< Salmos 65 >
1 A ti, ó Deus, espera o louvor em Sião, e a ti se pagará o voto.
೧ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ, ಹಾಡು. ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; ಹರಕೆಗಳು ನಿನಗೆ ಸಲ್ಲುತ್ತವೆ.
2 Ó tu que ouves as orações, a ti virá toda a carne.
೨ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು.
3 Prevalecem as iniquidades contra mim; porém tu expias as nossas transgressões.
೩ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.
4 Bem-aventurado aquele a quem tu escolhes, e fazes chegar a ti, para que habite em teus átrios: nós seremos fartos da bondade da tua casa e do teu santo templo.
೪ನಿನ್ನ ಅಂಗಳದಲ್ಲಿ ವಾಸಿಸುವವರಾಗಿ, ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.
5 Pelas coisas tremendas em justiça nos responderás, ó Deus da nossa salvação; tu és a esperança de todas as extremidades da terra, e daqueles que estão longe sobre o mar.
೫ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.
6 O que pela sua força consolida os montes, cingido de fortaleza:
೬ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು, ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು.
7 O que aplaca o ruído dos mares, o ruído das suas ondas, e o tumulto das gentes.
೭ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ.
8 E os que habitam nos fins da terra temem os teus sinais; tu fazes alegres as saídas da manhã e da tarde.
೮ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ.
9 Tu visitas a terra, e a refrescas; tu a enriqueces grandemente com o rio de Deus, que está cheio d'água; tu lhe preparas o trigo, quando assim a tens preparada.
೯ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.
10 Enches d'água os seus regos, fazendo-a descer em suas margens: tu a amoleces com a muita chuva: abençoas as suas novidades.
೧೦ನೇಗಿಲಗೆರೆಗಳನ್ನು ತೇವಗೊಳಿಸಿ, ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ.
11 Coroas o ano da tua bondade, e as tuas veredas destilam gordura.
೧೧ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು.
12 Destilam sobre os pastos do deserto, e os outeiros os cingem de alegria.
೧೨ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ; ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ.
13 Os campos se vestem de rebanhos, e os vales se cobrem de trigo: eles se regozijam e cantam.
೧೩ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ; ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ.