos sobre os enfermos, e os sararão.
೧೮ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು.
19 Ora o Senhor, depois de lhes ter falado, foi recebido acima no céu, e assentou-se à direita de Deus.
೧೯ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
20 E eles, tendo partido, pregaram por todas as partes, cooperando com eles o Senhor, e confirmando a palavra com os sinais que se seguiram. amém.
೨೦ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.