< Provérbios 15 >
1 A resposta branda desvia o furor, mas a palavra de dor suscita a ira.
೧ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.
2 A língua dos sábios adorna a sabedoria, mas a boca dos tolos derrama a estultícia.
೨ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.
3 Os olhos do Senhor estão em todo o lugar, contemplando os maus e os bons.
೩ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.
4 A medicina da língua é árvore de vida, mas a perversidade nela quebranta o espírito.
೪ಸಂತೈಸುವ ನಾಲಿಗೆ ಜೀವವೃಕ್ಷವು, ಬಲತ್ಕರಿಸುವ ನಾಲಿಗೆ ಮನಮುರಿಯುವುದು.
5 O tolo despreza a correção de seu pai, mas o que observa a repreensão prudentemente se haverá.
೫ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು, ಗದರಿಕೆಯನ್ನು ಗಮನಿಸುವವನು ಜಾಣನು.
6 Na casa do justo há um grande tesouro, mas nos frutos do ímpio há perturbação.
೬ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ, ದುಷ್ಟನ ಆದಾಯವು ನಷ್ಟಕ್ಕೆ ದಾರಿ.
7 Os lábios dos sábios derramarão o conhecimento, mas o coração dos tolos não fará assim.
೭ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ.
8 O sacrifício dos ímpios é abominável ao Senhor, mas a oração dos retos é o seu contentamento.
೮ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.
9 O caminho do ímpio é abominável ao Senhor, mas ao que segue a justiça amará.
೯ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ, ಧರ್ಮಾಸಕ್ತನು ಆತನಿಗೆ ಪ್ರಿಯ.
10 Correção molesta há para o que deixa a vereda, e o que aborrece a repreensão morrerá.
೧೦ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.
11 O inferno e a perdição estão perante o Senhor: quanto mais os corações dos filhos dos homens? (Sheol )
೧೧ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ. (Sheol )
12 Não ama o escarnecedor aquele que o repreende, nem se chegará aos sábios.
೧೨ಧರ್ಮನಿಂದಕನು ಗದರಿಕೆಯನ್ನು ಕೇಳನು, ಜ್ಞಾನಿಗಳ ಸಂಗಡ ಸೇರನು.
13 O coração alegre aformoseia o rosto, mas pela dor do coração o espírito se abate.
೧೩ಹರ್ಷ ಹೃದಯದಿಂದ ಹಸನ್ಮುಖ, ಮನೋವ್ಯಥೆಯಿಂದ ಆತ್ಮಭಂಗ.
14 O coração entendido buscará o conhecimento, mas a boca dos tolos se apascentará de estultícia.
೧೪ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು, ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವುದು.
15 Todos os dias do oprimido são maus, mas o coração alegre é um banquete contínuo.
೧೫ದೀನನ ದಿನಗಳೆಲ್ಲಾ ದುಃಖಭರಿತ, ಹರ್ಷಹೃದಯನಿಗೆ ನಿತ್ಯವೂ ಔತಣ.
16 Melhor é o pouco com o temor do Senhor, do que um grande tesouro, onde há inquietação.
೧೬ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.
17 Melhor é a comida de hortaliça, onde há amor, do que o boi cevado, e com ele o ódio.
೧೭ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ, ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ.
18 O homem iracundo suscita contendas, mas o longânimo apaziguará a luta.
೧೮ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.
19 O caminho do preguiçoso é como a sebe de espinhos, mas a vereda dos retos está bem igualada.
೧೯ಸೋಮಾರಿಯ ಮಾರ್ಗ ಮುಳ್ಳುಬೇಲಿ, ಯಥಾರ್ಥವಂತನ ಮಾರ್ಗ ರಾಜಮಾರ್ಗ.
20 O filho sábio alegrará a seu pai, mas o homem insensato despreza a sua mãe.
೨೦ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು, ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.
21 A estultícia é alegria para o que carece de entendimento, mas o homem entendido anda retamente.
೨೧ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು, ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು.
22 Os pensamentos se dissipam, quando não há conselho, mas com a multidão de conselheiros se confirmarão.
೨೨ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು.
23 O homem se alegra na resposta da sua boca, e a palavra a seu tempo quão boa é!
೨೩ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ! ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ!
24 Para o entendido, o caminho da vida vai para cima, para que se desvie do inferno de baixo. (Sheol )
೨೪ಜೀವದ ಮಾರ್ಗವು ವಿವೇಕಿಯನ್ನು ಮೇಲಕ್ಕೆತ್ತುವುದು; ಅದು ಅವನನ್ನು ಪಾತಾಳದಿಂದ ತಪ್ಪಿಸುವುದು. (Sheol )
25 O Senhor arrancará a casa dos soberbos, mas estabelecerá o termo da viúva.
೨೫ಯೆಹೋವನು ಗರ್ವಿಷ್ಠನ ಮನೆಯನ್ನು ಕೆಡವಿಬಿಡುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.
26 Abomináveis são ao Senhor os pensamentos do mau, mas as palavras dos limpos são apráziveis.
೨೬ಕುಯುಕ್ತಿಯು ಯೆಹೋವನಿಗೆ ಅಸಹ್ಯ, ನಯನುಡಿಯು ಆತನಿಗೆ ಪ್ರಿಯ.
27 O que exercita avareza perturba a sua casa, mas o que aborrece presentes viverá.
೨೭ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.
28 O coração do justo medita o que há de responder, mas a boca dos ímpios derrama em abundância coisas más.
೨೮ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ, ದುಷ್ಟನ ಬಾಯಿ ಕೆಟ್ಟದ್ದನ್ನು ಕಾರುತ್ತದೆ.
29 Longe está o Senhor dos ímpios, mas escutará a oração dos justos.
೨೯ಯೆಹೋವನು ದುಷ್ಟರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರ.
30 A luz dos olhos alegra o coração, a boa fama engorda os ossos.
೩೦ಹಸನ್ಮುಖ ಹೃದಯಕ್ಕೆ ಆನಂದ, ಶುಭಸಮಾಚಾರ ದೇಹಕ್ಕೆ ಆರೋಗ್ಯ.
31 Os ouvidos que escutam a repreensão da vida no meio dos sábios farão a sua morada.
೩೧ಜೀವಪ್ರದವಾದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ನೆಲೆಗೊಳ್ಳುವನು.
32 O que rejeita a correção menospreza a sua alma, mas o que escuta a repreensão adquire entendimento.
೩೨ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು, ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.
33 O temor do Senhor é a correção da sabedoria, e diante da honra vai a humildade.
೩೩ಯೆಹೋವನ ಭಯವೇ ಜ್ಞಾನೋಪದೇಶ, ಗೌರವಕ್ಕೆ ಮೊದಲು ವಿನಯ.